Daily Devotional: ಹುಟ್ಟು ಹಬ್ಬವನ್ನು ಹೇಗೆ ಆಚರಿಸಬೇಕು ಗೊತ್ತಾ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನ್ಮದಿನಾಚರಣೆಯು ಕೇಕ್ ಕತ್ತರಿಸುವುದು, ಮೇಣದಬತ್ತಿ ಆರಿಸುವುದು, ಬಲೂನ್ ಸಿಡಿಸುವುದು ಮುಂತಾದ ಹೊಸ ಪದ್ಧತಿಗಳಿಂದ ಕೂಡಿದೆ. ಆದರೆ, ಹಿಂದೂ ಸಂಪ್ರದಾಯದಲ್ಲಿ ಈ ರೀತಿಯ ಆಚರಣೆಗಳಿಗೆ ಹೆಚ್ಚು ಪ್ರಾಮುಖ್ಯತೆ ಇಲ್ಲ. ಜನ್ಮದಿನವು ಕೇವಲ ಮೋಜಿನ ದಿನವಲ್ಲ, ಬದಲಿಗೆ ಆತ್ಮಾವಲೋಕನ ಮತ್ತು ಸಾರ್ಥಕತೆಯ ದಿನ ಎಂದು ಪರಿಗಣಿಸಲಾಗುತ್ತದೆ.

ಸನಾತನ ಸಂಸ್ಕೃತಿಯ ಪ್ರಕಾರ, ಜನ್ಮದಿನವನ್ನು ತಿಥಿಯ ಆಧಾರದ ಮೇಲೆ ಆಚರಿಸುವುದು ಹೆಚ್ಚು ಶುಭಕರ. ಈ ದಿನ ಸ್ನಾನ ಮಾಡಿ ಹಿರಿಯರ ಆಶೀರ್ವಾದ ಪಡೆಯುವುದು, ಇಷ್ಟ ದೇವತಾ ಮತ್ತು ಕುಲ ದೇವತಾ ದರ್ಶನ ಮಾಡುವುದು ಮುಖ್ಯ. ದೀಪವು ಜ್ಞಾನ ಮತ್ತು ಶಕ್ತಿಯ ಪ್ರತೀಕವಾದ್ದರಿಂದ ಅದನ್ನು ಆರಿಸುವುದು ಅಶುಭಕರ. ಬದಲಿಗೆ, ದೀಪ ಹಚ್ಚಿ ದೇವರಿಗೆ ಪ್ರಾರ್ಥನೆ ಸಲ್ಲಿಸುವುದು ಉತ್ತಮ ಎಂದು ಬಸವರಾಜ್ ಗುರೂಜಿ ತಿಳಿಸಿದ್ದಾರೆ.

Source link

Horoscope Today: ಇಂದು ಈ ರಾಶಿಯವರು ನಿಮ್ಮ ಸಂಗಾತಿಯ ಆರೋಗ್ಯದ ಬಗ್ಗೆ ಗಮನ ಕೊಡಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 10, ವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ದಶಮಿ, ಉತ್ತರಾಭಾದ್ರ ಮತ್ತು ರೇವತಿ ನಕ್ಷತ್ರಗಳೊಂದಿಗೆ ಸೌಭಾಗ್ಯ ಯೋಗ, ವಣಿಕ ಕರಣ ಇರತಕ್ಕಂತಹ ಈ ದಿನದ ಪಂಚಾಂಗ ವಿವರಗಳನ್ನು ಗುರೂಜಿ ನೀಡಿದ್ದಾರೆ.

ದಿನದ ರಾಹುಕಾಲ ಮಧ್ಯಾಹ್ನ 12:18 ರಿಂದ 1:54 ರವರೆಗೆ ಇದ್ದು, ಶುಭಕಾಲ ಬೆಳಗ್ಗೆ 10:42 ರಿಂದ ಮಧ್ಯಾಹ್ನ 12:18 ರವರೆಗೆ ಇರುತ್ತದೆ ಎಂದು ತಿಳಿಸಿದ್ದಾರೆ. ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ಬುಧವಾರವು ಕಾಲಭೈರವ, ವಿನಾಯಕ ಮತ್ತು ವೆಂಕಟೇಶ್ವರನಿಗೆ ಅತಿ ಪ್ರಿಯವಾದ ದಿನವಾಗಿದೆ ಎಂದು ಗುರೂಜಿ ಹೇಳಿದ್ದಾರೆ.

