Headlines

ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!

ಬೆಂಗಳೂರು, (ಮೇ 17): ಇನ್ನೇನು ಬೇಸಿಗೆ ಕಳೆದು ಮಳೆಗಾಲ ಶುರುವಾಗಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಅಧಿಕಾರಿಗಳಿಗೆ ಮಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೀಡಲಾಗಿದೆ. ಆದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಹೌದು..ನಗರದ ಹಲವು ಏರಿಯಾಗಳಲ್ಲಿ ಅಪಾಯಕಾರಿ ಮರಗಳು ಜನರನ್ನು ಬಲಿಪಡೆಯಲು ಕಾದು ಕುಳಿತಿವೆ. ರಾಜಾಜಿನಗರದ 13ನೇ ಮುಖ್ಯ ರಸ್ತೆಯಲ್ಲಿ ಮರದ ಕೊಂಬೆಗಳು ನೇತಾಡುತ್ತಿದ್ದು, ಯಾವಾಗ ಬೀಳುತ್ತೋ ಎನ್ನುವ ಭಯದಲ್ಲಿ ಓಡಾಡುವಂತಾಗಿದೆ. ಈ ಬಗ್ಗೆ ಸ್ಥಳೀಯರು ಸಹ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ…

Read More

ಹುಬ್ಬಳ್ಳಿಯಲ್ಲೊಂದು ಕರುಳು ಹಿಂಡುವ ಘಟನೆ: ಮಗನ ಜೀವ ಉಳಿಸಲು ಕಿವಿಯೋಲೆ ಮಾರಿದ ತಾಯಿ – Kannada News | Bone Marrow Transplant: Hubballi Mother Sells Earrings to Save Son’s Life

ಹುಬ್ಬಳ್ಳಿ, ಮೇ 17: ಕಿತ್ತು ತಿನ್ನುವ ಬಡತನ ಒಂದೆಡೆ, ಮಗನಿಗೆ ಬಂದಿರೋ ಮಹಾಮಾರಿ ರೋಗ ಮತ್ತೊಂದೆಡೆ. ಖಾಸಗಿ ಆಸ್ಪತ್ರೆಗೆ ಕೊಡಲು ಲಕ್ಷ ಲಕ್ಷ ಹಣವಿಲ್ಲದೇ ಹೆತ್ತ ತಾಯಿ (Mother) ತನ್ನ ಕಿವಿಯೋಲೆಯನ್ನೇ ಮಾರಿ ಮಗನನ್ನ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಹುಬ್ಬಳ್ಳಿ (Hubballi) ಕಿಮ್ಸ್‌ನಲ್ಲಿ ಕಣ್ಣೀರು ಹಾಕುತ್ತಾ ಪರದಾಟ ನಡೆಸಿರುವ ತಾಯಿಯನ್ನ ನೋಡಿದರೆ ಯಾರಿಗಾದರೂ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡುತ್ತವೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಈ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಗಿದೆ. ಮುಖ್ಯಾಂಶಗಳು 11 ವರ್ಷದ ಬಾಲಕನಿಗೆ ಬೋನ್ ಮ್ಯಾರೋ ಸಮಸ್ಯೆ…

Read More

PBKS vs RCB: ಪಂಜಾಬ್ ಮಣಿಸಿ ಅಧಿಕೃತವಾಗಿ ಪ್ಲೇಆಫ್​ಗೇರಿದ ಆರ್​ಸಿಬಿ – Kannada News | RCB Dominates Punjab Kings in IPL 2026 Match 61: 222 Runs Secure Playoff Race

ಐಪಿಎಲ್ 2026 ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಕಳೆದ ಬಾರಿಯ ಫೈನಲಿಸ್ಟ್​ಗಳ ನಡುವಿನ ಪಂದ್ಯವಾಗಿದ್ದರಿಂದ ಸಾಕಷ್ಟು ನಿರೀಕ್ಷೆಗಳಿದ್ದವು. ಒಂದೆಡೆ ಆರ್​ಸಿಬಿಗೆ ಪ್ಲೇಆಫ್‌ ಟಿಕೆಟ್ ಪಡಿಸಿಕೊಳ್ಳುವ ಇರಾದೆಯಿದ್ದರೆ, ಇತ್ತ ಪಂಜಾಬ್​ಗೆ ಕಳೆದ ಫೈನಲ್​ಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಪ್ಲೇಆಫ್‌ ರೇಸ್​ನಲ್ಲಿ ಜೀವಂತವಾಗಿರಲು ಈ ಪಂದ್ಯದ ಗೆಲುವು ಅತ್ಯವಶ್ಯಕವಾಗಿತ್ತು. ಆದರೆ ಈ ಪಂದ್ಯದಲ್ಲಿ ಕಳೆದ ಬಾರಿಯ ಫೈನಲ್ ಫಲಿತಾಂಶವನ್ನು ಪುನರಾವರ್ತಿಸಿದ ಆರ್​ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸುವ ಮೂಲಕ ತನ್ನ…

Read More

ದರ್ಶನ್ ಜೈಲು ಡೈರಿ: ಬಹಿರಂಗವಾಯ್ತು ಹಲವು ಮಾಹಿತಿ – Kannada News | Darshan Jail Dairy details here is how many he met his family members

