Bengaluru Air Quality: ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ! – Kannada News | Bengaluru Air Quality Index Today: City Records Moderate AQI, Madikeri Cleanest

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ

ಬೆಂಗಳೂರು, ಮೇ 17: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟದ ನಡುವೆಯೇ ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AQI) ಗಮನಾರ್ಹ ಬದಲಾವಣೆಗಳು ಕಂಡುಬಂದಿವೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಬಿಡುಗಡೆ ಮಾಡಿರುವ ಇಂದಿನ ವರದಿಯ ಪ್ರಕಾರ, ಸಿಲಿಕಾನ್ ಸಿಟಿ ಬೆಂಗಳೂರಿನ ಒಟ್ಟಾರೆ ವಾಯು ಗುಣಮಟ್ಟವು ಸಾಧಾರಣ ವಲಯದಲ್ಲಿದೆ. ಆದರೆ ಗದಗ ಮತ್ತು ಮಡಿಕೇರಿಯ ವಾಯು ಗುಣಮಟ್ಟ ಉತ್ತಮವಾಗಿದೆ.

ಮುಖ್ಯಾಂಶಗಳು

  • ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟವು ಇಂದು 75 AQI ದಾಖಲಾಗಿದೆ
  • ಮಡಿಕೇರಿ ಮತ್ತು ಗದಗದ ಗಾಳಿ ಅತ್ಯಂತ ಆರೋಗ್ಯಕರ ಹಾಗೂ ಸ್ವಚ್ಛವಾಗಿದೆ
  • ಜಯನಗರದಲ್ಲಿ ಅತ್ಯಧಿಕ ಮಾಲಿನ್ಯವಿದ್ದು, ಉಸಿರಾಟದ ಸಮಸ್ಯೆಯಿದ್ದವರು ಮಾಸ್ಕ್ ಧರಿಸುವುದು ಸೂಕ್ತ

ಬೆಂಗಳೂರಿನ ಎಕ್ಯೂಐ ಹೇಗಿದೆ?

ಇಂದು ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು 75 AQI ದಾಖಲಾಗಿದೆ. ನಗರದ ಪ್ರಮುಖ ಗಾಳಿ ಮಾಲಿನ್ಯಕಾರಕಗಳಾದ PM2.5 ಮತ್ತು PM10 ಕ್ರಮವಾಗಿ 44 µg/m³ ಮತ್ತು 54 µg/m³ ಮಟ್ಟದಲ್ಲಿದ್ದು, ನಿಯಂತ್ರಣದಲ್ಲಿದೆ.

ಆದಾಗ್ಯೂ, ನಗರದ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ವ್ಯತ್ಯಾಸವಾಗಿದೆ. ಜಯನಗರ 5ನೇ ಬ್ಲಾಕ್ ಭಾಗದಲ್ಲಿ ಅತ್ಯಧಿಕ ಅಂದರೆ 134 AQI ದಾಖಲಾಗುವ ಮೂಲಕ ಕಳಪೆ (Poor) ವಿಭಾಗಕ್ಕೆ ಸೇರಿದರೆ, ಬಿಡಬ್ಲ್ಯೂಎಸ್ಎಸ್‌ಬಿ ಕಾಡುಬೀಸನಹಳ್ಳಿ ಭಾಗದಲ್ಲಿ ಅತ್ಯಂತ ಕಡಿಮೆ ಅಂದರೆ 91 AQI ದಾಖಲಾಗಿದೆ. ನಿನ್ನೆ ನಗರದ ಒಟ್ಟಾರೆ ಮಾಲಿನ್ಯ ಸೂಚ್ಯಂಕ 168 ಇದ್ದು, ಇಂದು ಮಳೆಯ ಪ್ರಭಾವದಿಂದಾಗಿ ವಾಯು ಗುಣಮಟ್ಟದಲ್ಲಿ ಸಾಕಷ್ಟು ಚೇತರಿಕೆ ಕಂಡುಬಂದಿದೆ.

ರಾಜ್ಯದ ಇತರ ಜಿಲ್ಲೆಗಳ ಪರಿಸ್ಥಿತಿ

ಕರ್ನಾಟಕದ ಕೆಲವು ಜಿಲ್ಲೆಗಳು ದೇಶದಲ್ಲೇ ಅತ್ಯಂತ ಸ್ವಚ್ಛ ಮತ್ತು ಕಡಿಮೆ ಮಾಲಿನ್ಯ ಹೊಂದಿದ ನಗರಗಳಾಗಿ ಹೊರಹೊಮ್ಮಿವೆ. ಮಡಿಕೇರಿ ಮತ್ತು ಗದಗ ಜಿಲ್ಲೆಗಳು ಕೇವಲ 11 ಮತ್ತು 12 AQI ದಾಖಲಿಸುವ ಮೂಲಕ ಅತ್ಯಂತ ಆರೋಗ್ಯಕರ ಹಾಗೂ ಸ್ವಚ್ಛ ಗಾಳಿಯನ್ನು ಹೊಂದಿವೆ. ಮತ್ತೊಂದೆಡೆ, ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಲ್ಲಿ ತಾಂತ್ರಿಕ ಕಾರಣಗಳು ಅಥವಾ ಸ್ಥಳೀಯ ಧೂಳಿನ ಪ್ರಭಾವದಿಂದಾಗಿ ಅತಿ ಹೆಚ್ಚಿನ ಮಾಲಿನ್ಯ ಸೂಚ್ಯಂಕ ದಾಖಲಾಗಿದೆ. ಚಾಮರಾಜನಗರದಲ್ಲಿ 74 AQI ನೊಂದಿಗೆ ಸಾಧಾರಣ ವಾಯು ಗುಣಮಟ್ಟವಿದೆ.

