ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾತುಕತೆಗೆ ಪಟ್ಟು: ಸಾರಿಗೆ ನೌಕರರ ಸಂಧಾನ ವಿಫಲ – Kannada News | Karnataka Transport Strike Looms: Talks Fail, Workers Demand Meeting with CM Siddaramaiah
ಬೆಂಗಳೂರು, ಮೇ 18: ಮೇ 20ರಂದು ಸಾರಿಗೆ ನೌಕರರ ಮುಷ್ಕರ ವಿಚಾರ ಸಂಬಂಧ ಬೆಂಗಳೂರಿನ (Bengaluru) ಬನ್ನೇರುಘಟ್ಟದ ಕಾರ್ಮಿಕ ಭವನದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದೆ. ಎಷ್ಟೇ ಮನವೊಲಿಕೆಗೆ ಯತ್ನಿಸಿದರೂ ಸಾರಿಗೆ ನೌಕರರು ಪಟ್ಟು ಬಿಟ್ಟಿಲ್ಲ. ನಿಗಮಗಳ ಅಧಿಕಾರಿಗಳ ಮನವಿಗೆ ಜಂಟಿ ಕ್ರಿಯಾ ಸಮಿತಿ ಕೊನೆಗೂ ಒಪ್ಪಿಗೆ ಸೂಚಿಸಿಲ್ಲ. ಮತ್ತೆ ಮೇ 25ಕ್ಕೆ ಸಭೆಗೆ ಬರಲು ಅಧಿಕಾರಿಗಳು ಆಹ್ವಾನ ನೀಡಿದರೂ ನಿಗಮದ ಅಧಿಕಾರಿಗಳ ಮನವಿಗೆ ಒಪ್ಪದ ಸಾರಿಗೆ ಮುಖಂಡರು, ಸಿಎಂ ಜೊತೆಗೆ ಸಭೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ…