ನೀಟ್-ಯುಜಿ ಪೇಪರ್ ಲೀಕ್ ಹಗರಣ: ಸಿಬಿಐ ತನಿಖೆಯಲ್ಲಿ ಬಿಗ್ ಟ್ವಿಸ್ಟ್; ಬ್ಯೂಟಿಷಿಯನ್ ಬಿಚ್ಚಿಟ್ಟ ಸ್ಫೋಟಕ ರಹಸ್ಯವೇನು? – Kannada News | NEET UG Paper Leak Case: CBI Probe Points to Key Role of Beautician

ಪುಣೆ, ಮೇ 18: ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ(NEET – UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳಿಗೆ ಬೆಚ್ಚಿಬೀಳಿಸುವ ಮಾಹಿತಿಗಳು ಲಭ್ಯವಾಗಿವೆ. ಪುಣೆಯ 46 ವರ್ಷದ ಬ್ಯೂಟಿಷಿಯನ್ ಒಬ್ಬರು ಈ ಇಡೀ ಜಾಲದ “ಪ್ರಮುಖ ಕೊಂಡಿ”ಯಾಗಿ ಕೆಲಸ ಮಾಡಿರುವುದು ಪತ್ತೆಯಾಗಿದೆ. ಈ  ಮೂಲಕ ಪರೀಕ್ಷಾ ಮಂಡಳಿಯ (NTA) ಉನ್ನತ ಮಟ್ಟದ ಅಧಿಕಾರಿಯೇ ಈ ಸೋರಿಕೆಯ ಮಾಸ್ಟರ್‌ಮೈಂಡ್ ಆಗಿರುವುದು ತನಿಖೆಯಲ್ಲಿ ಬಯಲಾಗಿದೆ.

ಎನ್‌ಟಿಎ (NTA) ಸಮಿತಿಯ ತಜ್ಞೆಯೇ ಸೂತ್ರಧಾರಿ
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)ಯ 2026ನೇ ಸಾಲಿನ ನೀಟ್-ಯುಜಿ ಪ್ರಶ್ನೆ-ನಿಗದಿ ಸಮಿತಿಯ ತಜ್ಞೆಯಾಗಿದ್ದ 57 ವರ್ಷದ ಮನೀಷಾ ಗುರುನಾಥ್ ಮಾಂಧರೆ ಅವರನ್ನು ಸಿಬಿಐ ಬಂಧಿಸಿದೆ. ಈಕೆಗೆ ಸಸ್ಯಶಾಸ್ತ್ರ (Botany) ಮತ್ತು ಪ್ರಾಣಿಶಾಸ್ತ್ರ (Zoology) ಎರಡೂ ವಿಷಯಗಳ ಅಂತಿಮ ಪ್ರಶ್ನೆಪತ್ರಿಕೆಗಳನ್ನು ನೋಡಲು ಅವಕಾಶವಿತ್ತು. ಆರ್ಥಿಕ ಲಾಭಕ್ಕಾಗಿ ಮಾಂಧರೆ ಈ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆಗೂ ಮುನ್ನವೇ ಸೋರಿಕೆ ಮಾಡಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಇವರನ್ನು 14 ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ.

ಪುಣೆಯ ಸುಖಸಾಗರ್ ನಗರದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮನೀಷಾ ವಾಘ್ಮೋರೆ ಈ ಪ್ರಕರಣದ ಪ್ರಮುಖ ಕೊಂಡಿಯಾಗಿದ್ದಾರೆ. ಈಕೆಗೆ ಮಾಂಧರೆ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಸಮಿತಿಯಲ್ಲಿದ್ದಾರೆ ಎಂಬ ವಿಷಯ ತಿಳಿದ ತಕ್ಷಣ, ಇಬ್ಬರೂ ಸೇರಿ ಸೋರಿಕೆಯ ಮಾಸ್ಟರ್ ಪ್ಲಾನ್ ರೂಪಿಸಿದ್ದರು. ಇವರಿಗೆ ನಿವೃತ್ತ ಶಿಕ್ಷಕಿ ಪಿವಿ ಕುಲಕರ್ಣಿ ಸಾಥ್ ನೀಡಿದ್ದರು.

ವಾಘ್ಮೋರೆ ತನ್ನ ಪಾರ್ಲರ್‌ಗೆ ಬರುತ್ತಿದ್ದ ಗ್ರಾಹಕರು ಹಾಗೂ ಟ್ಯೂಷನ್ ಶಿಕ್ಷಕರನ್ನು ಹುಡುಕುತ್ತಿದ್ದ ವಿದ್ಯಾರ್ಥಿಗಳನ್ನು ಸಂಪರ್ಕಿಸಿ, ಪ್ರಶ್ನೆಪತ್ರಿಕೆ ಖರೀದಿಸಲು ಸೂಕ್ತ ಅಭ್ಯರ್ಥಿಗಳನ್ನು ಹುಡುಕಲು ಆರಂಭಿಸಿದ್ದಳು.

ಪ್ರತಿ ವಿದ್ಯಾರ್ಥಿಗೆ 10 ಲಕ್ಷ ರೂಪಾಯಿಯ ಡೀಲ್!
ಮೂಲಗಳ ಪ್ರಕಾರ, ಸಿಕ್ಕಿಬಿದ್ದಿರುವ ಆರೋಪಿಗಳು ಪ್ರತಿ ವಿದ್ಯಾರ್ಥಿಯಿಂದ ಪ್ರಶ್ನೆಪತ್ರಿಕೆಗಾಗಿ ಬರೋಬ್ಬರಿ 10 ಲಕ್ಷ ರೂಪಾಯಿ ಲೂಟಿ ಮಾಡಲು ಒಪ್ಪಂದ ಮಾಡಿಕೊಂಡಿದ್ದರು. ಈ ಮೊತ್ತದಲ್ಲಿ ಬ್ಯೂಟಿಷಿಯನ್ ವಾಘ್ಮೋರೆ, ಎನ್‌ಟಿಎ ತಜ್ಞೆ ಮಾಂಧರೆ ಮತ್ತು ನಿವೃತ್ತ ಶಿಕ್ಷಕಿ ಕುಲಕರ್ಣಿ ತಲಾ 2.5 ಲಕ್ಷದಿಂದ 3 ಲಕ್ಷ ರೂಪಾಯಿಗಳವರೆಗೆ ಹಂಚಿಕೊಳ್ಳಲು ನಿರ್ಧರಿಸಿದ್ದರು. ವಾಘ್ಮೋರೆ ಈಗಾಗಲೇ ನಾಲ್ಕೈದು ವಿದ್ಯಾರ್ಥಿಗಳನ್ನು ಈ ಜಾಲಕ್ಕೆ ಸಿಲುಕಿಸಿದ್ದಳು.

