ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ: ಯಶ್ ಸಿನಿಮಾದ ತೆರೆಹಿಂದೆ 10 ಸಾವಿರಕ್ಕೂ ಹೆಚ್ಚು ತಂತ್ರಜ್ಞರು – Kannada News | Yash starrer Ramayana is first Indian movie to have 10000 crew members
ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಚಿತ್ರವಾಗಿ ‘ರಾಮಾಯಣ’ (Ramayana) ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ನಟ ಯಶ್ (Yash) ಅವರು ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಅಭಿನಯಿಸುತ್ತಿದ್ದಾರೆ. ಬೃಹತ್ ಬಜೆಟ್ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ನಿರ್ಮಾಪಕ ನಮಿತ್ ಮಲ್ಹೋತ್ರಾ, ನಿರ್ದೇಶಕ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾವನ್ನು ಭಾರಿ ದೊಡ್ಡ ಮಟ್ಟದಲ್ಲಿ ಸಿದ್ಧಪಡಿಸುತ್ತಿದ್ದಾರೆ. ಅತಿ ಹೆಚ್ಚು ತಂತ್ರಜ್ಞರು ಕೆಲಸ ಮಾಡಿದ ಭಾರತೀಯ ಸಿನಿಮಾ ಎಂಬ ಖ್ಯಾತಿಗೆ ಈ ಸಿನಿಮಾ ಪಾತ್ರವಾಗುತ್ತಿದೆ….