ಇಂಡಿಯನ್ ಪ್ರೀಮಿಯರ್ ಲೀಗ್ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲಿ ಗೆದ್ದರೆ ಮಾತ್ರ ಆರ್ಆರ್ ಪಡೆ ಪ್ಲೇಆಫ್ಗೇರಬಹುದು. ಒಂದು ವೇಳೆ ಸೋತರೆ ಪ್ಲೇಆಫ್ಗೇರುವುದು ಕಷ್ಟಸಾಧ್ಯ. ಹೀಗಾಗಿ ಇಂದಿನ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.
ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಈವರೆಗೆ 7 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ರಾಜಸ್ಥಾನ್ ರಾಯಲ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಲಕ್ನೋ ಸೂಪರ್ ಜೈಂಟ್ಸ್ 2 ಬಾರಿ ಗೆಲುವು ದಾಖಲಿಸಿದೆ. ಈ ಅಂಕಿ ಅಂಶಗಳು ಹಾಗೂ ಪ್ರಸ್ತುತ ಫಾರ್ಮ್ ಗಮನಿಸಿದರೆ ಇಂದಿನ ಮ್ಯಾಚ್ನಲ್ಲಿ ಆರ್ಆರ್ ಪಡೆ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.
ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ (ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡೊನೊವನ್ ಫೆರೇರಾ, ಸಂದೀಪ್ ಶರ್ಮಾ, ಶುಭಂ ದುಬೆ, ವೈಭವ್ ಸೂರ್ಯವಂಶಿ, ಲುವಾನ್-ಡ್ರೆ ಪ್ರಿಟೋರಿಯಸ್, ಶಿಮ್ರಾನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ ಜುರೆಲ್, ಯುಧ್ವೀರ್ ಸಿಂಗ್ ಚರಕ್, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಕ್ವೇನಾ ಮಫಾಕ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್, ಸುಶಾಂತ್ ಮಿಶ್ರಾ, ಯಶ್ ರಾಜ್ ಪುಂಜಾ, ವಿಘ್ನೇಶ್ ಪುತ್ತೂರ್, ರವಿ ಸಿಂಗ್, ಅಮನ್ ರಾವ್, ಬ್ರಿಜೇಶ್ ಶರ್ಮಾ, ಆಡಮ್ ಮಿಲ್ನ್, ಕುಲದೀಪ್ ಸೇನ್.
ಬೆಂಗಳೂರು, ಮೇ 19: ರಾಜ್ಯದಲ್ಲಿ ಇನ್ನೂ ಕೆಲವು ದಿನಗಳಕಾಲ ಮಳೆಯಾಗಲಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಮುಕ್ಕಾಲು ಕರ್ನಾಟಕದಲ್ಲಿ ನಾಳೆ ವರುಣನ (Rain) ಆಗಮನದ ನಿರೀಕ್ಷೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯ ಸಾಧ್ಯತೆ ಇದೆ. ಅದಾಗಿಯೂ ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನ ಕಂಡುಬರಲಿದ್ದು, ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ವರೆಗೂ ಕಂಡುಬರಲಿದೆ. ಇದೇ ರೀತಿಯ ವಾತಾವರಣ ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮುಖ್ಯಾಂಶಗಳು
ರಾಜ್ಯದ ಹಲವೆಡೆ ಮುಂದುವರಿಯಲಿರುವ ವರುಣಾರ್ಭಟ
ಮುಕ್ಕಾಲು ಕರ್ನಾಟಕದಲ್ಲಿ ನಾಳೆ ವರುಣನ ಆಗಮನದ ನಿರೀಕ್ಷೆ
ಅದಾಗಿಯೂ ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನದ ಎಚ್ಚರಿಕೆ
ಬಹುಪಾಲು ಕರ್ನಾಟಕದಲ್ಲಿ ಮಳೆ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯನ್ನು ಅಂದಾಜಿಸಲಾಗಿದೆ. ಹಾಗೆಯೇ ಬೆಳಗಾವಿ, ಬಾಗಲಕೋಟೆ, ರಾಯಚೂರು, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣದಲ್ಲಿಯೂ (ರಾಮನಗರ) ಮಳೆಯ ಎಚ್ಚರಿಕೆ ನೀಡಲಾಗಿದೆ.
— Karnataka State Natural Disaster Monitoring Centre (@KarnatakaSNDMC) May 19, 2026
ಬೆಳಗಾವಿಯ ಅಥಣಿ, ಬೀದರ್ನ ಔರಾಸ್, ಭಾಲ್ಕಿ ಮತ್ತು ಕಮಲಾನಗರದಲ್ಲಿ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಆಸುಪಾಸು ತಲುಪಲಿದೆ. ಹಾಗೆಯೇ ಬೀದರ್ ಜಿಲ್ಲೆಯ ಚಿಟಗುಪ್ಪಾ, ಬಸವಕಲ್ಯಾಣ, ಹುಲಸೂರು, ಹುಮ್ನಾಬಾದ್, ಕಲಬುರಗಿ ಜಿಲ್ಲೆಯ ಚಿಂಚೋಳಿ, ಕಾಳಗಿ, ಸೇಡಂನಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನ ಮಾನ್ವಿ, ದೇವದುರ್ಗ ಮತ್ತು ಅರಕೇರಾ ಹಾಗೆಯೇ ಯಾದಗಿರಿಯ ವಡಗೇರಾ ಮತ್ತು ಗುರುಮಿಟಕಲ್ನಲ್ಲಿಯೂ ಇದೇ ಮಾದರಿಯ ಹವಾಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಅತ್ಯಂತ ನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಟಾಕ್ಸಿಕ್’. ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೆ ಹೋಗಿದೆ. ಆದರೂ ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ‘ಟಾಕ್ಸಿಕ್’ ಸಿನಿಮಾದ ಕ್ಯಾರೆಕ್ಟರ್ ಪೋಸ್ಟರ್ ಹಾಗೂ ಎರಡು ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಕುತೂಹಲ ಮೂಡಿಸಿವೆ. ಇದೀಗ ‘ಟಾಕ್ಸಿಕ್’ ತಂಡವು ಸಿನಿಮಾದಲ್ಲಿನ ಯಶ್ ಪಾತ್ರವಾದ ‘ರಾಯ’ನ ಆಕರ್ಷಕ ಫೋಟೊಗಳನ್ನು ಹಂಚಿಕೊಂಡಿದೆ.
ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ನಲ್ಲಿ ಯಶ್ ರಾಯನ ವೇಷದಲ್ಲಿ ಸಖತ್ ಸ್ಟೈಲಿಷ್ ಆಗಿ ಕಾಣುತ್ತಿದ್ದಾರೆ. ಕಡು ಕೆಂಪು ಮತ್ತು ನಿಯಾನ್ ದೀಪಗಳ ಹಿನ್ನೆಲೆಯಲ್ಲಿ, ವಿಂಟೇಜ್ ಕಾರೊಂದರ ಮುಂದೆ ಯಶ್ ಖಡಕ್ ಆಗಿ ನಿಂತಿದ್ದಾರೆ. ಅವರ ಸುತ್ತಲೂ ಬಂದೂಕುಗಳನ್ನು ಹಿಡಿದಿರುವ ಕಾವಲುಗಾರರು ಅಥವಾ ಅಂಡರ್‌ವರ್ಲ್ಡ್ ಗ್ಯಾಂಗ್ ಸದಸ್ಯರು ಇರುವುದನ್ನು ಕಾಣಬಹುದು. ಈ ಆಕರ್ಷಕ ದೃಶ್ಯವು ಚಿತ್ರದಲ್ಲಿ ಸೃಷ್ಟಿಯಾಗಲಿರುವ ಕರಾಳ ಭೂಗತ ಲೋಕದ ವೈಭವ ಹಾಗೂ ತೀವ್ರತೆಯನ್ನು ಧ್ವನಿಸುತ್ತಿದೆ.
ಇದರ ಜೊತೆಗೆ ಯಶ್ ಅವರ ರಾಯ ಪಾತ್ರ ಸಿಗರೇಟು ಸೇದುತ್ತಾ ತೀಕ್ಷ್ಣ ದೃಷ್ಟಿಯಿಂದ ನೋಡುತ್ತಿರುವ ಕ್ಲೋಸ್ ಅಪ್ ಫೋಟೊ ಒಂದನ್ನು ಸಹ ಬಿಡುಗಡೆ ಮಾಡಲಾಗಿದೆ. ಎರಡೂ ಫೋಟೊಗಳನ್ನು ಯಶ್ ಬಲು ಸ್ಟೈಲಿಷ್ ಆಗಿ ಕಾಣಿಸಿಕೊಂಡಿದ್ದಾರೆ. ಎರಡೂ ಫೋಟೊಗಳು ಅವರ ರಾಯ ಪಾತ್ರದ್ದೇ ಆಗಿವೆ.
ರಾಷ್ಟ್ರಪ್ರಶಸ್ತಿ ವಿಜೇತ ಮತ್ತು ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಅಧಿಕೃತ ನಾಮನಿರ್ದೇಶನ ಪಡೆದಿದ್ದ ಚಿತ್ರಗಳ ನಿರ್ದೇಶಕಿ ಗೀತು ಮೋಹನ್‌ದಾಸ್ ‘ಟಾಕ್ಸಿಕ್’ ಸಿನಿಮಾವನ್ನು ನಿರ್ದೇಶಿಸಿದ್ದು. ಇತ್ತೀಚೆಗೆ ಕಾನ್ ಚಲನಚಿತ್ರೋತ್ಸವದಲ್ಲಿ ಚಿತ್ರದ ಪ್ರಮುಖ ನಟಿಯರಲ್ಲಿ ಒಬ್ಬರಾದ ತಾರಾ ಸುತಾರಿಯಾ ಚಿತ್ರದ ಕುರಿತು ಮಾತನಾಡುತ್ತಾ, “ಗೀತು ಮೋಹನ್‌ದಾಸ್ ಅವರಂತಹ ಮಹಿಳಾ ನಿರ್ದೇಶಕಿಯ ಜೊತೆ ಕೆಲಸ ಮಾಡುವುದು ಅದ್ಭುತ ಅನುಭವ. ಈ ಚಿತ್ರದಲ್ಲಿ ನಟಿಸಿರುವ ಪ್ರತಿಯೊಬ್ಬ ಮಹಿಳಾ ಪಾತ್ರಕ್ಕೂ ಅಪಾರ ಶಕ್ತಿ, ಧೈರ್ಯ ಹಾಗೂ ಆಳವಾದ ವ್ಯಕ್ತಿತ್ವವಿದೆ. ಭಾರತೀಯ ಚಿತ್ರರಂಗದಲ್ಲೇ ವಿಭಿನ್ನವಾದ ಶೈಲಿಯಲ್ಲಿ ಈ ಸಿನಿಮಾವನ್ನು ಜಾಗತಿಕ ಮಟ್ಟಕ್ಕಾಗಿ ರೂಪಿಸಲಾಗುತ್ತಿದೆ’ ಎಂದು ಹೊಗಳಿದ್ದಾರೆ.
Yash Raya
‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಜೊತೆಗೆ ದೊಡ್ಡ ತಾರಾಗಣವೇ ಇದೆ. ಕಿಯಾರಾ ಅಡ್ವಾಣಿ (ನಾಡಿಯಾ ಪಾತ್ರದಲ್ಲಿ), ನಯನತಾರಾ (ಗಂಗಾ ಪಾತ್ರದಲ್ಲಿ), ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಜೊತೆಗೆ ಇನ್ನೂ ಹಲವು ಖ್ಯಾತ ನಟರುಗಳು ಸಿನಿಮಾನಲ್ಲಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ಛಾಯಾಗ್ರಾಹಕ ರಾಜೀವ್ ರವಿ ಕ್ಯಾಮೆರಾ ಸಿನಿಮಾಟೊಗ್ರಫಿ ಮಾಡಿದ್ದಾರೆ. ರವಿ ಬಸ್ರೂರ್ ಮತ್ತು ವಿಶಾಲ್ ಮಿಶ್ರಾ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮೊನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ಭಾರಿ ಬಜೆಟ್ನಲ್ಲಿ ಸಿನಿಮಾ ನಿರ್ಮಿಸಿವೆ.
