ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ? – Kannada News | Beltangady Teen Found Dead in Pond; Murder Suspected
ಮಂಗಳೂರು, ಜನವರಿ 14: ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ 9ನೇ ತರಗತಿಯ ಬಾಲಕನೊಬ್ಬ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಸುಮಂತ್ (15) ಮೃತ ದುರ್ದೈವಿಯಾಗಿದ್ದು, ಬಾಲಕನ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿಯೂ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಕುವೆಟ್ಟು ಸಮೀಪದ ಸಂಬೋಳ್ಯ ಬರಮೇಲು ನಿವಾಸಿಯಾದ ಸುಬ್ರಹ್ಮಣ್ಯ ನಾಯಕ್ ಅವರ ಮಗ ಸುಮಂತ್ ಧನುರ್ಮಾಸದ ಹಿನ್ನಲೆಯಲ್ಲಿ ಬೆಳಗ್ಗೆ…