Video: ನಾನೇನು ಪಾಕಿಸ್ತಾನಿನಾ ನಾನೂ ಭಾರತೀಯನೆ ಪ್ರವಾಸಿಗರಿಗೆ ಕಾಶ್ಮೀರಿ ವ್ಯಕ್ತಿ ಕೊಟ್ಟ ಉತ್ತರ ಕೇಳಿ – Kannada News | I am also Indian, Boatman’s Clever Comeback Leaves Tourist Smiling in Kashmir

ಕಾಶ್ಮೀರ, ಜನವರಿ 16: ಪ್ರವಾಸಿಗರೊಬ್ಬರಿಗೆ ಕಾಶ್ಮೀರದ ವ್ಯಕ್ತಿಯೊಬ್ಬರು ಕೊಟ್ಟಿರುವ ಉತ್ತರ ಎಲ್ಲೆಡೆ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆ ಇದು. ಇಬ್ಬರು ಪ್ರವಾಸಿಗರು ಬೋಟ್​​ನಲ್ಲಿ ಕುಳಿತಿರುತ್ತಾರೆ. ಆಗ ಟೂರಿಸ್ಟ್ ಗೈಡ್ ಆ ಇಬ್ಬರು ಪ್ರವಾಸಿಗರ ಬಳಿ ನೀವು ಎಲ್ಲಿಂದ ಬಂದವರು ಎನ್ನುವ ಪ್ರಶ್ನೆ ಕೇಳುತ್ತಾರೆ, ಆ ಅದರಲ್ಲಿ ಒಬ್ಬ ನಾವು ಭಾರತೀಯರು ಎಂದು ಹೇಳುತ್ತಾರೆ, ಅದಕ್ಕೆ ನಗ್ಗ ಗೈಡ್ ನಾವೇನು ಪಾಕಿಸ್ತಾನದವರಾ ನಾವೂ ಭಾರತೀಯರೇ, ನಾವು ನಿಜವಾದ ಹಿಂದೂಸ್ತಾನಿಗಳು ಎಂದು ಹೇಳುತ್ತಾರೆ ಆಗ ಪ್ರವಾಸಿಗರೂ ಕೂಡ ನಕ್ಕು ಸುಮ್ಮನಾಗುತ್ತಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಿಗ್ ಬಾಸ್​​ನ ಗಿಲ್ಲಿನೇ ಗೆಲ್ಲೋದು; ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ – Kannada News | Gilli’s Bigg Boss Win Predicted by Shivrajkumar: Viral Video and Their Special Bond

ಶಿವರಾಜ್​​ಕುಮಾರ್ (Shivarajkumar) ಹಾಗೂ ಗಿಲ್ಲಿ ನಟನ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಗಿಲ್ಲಿಯ ಪರಿಚಯ ಶಿವರಾಜ್​​ಕುಮಾರ್ ಅವರಿಗೆ ಆಗಿತ್ತು. ಈ ಸಂದರ್ಭದಲ್ಲಿ ಗಿಲ್ಲಿಯನ್ನು ನೋಡಿ ಶಿವಣ್ಣ ಇಂಪ್ರೆಸ್ ಆಗಿದ್ದರು. ಈಗ ಗಿಲ್ಲಿಯೇ ಬಿಗ್ ಬಾಸ್ ಗೆಲ್ಲೋದು ಎಂದು ಶಿವರಾಜ್​​ಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಗಿಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಗಿಲ್ಲಿ ಸಾಕಷ್ಟು ಮನರಂಜನೆ ನೀಡಿದ್ದರು. ಗಿಲ್ಲಿ ಟ್ಯಾಲೆಂಟ್ ನೋಡಿ ಶಿವಣ್ಣನಿಗೆ ಖುಷಿ ಆಗಿತ್ತು. ಈಗ ಗಿಲ್ಲಿ ಬಿಗ್ ಬಾಸ್​​ನಲ್ಲಿದ್ದಾರೆ. ಅಶ್ವಿನಿ, ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ರಘು ಹಾಗೂ ಧನುಶ್ ಜೊತೆ ಸ್ಪರ್ಧೆ ಮಾಡುತ್ತಿದ್ದಾರೆ. ಈ ಸ್ಪರ್ಧೆಯಲ್ಲಿ ಗೆಲುವು ಗಿಲ್ಲಿಗೆ ಸಿಗಲಿದೆ ಎಂಬುದು ಶಿವಣ್ಣನ ಅಭಿಪ್ರಾಯ.

ಕಾರ್ಯಕ್ರಮ ಒಂದರಲ್ಲಿ ಮಾತನಾಡುವಾಗ, ‘ಗಿಲ್ಲಿಯೇ ಗೆಲ್ಲೋದು’ ಎಂದು ಟೇಬಲ್ ತಟ್ಟಿ ಹೇಳಿದ್ದಾರೆ ಶಿವಣ್ಣ. ಇಷ್ಟೇ ಅಲ್ಲ, ಶಿವರಾಜ್​​ಕುಮಾರ್ ಅವರು ಗಿಲ್ಲಿಗೆ ಆಲ್​ ದಿ ಬೆಸ್ಟ್ ಕೂಡ ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದು, ಗಿಲ್ಲಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಈ ಮೊದಲು ಗಿಲ್ಲಿ ಬಗ್ಗೆ ಮಾತನಾಡಿದ್ದ ಶಿವಣ್ಣ, . ‘ಗಿಲ್ಲಿನ ಹಾಕಿಕೊಂಡು ಒಂದು ಸಿನಿಮಾ ಮಾಡಬೇಕು. ಗಿಲ್ಲಿ ನೋಡಿದಾಗಲೆಲ್ಲ ತಮಿಳಿನ ಹಾಸ್ಯ ನಟ ಚಂದ್ರಬಾಬುನ ನೆನಪಾಗುತ್ತಾರೆ. ಚಂದ್ರಬಾಬು ಅದ್ಭುತ ಕಾಮಿಡಿಯನ್. ಗಿಲ್ಲಿ ಜೊತೆ ಖಂಡಿತವಾಗಿಯೂ ಒಂದು ಸಿನಿಮಾ ಮಾಡುತ್ತೇನೆ’ ಎಂದಿದ್ದರು ಶಿವಣ್ಣ.