ಈ ಹಿಂದೆ ‘ಟಾಕ್ಸಿಕ್’ ಚಿತ್ರವನ್ನು 2026ರ ಮಾರ್ಚ್ 19 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ನಂತರ ಜೂನ್ 4 ಕ್ಕೆ ಮುಂದೂಡಲಾಗಿತ್ತು. ಆದರೆ, ಇತ್ತೀಚೆಗೆ ಚಿತ್ರತಂಡ ಅಧಿಕೃತ ಪ್ರಕಟಣೆ ಹೊರಡಿಸಿ, ಚಿತ್ರದ ಕೆಲಸಗಳು ಬಹುತೇಕ ಮುಗಿದಿದ್ದರೂ ಜಾಗತಿಕ ಮಟ್ಟದ ವಿತರಣೆ ಮಾಡುವ ಹೊಂದಿಸುವ ಸಲುವಾಗಿ ಬಿಡುಗಡೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ. ಪ್ರಸ್ತುತ ಹರಿದಾಡುತ್ತಿರುವ ಸುದ್ದಿಗಳ ಪ್ರಕಾರ ಆಗಸ್ಟ್ 14 ಕ್ಕೆ ಸಿನಿಮಾ ಬಿಡುಗಡೆ ಆಗುವ ಸಾಧ್ಯತೆ ಇದೆ.
ವಾಷಿಂಗ್ಟನ್, ಮೇ 19: ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸದ್ಯ ‘ಬಾಂಡ್ ರಕ್ತಪಾತ’ (Bond Bloodbath) ನಡೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಸಾಂಪ್ರದಾಯಿಕವಾಗಿ ಅತ್ಯಂತ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತಿದ್ದ ಬಾಂಡ್ ಮತ್ತು ಸಾಲ ಮಾರುಕಟ್ಟೆಯಿಂದ (Debt Market) ಜಾಗತಿಕ ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ತಮ್ಮ ಹಣವನ್ನು ಹಿಂಪಡೆಯುತ್ತಿದ್ದಾರೆ. ಇದು ಜಾಗತಿಕ ಆರ್ಥಿಕತೆಯಲ್ಲಿ ಹೊಸ ಆತಂಕವನ್ನು ಸೃಷ್ಟಿಸಿದೆ. ಅಮೆರಿಕ ಸರ್ಕಾರದ ಬಾಂಡ್ಗಳಿಂದ ನಿರ್ಗಮಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಬಾಂಡ್ ಇಳುವರಿ (Yields) ಏರಿಕೆ – ಬಾಂಡ್ ಬೆಲೆಗಳ ಕುಸಿತ
ಬಾಂಡ್ ಮಾರುಕಟ್ಟೆಯ ಮೂಲ ನಿಯಮದಂತೆ, ಬಾಂಡ್ ಇಳುವರಿ (Bond Yields) ಹೆಚ್ಚಾದಾಗ, ಚಾಲ್ತಿಯಲ್ಲಿರುವ ಹಳೆಯ ಬಾಂಡ್‌ಗಳ ಬೆಲೆಗಳು (Bond Prices) ಕುಸಿಯುತ್ತವೆ. 10 ವರ್ಷದ ಅಮೆರಿಕನ್ ಸಾಲಪತ್ರದ ಇಳುವರಿ ದಾಖಲೆಯ ಶೇ. 4.16ಕ್ಕೆ ಏರಿದೆ. 30 ವರ್ಷದ ಬಾಂಡ್ನ ಯೀಲ್ಡ್ ಶೇ. 5.14ಕ್ಕೆ ಏರಿದೆ. ಇದು ಸಾರ್ವಕಾಲಿಕ ಗರಿಷ್ಠ ಮಟ್ಟ. ಅಮೆರಿಕದ ರಿಸರ್ವ್ ಬ್ಯಾಂಕ್ನ ಬಡ್ಡಿ ದರ ಶೇ. 3.50ರಿಂದ ಶೇ. 3.75 ಶ್ರೇಣಿಯಲ್ಲಿದೆ. ಬಾಂಡ್ ಇಳುವರಿಯು ಅದನ್ನೂ ಮೀರಿ ಮೇಲೆ ಹೋಗಿದೆ. ಇದು ಹೂಡಿಕೆದಾರರು ಬಾಂಡ್ ಮಾರಲು ಸರಿಯಾದ ಸಂದರ್ಭವೆನಿಸಿರಬಹುದು.
ಹಣದುಬ್ಬರದ ಆತಂಕ
ಅಮೆರಿಕದ ಸಾಲಪತ್ರಗಳ ಇಳುವರಿ ಹೆಚ್ಚಿದೆ ಎಂದರೆ ಅಲ್ಲಿ ಹಣದುಬ್ಬರ ಧಾವಿಸುತ್ತಿರುವ ಸೂಚನೆ ಎಂದು ಭಾವಿಸಲಾಗುತ್ತದೆ. ಇದರಿಂದ ಎರಡು ಪರಿಣಾಮಗಳಾಗಬಹುದು. ಅಮೆರಿಕದ ಫೆಡರಲ್ ರಿಸರ್ವ್ ಸಂಸ್ಥೆ ಬಡ್ಡಿದರ ಕಡಿತಗೊಳಿಸಲು ಮುಂದಾಗದೇ ಹೋಗಬಹುದು. ಮತ್ತೊಂದು ಪರಿಣಾಮವೆಂದರೆ, ಹಣದುಬ್ಬರ ಹೆಚ್ಚಿನ ಮಟ್ಟದಲ್ಲಿದ್ದರೆ ಹಾಲಿ ಹೂಡಿಕೆದಾರರಿಗೆ ಸಿಗುವ ಭವಿಷ್ಯದ ಬಡ್ಡಿ ಪಾವತಿಯ ಅಸಲಿ ಮೌಲ್ಯ ಕುಂದುವ ಸಾಧ್ಯತೆ ಹೆಚ್ಚು.
