Headlines

‘ಧುರಂಧರ್ 2’ ಬಾಕ್ಸ್ ಆಫೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News | Ranveer Singh Dhurandhar 2 Box Office Collection slows down after Bhooth Bangla release

ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ಸ್ಪೈ ಥ್ರಿಲ್ಲರ್ ‘ಧುರಂಧರ್ 2’ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ಇತಿಹಾಸ ಬರೆದಿದೆ. ಆದರೆ ಬಿಡುಗಡೆಯಾದ ಮೊದಲ ನಾಲ್ಕು ವಾರಗಳ ಕಾಲ ಅಡೆತಡೆಯಿಲ್ಲದೆ ಸಾಗಿದ್ದ ಈ ಚಿತ್ರದ ಓಟಕ್ಕೆ ಈಗ ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಅಡ್ಡಿಯಾದಂತೆ ತೋರುತ್ತಿದೆ. ಹೌದು, ‘ಭೂತ್ ಬಂಗ್ಲ’ ಬಿಡುಗಡೆ ಆದ ಬಳಿಕ ‘ಧುರಂಧರ್ 2’ (Dhurandhar 2) ಸಿನಿಮಾದ ಕಲೆಕ್ಷನ್ ಗಣನೀಯವಾಗಿ ಕುಸಿದಿದೆ….

Read More

ಬಿಡುಗಡೆ ಆಗಲಿಲ್ಲ ‘ಕರುಪ್ಪು’ ಸಿನಿಮಾ, ಕಣ್ಣೀರು ಹಾಕಿದ ನಿರ್ದೇಶಕ ಬಾಲಾಜಿ – Kannada News | Suriya’s Karuppu movie release cancel director cried and asked apology

ಸೂರ್ಯ (Suriya), ತ್ರಿಷಾ ಕೃಷ್ಣನ್ (Trisha Krishnan) ನಟನೆಯ ಬಹುನಿರೀಕ್ಷಿತ ‘ಕರುಪ್ಪು’ ಸಿನಿಮಾ ಇಂದು (ಮೇ 14) ಬಿಡುಗಡೆ ಆಗಬೇಕಿತ್ತು. ಸೂರ್ಯ ಅಭಿಮಾನಿಗಳು ಮುಂಗಡವಾಗಿ ಟಿಕೆಟ್ ಖರೀದಿ ಮಾಡಿ ಸಿನಿಮಾ ನೋಡಲು ಕಾದಿದ್ದರು, ಆದರೆ ಸಿನಿಮಾ ಬಿಡುಗಡೆ ಆಗಲಿಲ್ಲ. ಆರ್ಥಿಕ ಸಂಕಷ್ಟದ ಕಾರಣದಿಂದಾಗಿ ಸಿನಿಮಾ ಬಿಡುಗಡೆ ವಿಳಂಬ ಆಗಿದೆ. ಚಿತ್ರತಂಡವು ಬೆಳಿಗ್ಗೆ 9 ಗಂಟೆಯ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿತ್ತು. ಮತ್ತು ಉಳಿದ ಪ್ರದರ್ಶನಗಳು ನಿಗದಿತ ಸಮಯಕ್ಕೆ ನಡೆಯಲಿವೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಬಳಿಕ ಮಧ್ಯಾಹ್ನದ ಪ್ರದರ್ಶನಗಳು…

Read More

ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು – Kannada News | Bengaluru tragedy: Child dies after bricks fall from an under construction building

ಬೆಂಗಳೂರು, ಡಿಸೆಂಬರ್​ 18: ನಿರ್ಮಾಣ ಹಂತದ ಕಟ್ಟಡದ 4ನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಮಗು (child) ಸಾವನ್ನಪ್ಪಿರುವಂತಹ (death) ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್‌ಎಎಲ್‌ನ ಚಿನ್ನಪ್ಪನಹಳ್ಳಿಯಲ್ಲಿ ಸಂಭವಿಸಿದೆ. ಶ್ರೀಶೈಲ್ ಎಂಬುವವರ ಪುತ್ರಿ ಮನುಶ್ರೀ ಅಲಿಯಾಸ್ ಪಾರು(4) ಸಾವನ್ನಪ್ಪಿರುವ ಮಗು. ಮತ್ತಿಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್‌ಎಎಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ವಿಜಯಪುರ ಜಿಲ್ಲೆಯವರು. ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲಿ ಸಿಮೆಂಟ್ ಶೀಟ್​​ನ ಶೆಡ್‌ನಲ್ಲಿ ಕುಟುಂಬ ವಾಸವಾಗಿತ್ತು. ಗಾಯಾಳು ಮಕ್ಕಳಾದ ಶ್ರಿಯನ್ (6)…