 

Source link

ಕನ್ನಡಕ್ಕೆ ಬರಲ್ಲ ‘ದೃಶ್ಯಂ 3’; ನಿರ್ದೇಶಕ ಜೀತು ಜೋಸೆಫ್ ಬಿಚ್ಚಿಟ್ಟ ಅಸಲಿ ಕಾರಣ – Kannada News

ಮಲಯಾಳಂ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ‘ದೃಶ್ಯಂ’ ಫ್ರಾಂಚೈಸಿಗೆ ಭಾರತೀಯ ಚಿತ್ರರಂಗದಲ್ಲೇ ಸಖತ್ ಕ್ರೇಜ್ ಇದೆ. ಈ ಹಿಂದೆ ಬಂದಿದ್ದ ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾಗಳು ಯಶಸ್ಸು ಕಂಡಿದ್ದವು. ಈಗ ‘ದೃಶ್ಯಂ 3’ (Drishyam 3) ರಿಲೀಸ್ ಆಗಿ ದೊಡ್ಡ ಗೆಲುವು ಕಂಡಿದೆ. ಮೊದಲೆರಡು ಸಿನಿಮಾಗಳು ‘ದೃಶ್ಯ’ ಹಾಗೂ ‘ದೃಶ್ಯ 2’ ಹೆಸರಿನಲ್ಲಿ ಕನ್ನಡಕ್ಕೆ ರಿಮೇಕ್ ಆಗಿ, ಇಲ್ಲಿನವರ ಮನಗೆದ್ದು ಸೂಪರ್ ಹಿಟ್ ಆಗಿದ್ದವು. ಕನ್ನಡದಲ್ಲಿ ರವಿಚಂದ್ರನ್ ಅವರು ನಟಿಸಿದ್ದರು. ಮೂರನೇ ಭಾಗವೂ ಕನ್ನಡದಲ್ಲಿ ಬರಬಹುದು ಎಂದು ಕಾಯುತ್ತಿದ್ದ ಕನ್ನಡಿಗರಿಗೆ ಈಗ ನಿರಾಸೆಯಾಗಿದೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಮಲಯಾಳಂ ನಿರ್ದೇಶಕ ಜೀತು ಜೋಸೆಫ್, ‘ದೃಶ್ಯಂ 3’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಏಕೆ ರಿಮೇಕ್ ಮಾಡುತ್ತಿಲ್ಲ ಎಂಬುದಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ದೃಶ್ಯಂ 3 ಕೇವಲ ಹಿಂದಿಯಲ್ಲಿ ಮಾತ್ರ ರಿಮೇಕ್ ಆಗುತ್ತಿದೆ. ನಮ್ಮ ಚಿತ್ರದ ಕ್ಲೈಮ್ಯಾಕ್ಸ್ ಬೇರೆ ಭಾಷೆಯ ಜನರಿಗೆ ಮತ್ತು ಅಲ್ಲಿನ ಸ್ಟಾರ್ ಇಮೇಜ್ ಇರುವ ಹೀರೊಗಳಿಗೆ ಸೆಟ್ ಆಗುತ್ತಿಲ್ಲ. ಅಲ್ಲಿನ ಹೀರೊಗಳ ಇಮೇಜ್‌ಗೆ ಈ ಕ್ಲೈಮ್ಯಾಕ್ಸ್ ಕೊಂಚ ಸಮಸ್ಯೆಯಾಗಬಹುದು. ಅದಕ್ಕಾಗಿಯೇ ತೆಲುಗು ಮತ್ತು ಕನ್ನಡದಲ್ಲಿ ಇದು ರಿಮೇಕ್ ಆಗುತ್ತಿಲ್ಲ’ ಎಂದು ಜೀತು ಜೋಸೆಫ್ ಹೇಳಿದ್ದಾರೆ.

ಹಿಂದಿ ರಿಮೇಕ್ ಹಕ್ಕುಗಳನ್ನು ಪಡೆದಿರುವ ಅಜಯ್ ದೇವಗನ್ ತಂಡದವರು ಚಿತ್ರದ ಕಥೆಯಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ‘ಹಿಂದಿ ಮೇಕರ್ಸ್ ನಮ್ಮ ಮೇಲೆ ಗೌರವ ಇಟ್ಟು, ಇಲ್ಲಿನ ಪರಿಸ್ಥಿತಿಗೆ ತಕ್ಕಂತೆ ಕಥೆಯಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳುವುದಾಗಿ ಕೇಳಿದರು. ಅದಕ್ಕೆ ನಾನು ಗ್ರೀನ್ ಸಿಗ್ನಲ್ ನೀಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ ಒಟಿಟಿ ರಿಲೀಸ್ ಡೇಟ್ ಫಿಕ್ಸ್? ಇಲ್ಲಿದೆ ಅಪ್‌ಡೇಟ್