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಹೆಚ್ಚುತ್ತಿರುವ ವಾಹನಗಳ ಸಂಖ್ಯೆ ಮತ್ತು ರಸ್ತೆ ಕಾಮಗಾರಿಗಳು ಇದಕ್ಕೆ ಮುಖ್ಯ ಕಾರಣವೆನ್ನಲಾಗಿದೆ. ಉಸಿರಾಟದ ಸಮಸ್ಯೆ ಇರುವವರು ಮತ್ತು ಮಕ್ಕಳು ಹೊರಗಡೆ ಹೆಚ್ಚು ಸಮಯ ಕಳೆಯುವಾಗ ಮಾಸ್ಕ್ ಧರಿಸುವುದು ಸೂಕ್ತ. ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಗಾಳಿಯಲ್ಲಿನ ಧೂಳಿನ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸ್ವಪಕ್ಷ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಮಂಗಳೂರಲ್ಲಿ ಭುಗಿಲೆದ್ದ ಅಸಮಾಧಾನ – Kannada News | BJP Workers Turn Against MP Brijesh Chowta Over Bannadk Road Issue; Discontent Erupts in Mangaluru

ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಆಕ್ರೋಶImage Credit source: Tv9 Kannada

ಮಂಗಳೂರು, ಮೇ 17: ದಕ್ಷಿಣ ಕನ್ನಡ ಜಿಲ್ಲೆಯ ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಸಂಸದ ಕ್ಯಾ‌.ಬ್ರಿಜೇಶ್ ಚೌಟ ವಿರುದ್ಧ ಬಿಜೆಪಿ ಮಂಡಲ ಉಪಾಧ್ಯಕ್ಷನಿಂದಲೇ ಅಸಮಾಧಾನ ವ್ಯಕ್ತವಾಗಿದ್ದು, ರಸ್ತೆ ಸಮಸ್ಯೆಗೆ ಪರಿಹಾರ ಕೇಳಲು ಹೋದವರಿಗೆ ಅವಮಾನ ಆರೋಪ ಕೇಳಿಬಂದಿದೆ. ಸಂಸದರು ಬೇಜವಾಬ್ದಾರಿ ವರ್ತನೆ ತೋರಿದ್ದಾರೆ ಎಂದೂ ದೂರಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಹಾಕಿ ಮೂಲ್ಕಿ-ಮೂಡಬಿದ್ರೆ ಬಿಜೆಪಿ ಉಪಾಧ್ಯಕ್ಷ ಸೂರಜ್ ಜೈನ್ ಕಿಡಿ ಕಾರಿದ್ದಾರೆ.

ಆಗಿದ್ದೇನು?

ಮೂಡಬಿದಿರೆಯ ಬನ್ನಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಅಪಘಾತಗಳು ನಡೆಯುತ್ತಿದ್ದು, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಮೂರು ವರ್ಷಗಳಲ್ಲಿ 8ಕ್ಕೂ ಹೆಚ್ಚು ಜೀವಗಳು ಬಲಿಯಾಗಿವೆ. ಮಂಗಳೂರಿನಿಂದ ಕಾರ್ಕಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸರ್ವಿಸ್ ರಸ್ತೆ ಇಲ್ಲದ ಕಾರ ಭೀಕರ ಅಪಘಾತಗಳು ನಡೆಯುತ್ತಿದ್ದು, ಕೇವಲ ಮೂರು ದಿನಗಳಲ್ಲಿ 4 ಅಪಘಾತ ನಡೆದು ಓರ್ವ ಮಹಿಳೆ ಮೃತಪಟ್ಟಿದ್ದರು. ಈ ವಿಚಾರವಾಗಿ ಸಂಸದರನ್ನ ಭೇಟಿಯಾಗಲು ಬಿಜೆಪಿ ಮುಖಂಡ ಸೂರಜ್ ಜೈನ್ ತಂಡ ತೆರಳಿತ್ತು. ಆ ವೇಳೆ ಸಂಸದ ಬ್ರಿಜೇಶ್ ಚೌಟ ಉಡಾಫೆ ಉತ್ತರ ನೀಡಿದ ಆರೋಪ‌ ಕೇಳಿಬಂದಿದೆ.

