ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಜೀವನ ಆಧರಿಸಿ ಸಿನಿಮಾ ಘೋಷಿಸಿದ ಆರ್ಜಿವಿ – Kannada News | Ram Gopal Varma Announces Police Company Starring Harshvardhan Rane
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (RGV) ಮತ್ತೆ ಮುಂಬೈ ಅಂಡರ್‌ವರ್ಲ್ಡ್ ಕಥೆಯನ್ನು ತೆರೆಗೆ ತರಲು ಸಿದ್ಧರಾಗಿದ್ದಾರೆ. ‘ಡಿ ಕಂಪನಿ’ಗಿಂತಲೂ ಅತ್ಯಂತ ಅಪಾಯಕಾರಿಯಾದ ಪಡೆಯೊಂದರ ಕಥೆಯನ್ನು ಅವರು ಹೇಳಲಿದ್ದಾರೆ. ತಮ್ಮ ಹೊಸ ಸಿನಿಮಾಗೆ ‘ಪೋಲಿಸ್ ಕಂಪನಿ’ ಎಂದು ಹೆಸರಿಟ್ಟಿದ್ದಾರೆ. ಪ್ರಸಿದ್ಧ ನಟ ಹರ್ಷವರ್ಧನ್ ರಾಣೆ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಆರ್ಜಿವಿ ಸೋಶಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದಾರೆ. ಅಂಡರ್‌ವರ್ಲ್ಡ್ ಮತ್ತು ಪೋಲಿಸ್ ಕಂಪನಿ ಸಿನಿಮಾ ಶೀರ್ಷಿಕೆಯ ಹಿನ್ನೆಲೆಯನ್ನು ವರ್ಮಾ ಸ್ಪಷ್ಟವಾಗಿ ವಿವರಿಸಿದ್ದಾರೆ….