ಮತ್ತಷ್ಟು ಓದಿ: ವೃತ್ತಿಯಲ್ಲಿ ಬ್ಯೂಟಿಷಿಯನ್, ಗಂಡ ದಂತವೈದ್ಯ; ನೀಟ್ ಹಗರಣದಲ್ಲಿ ಸಿಕ್ಕಿಬಿದ್ದ ಮನಿಷಾ ಬಗ್ಗೆ ನಿಮಗೆಷ್ಟು ಗೊತ್ತು?

ವಾಘ್ಮೋರೆ ತಾನು ಪಡೆದ ಪ್ರಶ್ನೆಪತ್ರಿಕೆಯನ್ನು ತನ್ನ ಹಳೆಯ ಸ್ನೇಹಿತ ಧನಂಜಯ್ ಲೋಖಂಡೆಗೆ ರವಾನಿಸಿದ್ದಳು. ಆತ ನಾಸಿಕ್‌ನಲ್ಲಿ ಕೌನ್ಸೆಲಿಂಗ್ ವ್ಯವಹಾರ ನಡೆಸುತ್ತಿದ್ದ ಶುಭಂ ಖೈರ್ನಾರ್‌ಗೆ ತಲುಪಿಸಿದ್ದ. ಶುಭಂ ಈ ಪ್ರಶ್ನೆಪತ್ರಿಕೆಯ ಪಿಡಿಎಫ್ (PDF) ಫೈಲ್‌ಗಳನ್ನು ಗುರುಗ್ರಾಮ್‌ನ ಯಶ್ ಯಾದವ್ ಮತ್ತು ಜೈಪುರದ ಇತರೆ ದಲ್ಲಾಳಿಗಳಿಗೆ ಹಂಚಿದ್ದ. ಕಳೆದ ಮಂಗಳವಾರ ಪರೀಕ್ಷೆ ರದ್ದಾದ ಕೆಲವೇ ಗಂಟೆಗಳಲ್ಲಿ ಮೊದಲ ಶಂಕಿತ ಖೈರ್ನಾರ್‌ನನ್ನು ಬಂಧಿಸಿದ ಸಿಬಿಐ, ಸಾಲು ಸಾಲು ಆರೋಪಿಗಳನ್ನು ವಶಕ್ಕೆ ಪಡೆದಿದೆ.

ಸದ್ಯ ಸಿಬಿಐ ಈ ಜಾಲದ ಆಳ ಅಗಲವನ್ನು ಹುಡುಕುತ್ತಿದ್ದು, ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಇನ್ನೂ ಹಲವಾರು ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು, ದೊಡ್ಡ ಮಟ್ಟದ ಸಂಘಟಿತ ಅಪರಾಧ ತಂಡ ಇದರ ಹಿಂದೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಈ ಹಗರಣದ ಸಂಪೂರ್ಣ ಸತ್ಯವನ್ನು ಹೊರತರಲು ಸಿಬಿಐ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಡಾಲರ್ ಎದುರು 96 ದಾಟಿ ಸಾರ್ವಕಾಲಿಕ ಕೆಳಮಟ್ಟಕ್ಕೆ ಕುಸಿದ ರೂಪಾಯಿ; ಭಾರತೀಯ ಕರೆನ್ಸಿಯ ಐತಿಹಾಸಿಕ ಕಳಪೆ ಸಾಧನೆ – Kannada News | Rupee Hits Record Low: Drops 20 Paise to cross 96 Against US Dollar

ನವದೆಹಲಿ, ಮೇ 18: ಜಾಗತಿಕ ಆರ್ಥಿಕ ಮಾರುಕಟ್ಟೆಯಲ್ಲಿನ ತಲ್ಲಣಗಳು ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಭಾರತೀಯ ಮಾರುಕಟ್ಟೆಯಿಂದ ಸತತವಾಗಿ ಬಂಡವಾಳವನ್ನು ಹಿಂತೆಗೆದುಕೊಳ್ಳುತ್ತಿರುವುದು ದೇಶೀಯ ಕರೆನ್ಸಿಯ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರಿದೆ. ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು (Indian Rupee value) ತೀವ್ರ ಕುಸಿತವನ್ನು ಕಾಣುವ ಮೂಲಕ ಇತಿಹಾಸದಲ್ಲೇ ಅತ್ಯಂತ ಕನಿಷ್ಠ ಮಟ್ಟವನ್ನು ತಲುಪಿದೆ. ಸೋಮವಾರದ ಫಾರೆಕ್ಸ್ ವಹಿವಾಟು ವೇಳೆ ಡಾಲರ್ ಎದುರು ರುಪಾಯಿ 96.27 ಮಟ್ಟಕ್ಕೆ ಕುಸಿದಿತ್ತು. ಇದು ದೇಶೀಯ ಶೇರು ಮಾರುಕಟ್ಟೆ (Stock Market) ಹಾಗೂ ಆರ್ಥಿಕ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಸುದ್ದಿಯ ಮುಖ್ಯಾಂಶಗಳು

  1. ಸೋಮವಾರದ ವಹಿವಾಟಿನ ಆರಂಭದಲ್ಲೇ ರೂಪಾಯಿ ಮೌಲ್ಯವು 20 ಪೈಸೆಗಳಷ್ಟು ಭಾರಿ ಕುಸಿತವನ್ನು ಕಂಡಿದೆ.
  2. ಈ ಕುಸಿತದ ನಂತರ ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯವು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 96.27 ಕ್ಕೆ ತಲುಪಿದೆ.
  3. ಜಾಗತಿಕ ಮಾರುಕಟ್ಟೆಯಲ್ಲಿನ ನಕಾರಾತ್ಮಕ ಬೆಳವಣಿಗೆಗಳು ದೇಶೀಯ ಕರೆನ್ಸಿಯ ಮೇಲೆ ತೀವ್ರ ಪರಿಣಾಮ ಬೀರಿವೆ.

