WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | Wpl 2026 opening ceremony mi vs rcb live stream
2026 ರ ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್‌ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ ಬಾರಿಯೂ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್ ಸ್ಟಾರ್…