ಬಡ್ಡಿ ದರಗಳು ಹೆಚ್ಚಾದಾಗ ಮಾರುಕಟ್ಟೆಗೆ ಬರುವ ಹೊಸ ಬಾಂಡ್‌ಗಳು ಹೆಚ್ಚಿನ ಲಾಭ ನೀಡುತ್ತವೆ. ಇದರಿಂದಾಗಿ ಹೂಡಿಕೆದಾರರು ಹಳೆಯ ಕಡಿಮೆ ಲಾಭದ ಬಾಂಡ್‌ಗಳನ್ನು ಮಾರಿ ಹೊರಬರುತ್ತಿದ್ದಾರೆ.
ಸರ್ಕಾರಗಳ ಅತಿಯಾದ ಸಾಲ ಮತ್ತು ವಿತ್ತೀಯ ಕೊರತೆ
ಅಮೆರಿಕ ಸೇರಿದಂತೆ ಹಲವು ಪ್ರಮುಖ ದೇಶಗಳ ಸರ್ಕಾರಗಳು ತಮ್ಮ ವೆಚ್ಚಗಳಿಗಾಗಿ ಮಾರುಕಟ್ಟೆಯಿಂದ ಭಾರಿ ಪ್ರಮಾಣದಲ್ಲಿ ಸಾಲವನ್ನು ಪಡೆಯುತ್ತಿವೆ (Deficit Spending). ಮಾರುಕಟ್ಟೆಗೆ ಅತಿಯಾದ ಹೊಸ ಬಾಂಡ್‌ಗಳ ಪೂರೈಕೆಯಾಗುತ್ತಿರುವುದರಿಂದ, ಹಳೆಯ ಬಾಂಡ್‌ಗಳ ಬೇಡಿಕೆ ಕುಸಿದು ಅವುಗಳ ಮೌಲ್ಯ ಮತ್ತಷ್ಟು ರಕ್ತಪಾತಕ್ಕೆ ಈಡಾಗುತ್ತಿದೆ.
ಷೇರು ಮಾರುಕಟ್ಟೆ ಮತ್ತು ಪರ್ಯಾಯ ಹೂಡಿಕೆಗಳ ಆಕರ್ಷಣೆ
ಬಾಂಡ್ ಮಾರುಕಟ್ಟೆಯಲ್ಲಿ ನಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ, ಹೆಚ್ಚಿನ ರಿಸ್ಕ್ ಇದ್ದರೂ ಉತ್ತಮ ಲಾಭ ನೀಡುವ ಷೇರು ಮಾರುಕಟ್ಟೆ (Equities) ಅಥವಾ ಇತರ ಆಲ್ಟರ್ನೇಟಿವ್ ಆಸ್ತಿಗಳತ್ತ (Alternative Assets) ಹೂಡಿಕೆದಾರರು ಮುಖ ಮಾಡುತ್ತಿದ್ದಾರೆ.
ಅಧಿಕ ಬಾಂಡ್ ಯೀಲ್ಡ್ನಿಂದ ಡಾಲರ್ ಮೌಲ್ಯ ಹೆಚ್ಚುತ್ತದೆ. ಇದರಿಂದ ಭಾರತದಂತಹ ಉದಯೋನ್ಮುಖ ಆರ್ಥಿಕತೆಯ ಮಾರುಕಟ್ಟೆಗಳಿಂದ ಹೂಡಿಕೆಗಳು ಹೊರಹೋಗುವ ಸಾಧ್ಯತೆ ಹೆಚ್ಚು ಎಂದು ವಿಶ್ಲೇಷಿಸಲಾಗುತ್ತದೆ.
ಒಟ್ಟಾರೆಯಾಗಿ, ನಿರಂತರ ಹಣದುಬ್ಬರ, ಹೆಚ್ಚುತ್ತಿರುವ ಬಡ್ಡಿ ದರಗಳು ಮತ್ತು ಸರ್ಕಾರಗಳ ವಿಪರೀತ ಸಾಲದ ನೀತಿಗಳಿಂದಾಗಿ ಜಾಗತಿಕ ಬಾಂಡ್ ಮಾರುಕಟ್ಟೆಯು ಕಳೆದ ನಾಲ್ಕು ದಶಕಗಳಲ್ಲೇ ಅತ್ಯಂತ ಕಠಿಣ (Bear Market) ಪರಿಸ್ಥಿತಿಯನ್ನು ಎದುರಿಸುತ್ತಿದೆ. ಸುರಕ್ಷಿತ ಹೂಡಿಕೆಯಾಗಿದ್ದ ಬಾಂಡ್‌ಗಳು ಸದ್ಯ ಹೂಡಿಕೆದಾರರಿಗೆ ನಷ್ಟದ ತಾಣವಾಗಿ ಮಾರ್ಪಟ್ಟಿರುವುದರಿಂದ ಜಾಗತಿಕ ನಿಧಿಗಳು ಸಾಲದ ಮಾರುಕಟ್ಟೆಯಿಂದ ಭಾರಿ ಪ್ರಮಾಣದಲ್ಲಿ ಹೊರನಡೆಯುತ್ತಿವೆ.
ಇಂದು (ಮೇ 19) ದರ್ಶನ್ ಹಾಗೂ ವಿಜಯಲಕ್ಷ್ಮಿ (Vijayalakshmi Darshan) ಅವರ ವಿವಾಹ ವಾರ್ಷಿಕೋತ್ಸವ. ಆ ಪ್ರಯುಕ್ತ ಜೈಲಿನಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಮಾಡಿಕೊಡಲಾಗಿದೆ. ಮಗ ವಿನೀಶ್ ಜೊತೆ ಬಂದ ವಿಜಯಲಕ್ಷ್ಮಿ ಅವರು ದರ್ಶನ್ ಭೇಟಿ ಮಾಡಿ ವಾಪಸ್ ತೆರಳಿದ್ದಾರೆ. ಈ ಭೇಟಿಗಾಗಿ ದರ್ಶನ್ ಅವರು ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಜಾಮೀನು ಪಡೆಯಲು ಅವರು ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿತು. ಬಳಿಕ ದರ್ಶನ್ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.
ನವದೆಹಲಿ, ಮೇ 19: ಇದೇ ವರ್ಷದ ಸೆಪ್ಟೆಂಬರ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12 ಮತ್ತು 13ರಂದು ಪುಟಿನ್ ನವದೆಹಲಿಗೆ ಆಗಮಿಸಲಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ಅವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಒಂದೇ ವರ್ಷದ ಅವಧಿಯಲ್ಲಿ ಪುಟಿನ್ ಅವರು ಎರಡನೇ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವುದು ಉಭಯ ದೇಶಗಳ ನಡುವಿನ ಆಳವಾದ ರಾಜತಾಂತ್ರಿಕ ಬಾಂಧವ್ಯವನ್ನು ಎತ್ತಿ ತೋರಿಸುತ್ತದೆ. ಇದಕ್ಕೂ ಮುನ್ನ ಡಿಸೆಂಬರ್ 2025ರಲ್ಲಿ ನಡೆದ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ಅವರು ಭಾರತಕ್ಕೆ ಬಂದಿದ್ದರು.
ಬ್ರಿಕ್ಸ್ ಶೃಂಗಸಭೆಯ ಜೊತೆಗೆ, ರಷ್ಯಾ ಅಧ್ಯಕ್ಷ ಪುಟಿನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವೆ ಪ್ರತ್ಯೇಕ ದ್ವಿಪಕ್ಷೀಯ ಸಭೆ ನಡೆಯಲಿದೆ. ಜಾಗತಿಕ ರಾಜಕೀಯ ಒತ್ತಡಗಳ ನಡುವೆಯೂ ಭಾರತ ಮತ್ತು ರಷ್ಯಾ ನಡುವೆ ಡಾಲರ್ ಬದಲಿಗೆ ರೂಪಾಯಿ-ರೂಬಲ್ ಮೂಲಕ ವ್ಯಾಪಾರವನ್ನು ವಿಸ್ತರಿಸುವ ಬಗ್ಗೆ ಈ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.
ಜಾಗತಿಕ ಇಂಧನ ಬಿಕ್ಕಟ್ಟು ಮತ್ತು ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ರಷ್ಯಾದಿಂದ ಭಾರತಕ್ಕೆ ಕಚ್ಚಾ ತೈಲ, ಕಲ್ಲಿದ್ದಲು ಮತ್ತು ರಸಗೊಬ್ಬರಗಳ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಉಭಯ ನಾಯಕರು ಚರ್ಚಿಸಲಿದ್ದಾರೆ. ರಕ್ಷಣಾ ಸಹಕಾರ ಮತ್ತು ತಂತ್ರಜ್ಞಾನ: ರಷ್ಯಾದ ಅತ್ಯಾಧುನಿಕ S-400 ಕ್ಷಿಪಣಿ ವ್ಯವಸ್ಥೆಯ ಪೂರೈಕೆ ಹಾಗೂ ರಕ್ಷಣಾ ವಲಯದಲ್ಲಿ ಜಂಟಿ ತಂತ್ರಜ್ಞಾನ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆಗಳು ಮುಂದುವರಿಯಲಿವೆ.
ಇತ್ತೀಚೆಗಷ್ಟೇ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೋವ್ ಅವರು ನವದೆಹಲಿಗೆ ಭೇಟಿ ನೀಡಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು. ಈ ವೇಳೆ ಪ್ರಧಾನಿ ಮೋದಿ ಅವರು ಸಹ ಈ ವರ್ಷದ ಕೊನೆಯಲ್ಲಿ ವಾರ್ಷಿಕ ಶೃಂಗಸಭೆಗಾಗಿ ರಷ್ಯಾದ ರಾಜಧಾನಿ ಮಾಸ್ಕೋಗೆ ಭೇಟಿ ನೀಡುವುದನ್ನು ಖಚಿತಪಡಿಸಿದ್ದರು. ಜಾಗತಿಕವಾಗಿ ಅಮೆರಿಕ ಮತ್ತು ಪಾಶ್ಚಿಮಾತ್ಯ ದೇಶಗಳ ನಿರ್ಬಂಧಗಳ ನಡುವೆಯೂ ಭಾರತ ಮತ್ತು ರಷ್ಯಾ ತಮ್ಮ ಸ್ನೇಹವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿರುವುದು ಇಡೀ ವಿಶ್ವದ ಗಮನ ಸೆಳೆದಿದೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 14 ಸದಸ್ಯರುಗಳ ಈ ತಂಡಗಳ ನಾಯಕನಾಗಿ ಶುಭ್ಮನ್ ಗಿಲ್ ಕಾಣಿಸಿಕೊಂಡರೆ, ಉಪನಾಯಕರುಗಳಾಗಿ ಕೆಎಲ್ ರಾಹುಲ್ (ಟೆಸ್ಟ್) ಹಾಗೂ ಶ್ರೇಯಸ್ ಅಯ್ಯರ್ (ಏಕದಿನ) ಆಯ್ಕೆಯಾಗಿದ್ದಾರೆ. ಇನ್ನು ಕಳೆದ ಬಾರಿ ತಂಡದಲ್ಲಿದ್ದ ಕೆಲ ಪ್ರಮುಖ ಆಟಗಾರರು ಈ ಬಾರಿ ಸ್ಥಾನ ಪಡೆದಿಲ್ಲ. ಆ ಆಟಗಾರರು ಯಾರೆಂದರೆ… (PC: gettyimages)
ಅಕ್ಷರ್ ಪಟೇಲ್: ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳಲ್ಲಿ ಖಾಯಂ ಸದಸ್ಯನಾಗಿ ಕಾಣಿಸಿಕೊಂಡಿದ್ದ ಅಕ್ಷರ್ ಪಟೇಲ್ ಅವರನ್ನು ಈ ಬಾರಿ ಆಯ್ಕೆ ಮಾಡಲಾಗಿಲ್ಲ. ಕಳಪೆ ಫಾರ್ಮ್ನಲ್ಲಿರುವ ಅಕ್ಷರ್ ಪಟೇಲ್ ಬದಲಿಗೆ ಈ ಸಲ ವಾಷಿಂಗ್ಟನ್ ಸುಂದರ್ಗೆ ಸ್ಥಾನ ನೀಡಲಾಗಿದೆ. (PC: gettyimages)
ರಿಷಭ್ ಪಂತ್: ಭಾರತ ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗುತ್ತಿದ್ದ ರಿಷಭ್ ಪಂತ್ ಅವರನ್ನು ಈ ಬಾರಿ ಕೈ ಬಿಡಲಾಗಿದೆ. ಕಳಪೆ ಫಾರ್ಮ್ ಕಾರಣ ಪಂತ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂದು ತಿಳಿದು ಬಂದಿದೆ. ಇದಾಗ್ಯೂ ಪಂತ್ ಟೆಸ್ಟ್ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ. (PC: gettyimages)