ನಟ ದರ್ಶನ್ (Darshan)​​, ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಇತ್ತೀಚೆಗಷ್ಟೆ ಜಾಮೀನಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಆದರೆ ದರ್ಶನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್, ಇನ್ನೂ ಒಂದು ವರ್ಷಗಳ ಕಾಲ ದರ್ಶನ್​​ಗೆ ಜೈಲು ಖಾಯಂ ಆಗುವಂತೆ ಮಾಡಿದೆ. ಸುಪ್ರೀಂಕೋರ್ಟ್​​ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಸಿದ್ದ ದರ್ಶನ್, ಅರ್ಜಿಯಲ್ಲಿ ಜೈಲಿನ ಅವ್ಯವಸ್ಥೆಗಳ ಬಗ್ಗೆ ಹೇಳಿಕೊಂಡಿದ್ದರು. ಕುಟುಂಬದ ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ ಎಂಬುದು ಸಹ ಅವುಗಳಲ್ಲಿ ಒಂದಾಗಿತ್ತು. ಆರೋಪಕ್ಕೆ ಪ್ರತಿಯಾಗಿ ಜೈಲಧಿಕಾರಿಗಳು ದರ್ಶನ್…

Read More

ರಷ್ಯಾದ ಮಾಸ್ಕೋ ಮೇಲೆ ಉಕ್ರೇನ್ ಭಾರಿ ಡ್ರೋನ್ ದಾಳಿ: ಒಬ್ಬ ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ – Kannada News | Ukraine drone attacks in Moscow kill one indian and injures 3 others

ಉಕ್ರೇನ್ ಭಾರಿ ಡ್ರೋನ್ ದಾಳಿImage Credit source: AI/Mediaforge/TV9 ನವದೆಹಲಿ, ಮೇ 17: ಉಕ್ರೇನ್ ಸೈನ್ಯವು ರಷ್ಯಾದ ರಾಜಧಾನಿ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ (Ukraine drone attack) ಮಾಡಿದೆ. ಇತ್ತೀಚಿನ ದಿನಗಳಲ್ಲೇ ಅತಿ ದೊಡ್ಡದಾದ ಜಂಟಿ ಡ್ರೋನ್ ದಾಳಿ ಇದಾಗಿದೆ. ರಷ್ಯಾದ ವಾಯು ರಕ್ಷಣಾ ಪಡೆಗಳು (Russian defence forces) ನೂರಾರು ಡ್ರೋನ್‌ಗಳನ್ನು ಹೊಡೆದುರುಳಿಸಿದೆಯಾದರೂ, ಕೆಲವು ಡ್ರೋನ್‌ಗಳು ಜನವಸತಿ ಪ್ರದೇಶಗಳು ಮತ್ತು ಮೂಲಸೌಕರ್ಯಗಳ ಮೇಲೆ ಬಿದ್ದಿವೆ. ಈ ಭೀಕರ ದಾಳಿಯಲ್ಲಿ ಒಬ್ಬ…

Read More

ಪಾನಿಪುರಿಯಲ್ಲಿ ಮೂಳೆ ಪತ್ತೆ; ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಿದ್ದ ಯುವತಿಗೆ ಶಾಕ್ – Kannada News | Bone found in Panipuri at Ahmedabad

ಅಹಮದಾಬಾದ್‌, ಮೇ 17: ಪಾನಿಪುರಿ ಅಂದ್ರೆ ಎಲ್ಲರಿಗೂ ಇಷ್ಟನೇ. ಮಕ್ಕಳಿಂದ ಹಿಡಿದು ದೊಡ್ಡವವರೆಗೂ ಬಾಯಿಚಪ್ಪರಿಸಿಕೊಂಡು ತಿಂತಾರೆ. ಆದರೆ ಈ ಸ್ಟೋರಿ ಓದಿದ್ರೆ ನೀವು ಪಾನಿಪುರಿ ತಿನ್ನೋಕೆ ಹೋಗಲ್ಲ. ಹೌದು, ಅಹಮದಾಬಾದ್‌ನ (Ahmedabad) ರಾಣಿಪ್ ಪ್ರದೇಶದಲ್ಲಿ ಕೃಷ್ಣ ಪಾನಿಪುರಿ ತಿನ್ನುತ್ತಿದ್ದ ಯುವತಿಯೊಬ್ಬಳಿಗೆ ಪಾನಿಪುರಿಯೊಳಗೆ ಮೂಳೆಯ ತುಣುಕು ಪತ್ತೆಯಾಗಿದೆ. ಇದನ್ನು ನೋಡಿ ಯುವತಿ ಶಾಕ್ ಆಗಿದ್ದು, ಅಂಗಡಿ ಮಾಲೀಕನನ್ನು ಪ್ರಶ್ನಿಸಿದ್ದಾಳೆ. ಈ ಘಟನೆಯ ಸಂಬಂಧಿತ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೀದಿ ಆಹಾರದ ಸ್ವಚ್ಛತೆ ಹಾಗೂ ಗುಣಮಟ್ಟದ ಬಗ್ಗೆ ಪ್ರಶ್ನೆ ಹುಟ್ಟುಹಾಕಿದೆ….

