Headlines

ಕುಟುಂಬದ ಹೊರೆ ಬೀಳದಂತೆ ಸಂಸಾರ ನಿಭಾಯಿಸಿದ್ದ ಹೆಂಡ್ತಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರು – Kannada News | Former PM HD Deve Gowda Emotional Over His Wife Chennamma’s Demise

ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ಸಂಜೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ತಮಗೆ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: Chennamma Deve Gowda…

Read More

ಚುನಾವಣಾ ಆಯುಕ್ತರ ನೇಮಕಾತಿಗೆ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ – Kannada News | No reason to doubt Prime Minister Central Government defends Election Commissioner appointment in Supreme Court

ನವದೆಹಲಿ, ಜುಲೈ 31: ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ, ಕೇಂದ್ರ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯ ಪ್ರಸ್ತುತ ಆಯ್ಕೆ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನಮಂತ್ರಿಯವರ ಪಾತ್ರವನ್ನು ಶಂಕಿಸಲು ಯಾವುದೇ ಕಾರಣವಿಲ್ಲ ಎಂದು ಸರ್ಕಾರ ಸುಪ್ರೀಂ ಕೋರ್ಟ್​ಗೆ (Supreme Court) ತಿಳಿಸಿದೆ. “ಪ್ರಧಾನಮಂತ್ರಿಯವರ ಹುದ್ದೆಗೆ ತನ್ನದೇ ಆದ ಸಾಂವಿಧಾನಿಕ ಪವಿತ್ರತೆ ಇದೆ. ಒಂದು ವೇಳೆ ಪ್ರಧಾನಿಯವರ…

Read More

ಎಗ್​ ಫ್ರೀಜ್ ಮಾಡಿದ ಕೃತಿ ಸನೋನ್; ಕಾರಣ ಕೊಟ್ಟ ನಟಿ – Kannada News | Kriti Sanon Reveals Egg Freezing: How Mimi Role Aided Her Future Fertility Choice

ಬಾಲಿವುಡ್ ಖ್ಯಾತ ನಟಿ ಕೃತಿ ಸನೋನ್ ತಮ್ಮ ಎಗ್​ (ಅಂಡಾಣು) ಫ್ರೀಜ್ ಮಾಡಿರುವುದಾಗಿ ಮೊದಲ ಬಾರಿಗೆ ಬಹಿರಂಗಪಡಿಸಿದ್ದಾರೆ. ನ್ಯಾಷನಲ್ ಅವಾರ್ಡ್ ತಂದುಕೊಟ್ಟ ‘ಮಿಮಿ’ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಳ್ಳುತ್ತಿದ್ದ ಸಮಯದಲ್ಲಿ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದರು. ಈ ಪ್ರಕ್ರಿಯೆಯಿಂದ ದೇಹದಲ್ಲಿ ಆಗುವ ಬದಲಾವಣೆಗಳನ್ನು ಸುಲಭವಾಗಿ ನಿಭಾಯಿಸಲು ಆ ಸಮಯ ಅವರಿಗೆ ಸಹಾಯ ಮಾಡಿತು. ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿದ ಕೃತಿ ಸನೋನ್ ಈ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ‘ಎಗ್ ಫ್ರೀಜ್ ಮಾಡುವ ಪ್ರಕ್ರಿಯೆಯಲ್ಲಿ ಹಾರ್ಮೋನ್ ಇಂಜೆಕ್ಷನ್‌ಗಳನ್ನು ನೀಡಲಾಗುತ್ತದೆ. ಇದರಿಂದ ದೇಹ ಸ್ವಲ್ಪ…

Read More

ಸೋತು ಸೋತು ಭಾರತದ ಪಾಲಿಗೆ ವಿಶ್ವ ದಾಖಲೆಯಾದ ಪಾಕಿಸ್ತಾನ್

ಬಹುನಿರೀಕ್ಷಿತ ಪಂದ್ಯದಲ್ಲಿ ನಿರೀಕ್ಷೆಯಂತೆ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಅದು ಕೂಡ ಬರೋಬ್ಬರಿ 61 ರನ್​ಗಳ ಅಂತರದಿಂದ. ಕೊಲಂಬೊದ ಆರ್​​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಇಶಾನ್ ಕಿಶನ್ (77) ಸ್ಫೋಟಕ ಆರಂಭ ಒದಗಿಸಿದ್ದರು. ಈ ಭರ್ಜರಿ ಆರಂಭದ ನೆರವಿನೊಂದಿಗೆ ಭಾರತ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಮೂಲಕ…

Read More

Namma Metro: ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು! – Kannada News | Bengaluru Yellow Line Driverless Metro Derails: Safety Probe Launched by BMRC

ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು! ಬೆಂಗಳೂರು, ಫೆಬ್ರವರಿ 20: ಯೆಲ್ಲೋ ಲೈನ್‌ನಲ್ಲಿ ಸಂಚರಿಸುತ್ತಿದ್ದ ಡ್ರೈವರ್ಲೆಸ್ ಮೆಟ್ರೋ (Namma Metr0) ರೈಲು ಹಳಿ ತಪ್ಪಿದ ಘಟನೆ ಜನವರಿ- 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿಪೋದಿಂದ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದತ್ತ ಸಾಗುತ್ತಿದ್ದ ವೇಳೆ ಮೂರನೇ ಡ್ರೈವರ್ಲೆಸ್ ರೈಲು ಹಳಿ ತಪ್ಪಿರುವುದು ತಿಳಿದುಬಂದಿದೆ. ಘಟನೆ ಎಲಿವೇಟೆಡ್ ಕಾರಿಡಾರ್ ಮೇಲೆ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು ಎಂಬ ಆತಂಕ ವ್ಯಕ್ತವಾಗಿದೆ. ಈ…