ವರುಣ್ ಚಕ್ರವರ್ತಿ: ಚಾಂಪಿಯನ್ಸ್ ಟ್ರೋಫಿ ವೇಳೆ ಅತ್ಯುತ್ತಮ ಸ್ಪಿನ್ ದಾಳಿಯೊಂದಿಗೆ ಮಿಂಚಿದ್ದ ವರುಣ್ ಚಕ್ರವರ್ತಿಗೂ ಈ ಬಾರಿ ಸ್ಥಾನ ಲಭಿಸಿಲ್ಲ. ಬದಲಾಗಿ ಕುಲ್ದೀಪ್ ಯಾದವ್ ಹಾಗೂ ಹರ್ಷ್ ದುಬೆ ಪರಿಪೂರ್ಣ ಸ್ಪಿನ್ನರ್ಗಳಾಗಿ ಆಯ್ಕೆಯಾಗಿದ್ದಾರೆ. (PC: gettyimages)
ರವೀಂದ್ರ ಜಡೇಜಾ: ಭಾರತ ತಂಡದ ಸ್ಪಿನ್ ಆಲ್ರೌಂಡರ್ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಮುಂದಿನ ಸರಣಿ ವೇಳೆ ಜಡೇಜಾ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. (PC: gettyimages)
ಹರ್ಷಿತ್ ರಾಣಾ: ಭಾರತ ಏಕದಿನ ತಂಡದಲ್ಲಿ ಖಾಯಂ ಸದಸ್ಯನಾಗಿದ್ದ ಹರ್ಷಿತ್ ರಾಣಾ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹರ್ಷಿತ್ ಬದಲಿಗೆ ಪ್ರಿನ್ಸ್ ಯಾದವ್ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. (PC: gettyimages)
ಸಂಜು ಸ್ಯಾಮ್ಸನ್: ಭಾರತ ಏಕದಿನ ತಂಡದಲ್ಲಿ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಂಜು ಸ್ಯಾಮ್ಸನ್ ಅವರನ್ನು ಈ ಬಾರಿ ಆಯ್ಕೆ ಮಾಡಲಾಗಿಲ್ಲ. ಅವರ ಬದಲಿಗೆ ಹೆಚ್ಚುವರಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಿದ್ದಾರೆ. (PC: gettyimages)
ಮೊಹಮ್ಮದ್ ಶಮಿ: ಟೀಮ್ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರನ್ನು ಮತ್ತೊಮ್ಮೆ ನಿರ್ಲಕ್ಷಿಸಿದ್ದಾರೆ. ಅಂಸರೆ ಬಿಸಿಸಿಐ ಆಯ್ಕೆ ಸಮಿತಿ ಶಮಿ ಅವರ ಆಯ್ಕೆಗೆ ಯಾವುದೇ ಆಸಕ್ತಿ ತೋರಿಲ್ಲ. ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಶಮಿ ಅವರ ಯುಗಾಂತ್ಯವಾಗಿದೆ ಎಂದೇ ಹೇಳಬಹುದು. (PC: gettyimages)
ಜಸ್ಪ್ರೀತ್ ಬುಮ್ರಾ: ಟೀಮ್ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೂ ವರ್ಕ್ಲೋಡ್ ಬ್ಯಾಲೆನ್ಸ್ ಮಾಡಲು ವಿಶ್ರಾಂತಿ ನೀಡಲಾಗಿದೆ. ಅಲ್ಲದೆ ಮುಂಬರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಬುಮ್ರಾ ಕೂಡ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. (PC: gettyimages)
ಆಕಾಶ್ ದೀಪ್: ಭಾರತ ಟೆಸ್ಟ್ ತಂಡದಲ್ಲಿ ವೇಗದ ಬೌಲರ್ಗೀ ಕಾಣಿಸಿಕೊಳ್ಳುತ್ತಿದ್ದ ಆಕಾಶ್ ದೀಪ್ ಅವರನ್ನು ಕೂಡ ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಗುರ್ನೂರ್ ಬ್ರಾರ್ ಆಯ್ಕೆಯಾಗಿದ್ದಾರೆ. (PC: gettyimages)
ಭಾರತ ಏಕದಿನ ತಂಡ: ಶುಭ್ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ. (PC: BCCI)
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಬಿ. ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡ್ಡಿಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್. (PC: BCCI)
ಬೆಂಗಳೂರು, ಮೇ 19: ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹೈಕೋರ್ಟ್ ಆದೇಶದ ಬೆನ್ನಲ್ಲೇ ಹಿಂಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಮುಷ್ಕರ ಹಿಂಪಡೆಯುವಂತೆ ತಿಳಿಸಿರುವ ಕಾರಣ ನಿರ್ಧಾರ ಕೈಬಿಟ್ಟಿದ್ದೇವೆ. ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ ಸಭೆ ಮಾಡಬೇಕು ಅಂತಲೂ ಕೋರ್ಟ್ ಹೇಳಿದ್ದು, ಈ ಸಭೆಯನ್ನು ಸಾರಿಗೆ ನೌಕರರು ಸದುಪಯೋಗಪಡಿಸಿಕೊಳ್ಳಲಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.
