Headlines

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾತುಕತೆಗೆ ಪಟ್ಟು: ಸಾರಿಗೆ ನೌಕರರ ಸಂಧಾನ ವಿಫಲ – Kannada News | Karnataka Transport Strike Looms: Talks Fail, Workers Demand Meeting with CM Siddaramaiah

ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರ ಮುಷ್ಕರ ವಿಚಾರ ಸಂಬಂಧ ಬೆಂಗಳೂರಿನ (Bengaluru) ಬನ್ನೇರುಘಟ್ಟದ ಕಾರ್ಮಿಕ ಭವನದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಎಷ್ಟೇ ಮನವೊಲಿಕೆಗೆ ಯತ್ನಿಸಿದರೂ ಸಾರಿಗೆ ನೌಕರರು ಪಟ್ಟು ಬಿಟ್ಟಿಲ್ಲ. ನಿಗಮಗಳ ಅಧಿಕಾರಿಗಳ ಮನವಿಗೆ ಜಂಟಿ ಕ್ರಿಯಾ ಸಮಿತಿ ಕೊನೆಗೂ ಒಪ್ಪಿಗೆ ಸೂಚಿಸಿಲ್ಲ. ಮತ್ತೆ ಮೇ 25ಕ್ಕೆ ಸಭೆಗೆ ಬರಲು ಅಧಿಕಾರಿಗಳು ಆಹ್ವಾನ ನೀಡಿದರೂ ನಿಗಮದ ಅಧಿಕಾರಿಗಳ ಮನವಿಗೆ ಒಪ್ಪದ ಸಾರಿಗೆ ಮುಖಂಡರು, ಸಿಎಂ ಜೊತೆಗೆ ಸಭೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ…

Read More

ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ; ಡೆಡ್‌ಲೈನ್ ಸಹ ಫಿಕ್ಸ್! – Kannada News | Major Reshuffle in Karnataka Education Department: Mandatory Transfer for Employees Serving Over 5 Years, Deadline Fixed

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಧಾರವಾಡ, ಮೇ 18: ರಾಜ್ಯದಲ್ಲಿನ (Karnataka) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಖ್ಯಸ್ಥರುಗಳ ಕಚೇರಿಯಲ್ಲಿ ಬೀಡುಬಿಟ್ಟಿರುವ ನೌಕರರನ್ನು ಬದಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರ ಪಟ್ಟಿ ಸಿದ್ಧಪಡಿಸಿ ಮೇ 28ರೊಳಗಾಗಿ ಕಡ್ಡಾಯ ವರ್ಗಾವಣೆಗೆ (transfer) ಸೂಚಿಸುವ ಮೂಲಕ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ. ಹೀಗಾಗಿ ಧಾರವಾಡ ಆಯುಕ್ತಾಲಯ ವ್ಯಾಪ್ತಿಯ ಬರೋಬ್ಬರಿ 1,026 ಬೋಧಕೇತರ ನೌಕರರಿಗೆ ಈಗ…

Read More

ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ – Kannada News | PM Modi reaches Norway Receives Grand Welcome from Indian Community in Oslo

ನವದೆಹಲಿ, ಮೇ 18: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಸ್ವೀಡನ್ ಪ್ರವಾಸ ಮುಗಿಸಿ ನಾರ್ವೆಗೆ ಪ್ರಯಾಣ ಬೆಳೆಸಿದ್ದಾರೆ. ಓಸ್ಲೋದಲ್ಲಿ ಭಾರತೀಯ ಸಮುದಾಯ ಪ್ರಧಾನಿ ಮೋದಿಗೆ ಶಾಸ್ತ್ರೀಯ ನೃತ್ಯ, ಸಂಗೀತದ ಮೂಲಕ ಸ್ವಾಗತ ನೀಡಿತು. ಸತ್ರಿಯಾದಿಂದ ಭರತನಾಟ್ಯದವರೆಗೆ, ಕೂಚಿಪುಡಿಯಿಂದ ಒಡಿಸ್ಸಿಯವರೆಗೆ, ಕಥಕ್‌ನಿಂದ ಮೋಹಿನಿಯಾಟ್ಟಂವರೆಗೆ, ಪ್ರತಿಯೊಂದು ನೃತ್ಯ ಪ್ರಕಾರವನ್ನೂ ನಾರ್ವೆಯಲ್ಲಿ ಪ್ರದರ್ಶಿಸಲಾಯಿತು. ತಮ್ಮ ಯುರೋಪ್ ರಾಜತಾಂತ್ರಿಕ ಪ್ರವಾಸದ ಭಾಗವಾಗಿ ನರೇಂದ್ರ ಮೋದಿ ಅವರು ಓಸ್ಲೋ ತಲುಪಿದ್ದು, ನಾರ್ವೆಯಲ್ಲಿರುವ ಭಾರತೀಯ ಸಮುದಾಯದಿಂದ ಭವ್ಯ ಸಾಂಸ್ಕೃತಿಕ ಸ್ವಾಗತವನ್ನು ಪಡೆದರು. ಸಾಂಪ್ರದಾಯಿಕ…

