Headlines

ಕೊಟ್ಟಿರೋ 11 ಲಕ್ಷ ರೂ. ಸ್ಕಾರ್ಪಿಯೋ ಕಾರು ಸಾಕಾಗಿಲ್ಲ, ಹೆಚ್ಚು ಹಣ ತರುವಂತೆ ಕಿರುಕುಳ, ಮಹಡಿಯಿಂದ ಬಿದ್ದು ಮಹಿಳೆ ಸಾವು – Kannada News | Family Raises Dowry Harassment Allegations After Greater Noida Woman Found Dead

ನೋಯ್ಡಾ, ಮೇ 18: ಮಗಳ ಮದುವೆ(Marriage)ಗಾಗಿ ಆಕೆಯ ತಂದೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಖರ್ಚು ಮಾಡಿದ್ದರು. ಕೇಳಿದ್ದೆಲ್ಲವನ್ನು ವರದಕ್ಷಿಣೆ ರೂಪದಲ್ಲಿ ಕೊಟ್ಟಿದ್ದರು. ಆದರೆ ವರದಕ್ಷಿಣೆಯ ರಕ್ಕಸ ಹಪಾಹಪಿಗೆ ಕೇವಲ 25 ವರ್ಷದ ದೀಪಿಕಾ ನಾರಂಗ್ ಎಂಬಾಕೆ ಪ್ರಾಣ ಕಳೆದುಕೊಂಡಿದ್ದಾಳೆ. ಮದುವೆಯಾಗಿ 17 ತಿಂಗಳಿಗೆ ಮೂರನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಈಕೆಯ ತಂದೆ ಸಂಜಯ್ ನಾರಂಗ್ ಇದು ಆತ್ಮಹತ್ಯೆಯಲ್ಲ, ಇದೊಂದು ಭೀಕರ ಕೊಲೆ ಎಂದು ಕಣ್ಣೀರು ಹಾಕಿದ್ದಾರೆ. 2024ರ ಡಿಸೆಂಬರ್​​ನಲ್ಲಿ…

Read More

ಅತ್ಯಂತ ಮೌಲ್ಯಯುತ ಭಾರತೀಯ ಕಂಪನಿಗಳು; ರಿಲಾಯನ್ಸ್ ನಂತರ ಏರ್ಟೆಲ್; ಎಚ್​ಡಿಎಫ್​ಸಿಯನ್ನು ಹಿಂದಿಕ್ಕಿದ ಭಾರತೀಯ ಟೆಲಿಕಾಂ ಕಂಪನಿ – Kannada News | Bharti Airtel briefly edges HDFC Bank to Become India’s 2nd Most Valued Company

ನವದೆಹಲಿ, ಮೇ 18: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ (Bharti Airtel) ಐತಿಹಾಸಿಕ ಸಾಧನೆ ಮಾಡಿದೆ. ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ (HDFC Bank) ಅನ್ನು ಹಿಂದಿಕ್ಕುವ ಮೂಲಕ ಭಾರ್ತಿ ಏರ್‌ಟೆಲ್ ಮಾರುಕಟ್ಟೆ ಬಂಡವಾಳೀಕರಣದಲ್ಲಿ (Market Capitalisation) ಭಾರತದ ಎರಡನೇ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿದೆ. ಕಳೆದ ಕೆಲವು ದಿನಗಳಿಂದ ಏರ್‌ಟೆಲ್ ಷೇರುಗಳು ಸತತವಾಗಿ ಏರಿಕೆ ಕಾಣುತ್ತಿರುವುದು ಈ ಸಾಧನೆಗೆ ಕಾರಣವಾಗಿದೆ. ಮುಕೇಶ್ ಅಂಬಾನಿ ಅವರ ರಿಲಾಯನ್ಸ್ ಇಂಡಸ್ಟ್ರೀಸ್…

Read More

ದೇಶಕ್ಕೆ ಅನ್ನ ನೀಡುವ ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ – Kannada News | Petrol, Diesel Price Hike Affects Farmers: agricultural machinery Price Rise In Bidar

ಬೀದರ್, (ಮೇ 18): ಮಧ್ಯಪ್ರಾಚ್ಯ ಯುದ್ಧದ (War) ಪರಿಣಾಮ ಕಚ್ಚಾ ತೈಲ ಬೆಲೆ ಏರಿಕೆ, ವಿದೇಶಿ ವಿನಿಮಮ ಕೊರತೆ ಸೇರಿದಂತೆ ಹಲವು ಆರ್ಥಿಕ ಸಂಕಷ್ಟಗಳು ಎದುರಾಗಿದೆ. ಪರಿಣಾಮ ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ (Petrol, Diesel Price Hike). ಇದರ ಬೆನ್ನಲ್ಲೇ ಅಗತ್ಯ ವಸ್ತಗಳು ಬೆಲೆ ಹೆಚ್ಚಳವಾಗುತ್ತಿದೆ. ಹೌದು…ಈಗಾಗಲೇ ಖಾಸಗಿ ಬಸ್, ಸ್ಕೂಲ್ ಬಸ್, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಯಾಗುತ್ತಿದ್ದು, ಇದೀಗ ತೈಲ ಬೆಲೆ ಏರಿಕೆ ಬಿಸಿ ಅನ್ನದಾತರಿಗೂ ತಟ್ಟಿದೆ. ಯಂತ್ರೋಪಕರಣಗಳಿಂದ ಕೃಷಿ…

