ಮಹಿಳೆಯ ಅನುಮಾನಾಸ್ಪದ ಸಾವು, ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಂದೆಯ ಎಚ್ಚರಿಕೆ – Kannada News | Father Alleges Planned Crime After Woman Found Dead in Bhopal
ಭೋಪಾಲ್, ಮೇ 18: ಗಂಡನ ಮನೆಯಲ್ಲಿ ಮಹಿಳೆ(Woman) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. 31 ವರ್ಷ ತ್ವಿಶಾ ಸಾವು ಪ್ರಕರಣ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೊಂದು ಯೋಜಿತ ಕೊಲೆ ಎಂದು ಆರೋಪಿಸಿರುವ ತ್ವಿಶಾ ಅವರ ತಂದೆ ನ್ಯಾಯಕ್ಕಾಗಿ ಒತ್ತಾಯಿಸಿ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನಿವಾಸದ ಹೊರಗೆ ಸುಡುವ ಬಿಸಿಲಿನಲ್ಲೇ ಬೃಹತ್ ಪ್ರತಿಭಟನೆ ನಡೆಸಿದರು. ಒಂದೊಮ್ಮೆ ನ್ಯಾಯ ಸಿಗದಿದ್ದರೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ನನ್ನ ಮಗಳ ಸಾವಿಗೆ ನ್ಯಾಯ…