ಇದನ್ನೂ ಓದಿ: ನಟ ಶಿವರಾಜ್​​ಕುಮಾರ್ ಸಾವು ಗೆದ್ದು ಒಂದು ವರ್ಷ; ಅಂದು ನಡೆದಿದ್ದೇನು?

ಈ ಬಾರಿ ಬಿಗ್ ಬಾಸ್ ಮನೆಗೆ ಬಂದಿದ್ದ ಜೋಗಿ ಪ್ರೇಮ್ ಅವರು ಗಿಲ್ಲಿಗೆ ವಿಶೇಷ ಪ್ರೀತಿ ತೋರಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೋಗುವಾಗ, ‘ಹೊರಗೆ ಬಂದ್ಮೇಲೆ ಸಿಗು’ ಎಂದಿದ್ದರು. ಹೀಗಾಗಿ, ಪ್ರೇಮ್ ಕೂಡ ಗಿಲ್ಲಿಗೆ ಸಿನಿಮಾದಲ್ಲಿ ಒಂದು ಪಾತ್ರ ಕೊಡಬಹುದು ಎಂದು ಅನೇಕರು ಊಹಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 1:54 pm, Fri, 16 January 26

Source link

ಮೊದಲ ಬಾಲಿವುಡ್ ಸಿನಿಮಾ ಮೂಲಕ ಸಂಪ್ರದಾಯ ಮುರಿದ ಸಾಯಿ ಪಲ್ಲವಿ: ಅಭಿಮಾನಿಗಳು ಒಪ್ಪುತ್ತಾರಾ? – Kannada News | Sai Pallavi’s first Bollywood movie Ek Din teaser released

ನಟಿ ಸಾಯಿ ಪಲ್ಲವಿ (Sai Pallavi) ದಕ್ಷಿಣದ ಸ್ಟಾರ್ ನಟಿ. ತಮ್ಮ ಅದ್ಭುತ ನಟನೆ, ನೃತ್ಯ ಮತ್ತು ಸೌಂದರ್ಯದಿಂದ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಸಾಯಿ ಪಲ್ಲವಿ ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಾರೆ. ಇತರೆ ಸಮಕಾಲೀನ ನಟಿಯರಂತೆ ಗ್ಲಾಮರಸ್ ಮಾತ್ರ, ಮರ ಸುತ್ತುವ ಪಾತ್ರಗಳಲ್ಲಿ ಮಾತ್ರ ನಟಿಸದೆ ಸಮಾಜಕ್ಕೆ ಸಂದೇಶ ನೀಡುವ, ನಟನೆಗೆ ಒತ್ತು ಇರುವ ಪಾತ್ರಗಳನ್ನು ಮಾತ್ರವೇ ಆಯ್ಕೆ ಮಾಡಿಕೊಳ್ಳುತ್ತಾರೆ. ಇದೀಗ ಸಾಯಿ ಪಲ್ಲವಿ ಮೊದಲ ಬಾರಿ ಬಾಲಿವುಡ್​ಗೆ ಕಾಲಿಟ್ಟಿದ್ದು, ಮೊದಲ ಹೆಜ್ಜೆಯಲ್ಲೇ ಪ್ರೇಕ್ಷಕರಿಗೆ ಮೋಡಿ ಮಾಡಿದ್ದಾರೆ. ಜೊತೆಗೆ ಮೊದಲ ಬಾಲಿವುಡ್ ಸಿನಿಮಾ ಮೂಲಕ ಇಷ್ಟು ವರ್ಷ ಪಾಲಿಸಿಕೊಂಡು ಬಂದ ಸಂಪ್ರದಾಯವೊಂದನ್ನು ಮುರಿದಿದ್ದಾರೆ.

ಸಾಯಿ ಪಲ್ಲವಿ ಹಿಂದಿಯ ‘ರಾಮಾಯಣ’ ಸಿನಿಮಾನಲ್ಲಿ ಸೀತೆಯ ಪಾತ್ರದಲ್ಲಿ ನಟಿಸುತ್ತಿರುವುದು ತಿಳಿದೇ ಇದೆ. ಆದರೆ ಸಾಯಿ ಪಲ್ಲವಿಯ ಮೊದಲ ಬಾಲಿವುಡ್ ಸಿನಿಮಾ ಇದಲ್ಲ ಬದಲಿಗೆ ಆಮಿರ್ ಖಾನ್ ಪುತ್ರನ ಜೊತೆಗೆ ನಟಿಸಿರುವ ‘ಏಕ್ ದಿನ್’. 2024 ರ ಆರಂಭದಲ್ಲೇ ಚಿತ್ರೀಕರಣ ಶುರುವಾದರೂ ಬಹಳ ತಡವಾಗಿ ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿದ್ದು, ಸಾಯಿ ಪಲ್ಲವಿ ಸಖತ್ ಗಮನ ಸೆಳೆಯುತ್ತಿದ್ದಾರೆ.

