ನೆಲಮಂಗಲ ಬಳಿ ಭೀಕರ ಅಪಘಾತ: ಮಳೆಯ ನಡುವೆ ಕ್ಯಾಂಟರ್ ವಾಹನಕ್ಕೆ ಇವಿ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು! – Kannada News | Madavara Road Accident: EV Biker Killed in Nelamangala as Rain Causes Slippery Roads
ನೆಲಮಂಗಲ, ಮೇ.16: ಬೆಂಗಳೂರು ಹೊರವಲಯದ ನೆಲಮಂಗಲ ತಾಲ್ಲೂಕಿನ ಮಾದಾವರದಲ್ಲಿ ಇಂದು (ಮೇ.16) ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಳೆಯ ಕಾರಣದಿಂದಾಗಿ ಚಲಿಸುತ್ತಿದ್ದ ಕ್ಯಾಂಟರ್ ವಾಹನಕ್ಕೆ ಎಲೆಕ್ಟ್ರಿಕ್ (EV) ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನು ಲೋಕೇಶ್ (45) ಎಂದು ಗುರುತಿಸಲಾಗಿದೆ. ಇವರು ಮಧ್ಯಾಹ್ನ ಸುಮಾರು 2:30 ರ ವೇಳೆಗೆ ತಮ್ಮ ಇವಿ ಬೈಕ್‌ನಲ್ಲಿ ಬೆಂಗಳೂರಿನ ಕಡೆಗೆ ತೆರಳುತ್ತಿದ್ದರು. ಹೆದ್ದಾರಿಯಲ್ಲಿ ಮಳೆ ಬರುತ್ತಿದ್ದ ಕಾರಣ ಮುಂದೆ ಸಾಗುತ್ತಿದ್ದ ಕ್ಯಾಂಟರ್…