ಗಂಟೆಗಳ ಕಾಲ ಕುಳಿತು ಕೆಲಸ ಮಾಡ್ತೀರಾ? ಹಾಗಿದ್ರೆ ಇನ್ನಾದರೂ ತಪ್ಪದೆ ಈ ವಿಷಯಗಳನ್ನು ತಿಳಿದುಕೊಳ್ಳಿ
ಇಂದಿನ ಜೀವನಶೈಲಿಯಲ್ಲಿ, ಆಫೀಸ್, ಮನೆ ಕೆಲಸ ಅಥವಾ ಆನ್‌ಲೈನ್ ಅಧ್ಯಯನಕ್ಕಾಗಿ ಹಲವು ಗಂಟೆಗಳ ಕಾಲ ಕುಳಿತುಕೊಂಡು ಕೆಲಸ ಮಾಡುವುದು ಬಹಳ ಸಾಮಾನ್ಯವಾಗಿದೆ. ಜನರು ಕಂಪ್ಯೂಟರ್, ಲ್ಯಾಪ್‌ಟಾಪ್ ಅಥವಾ ಮೊಬೈಲ್ ಮುಂದೆ ನಿರಂತರವಾಗಿ ಕುಳಿತುಕೊಂಡಿರುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸವನ್ನು ನಿರ್ಲಕ್ಷ್ಯ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹೌದು, ಡಾ. ಅಜಯ್ ಕುಮಾರ್ ಹೇಳುವ ಪ್ರಕಾರ, ದೀರ್ಘಕಾಲ ಕುಳಿತುಕೊಳ್ಳುವುದರಿಂದ ಸ್ನಾಯುಗಳು ದುರ್ಬಲವಾಗುತ್ತವೆ ಮತ್ತು ಬೆನ್ನುಹುರಿಯ ಮೇಲೆ ಒತ್ತಡ ಹೆಚ್ಚುತ್ತದೆ. ಇದರಿಂದ ಬೆನ್ನು ನೋವು (Back Pain) ಸಾಮಾನ್ಯವಾಗುತ್ತದೆ. ರಕ್ತ…