ಆಮಿರ್ ಖಾನ್ ಪುತ್ರ ಝುನೈದ್ ಖಾನ್ ನಾಯಕನಾಗಿ ಸಾಯಿ ಪಲ್ಲವಿ ನಾಯಕಿಯಾಗಿರುವ ‘ಏಕ್ ದಿನ್’ ಸಿನಿಮಾ ಅಪ್ಪಟ ಪ್ರೇಮಕಥಾ ಸಿನಿಮಾ ಆಗಿದ್ದು, ಇಬ್ಬರು ಭಾರತೀಯರು ದೂರದ ಜಪಾನ್​ನಲ್ಲಿ ಪರಸ್ಪರ ಪ್ರೀತಿಗೆ ಬೀಳುವ ಕತೆಯನ್ನು ಸಿನಿಮಾ ಒಳಗೊಂಡಿದೆ. ಸಿನಿಮಾದ ಬಹುತೇಕ ಚಿತ್ರೀಕರಣವನ್ನು ಜಪಾನ್​​ನಲ್ಲಿಯೇ ಚಿತ್ರೀಕರಿಸಲಾಗಿದ್ದು, ಸಿನಿಮಾದ ಟೀಸರ್​​ನಲ್ಲಿ ಜಪಾನ್​ ಸುಂದರ ತಾಣಗಳು ಅದ್ಭುತವಾಗಿ ಕಾಣುತ್ತಿವೆ.

ಇದನ್ನೂ ಓದಿ:ರಜನೀಕಾಂತ್-ಕಮಲ್ ಹಾಸನ್ ಸಿನಿಮಾನಲ್ಲಿ ನಟಿಸಲಿದ್ದಾರೆ ಸಾಯಿ ಪಲ್ಲವಿ?

‘ಏಕ್ ದಿನ್’ ಸಿನಿಮಾ, ಹೆಸರಿನಂತೆ ಒಂದೇ ದಿನದಲ್ಲಿ ನಡೆಯುವ ಕತೆ ಎನ್ನಲಾಗುತ್ತಿದೆ. ಇದೀಗ ಬಿಡುಗಡೆ ಆಗಿರುವ ಟೀಸರ್​​ನಲ್ಲಿ ಸಾಯಿ ಪಲ್ಲವಿ ತಮ್ಮ ನಟನೆ, ಕ್ಯೂಟ್​​ನೆಸ್​​ನಿಂದ ಗಮನ ಸೆಳೆಯುತ್ತಿದ್ದಾರೆ. ಝುನೈದ್ ಖಾನ್ ಸಹ ಪ್ರಬುದ್ಧ ನಟನೆ ನೀಡಿದಂತೆ ಟೀಸರ್​​ನಲ್ಲಿ ಕಾಣುತ್ತಿದೆ. ಸಿನಿಮಾದ ಕತೆ ಇಬ್ಬರು ಪ್ರಬುದ್ಧರ ನಡುವೆ ನಡೆಯುವ ಪ್ರೇಮಕತೆಯನ್ನು ಒಳಗೊಂಡಿದೆಯಂತೆ.

‘ಏಕ್ ದಿನ್’ ಸಿನಿಮಾವನ್ನು ಸುನಿಲ್ ಪಾಂಡೆ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ರಾಮ್ ಸಂಪತ್ ಸಂಗೀತವಿದೆ. ಈ ಸಿನಿಮಾ 2016ರಲ್ಲಿ ಬಿಡುಗಡೆ ಆಗಿದ್ದ ಥಾಯ್ ಸಿನಿಮಾದ ರೀಮೇಕ್ ಆಗಿದೆ. ಅಸಲಿಗೆ ಸಾಯಿ ಪಲ್ಲವಿ ರೀಮೇಕ್ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಈ ಹಿಂದೆ ರೀಮೇಕ್ ಸಿನಿಮಾ ಎಂಬ ಕಾರಣಕ್ಕೆ ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶವನ್ನು ನಿರಾಕರಿಸಿದ್ದರು. ಖುದ್ದು ವೇದಿಕೆ ಮೇಲೆ ತಾವು ರೀಮೇಕ್ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದಿದ್ದರು. ಆದರೆ ಈಗ ಥಾಯ್ ಭಾಷೆಯ ‘ಒನ್ ಡೇ’ ಸಿನಿಮಾದ ರೀಮೇಕ್​​ನಲ್ಲಿ ಸಾಯಿ ಪಲ್ಲವಿ ನಟಿಸಿದ್ದಾರೆ. ‘ಏಕ್ ದಿನ್’ ಸಿನಿಮಾ ಮೇ 1 ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹಾಸನದಲ್ಲಿ ಕಾಡಾನೆಗಳ ತುಂಟಾಟ! ಪರಸ್ಪರ ಕೋರೆ ಮರ್ದಿಸಿದ ಗಜಪಡೆ – Kannada News | Alur Elephant Operation: Wild elephant’s Playful Start Before Rogue Capture