Read More

TV9 Kannada News Live: ಕರ್ನಾಟಕದಲ್ಲಿ ಮಳೆ, ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು; ಸಾಕಾನೆಗಳ ಕಾದಾಟದಲ್ಲಿ ಮಹಿಳೆ ಸಾವು – Kannada News | TV9 Kannada News Live: Karnataka Rain, Bengaluru Mumbai Vande Bharat Sleeper, Elephant Attack Tragedy

ಸುದ್ದಿ ಸುರಳಿ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 18: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು-ಮಿಂಚು ಹಾಗೂ ಬಿರುಗಾಳಿ ಸಹಿತ ವಾತಾವರಣ ಮುಂದುವರಿಯಲಿದೆ. ಹೀಗಾಗಿ ಮೇ 19ರಂದು ರಾಜ್ಯದ (Karnataka) ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಹಾವೇರಿ, ದಾವಣಗೆರೆ ಮತ್ತು ಶಿವಮೊಗ್ಗ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಖ್ಯಾಂಶಗಳು ಕರ್ನಾಟಕದಲ್ಲಿ ಭಾರೀ…

Read More

CSK vs SRH: ತವರಿನ ಕೊನೆಯ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ; ನಾಯಕ ರುತುರಾಜ್ ಹೇಳಿದ್ದೇನು? – Kannada News | IPL 2026: MS Dhoni Misses CSK vs SRH; Gaikwad Confirms Injury, Hopes for Return

ಐಪಿಎಲ್ 2026 ರ 63 ನೇ ಪಂದ್ಯದಲ್ಲಿ ಸಿಎಸ್​ಕೆ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯ ಸಿಎಸ್​ಕೆಯ ತವರು ಮೈದಾನವಾದ ಎಂಎ ಚಿದಂಬರಂ ಮೈದಾನದಲ್ಲಿ ನಡೆಯುತ್ತಿದೆ. ಇದು ತವರಿನಲ್ಲಿ ಸಿಎಸ್​ಕೆ ತಂಡದ ಕೊನೆಯ ಪಂದ್ಯವಾಗಿದೆ. ಈ ಪಂದ್ಯದ ಬಳಿಕ ಈ ಆವೃತ್ತಿಯಲ್ಲಿ ಸಿಎಸ್​ಕೆ ಈ ಮೈದಾನದಲ್ಲಿ ಯಾವುದೇ ಪಂದ್ಯವನ್ನು ಆಡುವುದಿಲ್ಲ. ಹೀಗಾಗಿ ಸಿಎಸ್​ಕೆ ತಂಡದ ಜೀವಾಳ ಎನಿಸಿಕೊಂಡಿರುವ ಮಾಜಿ ನಾಯಕ ಎಂಎಸ್ ಧೋನಿ ಈ ಪಂದ್ಯದಲ್ಲಾದರೂ ಆಡುತ್ತಾರಾ ಎಂದು ಕಾದು ಕುಳಿತಿದ್ದರು. ಆದರೆ…

Read More

ನಟಿ ಕೀರ್ತಿ ಸುರೇಶ್​ಗೆ ಬಾಡಿ ಶೇಮಿಂಗ್; ಸರ್ಜರಿ ವದಂತಿಗಳಿಗೆ ಖಡಕ್ ತಿರುಗೇಟು – Kannada News | Keerthy Suresh addresses body shaming and surgery rumours on instagram post

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರು ಚಿತ್ರರಂಗದಲ್ಲಿ ತಾವು ಎದುರಿಸಿದ ಬಾಡಿ ಶೇಮಿಂಗ್ (Body Shaming) ಮತ್ತು ಪ್ಲಾಸ್ಟಿಕ್ ಸರ್ಜರಿ ವದಂತಿಗಳ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮನದ ಮಾತುಗಳನ್ನು ಹೊರಹಾಕಿದ್ದಾರೆ. ಸದಾ ಸೌಮ್ಯವಾಗಿ ಕಾಣಿಸಿಕೊಳ್ಳುವ ನಟಿ, ಇತ್ತೀಚೆಗೆ ತಮಗಾದ ದೈಹಿಕ ಮತ್ತು ಮಾನಸಿಕ ಹಿನ್ನಡೆಯ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದಾರೆ. ಜಿಮ್‌ನಲ್ಲಿ ತಾವು ಕಷ್ಟಪಟ್ಟು ವರ್ಕೌಟ್ ಮಾಡುತ್ತಿರುವ ಹಳೆಯ ವಿಡಿಯೋವನ್ನು ಹಂಚಿಕೊಂಡಿರುವ ಕೀರ್ತಿ ಸುರೇಶ್ (Keerthy Suresh), ‘ಫಿಟ್‌ನೆಸ್…

