ಮಧ್ಯಪ್ರಾಚ್ಯದಲ್ಲಿನ ಯುದ್ಧದ ಎಫೆಕ್ಟ್: ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರದ ಕೊರತೆ – Kannada News | Middle East War Impact: Karnataka Faces 38,000 Ton Fertilizer Shortage Ahead of Monsoon Sowing
ಬೆಂಗಳೂರು, ಮೇ 20: ಮಧ್ಯಪ್ರಾಚ್ಯದಲ್ಲಿನ ಯುದ್ಧ ಕೇವಲ ಇಂಧನಗಳ ಅಭಾವದ ಸಮಸ್ಯೆಯನ್ನು ಮಾತ್ರ ಸೃಷ್ಟಿಸಿಲ್ಲ. ಹತ್ತು ಹಲವು ತೊಂದರೆಗಳಿಗೆ ಕಾರಣವಾಗಿದ್ದು, ಅನ್ನದಾತರನ್ನೂ ಸಂಕಷ್ಟಕ್ಕೆ ತಳ್ಳಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಸಂಕಷ್ಟದ ಪರಿಣಾಮ ರಾಜ್ಯದಲ್ಲಿ 38 ಸಾವಿರ ಟನ್ ರಸಗೊಬ್ಬರ ಕೊರತೆ ಎದುರಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಅಧಿಕಾರಿಗಳು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ. 14 ಸಾವಿರ ಟನ್ ಯೂರಿಯಾ ಕೊರತೆಯೂ…