Headlines

Shani Transit in Pisces 2026: ಕರ್ಮಕಾರಕ ಶನಿಯಿಂದ ಕಷ್ಟ ಮಾತ್ರವಲ್ಲ, ಸುಖವೂ ಇದೆ; ಈ ರಾಶಿಗೆ ಅದೃಷ್ಟ – Kannada News | Shani Transit in Pisces 2026: Astrological Impact on Your Zodiac Sign

ಕರ್ಮಕಾರಕ ಶನಿಯಿಂದ ಕಷ್ಟ ಮಾತ್ರವಲ್ಲImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನು‌ ಕರ್ಮ ಫಲವನ್ನು ನೀಡುವವನು ಎಂದು ಪ್ರಸಿದ್ಧ. ಕುಂಡಲಿಯಲ್ಲಿ ಶನಿಯ ಸ್ಥಾನದ ಮೇಲೆ ಉದ್ಯೋಗ, ಉದ್ಯಮಗಳು ತೀರ್ಮಾನವಾಗುತ್ತವೆ. ಅಧಿಕಾರವನ್ನೂ ನೀಡುವನು, ನ್ಯಾಯ ಮಾರ್ಗದಲ್ಲಿ ಹೋಗುವಂತೆ ಮಾಡಿ ನ್ಯಾಯವನ್ನೂ ಕೊಡಿಸುತ್ತಾನೆ. ​​ಮೀನ ಶನಿಗೆ ಸಮ ಕ್ಷೇತ್ರ, ಚಂದ್ರ ದ್ರೇಕ್ಕಾಣ ಶನಿಗೆ ಶತ್ರು ಕ್ಷೇತ್ರ, ರವಿಯ ಹೋರೆ ಶನಿಗೆ ಪರಮ ಶತ್ರುಕ್ಷೇತ್ರ, ಗುರುವಿನ ನವಾಂಶ ಮತ್ತು ತ್ರಿಂಶಾಂಶ ಸಮ/ಮಿತ್ರ ಕ್ಷೇತ್ರ, ಶುಕ್ರನ ದ್ವಾದಶಾಂಶ ಶನಿಗೆ…

Read More

ಪ್ರತ್ಯೇಕ ಘಟನೆ: ಎಸಿ ಹಾಕೊಂಡು ಮಗಿದ್ದಲ್ಲೇ ವ್ಯಕ್ತಿ ಸಾವು; ಅಪಘಾತದಲ್ಲಿ ತಾಯಿ-ಮಗಳು ದುರ್ಮರಣ – Kannada News | Separate Incidents: Man Dies While Sleeping in AC Car; Mother and Daughter Killed in Accident

ತುಮಕೂರು, ಮೇ 18: ಭೀಕರ ರಸ್ತೆ ಅಪಘಾತದಲ್ಲಿ (accident) ತಾಯಿ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ (death) ದಾರುಣ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಬೆಂಗಳೂರು ನಿವಾಸಿಗಳಾದ ಜಯಮಾಲಾ (60) ಮತ್ತು ರಾಜೇಶ್ವರಿ (40) ಎಂದು ಗುರುತಿಸಲಾಗಿದೆ. ಮೂಲತಃ ರಾಯಚೂರು ಜಿಲ್ಲೆಯವರಾದ ಜಯಮಾಲಾ ಅವರು ಹಲವು ವರ್ಷಗಳಿಂದ ಮಗಳು ರಾಜೇಶ್ವರಿಯೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ತಾಯಿ-ಮಗಳು…

Read More

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?

