ಪ್ರವಾಸಿಗರಿಗೆ ನಿರಾಸೆ: ಹವಾಮಾನ ವೈಪರಿತ್ಯ ಹಿನ್ನೆಲೆ ಉತ್ತರ ಕನ್ನಡದಲ್ಲಿ ಜಲಸಾಹಸ ಕ್ರೀಡೆಗೆ ನಿರ್ಬಂಧ – Kannada News | Monsoon Impact: Uttara Kannada Bans Water Sports and Tourist Boating for Safety
ಕಾರವಾರ, ಮೇ 19: ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ (ಮೇ 19) ಮಳೆಗಾಲ ಮುಕ್ತಾಯವರೆಗೆ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ ಜಲಾಸಾಹಸ ಕ್ರಿಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ನೀರಲ್ಲಿ ಮೋಜು ಮಸ್ತಿ ಮಾಡಲೆಂದೇ ಜಿಲ್ಲೆಗೆ ಹೆಚ್ಚಾಗಿ ಆಗಮಿಸುತ್ತಿದ್ದ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿದೆ. ಬೀಚ್ನಲ್ಲಿ ಪ್ರೀವೆಡ್ಡಿಂಗ್ ಸೆಟ್ ಅಳವಡಿಕೆಗೂ ಬ್ರೇಕ್ ಹಾಕಲಾಗಿದೆ. ಮುಖ್ಯಾಂಶಗಳು ಹವಾಮಾನ ವೈಪರಿತ್ಯ…