ವನ್ಯಜೀವಿಗಳಿಗೆ ತೊಂದರೆ ಆತಂಕ: ಆನೆಕಲ್ ಬಳಿ ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ತೀವ್ರ ವಿರೋಧ – Kannada News | Wildlife Threat: Outrage Over Proposed Cricket Stadium Near Bannerghatta National Park In Anekal
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಬೆಂಗಳೂರು, ಮೇ 20: ಆನೇಕಲ್ ತಾಲ್ಲೂಕಿನಲ್ಲಿ ನಿರ್ಮಾಣಕ್ಕೆ ಯೋಜಿಸಲಾಗಿರುವ ಹೊಸ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ ಭಾರೀ ವಿರೋಧ ಕೇಳಿಬಂದಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಮೀಪ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿರುವ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು, ಯೋಜನೆಯನ್ನು ರಾಜ್ಯ ಸರ್ಕಾರ ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇಂಡ್ಲವಾಡಿ ಗ್ರಾಮದ ಸುಮಾರು 70 ಎಕರೆ ಭೂಮಿಯಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಇದರ ವೆಚ್ಚ…