‘ಆರ್​​ಆರ್​​ಆರ್’ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ನಟನೆಯ ಸತತ ಎರಡು ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಗಿವೆ. ‘ಗೇಮ್ ಚೇಂಜರ್’ ಮತ್ತು ‘ಆಚಾರ್ಯ’ ಎರಡೂ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಇದೀಗ ರಾಮ್ ಚರಣ್ ಅವರು ಗೆಲುವಿನ ಹುಡುಕಾಟದಲ್ಲಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಬಹುತೇಕ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ನಿರ್ಮಾಪಕರೊಬ್ಬರು ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿರುವ ಬಗ್ಗೆ ಸುಳಿವು…

Read More

ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು – Kannada News | India’s 2025 Economic Reforms: Modi Govt’s Silent Revolution in Tax, Labor & FDI

2025ರಲ್ಲಿ ಭಾರತದಲ್ಲಿ ಬಹಳ ಮಹತ್ವದ ಆರ್ಥಿಕ ಸುಧಾರಣೆಗಳು ಆಗಿವೆ. ಪ್ರಜಾತಂತ್ರ ದೇಶಗಳಲ್ಲಿ ಇಷ್ಟರ ಪ್ರಮಾಣದಲ್ಲಿ ಮತ್ತು ವೇಗದಲ್ಲಿ ಆರ್ಥಿಕ ಸುಧಾರಣೆಗಳು (economic reforms) ನಡೆಯುವುದನ್ನು ಊಹಿಸಲೂ ಸಾಧ್ಯವಿಲ್ಲ. ಯಾವುದೇ ಸದ್ದಿಲ್ಲದೇ ದೊಡ್ಡ ಸುಧಾರಣೆಗಳನ್ನು ಮಾಡಬಹುದು ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಯುಪಿಎ ಅವಧಿಯಲ್ಲಿ ಘೋಷಣೆಗಳಾಗುತ್ತಿದ್ದವೇ ಹೊರತು ಅದರ ಅನುಷ್ಠಾನ ಅಷ್ಟಕಷ್ಟೇ. ಮೋದಿ ಸರ್ಕಾರ ಸದ್ದಿಲ್ಲದೇ ಕಾರ್ಯಗತಗೊಳಿಸುತ್ತದೆ. ಎರಡು ಸರ್ಕಾರಗಳ ನಡುವೆ ಇರುವ ದೊಡ್ಡ ವ್ಯತ್ಯಾಸ ಇದೆಯೇ. 2014ರಿಂದೀಚೆ ಸರ್ಕಾರ ವಿವಿಧ ಘೋಷಣೆಗಳನ್ನು ಅದೆಷ್ಟು ಅಚ್ಚುಕಟ್ಟಾಗಿ ಜಾರಿಗೆ ತಂದಿತು ಎಂಬುದನ್ನು…

Read More

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು, ಮುಂದೇನು? – Kannada News | Koppal hirehalla reservoir Empty And full dry over Summer temperature

ಕೊಪ್ಪಳ, (ಏಪ್ರಿಲ್ 24): ಕೊಪ್ಪಳ ತಾಲೂಕಿನ ಕಿನ್ನಾಳ ಬಳಿ ಇರೋ ಹಿರೇಹಳ್ಳ ಜಲಾಶಯ (hirehalla reservoir) 1.67 ಟಿಎಮ್ ಸಿ ನೀರು ಸಂಗ್ರಹ ಸಾಮರ್ಥ ಹೊಂದಿದೆ. 20 ಸಾವಿರಕ್ಕೂ ಅಧಿಕ ಎಕರೆ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯೋ ನೀರಿಗಾಗಿ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಈ ಬಾರಿಯ ಬೇಸಿಗೆ ಬಿಸಿಲಿನ ತಾಪಕ್ಕೆ ಹಿರೇಹಳ್ಳ ಜಲಾಶಯ ಬತ್ತಿ ಹೋಗಿದೆ. ಅಲ್ಲದೇ ಬಿಸಿಲಿನ ಹೊಡೆತಕ್ಕೆ ಬರಡು ಭೂಮಿಯಂತಾಗಿದೆ. ಸದ್ಯ ಜಲಾಶಯದಲ್ಲಿ ಕೇವಲ ಶೇಕಡಾ 20 ರಷ್ಟು ನೀರು ಸಂಗ್ರಹವಿದ್ದು,…