ಕುಶಾಲನಗರದ ದುಬಾರೆ ಕ್ಯಾಂಪ್ನಲ್ಲಿ ಕಾದಾಟದ ವೇಳೆ ಗಂಭಿರವಾಗಿ ಗಾಯಗೊಂಡಿದ್ದ ಆನೆ ಮಾರ್ತಾಂಡ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ 19) ಮೃತಪಟ್ಟಿದೆ. ನಿನ್ನೆ ಸ್ನಾನಕ್ಕೆಂದು ಕಾವೇರಿ ನದಿಗೆ ಮಾವುತರು ಕಂಜನ್ ಮತ್ತು ಮಾರ್ತಾಂಡ ಆನೆಗಳನ್ನು ಕರೆತಂದಿದ್ದ ವೇಳೆ ಅವುಗಳ ನಡುವೆ ಕಾದಾಟ ನಡೆದಿತ್ತು. ಈ ವೇಳೆ ಓರ್ವ ಮಹಿಳೆ ಮೃತಪಟ್ಟಿದ್ದರೆ ಮಾರ್ತಾಂಡ ಆನೆ ಗಂಭೀರವಾಗಿ ಗಾಯಗೊಂಡಿತ್ತು. ಗಾಯಗೊಂಡಿದ್ದ ಮಾರ್ತಾಂಡಗೆ ಶಿಬಿರದಲ್ಲೇ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ ಅದು ಇಂದು ಮೃತಪಟ್ಟಿದೆ ಎಂದು ಡಿಎಫ್ಒ ಅಭಿಶೇಕ್ ಮಾಹಿತಿ ನೀಡಿದ್ದಾರೆ.
ಸಿಲಿಗುರಿ ಕಾರಿಡಾರ್ ಕುರಿತು ಪಶ್ಚಿಮ ಬಂಗಾಳ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರವು ‘ಚಿಕನ್ ನೆಕ್’ ಎಂದು ಕರೆಯಲ್ಪಡುವ ಸಿಲಿಗುರಿ ಕಾರಿಡಾರ್ ಪ್ರದೇಶದಲ್ಲಿನ 120 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದೆ. ಸಿಲಿಗುರಿ ಕಾರಿಡಾರ್ ಭಾರತಕ್ಕೆ ಅತ್ಯಂತ ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವದ ಪ್ರದೇಶವಾಗಿದ್ದು, ಇದು ನೇಪಾಳ, ಭೂತಾನ್, ಬಾಂಗ್ಲಾದೇಶ ಹಾಗೂ ಚೀನಾ ಗಡಿಗಳಿಗೆ ಸಮೀಪದಲ್ಲಿದೆ. ‘ಚಿಕನ್ ನೆಕ್’ ಎಂದು ಪ್ರಸಿದ್ಧಿಯಾಗಿರುವ ಈ ಕಿರಿದಾದ ಭೂಭಾಗವು ಭಾರತದ ಮುಖ್ಯ ಭೂಭಾಗವನ್ನು ಈಶಾನ್ಯ ರಾಜ್ಯಗಳೊಂದಿಗೆ ಸಂಪರ್ಕಿಸುವ ಏಕೈಕ ಪ್ರಮುಖ ದಾರಿಯಾಗಿದೆ.
ಕಳೆದ 6 ದಿನಗಳ ಹಿಂದೆ ಅಪಹರಣಕ್ಕೆ ಒಳಗಾಗಿದ್ದ 29 ವರ್ಷದ ಪಂಜಾಬಿ ಗಾಯಕಿ ಇಂದರ್ ಕೌರ್ (Inder Kaur) ಲೂಧಿಯಾನದ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಂಗಳವಾರ (ಮೇ 19) ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ತೀವ್ರ ಒತ್ತಾಯ ಹೇರುತ್ತಿದ್ದರಿಂದ ಆತನ ಮೇಲೆಯೇ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಮೇ 13ರಂದು ರಾತ್ರಿ ಸುಮಾರು 8.30ಕ್ಕೆ ಇಂದರ್ ಕೌರ್ ಅವರು ತಮ್ಮ ಫೋರ್ಡ್ ಫಿಗೊ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಮನೆಯಿಂದ ಹೊರಟಿದ್ದರು. ಆದರೆ ಅವರು ಮತ್ತೆ ಮನೆಗೆ ಮರಳಲೇ ಇಲ್ಲ. ಗಾಯಕಿ ನಾಪತ್ತೆಯಾದ ನಂತರ, ಆಕೆಯ ಸಹೋದರ ಜೋತಿಂದರ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದರು.
ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಗಳ ನಾಯಕನಾಗಿ ಶುಭ್ಮನ್ ಗಿಲ್ ಮುಂದುವರೆದರೆ ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.
ಕೇರಳ: ಕೊಲ್ಲಂ ಜಿಲ್ಲೆಯ ಚಿತ್ತಾರ ಎಂಬಲ್ಲಿ ಚಲಿಸುತ್ತಿದ್ದ ಬಸ್‌ನ ಮುಂಭಾಗದ ಟೈರ್ ದಿಢೀರನೆ ಕಳಚಿಕೊಂಡ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಬದಿಗೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. ಮಡತ್ತರದಿಂದ ಅಂಚಲ್ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವೇಗದೂತ ಬಸ್ ಚಿತ್ತಾರ ಸಮೀಪದ ತಿರುವಿನಲ್ಲಿ ಚಲಿಸುತ್ತಿದ್ದಾಗ ಈ ತಾಂತ್ರಿಕ ದೋಷ ಸಂಭವಿಸಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ ಪ್ರಮಾಣದ ಪ್ರಾಣಾಪಾಯ ತಪ್ಪಿದ್ದು, ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ, ಮೇ 19: ಐದು ದಿನಗಳ ಅವಧಿಯಲ್ಲಿ ಕೇಂದ್ರ ಸರ್ಕಾರವು ಎರಡನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತವು ಹಿಂದೆಂದೂ ಕಾಣದ ದೊಡ್ಡ “ಆರ್ಥಿಕ ಚಂಡಮಾರುತ” (Economic Storm) ಎದುರಿಸುವ ಹಂತದಲ್ಲಿದೆ ಎಂದು ಎಚ್ಚರಿಸಿದ್ದಾರೆ. ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ರಾಯ್‌ಬರೇಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೂಪಿಸಿರುವ ಆರ್ಥಿಕ ನೀತಿಗಳು ಸಂಪೂರ್ಣವಾಗಿ ಕುಸಿಯಲಿದ್ದು, ಅದರ ಭೀಕರ ಪರಿಣಾಮವನ್ನು ಸಾಮಾನ್ಯ ನಾಗರಿಕರು ಅನುಭವಿಸಬೇಕಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ಸುದ್ದಿಯ ಮುಖ್ಯಾಂಶಗಳು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿರುವ ಆರ್ಥಿಕ ನೀತಿಗಳು ಅದಾನಿ, ಅಂಬಾನಿಯಂಥವರಿಗೆ ಉಪಯೋಗವಾಗುವಂತಿವೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಸರ್ಕಾರ ರೂಪಿಸಿದ ಆರ್ಥಿಕ ರಚನೆಗಳು ಹೆಚ್ಚು ದಿನ ಉಳಿಯುವುದಿಲ್ಲ. ದುರದೃಷ್ಟಕ್ಕೆ ಈ ಕುಸಿತವು ಅದಾನಿಯಂತಹ ಉದ್ಯಮಿಗಳಿಗೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.
