ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ ಸ್ಕೀಮ್ಗಳ ಬಡ್ಡಿದರದಲ್ಲಿ ಇಳಿಕೆ ಇಲ್ಲ; ಇಲ್ಲಿದೆ ಜನವರಿ-ಮಾರ್ಚ್ ಕ್ವಾರ್ಟರ್ನ ಬಡ್ಡಿದರಗಳ ಪಟ್ಟಿ – Kannada News | Govt announces interest rates for various small savings schemes for Q4, 2026fy
ನವದೆಹಲಿ, ಜನವರಿ 1: ಸಾಮಾನ್ಯ ಜನರು ಅತಿಹೆಚ್ಚಾಗಿ ಬಳಸುವ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ (Small Savings Schemes) ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ 2026ರ ಜನವರಿಯಿಂದ ಮಾರ್ಚ್ವರೆಗಿನ ಅವಧಿಗೆ ಪರಿಷ್ಕೃತ ಬಡ್ಡಿದರ ಪ್ರಕಟಿಸಲಾಗಿದೆ. ಹಣಕಾಸು ಸಚಿವಾಲಯದ ಅಡಿಗೆ ಬರುವ ಆರ್ಥಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಪ್ರಕಟಣೆ ಪ್ರಕಾರ, ಈ ಕ್ವಾರ್ಟರ್ನಲ್ಲಿ ಯಾವುದೇ ಸ್ಮಾಲ್ ಸೇವಿಂಗ್ಸ್ ಸ್ಕೀಮ್ಗಳಿಗೆ ಬಡ್ಡಿದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಹಿಂದೆ ಇದ್ದ ದರಗಳೇ ಮುಂದುವರಿಯಲಿವೆ….