ಗುಡ್ ನ್ಯೂಸ್: ಏ.5ರಂದು ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಮಧ್ಯರಾತ್ರಿ ವರೆಗೂ ವಿಸ್ತರಣೆ
ಬೆಂಗಳೂರು, ಏಪ್ರಿಲ್ 02): ಇಂಡಿಯನ್ ಪ್ರೀಮಿಯರ್ ಲೀಗ್(IPL 2026) ಮ್ಯಾಚ್ ಹಿನ್ನೆಲೆಯಲ್ಲಿ ಬೆಂಗಳೂರು ನಮ್ಮ ಮೆಟ್ರೋ (Bengaluru Namma Metro) ಸೇವೆ ಮತ್ತೆ ವಿಸ್ತರಣೆ ಮಾಡಲಾಗಿದೆ. ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದಿದ್ದ ಐಪಿಎಲ್ ಉದ್ಘಾಟನಾ ಪಂದ್ಯದ ಸಂದರ್ಭದಲ್ಲೂ ಸಹ ಸಾರ್ವಜನಿಕರ ಅನುಕೂಲಕ್ಕಾಗಿ ಮೆಟ್ರೋ ಸಮಯ ವಿಸ್ತರಣೆ ಮಾಡಲಾಗಿತ್ತು. ಇದೀಗ ಏಪ್ರಿಲ್ 5ರಂದು ಆರ್ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯ ಇರುವುದರಿಂದ ಅಂದು ಮೆಟ್ರೋ ಸಂಚಾರ ರಾತ್ರಿ 2 ಗಂಟೆವರೆಗೆ ಇರಲಿದೆ. ಪ್ರಯಾಣಿಕರಿಗೆ ಸುಲಭ ಹಾಗೂ ಸುರಕ್ಷಿತ…