ಇದನ್ನೂ ಓದಿ: ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ; ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ

ಅವಘಡಗಳಿಗೆ ಹೆದ್ದಾರಿ ಇಲಾಖೆಯ ಕಾಮಗಾರಿಯೇ ಕಾರಣ ಎಂದು ನೀವು ಹೇಗೆ ಹೇಳುತ್ತೀರಿ? ಈ ಕಾಮಗಾರಿ ಪೂರ್ಣ ಆಗುವವರೆಗೆ ಸರ್ವಿಸ್ ರಸ್ತೆ ಮಾಡಲು ಸಾಧ್ಯವಿಲ್ಲ. 2023ರಲ್ಲಿ ಮನವಿ ಕೊಟ್ಟಿದ್ದರೆ ಕೊಟ್ಟಿರುವವರ ಬಳಿ ಹೋಗಿ ಕೇಳಿ. ನೀವು ಹೇಳಿದಂತೆ ಕಾಮಗಾರಿ ಮಾಡಲು ಆಗಲ್ಲ. ಜನರ ಪ್ರತಿಭಟನೆಗೆ ನಾನು ಹೆದರೋದಿಲ್ಲ. ಸ್ಥಳಕ್ಕೆ ಭೇಟಿ ನೀಡಲು ಕೇಳಿಕೊಂಡರೆ ಸದ್ಯಕ್ಕೆ ಸಾಧ್ಯವಿಲ್ಲ. ಆ ಕಡೆ ಬಂದಾಗ ಸ್ಥಳಕ್ಕೆ ಬರುತ್ತೇನೆ ಎಂದು ಸಂಸದರು ಹೇಳಿರೋದಾಗಿ ದೂರಲಾಗಿದೆ. ಬನ್ನಡ್ಕ ಸರಣಿ ಅಪಘಾತಗಳನ್ನ ಕಂಡು ಧೃತಿಗೆಟ್ಟಿರುವ ಸಾರ್ವಜನಿಕರಿಂದ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

16 ಅಂಕಗಳಿದ್ದರೂ ಹೊರಬೀಳುವ ಭೀತಿಯಲ್ಲಿ ಗುಜರಾತ್ ಟೈಟಾನ್ಸ್!

Source link

ನಿಟ್​​ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್​​ ಆಗ್ರಹ – Kannada News | NEET Paper Leak: Rahul Demands Education Minister Dharmendra Pradhan’s Sacking

ಧರ್ಮೇಂದ್ರ ಪ್ರಧಾನ್ ವಜಾಕ್ಕೆ ರಾಹುಲ್​​ ಆಗ್ರಹ

ನವದೆಹಲಿ, ಮೇ 17: ನೀಟ್​​ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​​ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ವಿಪಕ್ಷ ನಾಯಕ ರಾಹುಲ್​​ ಗಾಂಧಿ ಆಗ್ರಹಿಸಿದ್ದಾರೆ. 22 ಲಕ್ಷ NEET ವಿದ್ಯಾರ್ಥಿಗಳನ್ನು ಮೋಸಗೊಳಿಸಲಾಗಿದೆ. ಆದರೂ ಮೋದಿ ಜೀ ಒಂದು ಮಾತೂ ಆಡುತ್ತಿಲ್ಲ. ಧರ್ಮೇಂದ್ರ ಪ್ರಧಾನರನ್ನು ತಕ್ಷಣ ವಜಾಗೊಳಿಸಿ, ಇಲ್ಲವೇ ನೀವು ಹೊಣೆ ಹೊರಿ ಎಂದು ಅವರು ಎಕ್ಸ್​​ ಪೋಸ್ಟ್​​ ಮೂಲಕ ಆಗ್ರಹಿಸಿದ್ದಾರೆ.