Read More

ಐಪಿಎಲ್​ ಆಟಗಾರರಿಗೆ ಎಚ್ಚರಿಕೆ: ಸ್ಮಾರ್ಟ್​ ಗ್ಲಾಸ್ ನಿಷೇಧ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಸಮಗ್ರತೆ ಮತ್ತು ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಬಿಸಿಸಿಐ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರದಂತೆ ಇನ್ಮುಂದೆ ಐಪಿಎಲ್ ಆಟಗಾರರು ಹಾಗೂ ಸಿಬ್ಬಂದಿಗಳು ಕ್ರೀಡಾಂಗಣದ ಪ್ರದೇಶಗಳಲ್ಲಿ ಯಾವುದೇ ರೀತಿಯ ಸ್ಮಾರ್ಟ್ ಗ್ಲಾಸ್ ಬಳಸುವಂತಿಲ್ಲ. ಪ್ರಸ್ತುತ ಟೂರ್ನಿಯಿಂದಲೇ ಸ್ಮಾರ್ಟ್ ಗ್ಲಾಸ್  ಅಥವಾ  ಹೈ-ಟೆಕ್ ಗ್ಲಾಸ್ ಧರಿಸದಂತೆ ಆಟಗಾರರಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಹೀಗಾಗಿ ಇನ್ಮುಂದೆ ಐಪಿಎಲ್​ ವೇಳೆ ಸ್ಮಾರ್ಟ್ ಗ್ಲಾಸ್ ಧರಿಸಲು ಅವಕಾಶ ಇರುವುದಿಲ್ಲ. ಈ ನಿಷೇಧಕ್ಕೆ ಕಾರಣವೇನು? ಸ್ಮಾರ್ಟ್…

Read More

SECL Apprentice Recruitment 2026: 1600 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪದವೀಧರರಿಗೆ ಸುವರ್ಣವಕಾಶ

ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (SECL) ಅಪ್ರೆಂಟಿಸ್ ಹುದ್ದೆಗಳಿಗೆ ದೊಡ್ಡ ನೇಮಕಾತಿ ಅಭಿಯಾನವನ್ನು ಘೋಷಿಸಿದೆ. ಈ ಅಭಿಯಾನವು ಒಟ್ಟು 1,600 ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಎಂಜಿನಿಯರಿಂಗ್ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಅವಕಾಶಗಳನ್ನು ನೀಡುತ್ತದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 31 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಪ್ರತಿಷ್ಠಿತ PSU ನಲ್ಲಿ ಕೆಲಸದ ಅನುಭವವನ್ನು ಪಡೆಯಬಹುದು. ಪದವೀಧರರು ಮತ್ತು ಡಿಪ್ಲೊಮಾ ಪಡೆದವರಿಗೆ ಪ್ರತ್ಯೇಕ ಹುದ್ದೆಗಳು: ಈ ನೇಮಕಾತಿಯನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲ ವರ್ಗವು ಪದವೀಧರ ಅಪ್ರೆಂಟಿಸ್‌ಗಳಿಗೆ…

Read More

ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ಸಜ್ಜಾಗುತ್ತಿದೆ ವಿಧಾನಸೌಧ: ಹೇಗಿದೆ ಗೊತ್ತಾ ಸಿದ್ಧತೆ?

ಬೆಂಗಳೂರು, ಮೇ 29: ಕರ್ನಾಟಕದ ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಅಧಿಕಾರಿಗಳಿಗೆ ಈಗಾಗಲೇ ಅಗತ್ಯ ಸೂಚನೆಗಳನ್ನು ನೀಡಲಾಗಿದ್ದು, ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್​​ ಕುಮಾರ್ ಸಿಂಗ್ ನೇತೃತ್ವದಲ್ಲಿ ಮಹತ್ವದ ಭದ್ರತಾ ಸಭೆ ನಡೆದಿದ್ದು, ಬಂದೋಬಸ್ತ್‌ಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಹಿನ್ನೆಲೆ, ನಾಳೆ ಸಂಜೆ 4 ಗಂಟೆಗೆ ಕಾಂಗ್ರೆಸ್​​ ಶಾಸಕಾಂಗ ಪಕ್ಷದ…

Read More

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ

ತುಮಕೂರು, (ಮೇ 28): ಸಿದ್ದರಾಮಯ್ಯ (Siddaramaiah) ರಾಜೀನಾಮೆ ನೀಡಿದ್ದು, ಡಿಕೆ ಶಿವಕುಮಾರ್ (DK Shivakumar) ಮುಂದಿನ ಸಿಎಂ ಎನ್ನುವುದು ಖಚಿತವಾಗಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ಆದ ಬೆಳವಣಿಗೆಗಳ ಬಗ್ಗೆ ಡಿಕೆ ಶಿವಕುಮಾರ್ ಬಹುವಾಗಿ ನಂಬುವ ನೊಣವಿನಕೆರೆ ಮಠದ (Nonavinakere Swamiji) ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಡಿಕೆಶಿ ಸಿಎಂ ಆಗುವ ಬಗ್ಗೆ ಭವಿಷ್ಯ ನುಡಿದಿದ್ದರು.  ಅದರಂತೆ ಇದೀಗ ಸ್ವಾಮೀಜಿಯ ಭವಿಷ್ಯ ನಿಜವಾಗಿದೆ. ಇನ್ನು ಇತ್ತ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಸ್ವಾಮೀಜಿ, ಡಿಕೆ ಶಿವಕುಮಾರ್ ಬಗ್ಗೆ ಕೆಲ…