ಬಾಕ್ಸ್‌ ಆಫೀಸ್‌ನಲ್ಲಿ ‘ದೃಶ್ಯಂ 3’ ಅಬ್ಬರ

ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ‘ದೃಶ್ಯಂ 3’ ವಿಶ್ವಾದ್ಯಂತ ಬರೋಬ್ಬರಿ Rs 235.55 ಕೋಟಿ ಕಲೆಕ್ಷನ್ ಮಾಡಿ ಅತಿ ಹೆಚ್ಚು ಗಳಿಕೆ ಕಂಡ 4ನೇ ಮಲಯಾಳಂ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಿನಿಮಾದ ಕೊನೆಯಲ್ಲಿ ಬರುವ ಪೋಸ್ಟ್ ಕ್ರೆಡಿಟ್ ಸೀನ್ ನೋಡಿ ಅಭಿಮಾನಿಗಳು ‘ದೃಶ್ಯಂ 4’ ಬರುತ್ತೆ ಎಂದು ಫಿಕ್ಸ್ ಆಗಿದ್ದಾರೆ. ಆದರೆ ಈ ಬಗ್ಗೆ ಮಾತನಾಡಿರುವ ಜೀತು ಜೋಸೆಫ್, ‘ಆ ಸೀನ್ ಅನ್ನು ಮೊದಲು ಸಿನಿಮಾದ ಮುಖ್ಯ ಭಾಗದಲ್ಲೇ ಇಡಲಾಗಿತ್ತು. ಆದರೆ ತಂಡದವರ ಸಲಹೆಯಂತೆ ಅದನ್ನು ಪೋಸ್ಟ್ ಕ್ರೆಡಿಟ್ ಸೀನ್ ಆಗಿ ಬದಲಾಯಿಸಲಾಯಿತು. ಸದ್ಯಕ್ಕೆ ನನ್ನ ಬಳಿ ‘ದೃಶ್ಯಂ 4’ ಮಾಡಲು ಯಾವುದೇ ಅಸಾಧಾರಣ ಕಥೆಯ ಎಳೆಯಿಲ್ಲ. ಭವಿಷ್ಯದಲ್ಲಿ ಅದ್ಭುತವಾದ ಐಡಿಯಾ ಸಿಕ್ಕರೆ ಖಂಡಿತಾ ಪಾರ್ಟ್ 4 ಮಾಡ್ತೀನಿ, ಇಲ್ಲದಿದ್ದರೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಹೊಸ ಕಾರ್ಯವನ್ನು ಆರಂಭಿಸುವುದು ಬೇಡವೇ ಬೇಡ.. – Kannada News

ಮೇಷ ರಾಶಿ:

ಆದಾಯಕ್ಕೆ ಯೋಗ್ಯವಾದ ಕೃಷಿ ಚಟುವಟಿಕೆಯಲ್ಲಿ ನಿಮ್ಮದೇ ಆದ ಹೆಜ್ಜೆಗಳನ್ನು ಇಡುವಿರಿ‌. ನೀವು ಆಸ್ತಿಗೆ ಸಂಬಂಧಿಸಿದ ವಿವಾದವು ಇನ್ನೊಂದು ತಿರುವನ್ನು ಪಡೆಯಬಹುದು. ನಿಮ್ಮ ಶಕ್ತಿ, ಸಾಮರ್ಥ್ಯಗಳು ಅನ್ಯರಿಗೂ ತಿಳಿಯಲಿದೆ ಇಂದು. ಸಂಗಾತಿಯಿಂದ ಅನಿರೀಕ್ಷಿತ ಮಾತುಗಳನ್ನು ಕೇಳಿ ಆಶ್ಚರ್ಯಪಡುವಿರಿ. ಮಕ್ಕಳಿಗೆ ನಿಮ್ಮ ಬಗ್ಗೆ ಹೆಮ್ಮೆಯಾಗಲಿದೆ. ಪಾಲುದಾರಿಕೆಗಾಗಿ ಇಂದು ದೂರ ಪ್ರಯಾಣ ಮಾಡಬೇಕಾಗುವುದು. ಉತ್ಸಾಹದಿಂದ ಎಲ್ಲರನ್ನೂ ಜೋಡಿಸಿಕೊಂಡು ಕೆಲಸವನ್ನು ಮುಗಿಸುವಿರಿ.

ವೃಷಭ ರಾಶಿ:

ಪರಿಚಿತರಿಂದ ಶತ್ರು ಬಾಧೆಯನ್ನು ತಪ್ಪಿಸಿಕೊಳ್ಳುವಿರಿ. ಎಂತಹ ಸವಾಲನ್ನೂ ನೀವು ಎದುರಿಸುವ ಹುಂಬುತನದಲ್ಲಿ ಏನನ್ನಾದರೂ ಮಾಡಿಕೊಳ್ಳುಬಿರಿ. ಕೆಲವೊಂದು ಕೆಲಸ ಕಾರ್ಯಗಳಲ್ಲಿ ನೀವು ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸಬಹುದು. ಆದರೆ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳನ್ನು ದೂರವಿಡಬೇಕು. ಯಾರನ್ನಾದರೂ ಮಾದರಿ ವ್ಯಕ್ತಿಯನ್ನಾಗಿ ಮಾಡಿಕೊಳ್ಳುವಿರಿ. ನೀವು ಅಂದುಕೊಂಡಂತೆ ಎಲ್ಲವೂ ನಡೆಯುತ್ತದೆ ಎಂದು ನಂಬುವಿರಿ.

