ರಸ್ತೆ ಮಧ್ಯೆಯೇ ಕೆಟ್ಟು ನಿಲ್ತಿವೆ ಕೋಟಿ ಕೋಟಿ ಕೊಟ್ಟು ತಂದ ಬಸ್ಗಳು: ಚಿಗರಿ ನಿರ್ವಹಣೆಯೇ ಈಗ ಸವಾಲು! – Kannada News | Hubballi Dharwad BRTS Chigari Buses Face Maintenance Crisis, NWKRTC Struggles
ಹುಬ್ಬಳ್ಳಿ, ಜನವರಿ 14: ಹುಬ್ಬಳ್ಳಿ-ಧಾರವಾಡದ ನಡುವೆ ತ್ವರಿತ ಸಂಪರ್ಕ ಒದಗಿಸಯವ ಉದ್ದೇಶದಿಂದ ಆರಂಭವಾಗಿರುವ ಐಷಾರಾಮಿ ಚಿಗರಿ ಬಸ್ಗಳ ನಿರ್ವಹಣೆಯೇ ಈಗ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಮಾರ್ಗ ಮಧ್ಯೆಯೇ ಬಸ್ಗಳು ಕೆಟ್ಟು ನಿಲ್ಲುತ್ತಿರೋದು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವ ಜೊತೆಗೆ ಇದರ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೂ ತಲೆನೋವು ತಂದಿಡುತ್ತಿದೆ. ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿದ್ದ ಐಷಾರಾಮಿ ಬಸ್ಗಳು ಡಕೋಟಾ ಬಸ್ಗಳಾಗಿ ಮಾರ್ಪಡುತ್ತಿದ್ದು, ಈ ಬಗ್ಗೆ ಅನೇಕ ಬಾರಿ ಸರ್ಕಾರಕ್ಕೆ ಮತ್ತು BRTS…