ವಿದೇಶೀ ಪ್ರವಾಸ ಮಾಡಬೇಡಿ ಎಂದು ಜನಸಾಮಾನ್ಯರಿಗೆ ಹೇಳುವ ಮೋದಿಯವರು ತಾವೇ ದೇಶ ದೇಶ ಸುತ್ತುತ್ತಿರುತ್ತಾರೆ ಎಂದು ರಾಹುಲ್ ಗಾಂಧಿ ಸಿಡಿಗುಟ್ಟಿದ್ದಾರೆ.
ಕೋಟ್ಯಾಧಿಪತಿಗಳ ಪರವಾದ ಆರ್ಥಿಕ ರಚನೆ
ಕೇಂದ್ರದ ಆರ್ಥಿಕ ನೀತಿಗಳು ಕೇವಲ ಅದಾನಿ ಮತ್ತು ಅಂಬಾನಿಯಂತಹ ಆಯ್ದ ಕೆಲವು ಕೋಟ್ಯಧಿಪತಿ ಉದ್ಯಮಿಗಳಿಗೆ ಮಾತ್ರ ಪ್ರಯೋಜನವನ್ನು ನೀಡುವಂತೆ ವ್ಯವಸ್ಥಿತವಾಗಿ ರೂಪಿಸಲ್ಪಟ್ಟಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
“ಮೋದಿ ಜಿ ಬದಲಾಯಿಸಿರುವ ಈ ಆರ್ಥಿಕ ರಚನೆಯು ಹೆಚ್ಚು ದಿನ ಉಳಿಯುವುದಿಲ್ಲ; ಇದು ಸಂಪೂರ್ಣವಾಗಿ ಕುಸಿಯುವುದು ನಿಶ್ಚಿತ. ಆದರೆ, ಈ ಕುಸಿತದ ಹೊರೆ ಸಾಮಾನ್ಯ ಜನರಿಗೆ ಆಗುತ್ತದೆಯೇ ಹೊರತು ಅಂಬಾನಿಯಂಥವರಿಗಲ್ಲ” ಎಂದು ಅವರು ಹೇಳಿದ್ದಾರೆ.
ಸಾಮಾನ್ಯ ಜನರಿಗೆ ಆಘಾತ, ಶ್ರೀಮಂತರು ಸುರಕ್ಷಿತ
ಮುಂಬರುವ ಆರ್ಥಿಕ ಆಘಾತವು ಕಾರ್ಪೊರೇಟ್ ದಿಗ್ಗಜರನ್ನಾಗಲಿ ಅಥವಾ ರಾಜಕೀಯ ನಾಯಕರನ್ನಾಗಲಿ ಮುಟ್ಟುವುದಿಲ್ಲ. ಅವರು ತಮ್ಮ ಅರಮನೆಗಳಲ್ಲಿ ಸುರಕ್ಷಿತವಾಗಿ ಇರುತ್ತಾರೆ. ಆದರೆ ಇದರ ನೇರ ಹೊಡೆತ ಬೀಳುವುದು ದೇಶದ ಯುವಕರು, ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿಗಳ ಮೇಲೆ. ವಿಶೇಷವಾಗಿ ಉತ್ತರ ಪ್ರದೇಶದ ಜನತೆ ಮತ್ತು ಯುವಸಮುದಾಯ ಇದರ ಸಂಪೂರ್ಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಕಳವಳ ವ್ಯಕ್ತಪಡಿಸಿದ್ದಾರೆ.
ದೇಶದ ಆಂತರಿಕ ರಚನಾತ್ಮಕ ಬಿಕ್ಕಟ್ಟುಗಳನ್ನು ಪರಿಹರಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. “ಮೋದಿ ಅವರು ದೇಶದ ಜನರಿಗೆ ವಿದೇಶಿ ಪ್ರವಾಸಗಳನ್ನು ಕಡಿಮೆ ಮಾಡಲು ಬುದ್ಧಿವಾದ ಹೇಳುತ್ತಾರೆ, ಆದರೆ ಸ್ವತಃ ತಾವೇ ಜಗತ್ತಿನಾದ್ಯಂತ ಸದಾ ಸುತ್ತುತ್ತಿರುತ್ತಾರೆ” ಎಂದು ಟೀಕಿಸಿದ ರಾಹುಲ್, ಮುಂಬರುವ ದಿನಗಳಲ್ಲಿ ದೇಶವು ಕಠಿಣ ಪರಿಸ್ಥಿತಿಯನ್ನು ಎದುರಿಸಲಿದ್ದು, ಕಳೆದ ಹಲವು ವರ್ಷಗಳಲ್ಲೇ ಕಾಣದಷ್ಟು ತೀವ್ರ ಸ್ವರೂಪದ ಆರ್ಥಿಕ ಆಘಾತ ಎದುರಾಗಲಿದೆ ಎಂದಿದ್ದಾರೆ.
ಪಶ್ಚಿಮ ಏಷ್ಯಾ ಬಿಕ್ಕಟ್ಟಿನ (West Asian crisis) ಕಾರಣದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಏರುಪೇರಾಗಿದ್ದು, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗಿದೆ. ಕಮರ್ಷಿಯಲ್ ಎಲ್ಪಿಜಿ ದರಗಳು ಬಹಳಷ್ಟು ಏರಿಕೆ ಆಗಿದೆ. ಗೃಹಬಳಕೆ ಎಲ್ಪಿಜಿ ದರವೂ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಇದೇ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ, ಇದು “ಮೋದಿ ಸರ್ಕಾರವೇ ಸೃಷ್ಟಿಸಿದ ಬಿಕ್ಕಟ್ಟು” ಎಂದು ಕಿಡಿಕಾರಿದ್ದಾರೆ.