ವಿಡಿಯೋ ಹಂಚಿಕೊಂಡ ರಾಹುಲ್​​ ಗಾಂಧಿ

ಎರಡು ವರ್ಷಗಳಿಂದ 22 ಲಕ್ಷ ವಿದ್ಯಾರ್ಥಿಗಳು ಹಗಲು-ರಾತ್ರಿ ಶ್ರಮಪಟ್ಟಿದ್ದರು. ಆದರೆ ಅವರ ಪರಿಶ್ರಮ ವ್ಯರ್ಥವಾಗಿದೆ. ಪರೀಕ್ಷೆಗೆ ಎರಡು ದಿನ ಮೊದಲೇ NEET ಪ್ರಶ್ನೆಪತ್ರಿಕೆ ವಾಟ್ಸಾಪ್‌ನಲ್ಲಿ ಹಂಚಿಕೆಯಾಗಿದ್ದು ಇಡೀ ದೇಶಕ್ಕೆ ಗೊತ್ತಿದೆ ಎಂದು ರಾಹುಲ್​​ ಗಾಂಧಿ ಆರೋಪಿಸಿದ್ದಾರೆ.ಭಾರತದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಇದಕ್ಕೂ ತನಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದಾರೆ. ಸಮಿತಿ ನೀಡಿದ ಶಿಫಾರಸುಗಳನ್ನು ಅವರು ಕಸದ ಬುಟ್ಟಿಗೆ ಹಾಕಿದರು. ಸಮಿತಿಯಲ್ಲಿ ವಿರೋಧ ಪಕ್ಷದವರೂ ಇದ್ದು, ಅದಕ್ಕೆ ಅರ್ಥವೇ ಇಲ್ಲ. ನೀವು ಭಾರತದ ಮೂಲ ವ್ಯವಸ್ಥೆಯನ್ನೇ ಹಾಳು ಮಾಡಿದ್ದೀರಿ. ಪ್ರಧಾನಮಂತ್ರಿ ತಕ್ಷಣ ಆದೇಶ ನೀಡಿ ಧರ್ಮೇಂದ್ರ ಪ್ರಧಾನರನ್ನು ವಜಾಗೊಳಿಸಬೇಕು. ತಪ್ಪಿತಸ್ಥರನ್ನು ಬಂಧಿಸಿ ಜೈಲಿಗೆ ಹಾಕಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮೇ 3ರಂದು ನಡೆದಿದ್ದ NEET-UG 2026 ಪರೀಕ್ಷೆಯನ್ನು ಮಂಗಳವಾರ ರದ್ದುಗೊಳಿಸಿತ್ತು. ಪರೀಕ್ಷೆಯಲ್ಲಿದ್ದ ಹಲವು ಪ್ರಶ್ನೆಗಳು ಪರೀಕ್ಷೆಗೆ ಮುನ್ನವೇ ಸೋರಿಕೆಯಾಗಿದ್ದವು ಎಂಬ ಸಾಕ್ಷ್ಯಗಳು ತನಿಖೆಯಲ್ಲಿ ಪತ್ತೆಯಾಗಿದ್ದವು. ಬಳಿಕ ಕೇಂದ್ರ ಸರ್ಕಾರ ಪ್ರಕರಣವನ್ನು CBIಗೆ ಹಸ್ತಾಂತರಿಸಿತ್ತು. ಆ ಬೆನ್ನಲ್ಲೇ ಮರು ಪರೀಕ್ಷೆಯನ್ನು ಜೂನ್ 21ಕ್ಕೆ ನಿಗದಿಪಡಿಸಿರುವ ಬಗ್ಗೆ ತಿಳಿಸಲಾಗಿತ್ತು. ಪರೀಕ್ಷೆ ರದ್ದಾದ ಪರಿಣಾಮ ಸುಮಾರು 23 ಲಕ್ಷ ವಿದ್ಯಾರ್ಥಿಗಳಿಗೆ ತೀವ್ರ ಹಿನ್ನಡೆಯಾಗಿದೆ. 2019ರಲ್ಲಿ NTA ಪರೀಕ್ಷೆ ನಡೆಸಲು ಆರಂಭಿಸಿದ ಬಳಿಕ ಸಂಪೂರ್ಣ NEET-UG ಪರೀಕ್ಷೆಯನ್ನೇ ರದ್ದುಪಡಿಸಿರುವುದು ಇದೇ ಮೊದಲು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Karnataka Weather Forecast: ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್! – Kannada News | Karnataka rain Update: Heavy Rain Forecast, Orange Alert Issued for Chikkamagaluru, Fishermen Warning

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ, ಚಿಕ್ಕಮಗಳೂರಿನಲ್ಲಿ ‘ಆರೆಂಜ್ ಅಲರ್ಟ್’!
Image Credit source: google Gemini

ಬೆಂಗಳೂರು, ಮೇ 17: ಹವಾಮಾನ ಇಲಾಖೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ (Weather) ಮತ್ತು ಗಾಳಿ ಸಹಿತ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಮಲೆನಾಡು ಭಾಗ ಹಾಗೂ ಪಶ್ಚಿಮಘಟ್ಟಗಳ ಸಾಲಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಸಿಡಿಲು ಮತ್ತು 40-50 ಕಿ.ಮೀ ವೇಗದ ಗಾಳಿಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.

ಮುಖ್ಯಾಂಶಗಳು

  • ಮುಂದಿನ ನಾಲ್ಕು ದಿನ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ.
  • ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ.
  • ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್​

ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಜೂನ್ 19ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವಿರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ (ಕೆಲವೊಮ್ಮೆ 60 ಕಿ.ಮೀ ವರೆಗೆ) ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ, ಮೇ 19ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ತರ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಸಿಡಿಲು ಮತ್ತು ಬಿರುಗಾಳಿ ಬೀಸುವ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:22 am, Sun, 17 May 26

Source link

ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆ ಇಟ್ಟು ನಟ ಕಮಲ್ ಹಾಸನ್; ಏನದು? – Kannada News | Kamal Haasan submits 6 demands to Tamil Nadu CM Vijay for cinema industry

