Horoscope Today 14 January : ಇಂದು ಈ ರಾಶಿಯವರ ಭಾವನೆಗೆ ತೊಂದರೆಯಾಗಲಿದೆ
ಮೇಷ ರಾಶಿ: ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ನಿಮ್ಮ ರಕ್ಷಣೆಯನ್ನು ನೀವೇ ಮಾಡಿಕೊಳ್ಳಬೇಕು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ. ಎಲ್ಲದಕ್ಕೂ ಕೂಡಲೇ ಉತ್ತರವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ನಿಮ್ಮ ಅಧಿಕಾರದ ಮಾತುಗಳು ಅಹಂಕಾರದ ಮಾತಾಗುವುದು. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ನಿಂದನೆಯನ್ನು ಸಹಜದಂತೆ ಸ್ವೀಕರಿಸುವಿರಿ. ವೃಷಭ…