ಎಲ್ಲರ ಚಿತ್ತ ಲಕ್ಕುಂಡಿಯತ್ತ: ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಆರಂಭ – Kannada News | Historic Lakkundi Unveils Secrets: Excavation at Kote Veerabhadreshwara Temple
ಗದಗ, ಜ.16: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಇಂದಿನಿಂದ ಪ್ರಾರಂಭಗೊಂಡಿದೆ. ಸಿದ್ಧರಕೊಳ್ಳ ಎಂಬ ಸ್ಥಳದಲ್ಲಿ ಕೇವಲ 10 ಮೀಟರ್ ವ್ಯಾಪ್ತಿಯಲ್ಲಿ ಉತ್ಖನನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಕ್ಕುಂಡಿಯು ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರು ಸೇರಿದಂತೆ ಅನೇಕ ರಾಜ ಮಹಾರಾಜರ ಆಳ್ವಿಕೆಗೆ ಒಳಪಟ್ಟಿದ್ದು, ಬಾದಾಮಿಗಿಂತಲೂ ಹೆಚ್ಚು ಐತಿಹಾಸಿಕ ಮಹತ್ವವನ್ನು ಹೊಂದಿದೆ ಎಂದು ಶಾಸನಗಳಲ್ಲಿ ಉಲ್ಲೇಖವಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿದರೆ ಅಪಾರ ಪ್ರಮಾಣದ ಇತಿಹಾಸ ಬೆಳಕಿಗೆ ಬರಲಿದೆ ಎಂಬ ನಂಬಿಕೆ…