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ನಟ, ರಾಜಕಾರಣಿ ದಳಪತಿ ವಿಜಯ್ (CM Vijay) ಅವರನ್ನು ಹಿರಿಯ ನಟ ಕಮಲ್ ಹಾಸನ್ ಮೇ 16ರಂದು ಭೇಟಿಯಾಗಿದ್ದಾರೆ. ಈ ಸೌಜನ್ಯಯುತ ಭೇಟಿಯ ಚಿತ್ರಗಳನ್ನು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿರುವ ಕಮಲ್ ಹಾಸನ್ (Kamal Haasan), ತಮಿಳು ಚಿತ್ರರಂಗ ಎದುರಿಸುತ್ತಿರುವ ಸವಾಲುಗಳ ಕುರಿತು ಚರ್ಚಿಸಿ, ಚಿತ್ರೋದ್ಯಮದ ಬೆಂಬಲಕ್ಕಾಗಿ 6 ಪ್ರಮುಖ ಬೇಡಿಕೆಗಳನ್ನೊಳಗೊಂಡ ಪ್ರಸ್ತಾವನೆಯನ್ನು ಸಿಎಂ ವಿಜಯ್ ಅವರಿಗೆ ಸಲ್ಲಿಸಿದ್ದಾರೆ.

ಸಿಎಂ ವಿಜಯ್ ಭೇಟಿಯ ನಂತರ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಕಮಲ್ ಹಾಸನ್, ‘ಇಂದು ಗೌರವಾನ್ವಿತ ತಮಿಳುನಾಡು ಮುಖ್ಯಮಂತ್ರಿ, ಸಹೋದರ ವಿಜಯ್ ಅವರನ್ನು ಖುದ್ದಾಗಿ ಭೇಟಿಯಾಗಿ ನನ್ನ ಶುಭ ಹಾರೈಕೆಗಳನ್ನು ತಿಳಿಸಿದೆ. ತಮಿಳುನಾಡಿನ ಏಳಿಗೆಗಾಗಿ ಅವರು ಹೊಂದಿರುವ ಹಲವು ಕನಸುಗಳನ್ನು ಉತ್ಸಾಹದಿಂದ ಹಂಚಿಕೊಂಡರು. ಅವರ ನಮ್ರತೆ ಮತ್ತು ಪ್ರೀತಿ ನನಗೆ ಹೆಮ್ಮೆ ತಂದಿದೆ. ವಿವಿಧ ಅಡೆತಡೆಗಳನ್ನು ಎದುರಿಸುತ್ತಿರುವ ತಮಿಳು ಚಿತ್ರರಂಗಕ್ಕೆ ಸರ್ಕಾರದ ಬೆಂಬಲದ ಅಗತ್ಯವಿದ್ದು, ಈ ನಿಟ್ಟಿನಲ್ಲಿ 6 ಪ್ರಮುಖ ಬೇಡಿಕೆಗಳನ್ನು ಸಲ್ಲಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಕಮಲ್ ಹಾಸನ್ ಸಲ್ಲಿಸಿರುವ 6 ಪ್ರಮುಖ ಬೇಡಿಕೆಗಳು ಇಲ್ಲಿವೆ:

1. ಸರ್ಕಾರಿ ಒಟಿಟಿ ಪ್ಲಾಟ್‌ಫಾರ್ಮ್ ಆರಂಭ: ತಮಿಳು ಪ್ರೇಕ್ಷಕರಿಗೆ ಕೈಗೆಟುಕುವ ಮತ್ತು ರಿಯಾಯಿತಿ ದರದಲ್ಲಿ ತಮಿಳು ಸಿನಿಮಾಗಳು, ಸ್ವತಂತ್ರ ಚಿತ್ರಗಳು ಮತ್ತು ಸಾಕ್ಷ್ಯಚಿತ್ರಗಳನ್ನು ವೀಕ್ಷಿಸಲು ಅನುವಾಗುವಂತೆ ತಮಿಳುನಾಡು ಸರ್ಕಾರವೇ ಸ್ವಂತ ಒಟಿಟಿ ಪ್ಲಾಟ್‌ಫಾರ್ಮ್ ಪ್ರಾರಂಭಿಸಬೇಕು.

2. ಸ್ಥಳೀಯ ಸಂಸ್ಥೆಗಳ ಮನರಂಜನಾ ತೆರಿಗೆ ರದ್ದು: ಸದ್ಯ ಚಿತ್ರಮಂದಿರಗಳ ಮೇಲೆ ವಿಧಿಸಲಾಗುತ್ತಿರುವ ಶೇಕಡಾ 4ರಷ್ಟು ಸ್ಥಳೀಯ ಸಂಸ್ಥೆಗಳ ಮನರಂಜನಾ ತೆರಿಗೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.