Read More

4,500 ಕೋಟಿ ರೂ. ವಂಚನೆ ಕೇಸ್​​: ಆರೋಪಿ ಶಿವಾನಂದ ನೀಲಣ್ಣವರ್​​ 10 ದಿನ ಸಿಐಡಿ ಕಸ್ಟಡಿಗೆ – Kannada News | Belagavi 4,500 Crore Fraud Case: Accused Shivanand Neelannavar Remanded to 10 Days CID Custody

ಬೆಳಗಾವಿ, ಮೇ 18: 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣ ಸಂಬಂಧ ಆರೋಪಿ ಶಿವಾನಂದ ನೀಲಣ್ಣವರ್​​ನ 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಬೆಳಗಾವಿಯ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಬೆಂಗಳೂರಿನ ಕಚೇರಿಗೆ ಆರೋಪಿ ಕರೆದೊಯ್ದು ವಿಚಾರಣೆ ಮಾಡಬೇಕಿದೆ. ಶಿವಾನಂದ ನೀಲಣ್ಣವರ್ ಬಳಿ 35,000 ಜನ ಹೂಡಿಕೆ ಮಾಡಿದ್ದು, ಒಂದು ಸಾವಿರ ಕೋಟಿಗೂ ಅಧಿಕ ಹಣದ ವ್ಯವಹಾರ ಆಗಿದೆ. ಹೀಗಾಗಿ 10 ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್​​ಗೆ ಮನವಿ ಮಾಡಿದ್ದರು….

Read More

RCB ತಂಡದ ಗೆಲುವಿನ ಗುಟ್ಟು ರಟ್ಟು ಮಾಡಿದ ಜಿತೇಶ್ ಶರ್ಮಾ – Kannada News | Jitesh Sharma’s post match interview After RCB vs PBKS Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ 9 ಪಂದ್ಯಗಳನ್ನು ಗೆಲ್ಲುವ ಮೂಲಕ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಲಗ್ಗೆಯಿಟ್ಟಿದೆ. ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​​ಸಿಬಿ 20 ಓವರ್​ಗಳಲ್ಲಿ 222 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 20 ಓವರ್​ಗಳಲ್ಲಿ 199 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​ಸಿಬಿ ತಂಡ 23 ರನ್​ಗಳ ಗೆಲುವು ಸಾಧಿಸಿದೆ. ಈ…

Read More

ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ: ಕಾರಣ ಇಲ್ಲಿದೆ

ಬೆಂಗಳೂರು, ಮೇ 18: ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಸ್ಥಾನದಿಂದ ಕಿತ್ತು ಹಾಕಿತ್ತು. ಇಂದು ಅದೇ ವಿಚಾರಕ್ಕೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ನಡುವೆ ಗಲಾಟೆ ನಡೆದಿದ್ದು, ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು…

Read More

ಬಿಸಿಸಿಐಗೆ ಇಲ್ಲ ಆರ್‌ಟಿಐ ಬಿಸಿ! – Kannada News | BCCI Exempt From RTI: Landmark CIC Verdict

ಭಾರತದ ಅತ್ಯಂತ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಾಹಿತಿ ಹಕ್ಕು ಕಾಯ್ದೆಯ (RTI) ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (CIC) ಸೋಮವಾರ ಮಹತ್ವದ ತೀರ್ಪು ನೀಡಿದೆ. ನವ ದೆಹಲಿಯಲ್ಲಿರುವ ಕೇಂದ್ರ ಮಾಹಿತಿ ಆಯೋಗದ ಪ್ರಧಾನ ಕಚೇರಿಯಲ್ಲಿ ಇನ್​​ಫಾರ್ಮೇಷನ್ ಕಮಿಷನರ್ ಪಿ.ಆರ್. ರಮೇಶ್ ಅವರ ನೇತೃತ್ವದ ಪೀಠವು ಈ ಆದೇಶವನ್ನು ಹೊರಡಿಸಿದ್ದು, ಬಿಸಿಸಿಐ ಆರ್‌ಟಿಐ ಕಾಯ್ದೆಯ ಸೆಕ್ಷನ್ 2(h) ಅಡಿಯಲ್ಲಿ ಬರುವ ‘ಸಾರ್ವಜನಿಕ ಪ್ರಾಧಿಕಾರ’ (Public Authority) ಅಲ್ಲ ಎಂದು…