ಹಾಸನ, ಜನವರಿ 16: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೊಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಶೋಭಾ ಎಂಬ ಮಹಿಳೆ ಬಲಿಯಾದ ಘಟನೆಗೆ ಸಂಬಂಧಿಸಿ, ಹಂತಕ ಆನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಹಾಗೂ ಸುಗ್ರೀವ ಎಂಬ ಐದು ಸಾಕಾನೆಗಳು ಆಲೂರು ತಾಲ್ಲೂಕಿನ ಬೈರಾಪುರ ತಾತ್ಕಾಲಿಕ ಆನೆ ಶಿಬಿರಕ್ಕೆ ಆಗಮಿಸಿವೆ. ಕಾರ್ಯಾಚರಣೆ ಆರಂಭಕ್ಕೂ ಮುನ್ನ ಸಾಕಾನೆಗಳ ತುಂಟಾಟ ಎಲ್ಲರ ಗಮನ ಸೆಳೆದಿದ್ದು, ಧನಂಜಯ ಹಾಗೂ ಅಯ್ಯಪ್ಪ ಆನೆಗಳು ಪರಸ್ಪರ ಮುಖಾಮುಖಿಯಾಗಿ ಕೋರೆ ಮರ್ದಿಸಿ ಹುಡುಗಾಟ ನಡೆಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ

ಚಿಕ್ಕಬಳ್ಳಾಪುರ, ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯ ಕೋಟೆ ಸರ್ಕಲ್‌ನಲ್ಲಿ ಅಳವಡಿಸಿದ್ದ ಅಕ್ರಮ ಬ್ಯಾನರ್ ತೆರವುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಒಂದು ಚಲನಚಿತ್ರದ ಪ್ರಮೋಷನ್‌ಗಾಗಿ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಈ ಬ್ಯಾನರ್‌ನಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಗಾಳಿಗೆ ಅದು ಬೈಕ್ ಸವಾರರ ಮುಖಕ್ಕೆ ಅಪ್ಪಳಿಸಿ ಗಾಯಗೊಳಿಸುವ ಸಾಧ್ಯತೆಯೂ ಇತ್ತು ಎಂದು ಸ್ಥಳೀಯರು ಮತ್ತು ನಗರಸಭೆ ಸಿಬ್ಬಂದಿ ತಿಳಿಸಿದ್ದಾರೆ.

ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರ ಸೂಚನೆ ಮೇರೆಗೆ ಸಿಬ್ಬಂದಿ ಬ್ಯಾನರ್ ಅನ್ನು ತೆರವುಗೊಳಿಸಿದ್ದರು. ಈ ಕ್ರಮದಿಂದ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಆಕ್ರೋಶಗೊಂಡಿದ್ದು, ಪೌರಾಯುಕ್ತ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವಬೆದರಿಕೆ ಹಾಕದ್ದರು ಎಂದು ಆರೋಪಿಸಲಾಗಿದೆ. ಈ ಘಟನೆಯು ಶಿಡ್ಲಘಟ್ಟದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜೀವ್ ಗೌಡರ ವರ್ತನೆಯನ್ನು ಜನ ಖಂಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್: ವೋಟ್ ಮಾಡಲು ಭಾನುವಾರದವರೆಗೆ ಅವಕಾಶ; ಗಮನಿಸಬೇಕಾದ ವಿಷಯಗಳಿವು – Kannada News | Bigg Boss Kannada 12 Finale Voting: How to Vote, Last Date, Winner and Finalists Guide

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜನವರಿ 18) ಒಬ್ಬರು ಕಪ್ ಎತ್ತಲಿದ್ದಾರೆ. ಈ ಸೀಸನ್ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಭಾನುವಾರದವರೆಗೆ ವೋಟ್ ಮಾಡಲು ಅವಕಾಶ ಇದೆ. ವೋಟ್ ಮಾಡೋದು ಹೇಗೆ? ಎಲ್ಲಿಯವರೆಗೆ ಇದಕ್ಕೆ ಅವಕಾಶ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಬಿಗ್ ಬಾಸ್ ಫಿನಾಲೆಯಲ್ಲಿ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ರಘು, ಧನುಶ್ ಇದ್ದಾರೆ. ಇವರ ಪೈಕಿ ಒಬ್ಬರಿಗೆ ವಿಜಯಲಕ್ಷ್ಮೀ ಒಲಿಯಲಿದೆ. ಆ ವ್ಯಕ್ತಿ ಯಾರು ಎಂಬ ಕುತೂಹಲ ಮೂಡಿದೆ. ಇದನ್ನು ತಿಳಿಯಲು ಭಾನುವಾರದವರೆಗೆ ಕಾಯಲೇಬೇಕು. ಆದರೆ, ನೀವು ನಿಮ್ಮ ಮತ ಹಾಕಿ ವಿನ್ನರ್ ಯಾರು ಎಂಬುದನ್ನು ನಿರ್ಧರಿಸಬಹುದು.

ಜಿಯೋ ಹಾಟ್​​ಸ್ಟಾರ್​ನಲ್ಲಿ ವೋಟಿಂಗ್ ಲೈನ್ ಆರಂಭ ಆಗಿದೆ. ಭಾನುವಾರದ (ಜನವರಿ 11)ಎಲಿಮಿನೇಷನ್ ಬಳಿಕ ಓಪನ್ ಆಗಿದ್ದು ಮಧ್ಯವಾರದ ಎಲಿಮಿನೇಷನ್​ ವೋಟಿಂಗ್ ಲೈನ್. ಈ ಮತಗಳನ್ನು ಫಿನಾಲೆಗೆ ಪರಿಗಣನೆ ಮಾಡಲಾಗುವುದಿಲ್ಲ. ಬುಧವಾರ (ಜನವರಿ 14) ಹೊಸ ವೋಟಿಂಗ್ ಲೈನ್ ಓಪನ್ ಆಗಿದ್ದು, ಇದನ್ನು ಮಾತ್ರ ಫಿನಾಲೆಗೆ ಪರಿಗಣಿಸಲಾಗುತ್ತದೆ. ಹೀಗಾಗಿ, ನಾನು ಸೋಮವಾರವೇ ವೋಟ್ ಹಾಕಿದ್ದೇನೆ, ಮಂಗಳವಾರವೇ ವೋಟ್ ಹಾಕಿದ್ದೇನೆ ಎಂದರೆ ಅದು ಪರಿಗಣನೆಗೆ ಬರೋದಿಲ್ಲ. ಇದು ಮೊದಲು ಗಮನಿಸಬೇಕಾದ ವಿಷಯ.

ಇನ್ನು, ಭಾನುವಾರ ಮುಂಜಾನೆ 10 ಗಂಟೆವರೆಗೆ ವೋಟ್ ಮಾಡಲು ಅವಕಾಶ ಇದೆ. ಪ್ರತಿ ಖಾತೆಗೆ 99 ಮತ ಹಾಕಲು ಅವಕಾಶ ಇದೆ. ಆರು ಜನರ ಪೈಕಿ ಓರ್ವ ಸ್ಪರ್ಧಿಗೆ 99 ಮತ ಹಾಕಬಹುದು. ಅಥವಾ ಎಲ್ಲಾ ಸ್ಪರ್ಧಿಗಳಿಗೂ ಸ್ವಲ್ಪ ಸ್ವಲ್ಪ ಮತ ಹಾಕಬಹುದು. ಒಮ್ಮೆ ವೋಟ್ ಸಲ್ಲಿಕೆ ಮಾಡಿದ ಬಳಿಕ ಮತ್ತೆ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಹೀಗಾಗಿ, ಆ ಬಗ್ಗೆ ಗಮನ ಬೇಕು.

ಇದನ್ನೂ ಓದಿ: ‘ಹೊರ ಹೋದ್ಮೇಲೆ ಬ್ಲಾಕ್ ಮಾಡ್ತೀನಿ’; ಬ್ಲ್ಯಾಕ್​​ಮೇಲ್ ಮಾಡಿದ ಕಾವ್ಯಾಗೆ ತಿರುಗೇಟು ಕೊಟ್ಟ ಗಿಲ್ಲಿ

ಭಾನುವಾರದವರೆಗೆ ವೋಟ್ ಮಾಡಲು ಅವಕಾಶ ಕೊಟ್ಟಿರುವುದರಿಂದ ಶನಿವಾರ ಎಲಿಮಿನೇಷನ್ ನಡೆಯುವುದು ಅನುಮಾನ ಎಂದು ಹೇಳಲಾಗುತ್ತಾ ಇದೆ. ಈ ಬಗ್ಗೆ ಶನಿವಾರವರೇ ಘೋಷಣೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 16th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಶುಕ್ರವಾರ ಕಡಿಮೆಗೊಂಡಿವೆ. ನಿನ್ನೆ ಗುರುವಾರ ಬೆಳಗ್ಗೆ 40 ರೂ ಕಡಿಮೆಗೊಂಡು, ಸಂಜೆ 60 ರೂ ಹೆಚ್ಚಿದ್ದ ಚಿನ್ನದ ಬೆಲೆ (gold rate) ಇವತ್ತು 20 ರೂ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3-4 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,145 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,755 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 292 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,145 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 292 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,145 ರೂ
  • ಚೆನ್ನೈ: 13,230 ರೂ
  • ಮುಂಬೈ: 13,145 ರೂ
  • ದೆಹಲಿ: 13,160 ರೂ
  • ಕೋಲ್ಕತಾ: 13,145 ರೂ
  • ಕೇರಳ: 13,145 ರೂ
  • ಅಹ್ಮದಾಬಾದ್: 13,150 ರೂ
  • ಜೈಪುರ್: 13,160 ರೂ
  • ಲಕ್ನೋ: 13,160 ರೂ
  • ಭುವನೇಶ್ವರ್: 13,145 ರೂ

ಇದನ್ನೂ ಓದಿ: ಬೆಳ್ಳಿ ಬೆಲೆ ಕುಸಿತ ಕಾಣಲಿದೆ: ರಾಬರ್ಟ್ ಕಿಯೋಸಾಕಿ ಎಚ್ಚರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,068 ರುಪಾಯಿ)
  • ದುಬೈ: 514.75 ಡಿರಾಮ್ (12,709 ರುಪಾಯಿ)
  • ಅಮೆರಿಕ: 143.50 ಡಾಲರ್ (13,011 ರುಪಾಯಿ)
  • ಸಿಂಗಾಪುರ: 184.70 ಸಿಂಗಾಪುರ್ ಡಾಲರ್ (13,003 ರುಪಾಯಿ)
  • ಕತಾರ್: 511 ಕತಾರಿ ರಿಯಾಲ್ (12,712 ರೂ)
  • ಸೌದಿ ಅರೇಬಿಯಾ: 521 ಸೌದಿ ರಿಯಾಲ್ (12,597 ರುಪಾಯಿ)
  • ಓಮನ್: 54.60 ಒಮಾನಿ ರಿಯಾಲ್ (12,887 ರುಪಾಯಿ)
  • ಕುವೇತ್: 41.94 ಕುವೇತಿ ದಿನಾರ್ (12,437 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 292 ರೂ
  • ಚೆನ್ನೈ: 306 ರೂ
  • ಮುಂಬೈ: 292 ರೂ
  • ದೆಹಲಿ: 292 ರೂ
  • ಕೋಲ್ಕತಾ: 292 ರೂ
  • ಕೇರಳ: 306 ರೂ
  • ಅಹ್ಮದಾಬಾದ್: 292 ರೂ
  • ಜೈಪುರ್: 292 ರೂ
  • ಲಕ್ನೋ: 292 ರೂ
  • ಭುವನೇಶ್ವರ್: 306 ರೂ
  • ಪುಣೆ: 292