3. ಬಲಿಷ್ಠ ಪೈರಸಿ ತಡೆ ತಂಡದ ರಚನೆ: ಚಿತ್ರರಂಗಕ್ಕೆ ದೊಡ್ಡ ತಲೆನೋವಾಗಿರುವ ಪೈರಸಿ ಹಾವಳಿಯನ್ನು ತಡೆಗಟ್ಟಲು ತಮಿಳುನಾಡು ಪೊಲೀಸ್ ಸೈಬರ್ ಕ್ರೈಮ್ ವಿಭಾಗದ ಅಡಿಯಲ್ಲಿ ಪ್ರತ್ಯೇಕ ಮತ್ತು ಬಲಿಷ್ಠ ‘ಆ್ಯಂಟಿ-ಪೈರಸಿ ತಂಡ’ವನ್ನು ರಚಿಸಬೇಕು.

4. ದಿನಕ್ಕೆ 5 ಪ್ರದರ್ಶನಗಳಿಗೆ ಅನುಮತಿ: ತಮಿಳುನಾಡಿನ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಕಾನೂನುಬದ್ಧ ಅನುಮತಿ ನೀಡಬೇಕು. ಇದರಿಂದ ಚಿತ್ರಮಂದಿರಗಳ ಆದಾಯ ಹೆಚ್ಚಲಿದ್ದು, ಸಂಕಷ್ಟದಲ್ಲಿರುವ ಪ್ರದರ್ಶಕರ ವಲಯ ಚೇತರಿಸಿಕೊಳ್ಳಲು ಸಹಕಾರಿಯಾಗಲಿದೆ.

5. ಎಂಟು ವಾರಗಳ ಬಳಿಕವೇ ಒಟಿಟಿಗೆ: ತಮಿಳುನಾಡಿನಲ್ಲಿ ಬಿಡುಗಡೆಯಾಗುವ ಎಲ್ಲಾ ಸಿನಿಮಾಗಳು ಚಿತ್ರಮಂದಿರಗಳಲ್ಲಿ ರಿಲೀಸ್ ಆದ ಕನಿಷ್ಠ 8 ವಾರಗಳ ನಂತರವಷ್ಟೇ ಒಟಿಟಿಯಲ್ಲಿ ಬಿಡುಗಡೆಯಾಗಬೇಕು ಎಂಬ ನಿಯಮವನ್ನು ಕಡ್ಡಾಯಗೊಳಿಸಬೇಕು.

6. ಚಿತ್ರ ನಿರ್ಮಾಣ ಪ್ರೋತ್ಸಾಹಕ ಯೋಜನೆ: ಭಾರತೀಯ ಚಲನಚಿತ್ರಗಳ ಚಿತ್ರೀಕರಣ ಶೇಕಡಾ 50ಕ್ಕಿಂತ ಹೆಚ್ಚು ತಮಿಳುನಾಡಿನಲ್ಲಿ ನಡೆದರೆ, ಅಂತಹ ಸಿನಿಮಾಗಳ ಒಟ್ಟು ಬಜೆಟ್‌ನ ಶೇಕಡಾ 10ರಷ್ಟು ಹಣವನ್ನು ಸರ್ಕಾರದಿಂದ ಪ್ರೋತ್ಸಾಹಕ ಧನವಾಗಿ ನೀಡುವ ಯೋಜನೆ ಜಾರಿಗೆ ತರಬೇಕು.

ಇದನ್ನೂ ಓದಿ: ವಿಜಯ್ ಜೊತೆಗಿನ ನಂಟಿನಿಂದ ಹೆಚ್ಚಿದ ತ್ರಿಶಾ ಕ್ರೇಜ್; ಗಗನಕ್ಕೇರಿದ ಸಂಭಾವನೆ

ತಮಿಳು ಚಿತ್ರರಂಗದ ಇಬ್ಬರು ಹಿರಿಯ ಕಲಾವಿದರು ರಾಜಕೀಯ ವೇದಿಕೆಯಲ್ಲಿ ಭೇಟಿಯಾಗಿ ಉದ್ಯಮದ ಏಳಿಗೆಗಾಗಿ ಚರ್ಚಿಸಿರುವುದು ಗಮನಾರ್ಹ ಸಂಗತಿ. ಸಿನಿಮಾ ರಂಗದ ಹಿನ್ನೆಲೆಯಿಂದಲೇ ಬಂದಿರುವ ಸಿಎಂ ವಿಜಯ್ ಅವರು ಹಿರಿಯ ನಟ ಕಮಲ್ ಹಾಸನ್ ಅವರ ಈ ಬೇಡಿಕೆಗಳಿಗೆ ಹೇಗೆ ಸ್ಪಂದಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ – Kannada News | NTA Undergoes Major Leadership Changes Following NEET UG Paper Leak