Read More

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಮಹಾ ಕ್ರಾಂತಿ: ಇನ್ನು ಐದು ಗಂಟೆಗಳ ಐವಿ ಡ್ರಿಪ್ ಬೇಕಿಲ್ಲ, ಭಾರತದಲ್ಲಿ ಬಿಡುಗಡೆಯಾಯ್ತು ಹೊಸ ಇಂಜೆಕ್ಷನ್ – Kannada News | New Rapid Cancer Injection Introduced in India, Treatment Takes Just Minutes

ಕ್ಯಾನ್ಸರ್ ಇಂಜೆಕ್ಷನ್ Image Credit source: Cancer treatment Centre of America ನವದೆಹಲಿ, ಮೇ 18: ಭಾರತದ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಕ್ರಾಂತಿಕಾರಿ ಹಾಗೂ ಆಶಾದಾಯಕ ಬೆಳವಣಿಗೆಯೊಂದು ನಡೆದಿದೆ. ಶ್ವಾಸಕೋಶದ ಕ್ಯಾನ್ಸರ್(Cancer) ರೋಗಿಗಳಿಗೆ ವರದಾನವಾಗಬಲ್ಲ ಅತ್ಯಾಧುನಿಕ ಚುಚ್ಚುಮದ್ದನ್ನು ದೇಶದಲ್ಲಿ ಪರಿಚಯಿಸಲಾಗಿದೆ. ಈ ಕುರಿತಾದ ಪೂರ್ಣ ವರದಿ ಇಲ್ಲಿದೆ. ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಧಾನದಲ್ಲಿ ಅತ್ಯಂತ ಮಹತ್ವದ ಹಾಗೂ ಕ್ರಾಂತಿಕಾರಿ ಬದಲಾವಣೆ ಗಾಳಿ ಬೀಸಿದೆ. ಗಂಟೆಗಟ್ಟಲೆ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಪಡೆಯಬೇಕಿದ್ದ…

Read More

SRH ತಂಡ ಗೆದ್ದರೆ ಎರಡು ತಂಡಗಳು ಪ್ಲೇಆಫ್​ಗೆ ಎಂಟ್ರಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಡಿಫೆಂಡಿಂಗ್ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 18 ಅಂಕಗಳೊಂದಿಗೆ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನುಳಿದ ಮೂರು ಸ್ಥಾನಗಳಿಗಾಗಿ ಸನ್​ರೈಸರ್ಸ್ ಹೈದರಾಬಾದ್, ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ನಡುವೆ ನೇರ ಹಣಾಹಣಿ ಇದೆ. (PC: IPL) ಆದರೆ ಇಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯವು…

Read More

ಏನೇನೋ ಹೇಳ್ಬೇಡ್ರಯ್ಯ; ತಿಲಕ್ ವರ್ಮಾ-ಶ್ರೀಲೀಲಾ ಡೇಟಿಂಗ್ ವದಂತಿಗೆ ಬ್ರೇಕ್ – Kannada News | Sreeleela Denies Tilak Varma Dating Rumors: Mother Swarnalatha Clarifies Truth

ಸೆಲೆಬ್ರಿಟಿಗಳು ಸಣ್ಣ ಸಣ್ಣ ವಿಷಯಕ್ಕೂ ಸುದ್ದಿ ಆಗುತ್ತಾರೆ. ಅವರು ಏನೇ ಮಾಡಿದರೂ ಚರ್ಚೆ ಆಗುತ್ತದೆ. ಸಣ್ಣ ಸಣ್ಣ ಕಾಕತಾಳೀಯಗಳೂ ಸಹ ದೊಡ್ಡ ಮಟ್ಟದ ಗಾಸಿಪ್‌ಗಳಾಗಿ ಮಾರ್ಪಡುತ್ತವೆ. ಒಂದೇ ಜಾಗದಲ್ಲಿ ಕಾಣಿಸಿಕೊಂಡರೆ ಸಾಕು, ಅವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ಕಥೆ ಕಟ್ಟುವುದು ನೆಟ್ಟಿಗರಿಗೆ ಅಭ್ಯಾಸವಾಗಿಬಿಟ್ಟಿದೆ. ಈಗ ಇಂತಹದ್ದೇ ಒಂದು ಸುಳ್ಳು ವದಂತಿಗೆ ಸ್ಟಾರ್ ನಟಿ ಶ್ರೀಲೀಲಾ (Sreeleela) ಸಂತ್ರಸ್ತೆ ಆಗಿದ್ದಾರೆ. ಈಗ ಈ ವಿಷಯವಾಗಿ ಶ್ರೀಲೀಲಾ ತಾಯಿ ಸ್ವರ್ಣಲತಾ ಸ್ಪಷ್ಟನೆ ನೀಡಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ಯುವ…

Read More