ಆರ್ಥಿಕ ತಜ್ಞರ ಪ್ರಕಾರ, ಅಮೆರಿಕದ ಫೆಡರಲ್ ರಿಸರ್ವ್‌ನ ನೀತಿಗಳು, ಜಾಗತಿಕ ಮಟ್ಟದಲ್ಲಿ ಡಾಲರ್ ಇಂಡೆಕ್ಸ್ ಬಲಗೊಳ್ಳುತ್ತಿರುವುದು ಮತ್ತು ಕಚ್ಚಾ ತೈಲ ಬೆಲೆಯಲ್ಲಿ ಉಂಟಾಗುತ್ತಿರುವ ಏರಿಳಿತಗಳು ರೂಪಾಯಿಯ ಈ ಐತಿಹಾಸಿಕ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ. ಇತ್ತೀಚಿನ ದಿನಗಳಲ್ಲಿ ವಿದೇಶಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಡಾಲರ್ ಕಡೆಗೆ ಮುಖ ಮಾಡುತ್ತಿರುವುದರಿಂದ ಭಾರತೀಯ ಮಾರುಕಟ್ಟೆಯಿಂದ ಭಾರಿ ಪ್ರಮಾಣದ ಹಣ ಹೊರಹೋಗುತ್ತಿದೆ.

ಇದನ್ನೂ ಓದಿ: Gold Rate: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

ರೂಪಾಯಿ ಮೌಲ್ಯದ ಈ ಸಾರ್ವಕಾಲಿಕ ಕುಸಿತವು ದೇಶದ ಒಟ್ಟಾರೆ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ವಿಶೇಷವಾಗಿ ಭಾರತವು ದೊಡ್ಡ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ಕಚ್ಚಾ ತೈಲ, ಎಲೆಕ್ಟ್ರಾನಿಕ್ಸ್ ಉಪಕರಣಗಳು ಮತ್ತು ರಸಗೊಬ್ಬರಗಳ ವೆಚ್ಚ ದುಬಾರಿಯಾಗಲಿದೆ. ಆಮದು ವೆಚ್ಚ ಹೆಚ್ಚಾದಂತೆ ದೇಶೀಯ ಮಾರುಕಟ್ಟೆಯಲ್ಲಿ ಹಣದುಬ್ಬರ (ಬೆಲೆ ಏರಿಕೆ) ಹೆಚ್ಚಾಗುವ ಆತಂಕ ಎದುರಾಗಿದೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ರೂಪಾಯಿ ಮೌಲ್ಯಕ್ಕೆ ಸ್ಥಿರತೆ ತರಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾರುಕಟ್ಟೆಯಲ್ಲಿ ಹಸ್ತಕ್ಷೇಪ ಮಾಡಿ ಡಾಲರ್ ಮಾರಾಟ ಪ್ರಕ್ರಿಯೆಗೆ ಇಳಿಯಲಿದೆಯೇ ಎಂಬುದನ್ನು ಹೂಡಿಕೆದಾರರು ಮತ್ತು ಆರ್ಥಿಕ ವಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೊಪ್ಪಳದಲ್ಲಿ ಗಾಳಿ ಮಳೆಯಬ್ಬರ: ಬೇರು ಸಮೇತ ನೆಲಕ್ಕುರುಳಿದ ಮರಗಳು, ಕ್ರೇನ್​​ ಧರಾಶಾಹಿ – Kannada News | Karnataka Rain Fury: Trees Uprooted in Kushtagi, Huge Crane Collapses in Tavaragera

ಕೊಪ್ಪಳ, ಮೇ 18: ಕರ್ನಾಟಕ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿ ವ್ಯಾಪಕ ಅನಾಹುತಗಳನ್ನು ಸೃಷ್ಟಿಸಿದೆ. ವಿಶೇಷವಾಗಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಿನ್ನೆ (ಮೇ 17) ಸಂಜೆ ಸುರಿದ ಭಾರೀ ಮಳೆಯ ಆರ್ಭಟಕ್ಕೆ ಬೃಹತ್ ಮರಗಳು ಬೇರುಸಮೇತ ಧರೆಗುರುಳಿವೆ. ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ವಾಹನ ಸಂಚಾರಕ್ಕೆ ತೀವ್ರ ಅಡ್ಡಿಯುಂಟಾಗಿತ್ತು. ಮತ್ತೊಂದೆಡೆ ಮಳೆ ಮತ್ತು ಬಿರುಗಾಳಿಯ ಅಬ್ಬರಕ್ಕೆ ಕೊಪ್ಪಳದ ತಾವರಗೇರ ಪಟ್ಟಣದ ಬಳಿ ಬೃಹತ್ ವಿಂಡ್ ಫ್ಯಾನ್ ಅಳವಡಿಕೆಗೆ ಬಳಸುವ ಕ್ರೇನ್ ಪತನಗೊಂಡಿದೆ. ವಿಂಡ್ ಫ್ಯಾನ್ ಅಳವಡಿಕೆಗೆ ಬಳಸುವ ಈ ಕ್ರೇನ್ ಕುಸಿಯುವಾಗ ಅಲ್ಲೇ ಇದ್ದ ಕಾರ್ಮಿಕರು ಕೂದಲಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಗದಗ, ಹಾವೇರಿ, ಹುಬ್ಬಳ್ಳಿ, ಕೊಪ್ಪಳ ಮತ್ತು ಕುಷ್ಟಗಿ ಸೇರಿದಂತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ದರ್ಶನ್ ಇಲ್ಲದೆ ನೋವು ಅನುಭವಿಸುತ್ತಿರುವ ವಿಜಯಲಕ್ಷ್ಮೀ; ಒಡೆದ ಹೃದಯ ಪೋಸ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎದುರಾಗಿರುವ ಕಾನೂನು ಹೋರಾಟದಲ್ಲಿ ನಟ ದರ್ಶನ್‌ಗೆ ಮತ್ತೊಮ್ಮೆ ಭಾರಿ ಹಿನ್ನೆಡೆಯಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಸುಪ್ರೀಂಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ, ಅವರ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ.