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಾಲಕಿ ಕಣ್ಣೆದುರೇ ತಂದೆಯ ಕೊಲೆ ಪ್ರಕರಣ: ನಿಗೂಢ ಕೊಲೆಯ ಸುಳಿವು ನೀಡಿದ್ದ ಕಾರು! ಕೊನೆಗೂ ಬಲೆಗೆ ಬಿದ್ದ ಹಂತಕರು – Kannada News | Father Murdered Before Daughter’s Eyes in Tumakuru: Car Clue Leads Police to Killers Within 48 Hours

ಆರೋಪಿಗಳಾದ ಅರುಣ್, ಕವಿತೇಶ್ವರನ್ ಹಾಗೂ ಕೇಶವನ್

ತುಮಕೂರು, ಜನವರಿ 16: ಅದೊಂದು ಕೊಲೆಗೆ ಇಡೀ ತುಮಕೂರು (Tumakur) ಜಿಲ್ಲೆ ಬೆಚ್ಚಿ ಬಿದಿತ್ತು. ಮಕ್ಕಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿ ಅರಿಚಿತ ಮುಸುಕುಧಾರಿಗಳ ದಾಳಿಗೆ ಮೃತಪಟ್ಟಿದ್ದರು. ಸಮಾಜದಲ್ಲಿ ಒಳ್ಳೆಯ ಹೆಸರು ಹೊಂದಿದ್ದ ಮಂಜುನಾಥನ ಕೊಲೆ ತುಮಕೂರು ಪೊಲೀಸರಿಗೆ ಸವಾಲಾಗಿತ್ತು. ಆದರೆ ಸಿಕ್ಕ ಅದೊಂದು ಸುಳಿವು ಆಧರಿಸಿ ಶಿವಮೊಗ್ಗ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ ತುಮಕೂರು ಪೊಲೀಸರು ಕೃತ್ಯ ನಡೆದ 48 ಗಂಟೆಗಳಲ್ಲೇ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾರೆ.

ಆರೋಪಿಗಳು ಮೂಲತಃ ತಮಿಳುನಾಡಿನವರಾದ ಸತೀಶ, ಕೇಶವನ್, ಕವಿತೇಶ್ವರನ್ ಹಾಗೂ ಅರುಣ್ ಎಂಬುದು ಗೊತ್ತಾಗಿದೆ. ಇವರು ಬೆಂಗಳೂರಿನ ಆನೆಕಲ್ ಭಾಗದ ಅತ್ತಿಬೆಲೆಯ ನಿವಾಸಿಗಳಾಗಿದ್ದಾರೆ. ವೃತ್ತಿಪರ ಕಳ್ಳರಾಗಿದ್ದು, ರಾಜ್ಯದ ವಿವಿಧೆಡೆ ಕಳ್ಳತನ ಕೃತ್ಯ ಎಸಗಿರುವ ಈ ಆರೋಪಿಗಳು ತುಮಕೂರಿಗೂ ಎಂಟ್ರಿ ಕೊಟ್ಟಿದ್ದರು. ಅದರಂತೆ ಚಿಕ್ಕನಾಯಕನಹಳ್ಳಿಯ ಕೆಂಕೆರೆಗೆ ಬಂದಿದ್ದ ಆರೋಪಿಗಳು, ಇದೇ ಮಂಜುನಾಥ್ ಮನೆಯ ಕಳ್ಳತನಕ್ಕೆ ಹೊಂಚು ಹಾಕಿದ್ದರು. ಹಿಂದಿನ ದಿನವೇ ಸಿದ್ಧತೆ ಮಾಡಿ ಜನವರಿ 11 ರಂದು ರಾತ್ರಿ 9ಗಂಟೆಗೆ ಕಳ್ಳತನಕ್ಕೆ ಬಂದಿದ್ದರು. ಕೈಗೆ ಗ್ಲೌಸ್ ಮುಖಕ್ಕೆ ಮಾಸ್ಕ್ ಧರಿಸಿ ಬಂಧವರೇ ಗೇಟ್ ಬಳಿಯೇ‌ ಮಕ್ಕಳ ಜೊತೆ ನಿಂತಿದ್ದ ಮಂಜುನಾಥ್ ಹಿಡಿದು ಅಂಗಡಿ ಬಾಗಿಲು ತೆರೆಯಲು ಹೇಳಿದ್ದರು. ನಿರಾಕರಿಸಿದ ಮಂಜುನಾಥ್​ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಇನ್ನು ಈ ವೇಳೆ ಮಂಜುನಾಥ್ ಅವರ 12 ವರ್ಷದ ಮಗಳು ಈ ಘಟನೆಯನ್ನು ಕಣ್ಣಾರೆ ಕಂಡು ಬೆಚ್ಚಿ ಬಿದಿದ್ದಳು.

