ಕಂಠೀರವ ಸ್ಟುಡಿಯೋ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರ ಸಾವು – Kannada News | Two Works Killed And 3 Injured In Mud Collapse During Underpass Working at near kanteerava studio Bengaluru
ಬೆಂಗಳೂರು, (ಆಗಸ್ಟ್ 11): ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಂಠೀರವ ಸ್ಟೂಡಿಯೋ(kanteerava studio Underpass) ಬಳಿ ನಡೆದಿದೆ. ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣನ್ನು ಅಗೆಯಲಾಗಿತ್ತು. ಇಂದು (ಆಗಸ್ಟ್ 11) ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದಾಗ ಮೇಲಿಂದ ಏಕಾಏಕಿ ಮಣ್ಣಿನ ತಡೆಗೋಡೆ ಕುಸಿದುಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿ ಉಸಿರಾಡಲಾಗದೆ ನರಳಾಡಿದ್ದಾರೆ. ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮಯಪ್ರಜ್ಞೆಯಿಂದ…