ಸುಪ್ರೀಂಕೋರ್ಟ್‌ನಲ್ಲಿಯೂ ಜಾಮೀನು ಸಿಗದೇ ದರ್ಶನ್ ಅವರ ಸಂಕಷ್ಟ ಮತ್ತಷ್ಟು ಹೆಚ್ಚಾಗಿರುವುದು ಇಡೀ ಕುಟುಂಬಕ್ಕೆ ತೀವ್ರ ನಿರಾಸೆ ಮೂಡಿಸಿದೆ. ಈ ತೀರ್ಪು ಹೊರಬೀಳುತ್ತಿದ್ದಂತೆ ಪತಿ ದರ್ಶನ್ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮೀ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ದರ್ಶನ್ ಅವರ ಫೋಟೋವನ್ನು ಪೋಸ್ಟ್ ಮಾಡಿರುವ ವಿಜಯಲಕ್ಷ್ಮೀ, ಅದಕ್ಕೆ ಯಾವುದೇ ಸುದೀರ್ಘ ಬರಹ ಬರೆಯದೇ ಕೇವಲ ‘ಹಾರ್ಟ್ ಬ್ರೇಕ್’ ಎಮೋಜಿ ಹಾಕುವ ಮೂಲಕ ತೀವ್ರ ಬೇಸರ ಹಾಗೂ ನೋವನ್ನು ವ್ಯಕ್ತಪಡಿಸಿದ್ದಾರೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಅಪ್ಪ ಬೈಯುತ್ತಿದ್ದಂತೆ ಕಂಬದ ಹಿಂದೆ ಅಡಗಿ ನಿಂತ ಪುಟಾಣಿ – Kannada News | A little girl hiding behind a pillar from her father’s scolding

ತಂದೆ ಮಗಳ (father – daughter) ಸಂಬಂಧವೇ ಹಾಗೆ, ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ತಂದೆಗೂ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಮಗಳಿಗೂ ಯಾವತ್ತೂ ತಂದೆ ಗದರಲ್ಲ. ಆದರೆ ಈ ಪುಟಾಣಿಯ ತಂದೆಯೂ ಕೈಯಲ್ಲಿ ಪೊರಕೆ ಹಿಡಿದುಕೊಂಡು ಬೈಯಲು ಶುರು ಮಾಡಿದ್ದಾನೆ. ಅಪ್ಪನ  ಬೈಗುಳಕ್ಕೆ  ಪುಟ್ಟ ಹುಡುಗಿ ಹೆದರಿ ಹೋಗಿದೆ. ಕಂಬದ ಹಿಂದೆ ಅಡಗಿ ನಿಂತ ಪುಟಾಣಿ ವಿಡಿಯೋ ವೈರಲ್ ಆಗಿದೆ.

Distraction ಹೆಸರಿನ ಫೇಸ್ಬುಕ್ ಖಾತೆಯಲ್ಲಿ ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತಂದೆಯೂ ಬೈಯುತ್ತಿದ್ದಂತೆ ಕಂಬದ ಹಿಂದೆ ಅಡಗಿ ನಿಂತುಕೊಂಡ ಪುಟ್ಟ ಹುಡುಗಿ ಕಣ್ಣು ಮಿಟುಕಿಸುತ್ತಾ ನೋಡುತ್ತಿದೆ. ಅಷ್ಟೇ ಅಲ್ಲದೇ ಪುಟಾಣಿಯೂ ಮುಖವನ್ನು ಊದಿಸಿಕೊಂಡು ಮುದ್ದಾಗಿ ರಿಯಾಕ್ಷನ್ ನೀಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಪುಟಾಣಿ ತೊದಲು ನುಡಿಯಲ್ಲಿ ಬೈಯುತ್ತಿದ್ದರೆ ಮುಗುಳುನಗೆ ಬೀರಿದ ತಂದೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ತುಂಬಾ ಮುದ್ದಾಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮುದ್ದಾದ ಪುಟಾಣಿ, ಹುಡುಕಲು ಕಷ್ಟ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ತಂದೆ ಮಗಳ ಬಾಂಧವ್ಯವೇ ಚಂದ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಲೆನಾಡಲ್ಲಿ ಹೆಚ್ಚಿದ ಕಾಡುಪ್ರಾಣಿಗಳ ಉಪಟಳ: ಹಿಂಡು ಹಿಂಡಾಗಿ ಕಾಣಿಸಿಕೊಂಡ ಕಾಡುಕೋಣಗಳು – Kannada News | Gaur Menace Rises in Malnad: Herd of Over 20 Wild Buffaloes Spotted Near Horanadu

ಚಿಕ್ಕಮಗಳೂರು, ಮೇ 18: ಮಲೆನಾಡಲ್ಲಿ ಕಾಡು ಕೋಣಗಳ ಉಪಟಳ ಮಿತಿ ಮೀರಿದ್ದು, ರಸ್ತೆಯಲ್ಲಿ ಕಾಡುಕೋಣಗಳ ಹಿಂಡು ಕಂಡು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಕಳಸ ತಾಲೂಕಿನ‌ ಹೊರನಾಡು ಸಮೀಪದ ಎಳಕುಂಬ್ರಿಯಲ್ಲಿ ನಡೆದಿದೆ. ಗುಡ್ಡದಲ್ಲಿ 20ಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಅವುಗಳ ಓಡಾಟದ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊರನಾಡು, ಎಳಕುಂಬ್ರಿ ಸುತ್ತಮುತ್ತ ಕಾಡುಕೋಣಗಳು ಬೆಳೆ ಹಾನಿ ಮಾಡುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಭಾರತ-ಸ್ವೀಡನ್ ಬಾಂಧವ್ಯಕ್ಕೆ ಹೊಸ ವೇಗ: ಪ್ರಧಾನಿ ಮೋದಿ ಪ್ರವಾಸದ ಪ್ರಮುಖ ಒಪ್ಪಂದಗಳ ಬಗ್ಗೆ ಮಾಹಿತಿ ಇಲ್ಲಿದೆ – Kannada News | Narendra Modi Hails New Strategic Milestones in Sweden Visit