ನವದೆಹಲಿ, ಮೇ 17: NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ತನಿಖೆಯ ನಡುವೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಇಬ್ಬರು ಜಂಟಿ ನಿರ್ದೇಶಕರ ನೇಮಕಕ್ಕೆ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. 1998 ಬ್ಯಾಚ್‌ನ ಭಾರತೀಯ ಅಂಕಿಅಂಶ ಸೇವೆ (ISS) ಅಧಿಕಾರಿಯಾಗಿರುವ ಅನುಜಾ ಬಾಪಟ್ ಹಾಗೂ 2004 ಬ್ಯಾಚ್‌ನ ಐಆರ್‌ಎಸ್ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ) ಅಧಿಕಾರಿಯಾಗಿರುವ ರುಚಿತಾ ವಿಜ್ ಅವರನ್ನು ಎನ್‌ಟಿಎಯ ಜಂಟಿ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಗಾಗಿ ಎನ್‌ಟಿಎಯಲ್ಲಿ ಖಾಲಿ ಇದ್ದ ಉಪ ಕಾರ್ಯದರ್ಶಿ/ನಿರ್ದೇಶಕ ಹುದ್ದೆಗಳನ್ನು ತಾತ್ಕಾಲಿಕವಾಗಿ ಜಂಟಿ ಕಾರ್ಯದರ್ಶಿ ಹುದ್ದೆಗಳ ಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ಇದೇ ವೇಳೆ, 2013 ಬ್ಯಾಚ್‌ನ ಐಆರ್‌ಎಸ್ (ಆದಾಯ ತೆರಿಗೆ) ಅಧಿಕಾರಿ ಆಕಾಶ್ ಜೈನ್ ಹಾಗೂ 2013 ಬ್ಯಾಚ್‌ನ ಭಾರತೀಯ ಲೆಕ್ಕಪತ್ರ ಮತ್ತು ಲೆಕ್ಕಪರಿಶೋಧನಾ ಸೇವೆ (IA&AS) ಅಧಿಕಾರಿ ಆದಿತ್ಯ ರಾಜೇಂದ್ರ ಭೋಜಗಢಿಯಾ ಅವರನ್ನು ಎನ್‌ಟಿಎಯ ಜಂಟಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪೋಕ್ಸೋ ಕೇಸ್​​ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್​​ – Kannada News | Union Minister Bandi Sanjay Kumar’s Son Bhageerath Sai Arrested in POCSO Case

ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್​​

ಹೈದರಾಬಾದ್​​, ಮೇ 17: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರು ಹಾಗೂ ಬಿಜೆಪಿ ಸಂಸದರಾಗಿರುವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ತೆಲಂಗಾಣ ಹೈಕೋರ್ಟ್​​ ನಿರಾಕರಿಸಿದ ಕೆಲವೇ ಗಂಟೆಗಳಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ತಮ್ಮ ಪುತ್ರನನ್ನು ತನಿಖೆಗೆ ಪೊಲೀಸರಿಗೆ ಒಪ್ಪಿಸಿದ್ದಾಗಿ ಬಂಡಿ ಸಂಜಯ್ ಕುಮಾರ್ ತಿಳಿಸಿದ್ದು, 17 ವರ್ಷದ ಬಾಲಕಿ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ 25 ವರ್ಷದ ಭಗೀರಥ್ ಸಾಯಿ ವಿರುದ್ಧ ಪ್ರಕರಣ ದಾಖಲಾಗಿತ್ತು.

‘ಕಾನೂನಿನ ಮುಂದೆ ಎಲ್ಲರೂ ಸಮಾನರು’

ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿರುವ ಬಂಡಿ ಸಂಜಯ್ ಕುಮಾರ್, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನಂಬಿಕೆ ನನ್ನದು ಎಂದು ಹೇಳಿದ್ದಾರೆ. ಕಾನೂನು ಮತ್ತು ನ್ಯಾಯಾಂಗದ ಮೇಲೆ ಅತ್ಯಂತ ಗೌರವದಿಂದ, ನನ್ನ ಪುತ್ರ ಬಂಡಿ ಭಗೀರಥ್ ನಮ್ಮ ವಕೀಲರ ಮೂಲಕ ತೆಲಂಗಾಣ ಪೊಲೀಸರ ಮುಂದೆ ತನಿಖೆಗೆ ಹಾಜರಾಗಿದ್ದಾರೆ. ನನ್ನ ಸ್ವಂತ ಮಗನಾಗಲಿ ಅಥವಾ ಸಾಮಾನ್ಯ ನಾಗರಿಕನಾಗಲಿ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಾನು ಹಿಂದೆಯೂ ಹೇಳಿದ್ದೇನೆ. ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ನಿರಂತರವಾಗಿ ಹೇಳುತ್ತಿದ್ದಾನೆ. ನಮ್ಮ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಕಾನೂನು ತಜ್ಞರ ಮುಂದೆ ಇಟ್ಟಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: 3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಪಕ್ಕದ ರಾಜ್ಯ ಸರ್ಕಾರದಿಂದ ಹೊಸ ಆಫರ್