ಆರೋಪಿಗಳ ಸುಳಿವು ಸಿಕ್ಕಿದ್ಹೇಗೆ?

ಘಟನೆ ಬಳಿಕ ಪ್ರಕರಣ ದಾಖಲಿಸಿದ್ದ ಹುಳಿಯಾರು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ನಡುವೆ ಶಿವಮೊಗ್ಗದ ವಿನೋಭನಗರ ಪೊಲೀಸರಿಗೆ ಬೇಕಾದ ಕಳ್ಳರ ಗ್ಯಾಂಗ್​​ನ ಕಾರು ಕೊಲೆ ನಡೆದ ಊರಿನಲ್ಲಿ ಓಡಾಡಿದ್ದ ಮಾಹಿತಿ ಲಭ್ಯವಾಗಿತ್ತು. ಜೊತೆಗೆ ಅದೇ ಕಾರು ತುಮಕೂರಿನ ಶಿರಾ ತಾಲೂಕಿನ ಮನೆಗಳ್ಳತನಕ್ಕೂ ಬಳಕೆಯಾಗಿತ್ತು. ಇದೇ ಅನುಮಾನದಲ್ಲಿ ಕಾರಿನ ಬೆನ್ನು ಬಿದ್ದ ಪೊಲೀಸರಿಗೆ ಬೆಂಗಳೂರಿನ ಅತ್ತಿಬೆಲೆಯಲ್ಲಿ ಆರೋಪಿಗಳು ಪತ್ತೆಯಾಗಿದ್ದು, ನಾಲ್ವರು ಹಂತಕರ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ತುಮಕೂರು: ಮಗಳ ಕಣ್ಣೆದುರೇ ತಂದೆಯನ್ನ ಬರ್ಬರವಾಗಿ ಕೊಂದ ದುಷ್ಕರ್ಮಿಗಳು

ಇನ್ನು ಬಂಧಿತರು ಅಂತರರಾಜ್ಯ ಕಳ್ಳರಾಗಿದ್ದು, ರಾಜ್ಯದ ಹಲವು ಕಡೆ ಕಳ್ಳತನ ಕೃತ್ಯ ಎಸಗಿದ್ದಾರೆ. ಜೊತೆಗೆ 2018ರಲ್ಲಿ ಆನೇಕಲ್ ಬಳಿ ನಡೆದಿದ್ದ ಕೊಲೆ ಪ್ರಕರಣ ಒಂದರಲ್ಲಿ ಶಾಮೀಲಾಗಿದ್ದರು ಎನ್ನಲಾಗಿದೆ.

ಅಸಲಿಗೆ ಕೊಲೆಯಲ್ಲಿ ಐವರು ಶಾಮೀಲಾಗಿದ್ದು, ನಾಲ್ವರ ಬಂಧನವಾಗಿದೆ. ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದು ಆತನಿಗಾಗಿ ಹುಳಿಯಾರು ಪೊಲೀಸರು ಹುಡುಕಾಟ ನಡೆಸುತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ ಆತ್ಮಹತ್ಯೆ, ಕಾರಣ ಏನು ಗೊತ್ತಾ? – Kannada News | Prisoner Suicide: Eshwarappa Pujar, Convicted for Wife’s Murder, Found Dead in Dharwad Jail

ಧಾರವಾಡ, ಜ.16: ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ (Dharwad Jail) ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಹೇಳಲಾಗಿದೆ. ಸುಮಾರು ಏಳು ವರ್ಷಗಳ ಹಿಂದೆ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಜೈಲಿನಲ್ಲೇ ಅನುಭವಿಸಿದ್ದಾರೆ. ಈಶ್ವರಪ್ಪ ಪೂಜಾರ್ ಅವರು ಜೈಲಿನ ಆವರಣದಲ್ಲಿರುವ ನಿರ್ಮಾಣ ಕಟ್ಟಡದ ಸ್ಥಳದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಜೈಲಿನಲ್ಲಿ ಕೆಲಸ ಮುಗಿಸಿದ ನಂತರ ಈಶ್ವರಪ್ಪ ಪೂಜಾರ್ ಸೇಲ್​​ಗೆ ಬಂದಿಲ್ಲ. ನಂತರ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಿರ್ಮಾಣ ಕಟ್ಟಡದ ಬಳಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಆಸ್ಪತ್ರೆ ಸಾಗಿಸಲಾಗಿದ್ದು, , ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು ಯಾವ ಕಾರಣಕ್ಕೆ ಈ ನಿರ್ಧಾರ ಯಾವ ಕಾರಣಕ್ಕೆ ತೆಗೆದುಕೊಂಡರು ಎಂದು ತಿಳಿದು ಬಂದಿಲ್ಲ. ಈ ಪ್ರಕರಣದ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿ ಅಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿತು ಸಾಕು ನಾಯಿ ಜಗಳ! ಅಸಲಿಗೆ ಆಗಿದ್ದೇನು ಗೊತ್ತೇ?