ಸ್ಟಾಕ್‌ಹೋಮ್, ಮೇ 18: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಸ್ವೀಡನ್ ಪ್ರವಾಸವು ಭಾರತ ಮತ್ತು ಸ್ವೀಡನ್ ದೇಶಗಳ ನಡುವಿನ ರಾಜತಾಂತ್ರಿಕ ಹಾಗೂ ಆರ್ಥಿಕ ಸಂಬಂಧಗಳಿಗೆ ಹೊಸ ವೇಗವನ್ನು ನೀಡಿದೆ. ಈ ಭೇಟಿಯು ಅತ್ಯಂತ ಯಶಸ್ವಿಯಾಗಿದ್ದು, ಉಭಯ ದೇಶಗಳ ಸಂಬಂಧವನ್ನು ‘ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್’ (Strategic Partnership) ಮಟ್ಟಕ್ಕೆ ಕೊಂಡೊಯ್ಯಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿ ಜಂಟಿ ಸಂಶೋಧನೆಗೆ ಚಾಲನೆ  ಸಿಕ್ಕಿದೆ. ಭಾರತ-ಸ್ವೀಡನ್ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (AI) ಕಾರಿಡಾರ್ ಅನ್ನು ಅಧಿಕೃತವಾಗಿ ಪ್ರಾರಂಭಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು ದುಪ್ಪಟ್ಟುಗೊಳಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಲಾಗಿದೆ. ತಮ್ಮ ಪ್ರವಾಸದ ಯಶಸ್ಸಿಗೆ ಕಾರಣರಾದ ಸ್ವೀಡನ್‌ನ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್, ಅಲ್ಲಿನ ಸರ್ಕಾರ ಮತ್ತು ಜನತೆ ತೋರಿದ ಆತ್ಮೀಯ ಆತಿಥ್ಯ ಹಾಗೂ ಸ್ನೇಹಕ್ಕೆ ಪ್ರಧಾನಿ ಮೋದಿ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಒಪ್ಪಂದಗಳು ಭವಿಷ್ಯದಲ್ಲಿ ಉಭಯ ದೇಶಗಳ ಪ್ರಗತಿಗೆ ಹೊಸ ದಾರಿ ದೀಪವಾಗಲಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೇಸಿಗೆ ರಜೆ ಬರುತ್ತಲೇ ನಾಪತ್ತೆಯಾಗ್ತಿರೋ ಅಪ್ರಾಪ್ತೆಯರು! ರಾಯಚೂರಿನಲ್ಲಿ 19 ಕೇಸ್ ದಾಖಲು – Kannada News | Raichur: 19 Cases Registered as Minor Girls Go Missing Post Exams, SP Urges Parents to Stay Vigilant

ಬೇಸಿಗೆ ರಜೆ ಬರುತ್ತಲೇ ನಾಪತ್ತೆಯಾಗ್ತಿರೋ ಅಪ್ರಾಪ್ತೆಯರು!

ರಾಯಚೂರು, ಮೇ 18: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ (Teen girls Missing) ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದ್ದಾರೆ.

ಪರೀಕ್ಷೆ ಮುಗಿದ ಬೆನ್ನಲ್ಲೇ ಎಸ್ಕೇಪ್!

ಜಿಲ್ಲೆಯಲ್ಲಿ ಪ್ರತಿ ವರ್ಷ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ಮುಗಿದು ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆ ಇಂತಹ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ಮನೆಯಿಂದ ಫ್ರೆಂಡ್ಸ್ ಮನೆಗೆ ಹೋಗಿ ಬರುತ್ತೇನೆ, ನೋಟ್ಸ್ ತರುತ್ತೇನೆ ಎಂದು ಪೋಷಕರಿಗೆ ಸುಳ್ಳು ಹೇಳಿ ಹೊರಡುವ ಬಾಲಕಿಯರು ವಯಸ್ಕ ಯುವಕರ ಜೊತೆ ನಾಪತ್ತೆಯಾಗುತ್ತಿದ್ದಾರೆ. ಪೋಷಕರು ಹಗಲಿರುಳು ಹುಡುಕಾಟ ನಡೆಸಿ, ಮಕ್ಕಳ ಸುಳಿವು ಸಿಗದೇ ಇದ್ದಾಗ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಸದ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ ಒಟ್ಟು 19 ಪ್ರಕರಣಗಳು ದಾಖಲಾಗಿವೆ.

ಪೋಷಕರಿಗೆ ರಾಯಚೂರು ಎಸ್ ಪಿ ಕಟ್ಟುನಿಟ್ಟಿನ ಮನವಿ

ಈ ಗಂಭೀರ ವಿಷಯದ ಕುರಿತು ಟಿವಿ9 ಜೊತೆ ಮಾತನಾಡಿದ ರಾಯಚೂರು ಎಸ್ ಪಿ ಅರುಣಾಂಗ್ಷು ಗಿರಿ , ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಈಗಾಗಲೇ 19 ಕೇಸ್​ಗಲು ದಾಖಲಾಗಿದ್ದು, 6 ಬಾಲಕಿಯರ ಸುಳಿವು ಸಿಕ್ಕಿದೆ. ಉಳಿದ 13 ಪ್ರಕರಣಗಳ ತನಿಖೆ ಮುಂದುವರೆದಿದೆ. ಶಾಲಾ-ಕಾಲೇಜು ಪರೀಕ್ಷೆ ಮುಗಿದ ಬಳಿಕ ಇಂತಹ ಘಟನೆಗಳು ಮರುಕಳಿಸುತ್ತಿವೆ. 18 ವರ್ಷದ ಒಳಗಿನ ಬಾಲಕಿಯರು ವಯಸ್ಕ ಯುವಕರ ಜೊತೆ ಹೋದರೆ ಅದನ್ನು ಅಪಹರಣವೆಂದೇ ಪರಿಗಣಿಸಲಾಗುತ್ತದೆ. ಆದ್ದರಿಂದ ಪೋಷಕರು ಹಾಗೂ ಕುಟುಂಬಸ್ಥರು ಮಕ್ಕಳ ಮನಸ್ಥಿತಿಯನ್ನು ಅರಿತು ಅವರಿಗೆ ಸೂಕ್ತ ಕೌನ್ಸೆಲಿಂಗ್ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ ಕಿಟಕಿ ಸರಳು ಮುರಿದು ಉಗಾಂಡದ ನಾಲ್ವರು ಮಹಿಳೆಯರು ಎಸ್ಕೇಪ್; ಮತ್ತೆ ಡ್ರಗ್ಸ್ ದಂಧೆಗೆ ಇಳಿಯುವ ಆತಂಕ!