Read More

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ, ಎಲ್ಲೆಲ್ಲಿ? – Kannada News | Karnataka Weather Forecast: Heavy Rain, Thunderstorms Likely Across State for Next 7 Days; Bengaluru on Alert

ಬೆಂಗಳೂರು, ಮೇ 17: ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ವಾತಾವರಣದಲ್ಲಿ ಭಾರಿ ಏರುಪೇರಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ (IMD) ನೀಡಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 35°C ಮತ್ತು ಕನಿಷ್ಠ ತಾಪಮಾನ 24°C ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಮುಖ್ಯಾಂಶಗಳು ಬೆಂಗಳೂರು ಹಾಗೂ ದಕ್ಷಿಣ ಒಳನಾಡಿಗೆ ಭಾರಿ ಮಳೆ ಮುನ್ಸೂಚನೆ ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದ ಹವಾಮಾನ…

Read More

ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ಬಳಿಕ ನಾಟಕವಾಡಿದ್ದ ತಂದೆಯ ಅಸಲಿ ಮುಖ ಬಯಲು – Kannada News | Tumakuru honor killing case: father arrested for kills daughter over Love

ತುಮಕೂರು (ಮೇ 17): ಮಗಳ  ಪಾಲಿಗೆ ತಂದೆಯೇ (Father) ಕಾಲಾಂತಕನಾದ ಘೋರ ಘಟನೆಯೊಂದು ತುಮಕೂರು (Tumakuru) ಜಿಲ್ಲೆಯ ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.  ಹೌದು.. ಪ್ರೀತಿಯ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಂದೆ, ತನ್ನ 17 ವರ್ಷದ ಮಗಳನ್ನು (daughter) ಹತ್ಯೆ ಮಾಡಿ ಹಳ್ಳದಲ್ಲಿ ಹೂತು ಹಾಕಿದ್ದ ಆತಂಕಕಾರಿ ವಿಷಯ ಬಯಲಾಗಿದೆ. ಕೊಲೆಯಾದ ಯುವತಿಯನ್ನು ಮೇಘನಾ (17) ಎಂದು ಗುರುತಿಸಲಾಗಿದೆ. ಈಕೆಯ ತಂದೆ ತಿಮ್ಮರಾಯಪ್ಪ (48) ಎಂಬಾತನೇ ಈ ಭೀಕರ ಕೃತ್ಯ ಎಸಗಿದ ಹಂತಕ….

Read More

PBKS vs RCB: ಐತಿಹಾಸಿಕ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್ – Kannada News | IPL 2026: RCB Dominates PBKS as Kohli, Venkatesh Iyer Shine; Shreyas Iyer’s 100th Match Disappointment

ಐಪಿಎಲ್ 2026 ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 222 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪವರ್​ ಪ್ಲೇನಲ್ಲಿಯೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಅದರಲ್ಲೂ ಐಪಿಎಲ್‌ನಲ್ಲಿ 100ನೇ ಪಂದ್ಯವನ್ನಾಡುತ್ತಿದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್​ಗೆ ಈ ಪಂದ್ಯ ಐತಿಹಾಸಿಕವಾಗಿತ್ತು. ಆದರೆ…

Read More

ಮಗನ ‘ಪೆದ್ದಿ’ ಸಿನಿಮಾ ಸೆಟ್​ನಲ್ಲಿ ಅರ್ಧ ಗಂಟೆಯೂ ಇರಲಾಗಲಿಲ್ಲ ಚಿರಂಜೀವಿಗೆ: ಕಾರಣ? – Kannada News | Peddi director said Chiranjeevi could not stay for half hour in Peddi set

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾದ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ರಾಮ್ ಚರಣ್ ಜೊತೆಗೆ ಜಾನ್ಹವಿ ಕಪೂರ್ ನಟಿಸಿದ್ದು, ಸಿನಿಮಾ ಅನ್ನು ನಿರ್​ದೇಶಕ ಬುಚ್ಚಿ ಬಾಬು ಸನಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಪ್ರಚಾರ ಈಗಾಗಲೇ ಆರಂಭವಾಗಿದ್ದು, ಬುಚ್ಚಿ ಬಾಬು ಸನಾ, ಇತ್ತೀಚೆಗಿನ ಸಂದರ್ಶನವೊಂದರಲ್ಲಿ ‘ಪೆದ್ದಿ’ ಸಿನಿಮಾ ಶೂಟಿಂಗ್ ಬಗ್ಗೆ ಮಾತನಾಡಿದ್ದರು. ಆ ವೇಳೆ ಮೆಗಾಸ್ಟಾರ್ ಚಿರಂಜೀವಿ ಅವರು ಸೆಟ್​​ಗೆ ಬಂದಿದ್ದರಾದರೂ ಅವರಿಗೆ ಅರ್ಧ ಗಂಟೆ ಸಹ ಸೆಟ್​​ನಲ್ಲಿ ಇರಲಾಗಲಿಲ್ಲ ಎಂದರು. ಅವರೇ…

Read More