‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ – Kannada News | Rishab Shetty praised Ram Charan’s Peddi movie trailer
ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ಯ (Peddi) ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟ್ರೈಲರ್ಗೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸುತ್ತಿದೆ. ಹಲವು ಸೆಲೆಬ್ರಿಟಿಗಳು ಸಹ ಟ್ರೈಲರ್ ನೋಡಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಹೆಮ್ಮೆಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಟ್ರೈಲರ್ ವೀಕ್ಷಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಪೆದ್ದಿ’ ಟ್ರೈಲರ್ ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಅವರು ಟ್ವೀಟ್…