Read More

ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಮೊದಲ ಸಿನಿಮಾಗೆ ಪ್ರೀತಂ ಗುಬ್ಬಿ ನಿರ್ದೇಶನ

ಪ್ರೀತಂ ಗುಬ್ಬಿ ನಿರ್ದೇಶನದ ನೂತನ ಚಿತ್ರದ ಮೂಲಕ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಅವರು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಇಶಾ ಲಂಕೇಶ್ ನಟನೆಯ ಈ ಹೊಸ ಚಿತ್ರಕ್ಕೆ ‘ನವಿಶಾ ಫಿಲ್ಮ್ಸ್’ ಬಂಡವಾಳ ಹೂಡಲಿದೆ. ಖ್ಯಾತ ಪತ್ರಕರ್ತ, ಲೇಖಕ ಪಿ. ಲಂಕೇಶ್ ಮೊಮ್ಮಗಳ ಸಿನಿಮಾ ಎಂಬ ಕಾರಣಕ್ಕೆ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ. ಈ ಸಿನಿಮಾವನ್ನು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶಿಸಲಿದ್ದಾರೆ. ‘ನವಿಶಾ ಫಿಲ್ಮ್ಸ್’ ಮೂಲಕ…

Read More

ರಾತ್ರಿ ಪದೇ ಪದೇ ಎಚ್ಚರವಾಗಿ ನಿದ್ರೆ ಸರಿಯಾಗಿ ಬರದಿದ್ದರೆ ತಪ್ಪದೆ ಈ ವಿಟಮಿನ್ ಕೊರತೆಯಾಗಿದೆಯೇ ಪರೀಕ್ಷಿಸಿಕೊಳ್ಳಿ! – Kannada News

ಇತ್ತೀಚಿನ ದಿನಗಳಲ್ಲಿ ಅನೇಕರು ರಾತ್ರಿ ಸರಿಯಾಗಿ ನಿದ್ರೆ ಮಾಡುವುದಿಲ್ಲ. ಇದು ಕೂಡ ಒಂದು ಸಮಸ್ಯೆಯಾಗಿದ್ದು ಹಲವರು ಇದರಿಂದ ಬಳಲುತ್ತಿದ್ದಾರೆ. ನಿದ್ರೆ ತಡವಾಗಿ ಬರುವುದು, ಮಧ್ಯರಾತ್ರಿ ಪದೇ ಪದೇ ಎಚ್ಚರವಾಗುವುದು ಅಥವಾ ಸಾಕಷ್ಟು ಸಮಯ ಮಲಗಿದರೂ ವಿಶ್ರಾಂತಿ ಸಿಗದಿರುವುದು ಸಾಮಾನ್ಯವಾಗಿದೆ. ಹೆಚ್ಚಿನವರು ಇದನ್ನು ಒತ್ತಡ ಅಥವಾ ಬ್ಯುಸಿ ಜೀವನಶೈಲಿಯ ಪರಿಣಾಮ ಎಂದು ಭಾವಿಸುತ್ತಾರೆ. ಆದರೆ ಕೆಲವೊಮ್ಮೆ ದೇಹದಲ್ಲಿನ ಕೆಲವು ಅಗತ್ಯ ವಿಟಮಿನ್‌ಗಳು ಮತ್ತು ಪೋಷಕಾಂಶಗಳ ಕೊರತೆ ಕೂಡ ನಿದ್ರೆಯ ಗುಣಮಟ್ಟವನ್ನು ಹಾಳು ಮಾಡಬಹುದು. ಹೌದು, ನಿದ್ರೆ (Sleep) ಬರದಿರುವುದಕ್ಕೆ…

Read More

ತಾಯಿನೇ ಹೊರ ಹಾಕಿದ ಜಯದೇವ್; ಒಬ್ಬಂಟಿಯಾಗ್ತಾನಾ ವಿಲನ್? – Kannada News | Amruthadhare: Jayadev’s Shocking Downfall Kicks Out Mother Amidst Plot Twists