Read More

ಲಕ್ನೋ ಕೋಚಿಂಗ್ ಸೆಂಟರ್​​ನ ಬೆಂಕಿ ದುರಂತದಲ್ಲಿ ಮೂವರು ಸಾವು; ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು – Kannada News | Fire accident at Lucknow coaching centre 3 dead students jumped from building to escape

ಲಕ್ನೋ, ಜೂನ್ 22: ಉತ್ತರ ಪ್ರದೇಶದ ಲಕ್ನೋದ ಅಲಿಗಂಜ್ ಪ್ರದೇಶದಲ್ಲಿರುವ 3 ಅಂತಸ್ತಿನ ಕಮರ್ಷಿಯಲ್ ಕಾಂಪ್ಲೆಕ್ಸ್​​ನಲ್ಲಿ ಇಂದು ಮಧ್ಯಾಹ್ನ ಭೀಕರ ಬೆಂಕಿ ಅವಘಡ (Fire Accident) ಸಂಭವಿಸಿದೆ. ಈ ದುರಂತದಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಕಟ್ಟಡದಲ್ಲಿ ಕೋಚಿಂಗ್ ಸೆಂಟರ್ ಮತ್ತು ಗೇಮಿಂಗ್ ಜೋನ್ ಇತ್ತು. ಬೆಂಕಿ ಮತ್ತು ದಟ್ಟ ಹೊಗೆಯಿಂದ ಪಾರಾಗಲು ವಿದ್ಯಾರ್ಥಿಗಳು ಕಟ್ಟಡದ ಕಿಟಕಿಗಳಿಂದ ಜಿಗಿದು ಪ್ರಾಣ ಉಳಿಸಿಕೊಂಡಿರುವ ದೃಶ್ಯಗಳು ಎದೆ ನಡುಗಿಸುವಂತಿವೆ. ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ಆರಿಸಲು ಪ್ರಯತ್ನಿಸುತ್ತಿವೆ. ಬೆಂಕಿ ಇಡೀ ಕಟ್ಟಡವನ್ನು…

Read More

ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್ – Kannada News | Donald Trump announces trade deal with India after talks with PM Modi tariffs lowered to 18 percent

ನವದೆಹಲಿ, ಫೆಬ್ರವರಿ 2: ತನ್ನ ಆಪ್ತ ಸ್ನೇಹಿತನಾದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಫೋನ್​ನಲ್ಲಿ ಮಾತುಕತೆ ನಡೆಸಿದ ಅಮೆರಿಕ ಅಧ್ಯಕ್ಷ ಸರ್​ಪ್ರೈಸ್​ ನೀಡಿದ್ದಾರೆ. ಭಾರತ ಯುರೋಪ್ ಮತ್ತು ಅರಬ್ ಲೀಗ್ ಟ್ರೇಡ್ ಲೀಗ್ ಮಾಡಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಡೊನಾಲ್ಡ್ ಟ್ರಂಪ್ ಭಾರತದ ಜೊತೆಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಭಾರತದ ಮೇಲೆ ಹೇರಲಾಗಿದ್ದ ದುಬಾರಿ ಸುಂಕವನ್ನು ಕಡಿಮೆ ಮಾಡಿದ್ದು, ಶೇ. 25ರಷ್ಟಿದ್ದ ಸುಂಕವನ್ನು ಶೇ. 18ಕ್ಕೆ ಇಳಿಸಿದ್ದಾರೆ. ಭಾರತದ ಪಾಲಿಗೆ ಅಮೆರಿಕದ ಈ ನಿರ್ಧಾರ ಬಹಳ ಮಹತ್ವದ್ದಾಗಿದೆ. Published…

Read More

‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್ – Kannada News | Mark Movie Fans Reaction I Can watch Sudeep Movie 10 times Says Sudeep

‘ಮಾರ್ಕ್’ ಸಿನಿಮಾ ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಚಿತ್ರ ಹೇಗಿದೆ ಎಂಬುದರ ಬಗ್ಗೆ ರಿಯಾಕ್ಷನ್ ಕೊಡುತ್ತಾ ಇದ್ದಾರೆ. ‘ಈ ಚಿತ್ರ 10 ಬಾರಿ ಸಿನಿಮಾ ನೋಡಿದರೂ ಬೇಸರ ಬರಲ್ಲ’ ಎಂದಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಟ್ವಿಸ್ಟ್​​ಗಳು ಇವೆ ಎಂದು ಕೂಡ ಸುದೀಪ್ ಅಭಿಮಾನಿಗಳು ಅಭಿಪ್ರಾಯ ಹೊರಹಾಕಿದ್ದಾರೆ. ಈ ಚಿತ್ರ ಒಟ್ಟಾರೆ ಗಮನ ಸೆಳೆಯುವ ರೀತಿಯಲ್ಲಿ ಇದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More