Read More

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಸಂಬಳದ ಜಾಬ್ ಆಫರ್ ತಿರಸ್ಕರಿಸಿದ ವ್ಯಕ್ತಿ – Kannada News | Hyderabad man quits Rs 38 lakh salary job in Bengaluru

ಉದ್ಯೋಗ ಎಲ್ಲರಿಗೂ ಅವಶ್ಯಕ. ಹೀಗಾಗಿ ಎಷ್ಟೋ ಯುವಕರು ಊರು ಬಿಟ್ಟು ದೂರದ ಬೆಂಗಳೂರು, ಮುಂಬೈ ಹೀಗೆ ಇತರ ಊರುಗಳಿಗೆ ಹೋಗ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿಯೊಬ್ಬರು ಒಂದೊಳ್ಳೆ ಉದ್ಯೋಗ ಆಫರ್ ತಿರಸ್ಕರಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಅಧಿಕ ಸಂಬಳದ ಉದ್ಯೋಗ ಆಯ್ಕೆ ಮಾಡಿಕೊಳ್ಳುವ ಬದಲು ಹೈದರಾಬಾದ್‌ನಲ್ಲಿ (Hyderabad) ಕಡಿಮೆ ಸಂಬಳದ ಉದ್ಯೋಗ ಆಯ್ಕೆ ಮಾಡಿಕೊಂಡಿದ್ದಾರೆ. ಈ ವ್ಯಕ್ತಿಯ ಪೋಸ್ಟ್ ಆನ್ಲೈನ್ ನಲ್ಲಿ ಚರ್ಚೆ ಹುಟ್ಟುಹಾಕಿದೆ. ಮದನ್ ಮೋಹನ್ (Madan Mohan) ಎಂಬ ವ್ಯಕ್ತಿ ತನ್ನ ಎಕ್ಸ್ ಖಾತೆಯಲ್ಲಿ ಉದ್ಯೋಗ ಆಯ್ಕೆಯ…

Read More

CSK vs SRH IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬ್ಯಾಟಿಂಗ್ ಆಯ್ಕೆ – Kannada News | Chennai Super Kings vs Sunrisers Hyderabad IPL 2026 Live Cricket Score CSK vs SRH Match on 18th May latest news in Kannada

18 May 2026 07:34 PM (IST) CSK vs SRH IPL 2026: ಸನ್​ರೈಸರ್ಸ್​ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಇಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ. 18 May 2026 07:33 PM (IST) CSK vs SRH IPL 2026: ಸಿಎಸ್​ಕೆ ತಂಡ ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್),…

Read More

ನರೇಂದ್ರ ಮೋದಿಗೆ ನಾರ್ವೆಯ ಅತ್ಯುನ್ನತ ಪ್ರಶಸ್ತಿ ಪ್ರದಾನ; ಭಾರತದ ಪ್ರಧಾನಿಗೆ 32ನೇ ಜಾಗತಿಕ ಗೌರವ – Kannada News | PM Narendra Modi Receives Norways Top Civilian award 32nd global honour So Far

ನವದೆಹಲಿ, ಮೇ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ನಾರ್ವೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ (Grand Cross of the Royal Norwegian Order) ಗೌರವವನ್ನು ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಡೆದ 32ನೇ ಜಾಗತಿಕ ಗೌರವವಾಗಿದೆ. ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ ನಾರ್ವೆ ದೇಶವು ವಿದೇಶಿ ರಾಷ್ಟ್ರಗಳ ಮುಖ್ಯಸ್ಥರಿಗೆ ಮತ್ತು ಜಾಗತಿಕ…

Read More

ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು? ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ? – Kannada News | Karnataka Power Tussle: CM Siddaramaiah Met Rahul Gandhi In Kerala for cabinet reshuffle, And here Is Political developments of leadership change

ಖರ್ಗೆ, ಡಿಕೆಶಿ, ರಾಹುಲ್, ಸಿದ್ದರಾಮಯ್ಯ ಬೆಂಗಳೂರು, (ಮೇ 18): ಕರ್ನಾಟಕ ಕಾಂಗ್ರೆಸ್‌ನಲ್ಲಿ (karnataka Congress) ಸಚಿವ ಸಂಪುಟ ಪುನಾರಚನೆ ( cabinet reshuffle) ಹಾಗೂ ನಾಯಕತ್ವ ಬದಲಾವಣೆ ಗೊಂದಲ ಮುಂದುವರೆದಿದೆ. ಇಷ್ಟು ದಿನ ಹೈಕಮಾಂಡ್ ನೋಡೋಣ ನೋಡೋಣ ಎಂದೇ ಮುಂದಕ್ಕೆ ತಳ್ಳುತ್ತಾ ಬಂದಿದೆ. ಆದ್ರೆ, ಇದೀಗ ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಕೇರಳದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್…

Read More