‘ಅಮೃತಧಾರೆ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​​ಗಳು ಎದುರಾಗುತ್ತಿರುವುದನ್ನು ನೋಡುತ್ತಿರಬಹುದು. ವಿಲನ್ ಜಯದೇವ್ ನಂಬಿ ಹೋದ ಎಲ್ಲರೂ ಬೀದಿಗೆ ಬೀಳುವುದು ಪಕ್ಕಾ ಆಗಿದೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ ಎಂದೇ ಹೇಳಬಹುದು. ಆತ ತನ್ನ ಸ್ವಂತ ತಾಯಿಯನ್ನೇ ಹೊರಹಾಕಿದ್ದಾನೆ. ಈ ಬೆಳವಣಿಗೆ ಧಾರಾವಾಹಿ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಜಯದೇವ್​​ಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಆತ ದೀವಾನ್ ಕಂಪನಿ ಲೋಗೋ ತನ್ನದು ಎಂದು ಹೇಳಿಕೊಂಡಿದ್ದ. ಆದರೆ, ಇದು ಗೌತಮ್ ಹೆಸರಲ್ಲಿ ನೋಂದಣಿ ಆಗಿತ್ತು. ತಂದೆ ಈ ಕೆಲಸ ಮಾಡಿದ್ದ. ಈ…

Read More

IND vs WI: 15 ಮಂದಿಯಲ್ಲಿ ಯಾರಿಗೆ ಸಿಗಲಿದೆ ಚಾನ್ಸ್​ – Kannada News | T20 World Cup 2026: Predicted India Playing XI vs West Indies

T20 World Cup 2026: ಟಿ20 ವಿಶ್ವಕಪ್​ ಸೂಪರ್-8 ಸುತ್ತಿನ ಕೊನೆಯ ಲೀಗ್​ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಾಳೆ (ಮಾ.1) ನಡೆಯಲಿರುವ ಈ ಪಂದ್ಯದಲ್ಲಿ ಕಣಕ್ಕಿಳಿಯುವವರು ಯಾರು ಎಂಬುದೇ ಪ್ರಶ್ನೆ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲಿದೆ. ಹೀಗಾಗಿ ಭಾರತ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಬೇಕು. ಅದರಂತೆ ಈ ಮ್ಯಾಚ್​ನಲ್ಲೂ ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ…

Read More

ಪುರುಷರಿಗಿಂತ ದುರ್ಬಲರೆಂದು ಭಾವಿಸುತ್ತಾರೆ: ಋತುಚಕ್ರ ರಜೆ ಆದೇಶ ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಮಹಿಳೆಯರು

ಬೆಂಗಳೂರು, ಮಾರ್ಚ್​ 26: ರಾಜ್ಯ ಸರ್ಕಾರ ಮಹಿಳಾ ನೌಕರರ ಆರೋಗ್ಯ ಮತ್ತು ಕಾರ್ಯದಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಋತುಚಕ್ರ ರಜೆ (Menstrual Leave) ಸೌಲಭ್ಯವನ್ನು ನೀಡಿದೆ. ಈ ಬಗ್ಗೆ ಇತ್ತೀಚೆಗೆ ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದರು. ಈ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರದ ಮೂಲಕ ಮನವಿ ಮಾಡಲಾಗಿತ್ತು. ಈ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ ಋತುಚಕ್ರ ರಜೆ ಪ್ರಶ್ನಿಸಿ ವಿವಿಧ ಕಂಪನಿಗಳ ಮಹಿಳಾ ಉದ್ಯೋಗಿಗಳಿಂದಲೇ ಹೈಕೋರ್ಟ್‌ಗೆ (High Court) ರಿಟ್ ಅರ್ಜಿ ಸಲ್ಲಿಸಲಾಗಿದ್ದು,…

Read More