Health Dept Recruitment 2026: ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳಿಗೆ ಅರ್ಜಿ ಆಹ್ವಾನ; ಗುತ್ತಿಗೆ ಆಧಾರದ ನೇಮಕಾತಿ – Kannada News | Karnataka Health Dept Recruitment 2026: 800 Lab Technician and Pharmacist Contract Posts
ಆರೋಗ್ಯ ಇಲಾಖೆಯಲ್ಲಿ ನೇಮಕಾತಿImage Credit source: hfwcom ಬೆಂಗಳೂರು, ಜೂ.20: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಒಟ್ಟು 800 ಸ್ಥಾನಗಳ ಭರ್ತಿಗೆ ಗುತ್ತಿಗೆ ಆಧಾರದ ನೇಮಕಾತಿಗೆ ಅನುಮತಿ ನೀಡಿದೆ. ಈ ನೇಮಕಾತಿಯ ಅಡಿಯಲ್ಲಿ ಕಿರಿಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗಳ 400 ಸ್ಥಾನಗಳು ಹಾಗೂ ಫಾರ್ಮಸಿ ಅಧಿಕಾರಿಗಳ (ಫಾರ್ಮಾಸಿಸ್ಟ್) 400 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳ ಸೇವಾ ಅವಧಿಯು ಒಂದು ವರ್ಷ ಅಥವಾ ನೇರ ನೇಮಕಾತಿಯಿಂದ…