ಪೊಲೀಸ್ ಇಲಾಖೆಯಿಂದ ಜಾಗೃತಿ

ಈಗಾಗಲೇ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ಬಾಲಕಿಯರಿಗೆ ವಿಶೇಷ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿರುವ ಎಸ್​ಪಿ, ಕಾನೂನು ಪ್ರಾಧಿಕಾರದ ಜೊತೆಯೂ ಸಭೆ ನಡೆಸಲಾಗಿದ್ದು, ಪ್ರೇಮದ ಹೆಸರಿನಲ್ಲಿ ಅಪ್ರಾಪ್ತೆಯರನ್ನು ಸೆಳೆಯುವ ವಯಸ್ಕ ಯುವಕರಿಗೂ ಕಾನೂನಿನ ಕಠಿಣ ಶಿಕ್ಷೆಗಳ ಬಗ್ಗೆ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ರಾಯಚೂರಿನಲ್ಲಿ ಬೇಸಿಗೆ ರಜೆ ಅವಧಿಯಲ್ಲಿ ಅಪ್ರಾಪ್ತ ಬಾಲಕಿಯರು ನಾಪತ್ತೆಯಾಗುತ್ತಿದ್ದಾರೆ.ಪರೀಕ್ಷೆ ಮುಗಿದ ಬಳಿಕ ಪ್ರೇಮದ ಹೆಸರಿನಲ್ಲಿ ಬಾಲಕಿಯರು ನಾಪತ್ತೆಯಾಗುತ್ತಿದ್ದಾರೆ.ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸದ್ಯ 19 ಪ್ರಕರಣಗಳು ದಾಖಲಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು – ಮಂಗಳೂರು ವಾಹನ ಸವಾರರಿಗೆ ಗುಡ್ ನ್ಯೂಸ್: ಶಿರಾಡಿ ಘಾಟ್ ರಸ್ತೆ ಕಾಮಗಾರಿ ಬಗ್ಗೆ ಬಿಗ್ ಅಪ್​ಡೇಟ್ – Kannada News | Shiradi Ghat Relief: Major Bangalore Mangalore NH 75 Widening Completed Ahead of Monsoon

ಶಿರಾಡಿ ಘಾಟ್ ರಸ್ತೆ ಕಾಮಗಾರಿImage Credit source: tv9

ಹಾಸನ, ಮೇ 18: ಕರ್ನಾಟಕ ರಾಜಧಾನಿ ಬೆಂಗಳೂರು (Bengaluru) ಮತ್ತು ಪ್ರಮುಖ ಬಂದರು ನಗರಿ ಮಂಗಳೂರನ್ನು (Mangaluru) ಸಂಪರ್ಕಿಸುವ ಅತ್ಯಂತ ಮಹತ್ವದ ರಾಷ್ಟ್ರೀಯ ಹೆದ್ದಾರಿ 75ರ (NH 75) ಶಿರಾಡಿ ಘಾಟ್ (Shiradi Ghat) ಮಾರ್ಗದ ದಶಕಗಳ ದುರವಸ್ಥೆಗೆ ಕಡೆಗೂ ಮುಕ್ತಿ ಸಿಗುವ ಕಾಲ ಹತ್ತಿರವಾಗಿದೆ. ಪ್ರತೀ ವರ್ಷ ಮಳೆಗಾಲದಲ್ಲಿ ಸಂಚಾರ ಬಂದ್ ಆಗಿ ಪ್ರಯಾಣಿಕರು ಮತ್ತು ಸರಕು ಸಾಗಣೆದಾರರು ಅನುಭವಿಸುತ್ತಿದ್ದ ನರಕಯಾತನೆಗೆ ಬ್ರೇಕ್ ಬೀಳುವ ಲಕ್ಷಣಗಳು ಕಾಣುತ್ತಿವೆ. ಮಳೆಗಾಲ ಪ್ರಾರಂಭವಾಗಲು ಕೆಲವೇ ದಿನಗಳು ಬಾಕಿ ಇರುವಂತೆ, ಬಹುಕಾಲದಿಂದ ನನೆಗುದಿಗೆ ಬಿದ್ದಿದ್ದ ಹೆದ್ದಾರಿ ಚತುಷ್ಪತ ಕಾಮಗಾರಿ ಬಹುತೇಕ ಮುಗಿದಿದ್ದು, ವಾಹನ ಸವಾರರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಮುಖ್ಯಾಂಶಗಳು

  • ಕಳೆದ ಹತ್ತು ವರ್ಷಗಳಿಂದ ಅರ್ಧಕ್ಕೆ ನಿಂತಿದ್ದ ಕಾಮಗಾರಿ.
  • ಸಕಲೇಶಪುರದ ಮಾರನಹಳ್ಳಿವರೆಗಿನ 45 ಕಿಲೋಮೀಟರ್ ಚತುಷ್ಪತ ರಸ್ತೆ ನಿರ್ಮಾಣ ಬಹುತೇಕ ಪೂರ್ಣ
  • ಗುಡ್ಡ ಕುಸಿದ ಸ್ಥಳಗಳಲ್ಲಿ ತಡೆಗೋಡೆ ಹಾಗೂ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಅನಾಹುತಗಳನ್ನು ತಡೆಯುವ ವ್ಯವಸ್ಥೆ.