ಅಲ್ಲದೆ ನ್ಯಾಯ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನ್ಯಾಯ ತಡವಾಗಬಹುದು, ಆದರೆ ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಶುಕ್ರವಾರ ಮಧ್ಯರಾತ್ರಿ ತನಕ ನಡೆದ ವಿಚಾರಣೆಯಲ್ಲಿ, ತೆಲಂಗಾಣ ಹೈಕೋರ್ಟ್ ಸಾಯಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತ್ತು. ಸಾಯಿ ಪರ ವಕೀಲರು ಪ್ರಕರಣದ ದೂರುದಾರೆಯಾದ ಬಾಲಕಿಯ ತಾಯಿ, ತನ್ನ ಮಗಳು ಕಳೆದ ವರ್ಷದಿಂದ ಸಾಯಿಯೊಂದಿಗೆ ಸಂಬಂಧದಲ್ಲಿದ್ದು, ಅದು ಪರಸ್ಪರ ಸೌಹಾರ್ದಯುತವಾಗಿತ್ತು ಎಂದು ಹೇಳಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ, ಸಂತ್ರಸ್ತೆಯ ಪರ ವಕೀಲರು ಜಾಮೀನು ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ಟಿ. ಮಾಧವಿ ದೇವಿ ಅವರು ಈ ಹಂತದಲ್ಲಿ ಯಾವುದೇ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದಿದ್ದರು.

ಹನಿ ಟ್ರ್ಯಾಪ್ ಆರೋಪ

ಇನ್ನು ಇದೊಂದು ಹನಿ ಟ್ರ್ಯಾಪ್ ಯತ್ನಎಂದು ಭಗೀರಥ್ ಸಾಯಿ ಆರೋಪಿಸಿದ್ದಾರೆ. ಬಾಲಕಿ ಹಾಗೂ ಆಕೆಯ ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಈ ಕುರಿತು ತಾವು ಮೊದಲೇ ಪೊಲೀಸರನ್ನು ಸಂಪರ್ಕಿಸಿದ್ದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Daily Devotional: ವಧು-ವರರಿಗೆ ಈ ವಸ್ತುಗಳನ್ನು ನೀಡಿದರೆ ನಿಮಗೆ ಆಯಸ್ಸು ಜಾಸ್ತಿ!

ಮದುವೆಗೆ ಯಾವ ಯಾವ ಸಹಾಯ ಮಾಡಿದರೆ ಏನೇನು ಫಲ ಸಿಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಇಂದಿನ ದಿನಗಳಲ್ಲಿ ಮದುವೆಗೆ ಸಹಾಯ ಮಾಡುವುದನ್ನು ಜನರು ಮರೆಯುತ್ತಿದ್ದಾರೆ, ಆದರೆ ವಿವಾಹದ ಸಮಯದಲ್ಲಿ ಗಂಡು ವಿಷ್ಣುವಿನ ರೂಪ ಮತ್ತು ಹೆಣ್ಣು ಮಹಾಲಕ್ಷ್ಮಿಯ ರೂಪವಾಗಿರುವುದರಿಂದ ಅಲ್ಲಿ ಸರ್ವ ದೇವತೆಗಳ ಉಪಸ್ಥಿತಿ ಇರುತ್ತದೆ ಎಂದು ಗುರೂಜಿ ಹೇಳಿದ್ದಾರೆ. ಮದುವೆಗೆ ಹಣ, ವಸ್ತ್ರ, ಅಕ್ಕಿ ಅಥವಾ ತರಕಾರಿ ದಾನ ಮಾಡುವುದರಿಂದ ಹೋಮ-ಯಜ್ಞ ಮಾಡಿದ ಪುಣ್ಯ ಸಿಗಲಿದ್ದು, ಪಿತೃ ದೋಷ, ಸರ್ಪ ದೋಷ ಮತ್ತು ಅಕಾಲಿಕ ಮರಣದ ಭೀತಿ ದೂರವಾಗುತ್ತದೆ ಎಂದು ಅವರು ವಿವರಿಸಿದ್ದಾರೆ

 

 

 

Source link

Horoscope Today: ಇಂದು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 17, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಾಡ್ಯ ತಿಥಿ ಮತ್ತು ಕೃತಿಕಾ ನಕ್ಷತ್ರದೊಂದಿಗೆ ವಿಶಿಷ್ಟ ಮಹತ್ವವನ್ನು ಹೊಂದಿದೆ.

ಇಂದಿನ ದಿನವು ಪ್ರಸನ್ನ ಗೌರಿ ಕರವೀರ ವ್ರತ, ದಶಹರ ವ್ರತಾರಂಭ, ಕೃತಿಕಾ ಮಳೆ ಪ್ರಾರಂಭ ಹಾಗೂ ವಿಶ್ವ ದೂರ ಸಂಪರ್ಕ ದಿನ ಎಂದೂ ಆಚರಿಸಲ್ಪಡುತ್ತದೆ. ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಸಹ ವೃಷಭ ರಾಶಿಯ ಕೃತಿಕಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ ಎಂದು ಗುರೂಜಿ ಹೇಳಿದ್ದಾರೆ. ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಅವರು ವಿವರಿಸಿದ್ದಾರೆ.

 

 

 

Source link

Exit mobile version