Read More

IND vs NZ: ಸೊನ್ನೆ ಸುತ್ತಿದ ನಾಯಕ ಸೂರ್ಯ; 4ನೇ ಫೈನಲ್​ನಲ್ಲೂ ಇತಿಹಾಸ ಬದಲಾಗಲಿಲ್ಲ

ನ್ಯೂಜಿಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 255 ರನ್​ಗಳ ದಾಖಲೆ ಮೊತ್ತ ಕಲೆಹಾಕಿತು. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ದಾಖಲಾದ ಅತಿ ದೊಡ್ಡ ಮೊತ್ತ ಇದಾಗಿದೆ. ಟೀಂ ಇಂಡಿಯಾ ಈ ದಾಖಲೆ ಬರೆಯುವಲ್ಲಿ ತಂಡದ ಮೂವರು ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್​ಗಳ ತಲಾ ಅರ್ಧಶತಕದ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಅವರ ಅಬ್ಬರದಿಂದಾಗಿ ಟೀಂ ಇಂಡಿಯಾ 200 ರನ್​ಗಳ ದಾಟಿತು. ಆದರೆ…

Read More

IND vs SA: ಭಾರತ- ದಕ್ಷಿಣ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

2025 ರ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ಮಹಿಳಾ ತಂಡ ಟಿ20 ಸರಣಿ ಗೆದ್ದು, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಸೋತಿತ್ತು. ಇದೀಗ ಹೊಸ ಪ್ರವಾಸಕ್ಕೆ ಸಜ್ಜಾಗಿರುವ ವನಿತಾ ಪಡೆ, ಐದು ಪಂದ್ಯಗಳ ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸಕ್ಕಾಗಿ ಇದೀಗ ಬಿಸಿಸಿಐ, ತಂಡವನ್ನು ಸಹ ಪ್ರಕಟಿಸಿದೆ. ಈ ಪ್ರವಾಸಕ್ಕೆ 15 ಆಟಗಾರ್ತಿಯರ ತಂಡವನ್ನು ಘೋಷಿಸಿದ್ದು, ಎಂದಿನಂತೆ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಇಬ್ಬರು ಆಟಗಾರ್ತಿಯರಿಗೆ…

Read More

ಯಾರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ?: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​

ಕಲಬುರಗಿ, ಮೇ 31: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್​​ ಸಿಎಂ ಆಗಿ ಆಯ್ಕೆಯಾಗುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಪೈಪೋಟಿ ಶುರುವಾಗಿದೆ. ಈ ಬಗ್ಗೆ ಕಲಬುರಗಿಯಲ್ಲಿ ಮಾಹಿತಿ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗುತ್ತೆ. ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುತ್ತೇವೆ. ಸಿಎಂಗೆ ಉತ್ತಮ ಸಮನ್ವಯ ಇರಬೇಕು, ಅಂತಹವರನ್ನು ಆಯ್ಕೆ ಮಾಡ್ತೇವೆ. ವಿಧಾನಸಭಾ ಚುನಾವಣೆಗೆ…

Read More

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಮುಂದಿನ 6 ದಿನ ಭಾರೀ ಮಳೆ ಎಚ್ಚರಿಕೆ,ಕರಾವಳಿಗೆ ರೆಡ್ ಅಲರ್ಟ್ – Kannada News

ಬೆಂಗಳೂರು (ಜೂ.08): ಕರ್ನಾಟಕದಲ್ಲಿ ಮುಂಗಾರು (Karnataka Monsoon Rain) ಅಬ್ಬರ ಜೋರಾಗಿದ್ದು, ಇಂದಿನಿಂದ ಅಂದರೆ ಜೂನ್ 08ರಿಂದ ಜೂ.13ವರೆಗೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ (Karavali) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 8 ಮತ್ತು 9 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೇ ಜೂನ್ 10 ಮತ್ತು 11 ರಂದು ಕೂಡ ಭಾರೀ ಮಳೆ ಮುಂದುವರಿಯಲಿದ್ದು, ಇಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ…

Read More

Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮನೆಯಲ್ಲೇ ಮುದ್ದಾಗಿ ಬೆಳೆದ ಸಾಕು ಬೆಕ್ಕೊಂದು ತನ್ನ ಮಾಲೀಕಿಯ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಬೆಕ್ಕು ಮಹಿಳೆಯ ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದು, ದಾಳಿಯ ತೀವ್ರತೆಗೆ ಕೊಠಡಿಯ ನೆಲದ ಮೇಲೆ ರಕ್ತ ಚೆಲ್ಲಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಬೆಕ್ಕಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟ ಮಹಿಳೆ, ಕೊನೆಯಲ್ಲಿ ಹೇಗೋ ಕೊಠಡಿಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ವೀಕ್ಷಣೆ ಪಡೆದಿರುವ ಈ…

Read More