ಪ್ರಯಾಣದ ಸಮಯ ಶೇ 50ರಷ್ಟು ಇಳಿಕೆ

ಹಿಂದೆಲ್ಲಾ ಹಾಸನದಿಂದ ಮಾರನಹಳ್ಳಿ ತಲುಪಲು ಐದಾರು ಗಂಟೆಗಳ ಕಾಲ ಹಿಡಿಯುತ್ತಿದ್ದ ಪ್ರಯಾಣ, ಈಗ ಉತ್ತಮ ರಸ್ತೆಯಿಂದಾಗಿ ಕೇವಲ ಎರಡು-ಮೂರು ಗಂಟೆಗಳಿಗೆ ಇಳಿಕೆಯಾಗಿದ್ದು, ಆರ್ಥಿಕತೆಗೂ ಭಾರಿ ಬೂಸ್ಟ್ ಸಿಗಲಿದೆ.

ಆರ್ಥಿಕತೆ ಮತ್ತು ಪ್ರವಾಸೋದ್ಯಮಕ್ಕೆ ಭಾರಿ ಅನುಕೂಲ

ಮಂಗಳೂರು ಬಂದರಿನಿಂದ ಪೆಟ್ರೋಲಿಯಂ ಉತ್ಪನ್ನಗಳು ಮತ್ತು ವಾಣಿಜ್ಯ ಸರಕುಗಳ ಸಾಗಣೆಗೆ ಶಿರಾಡಿ ಘಾಟ್ ಪ್ರಮುಖ ಮಾರ್ಗವಾಗಿದೆ. ಈ ಕಾಮಗಾರಿ ಪೂರ್ಣಗೊಂಡಿರುವುದು ಕೇವಲ ಸರಕು ಸಾಗಣೆಗೆ ಮಾತ್ರವಲ್ಲದೆ, ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಮತ್ತು ಪ್ರವಾಸಿ ತಾಣಗಳಿಗೆ ಲಕ್ಷಾಂತರ ಜನರು ಸುಗಮವಾಗಿ ಸಂಚರಿಸಲು ಅನುವು ಮಾಡಿಕೊಡಲಿದೆ. ಹಾಸನ ಮತ್ತು ಸಕಲೇಶಪುರ ಭಾಗದ ಪ್ರವಾಸೋದ್ಯಮಕ್ಕೂ ಇದು ದೊಡ್ಡ ಕೊಡುಗೆ ನೀಡಲಿದೆ.

ದೋಣಿಗಲ್, ದೊಡ್ಡತಪ್ಲು ಬಳಿ ಗುಡ್ಡ ಕುಸಿದರೆ ಪರ್ಯಾಯ ವ್ಯವಸ್ಥೆ

ಭೂಕುಸಿತದ ವೇಳೆ ರಸ್ತೆಗೆ ಹಾನಿಯಾಗದಂತೆ ತಡೆಗೋಡೆಗಳ ನಿರ್ಮಾಣ ಮಾಡುತ್ತಿರುವುದು

ನಿರಂತರ ಭೂಕುಸಿತದ ಭೀತಿಯಿಂದಾಗಿ ರಾತ್ರಿಯಿಡೀ ನರಳಬೇಕಾದ ಅನಿವಾರ್ಯತೆ ಇನ್ನು ತಪ್ಪಲಿದೆ ಎಂದು ವಾಹನ ಚಾಲಕರು ನೆಮ್ಮದಿ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತದ ಸ್ಥಳಗಳಲ್ಲಿ, ವಿಶೇಷವಾಗಿ ದೋಣಿಗಲ್ ಮತ್ತು ದೊಡ್ಡತಪ್ಲು ಬಳಿ, ಈಗ ಚತುಷ್ಪತ ರಸ್ತೆ ನಿರ್ಮಿಸಲಾಗಿದ್ದು, ಅನಿವಾರ್ಯ ಸಂದರ್ಭದಲ್ಲಿ ಒಂದು ಮಾರ್ಗದಲ್ಲಾದರೂ ಸಂಚಾರಕ್ಕೆ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಹಾಸನ: ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

ವೈದ್ಯಕೀಯ ತುರ್ತು ಸಂದರ್ಭಗಳಿಗೂ ಇದು ದೊಡ್ಡ ಅನುಕೂಲವಾಗಿದೆ. ದಶಕಗಳ ಕನಸು ನನಸಾಗುತ್ತಿರುವ ಖುಷಿ ಒಂದೆಡೆಯಾದರೆ, ಮುಂಬರುವ ಭೀಕರ ಮಳೆಗಾಲದ ಪರೀಕ್ಷೆಯಲ್ಲಿ ಈ ಕಾಮಗಾರಿಯ ಗುಣಮಟ್ಟ ಮತ್ತು ಸುಸ್ಥಿರತೆ ಸಾಬೀತಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: CSK ಗೆದ್ದರೆ RCB ಗೆ ಪ್ಲಸ್ ಪಾಯಿಂಟ್..! – Kannada News | IPL 2026: If CSK wins, RCB’s top 2 finish will be confirmed

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಲೀಗ್ ಹಂತವು ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಈಗಾಗಲೇ 62 ಪಂದ್ಯಗಳು ಮುಗಿದಿದ್ದು, ಇದಾಗ್ಯೂ ಪ್ಲೇಆಫ್​ಗೇರಿರುವುದು ಏಕೈಕ ತಂಡ. ಅದು ಸಹ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ. ಇನ್ನುಳಿದ 7 ತಂಡಗಳ ನಡುವೆ ಪ್ಲೇಆಫ್ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿ ನಡುವೆ ಆರ್​ಸಿಬಿ ತಂಡ ಟಾಪ್-2 ಮೇಲೆ ಕಣ್ಣಿಟ್ಟಿದೆ.

ಅಂದರೆ 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಅಂಕಗಳನ್ನು ಪಡೆದರೆ ಮೊದಲ ಕ್ವಾಲಿಫೈಯರ್ ಆಡುವುದು ಖಚಿತ.