ಇನ್ನು ಕಟ್ಟಡ ನಿರ್ಮಾಣಕ್ಕೆಂದು ಅಲ್ಲಿ ಬಳಸಲಾಗಿದ್ದ ಹಗ್ಗದಿಂದಲ್ಲೇ ನೇಣು ಬಿಗಿದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಕೈದಿಗಳ ಕೆಲಸ ಮುಗಿದ ನಂತರ ಕೈದಿಗಳನ್ನು ಸೇಲ್​ಗೆ ಕರೆದುಕೊಂಡು ಬರುವ ಜವಾಬ್ದಾರಿಯನ್ನು ಅಲ್ಲಿ ಸಿಬ್ಬಂದಿಗಳಿಗೆ ನೀಡಲಾಗಿತ್ತು. ಆದರೆ ಈ ಜವಾಬ್ದಾರಿಯನ್ನು ನಿಭಾಯಿಸಲು ಅಧಿಕಾರಿಗಳು ವಿಫಲಗಿದ್ದಾರೆ ಎಂದು ಅವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಕಾರಾಗೃಹದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂಜಾರ್ ಜೈಲಿನಲ್ಲಿ ಉತ್ತಮ ನಡವಳಿಕೆ ಕೂಡ ಇತ್ತು. ಅವರ ಆ ನಡುವಳಿಕೆ ಮೇಲೆ ಅವರನ್ನು ಕೂಡ ಬಿಡಗುಡೆ ಮಾಡುವ ಯೋಚನೆ ಕೂಡ ಇತ್ತು ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:51 pm, Fri, 16 January 26

Source link

BJP National President Election Date: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ – Kannada News | Bjp National President Election Date Announced Nominations Will Be on 19 January, Election to be held on Jan 20

ನವದೆಹಲಿ, ಜನವರಿ 16: ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜನವರಿ 19 ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಜನವರಿ 20 ರಂದು ಹೊಸ ಅಧ್ಯಕ್ಷರ ಹೆಸರನ್ನು ಔಪಚಾರಿಕವಾಗಿ ಘೋಷಿಸಲಾಗುವುದು. ಬಿಜೆಪಿ ನಿತಿನ್ ನಬಿನ್(Nitin Nabin) ಅವರನ್ನು ಪಕ್ಷದ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಆದ್ದರಿಂದ, ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುವುದು ಖಚಿತವೆಂದು ಹೇಳಲಾಗುತ್ತಿದೆ. ಅವರು ಪಕ್ಷದ ಅತ್ಯಂತ ದೀರ್ಘಾವಧಿಯ ನಾಯಕರಾದ ಜೆಪಿ ನಡ್ಡಾ ಅವರ ಸ್ಥಾನಕ್ಕೆ ಬರಲಿದ್ದಾರೆ.ನಿತಿನ್ ನಬಿನ್ ಜನವರಿ 19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾಪಕರಾಗಿ ಹಾಜರಿರುತ್ತಾರೆ .

ಇದು ಪಕ್ಷದ ಹಿರಿಯ ನಾಯಕರಲ್ಲಿ ನಬಿನ್ ಅವರ ನಾಯಕತ್ವದ ಮೇಲಿನ ಬಲವಾದ ಬೆಂಬಲ ಮತ್ತು ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ . ಹಲವಾರು ಹಿರಿಯ ನಾಯಕರು, ಕೇಂದ್ರ ನಾಯಕತ್ವದ ಸದಸ್ಯರು ಮತ್ತು ಪ್ರಮುಖ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಮತ್ತಷ್ಟು ಓದಿ: ಮತ್ತೊಂದು ಅಚ್ಚರಿ ಆಯ್ಕೆ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಯುವ ನಾಯಕನಿಗೆ ಮಣೆ

ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಈಗ ಪಕ್ಷದ ಶಾಶ್ವತ ಅಧ್ಯಕ್ಷರಾಗಲಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಮಾತ್ರ ನಾಮಪತ್ರ ಸಲ್ಲಿಸಲಿದ್ದು, ಬೇರೆ ಯಾವುದೇ ನಾಯಕರು ಅವರ ವಿರುದ್ಧ ನಾಮಪತ್ರ ಸಲ್ಲಿಸುವುದಿಲ್ಲ. ಪರಿಣಾಮವಾಗಿ, ನಿತಿನ್ ನಬಿನ್ ಅವರ ಅವಿರೋಧ ಆಯ್ಕೆ ಖಚಿತ ಎಂದು ಹೇಳಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದರೆ, ಅವರು ಬಿಜೆಪಿ ಇತಿಹಾಸದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗುತ್ತಾರೆ.

ನಿತಿನ್ ನಬಿನ್ ಅವರ ಅಧಿಕಾರಾವಧಿಯು ಜನವರಿ 2029 ರವರೆಗೆ ಇರಲಿದೆ. 2029 ರ ಲೋಕಸಭಾ ಚುನಾವಣೆಗಳು ನಿಗದಿಯಾಗಿರುವುದರಿಂದ, ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ.

2020 ರ ಆರಂಭದಲ್ಲಿ, ಜೆಪಿ ನಡ್ಡಾ ಅವರನ್ನು ಮೊದಲು ಹಂಗಾಮಿ ಅಧ್ಯಕ್ಷರನ್ನಾಗಿ ಮತ್ತು ನಂತರ ಪಕ್ಷದ ಶಾಶ್ವತ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಈ ಬಾರಿಯೂ ಸಹ, ಚುನಾವಣಾ ಪ್ರಕ್ರಿಯೆಯ ನಂತರ ಹೊಸ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:53 pm, Fri, 16 January 26

Source link

Exit mobile version