  • ಪ್ಲೇಆಫ್​ ಹಂತದಲ್ಲಿ ಮೊದಲ ಕ್ವಾಲಿಫೈಯರ್ ಆಡುವುದರಿಂದ ನೇರವಾಗಿ ಫೈನಲ್​ಗೇರಲು ಅವಕಾಶ ದೊರೆಯಲಿದೆ. ಅಂದರೆ ಫಸ್ಟ್ ಕ್ವಾಲಿಫೈಯರ್​ನಲ್ಲಿ ಅಂಕ ಪಟ್ಟಿಯಲ್ಲಿನ ಟಾಪ್-2 ತಂಡಗಳು ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಗೆದ್ದ ತಂಡ ಫೈನಲ್​ಗೆ ಪ್ರವೇಶಿಸುತ್ತದೆ.
  • ಒಂದು ವೇಳೆ ಮೊದಲ ಕ್ವಾಲಿಫೈಯರ್​ನಲ್ಲಿ ಸೋತರೆ ಟೂರ್ನಿಯಿಂದ ಹೊರಬೀಳುವುದಿಲ್ಲ. ಬದಲಾಗಿ ದ್ವಿತೀಯ ಕ್ವಾಲಿಫೈಯರ್ ಆಡಲು ಅವಕಾಶ ದೊರೆಯಲಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಹಾಗೂ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡಗಳು ಎರಡನೇ ಕ್ವಾಲಿಫೈಯರ್​ ಆಡಲಿದೆ.
  • ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಗೆಲ್ಲುವ ಮೂಲಕ ಫೈನಲ್​​ಗೇರಬಹುದು. ಹೀಗಾಗಿಯೇ ಲೀಗ್ ಹಂತದ ಮುಕ್ತಾಯದ ವೇಳೆಗೆ ಆರ್​ಸಿಬಿ ಟಾಪ್-2 ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಪ್ಲ್ಯಾನ್ ರೂಪಿಸುತ್ತಿದೆ.

ಆದರೆ ಆರ್​ಸಿಬಿ ತಂಡವು ತನ್ನ ಕೊನೆಯ ಲೀಗ್ ಪಂದ್ಯಕ್ಕೂ ಮುನ್ನವೇ ಮೊದಲ ಕ್ವಾಲಿಫೈಯರ್ ಆಡುವುದನ್ನು ಖಚಿತಪಡಿಸಿಕೊಳ್ಳಬಹುದು. ಅದು ಕೂಡ ಇಂದು ಇಂದು (ಮೇ 18) ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯದ ಮೂಲಕ ಎಂಬುದು ವಿಶೇಷ.

ಅಂದರೆ ಇಂದಿನ ಪಂದ್ಯದಲ್ಲಿ ಸಿಎಸ್‌ಕೆ ಜಯಗಳಿಸಿದರೆ, ಆರ್‌ಸಿಬಿ ತಂಡವು ಅಧಿಕೃತವಾಗಿ ಅಂಕಪಟ್ಟಿಯಲ್ಲಿ ಟಾಪ್-2 ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಏಕೆಂದರೆ ಇಂದಿನ ಮ್ಯಾಚ್​ನಲ್ಲಿ ಎಸ್​ಆರ್​ಹೆಚ್ ತಂಡ ಸೋತರೆ ಮುಂದಿನ ಪಂದ್ಯವನ್ನು ಗೆದ್ದರೂ ಕೇವಲ 16 ಅಂಕಗಳನ್ನು ಮಾತ್ರ ಪಡೆಯಲಿದೆ.

ಅತ್ತ ಗುಜರಾತ್ ಟೈಟಾನ್ಸ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೂ 18 ಅಂಕಗಳನ್ನು ಪಡೆಯಲಿದೆ. ಇದರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಂಕ ಪಟ್ಟಿಯಲ್ಲಿ ಟಾಪ್-2 ಸ್ಥಾನಗಳಲ್ಲಿ ಕಾಣಿಸಿಕೊಳ್ಳಲಿದೆ.

ಅಂದರೆ ಇಲ್ಲಿ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಮಾತ್ರ ಇನ್ನುಳಿದಿರುವ ಪಂದ್ಯಗಳ ಮೂಲಕ 18 ಅಂಕಗಳನ್ನು ಗಳಿಸಲು ಅವಕಾಶವಿದೆ.

ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಸಿಎಸ್​ಕೆ ತಂಡ ಜಯ ಸಾಧಿಸಿದರೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಅಂಕ 14 ರಲ್ಲೇ ಉಳಿಯಲಿದೆ. ಇನ್ನು ಕೊನೆಯ ಮ್ಯಾಚ್​ನಲ್ಲಿ ಎಸ್​ಆರ್​ಹೆಚ್ ಗೆದ್ದರೂ 16 ಅಂಕಗಳನ್ನು ಮಾತ್ರ ಹೊಂದಲಿದೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲ್ಲುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಪ್ಲಸ್ ಪಾಯಿಂಟ್. ಏಕೆಂದರೆ ಸಿಎಸ್​ಕೆ ಗೆದ್ದರೆ, 18 ಅಂಕಗಳನ್ನು ಹೊಂದಿರುವ ಆರ್​ಸಿಬಿ ಮೊದಲ ಕ್ವಾಲಿಫೈಯರ್ ಆಡುವುದು ಖಚಿತವಾಗಲಿದೆ.

ಇದನ್ನೂ ಓದಿ: ಹಳೆಯ ದಾಖಲೆ ಧೂಳೀಪಟ… ವೈಭವ್ ಈಗ ‘ಸಿಕ್ಸರ್ ಸುಲ್ತಾನ್’

ಒಂದು ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಇಂದಿನ ಮ್ಯಾಚ್​ನಲ್ಲಿ ಸೋತರೆ, ಎಸ್​ಆರ್​ಹೆಚ್ ತಂಡದ ಅಂಕ 16 ಕ್ಕೇರಲಿದೆ. ಇದರಿಂದ ಆರ್​ಸಿಬಿ ತಂಡವು ಟಾಪ್-2 ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಬೇಕಾದ ಅನಿವಾರ್ಯತೆ ಎದುರಾಗಲಿದೆ.

ಹೀಗಾಗಿ ಇಂದಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆದ್ದರೆ, ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಪ್ಲಸ್ ಪಾಯಿಂಟ್ ಆಗುವುದು ಖಚಿತ.

Source link

Exit mobile version