ಮಿಥುನ ರಾಶಿ:

ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಉಪಯುಕ್ತ ಮಾಹಿತಿಯನ್ನು ಕೊಟ್ಟಾರು.‌ ಮನಸ್ಸಿನಲ್ಲಿ ಬೇಸರ ಇರುತ್ತದೆ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಬುದ್ಧಿವಂತಿಕೆಗೆ ಸಂಬಂಧಿಸಿದ ಕಾರ್ಯಗಳಿಂದ ಆದಾಯ ಹೆಚ್ಚಾಗುತ್ತದೆ. ಹಣವನ್ನು ನೀವೇ ಕೇಳಿ ಒಡೆಯುವುದು ಉತ್ತಮ. ಮನೆಯ ವಿಚಾರವನ್ನು ಯಾರ ಬಳಿಯೂ ಹಂಚಿಕೊಳ್ಳುವುದು ಬೇಡ. ಇಂದು ನಿಮಗೆ ಅದೃಷ್ಟವಿರುವ ಕಾರಣ ಉತ್ತಮ ಫಲವನ್ನು ಪಡೆಯುವಿರಿ.

ಕರ್ಕಾಟಕ ರಾಶಿ:

ಕೈ ತಪ್ಪಿ ಹೋಗುವ ಕೆಲಸವನ್ನು ಹೇಗಾದರೂ ಉಳಿಸಿಕೊಳ್ಳುವಿರಿ. ಕಲೆಯ ಕಡೆಗೆ ಒಲವು ಹೆಚ್ಚಾಗಬಹುದು. ನಿಮ್ಮನ್ನು ಎಲ್ಲ ರೀತಿಯಿಂದ ಬಂಧನ ಮಾಡುವ ಪ್ರಯತ್ನ ಇರಲಿದೆ. ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಜಂಜಾಟವಿರುತ್ತದೆ. ಕುಟುಂಬವು ನಿಮ್ಮ ಬೆಂಬಲಕ್ಕೆ ಇರಲಿದೆ. ಆರೋಗ್ಯದ ವಿಚಾರದಲ್ಲಿ ನಿಮಗೆ ಸಮಸ್ಯೆ ಆಗುವುದು. ವೃತ್ತಿಯ ಸ್ಥಳದಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರುವುದು. ಅಶಿಸ್ತು ನಿಮಗೆ ಸಿಟ್ಟನ್ನು ತರಬಹುದು.

ಸಿಂಹ ರಾಶಿ:

ಹಿತಶತ್ರುಗಳಿಂದ ನೀವು ಹತಾಶರಾದಂತೆ ತೋರುವುದು. ನಿಮ್ಮ ಎಚ್ಚರಿಕೆಯಲ್ಲಿ ನೀವಿರಬೇಕು. ನಿಮ್ಮನ್ನು ಗೆಲ್ಲಲು ಸಹೋದ್ಯೋಗಿಗಳು ಪ್ರಯತ್ನಿಸುವರು. ನೀವು ಇಷ್ಟ ಪಟ್ಟಿದ್ದು ಆಗಿಲ್ಲವೆಂಬ ಆಲೋಚನೆ ಬಲವಾಗಿರುವುದು. ಅನಿರೀಕ್ಷಿತ ಹಣದ ವ್ಯಯದಿಂದ ಸ್ವಲ್ಪ ಚಂಚಲರಾಗುವಿರಿ. ಮೊದಲ ವೇತನವನ್ನು ಪಡೆದು ಖುಷಿ ಪಡುವಿರಿ. ಖರ್ಚನ್ನು ನೀವು ಸ್ನೇಹಿತರ ಜೊತೆ ಸಮವಾಗಿ ಹಂಚಿಕೊಳ್ಳುವಿರಿ. ಯಾರ‌ನ್ನೂ ಮಾನಸಿಕವಾಗಿ ಹಿಂಸಿಸುವುದು ಬೇಡ.

ಕನ್ಯಾ ರಾಶಿ:

ಮತಿಯ ಕುರುಡು ತನದಿಂದ ಎಲ್ಲಿಯೋ ಹೂಡಿಕೆ ಮಾಡುವರಿ. ಮತ್ತೊಬ್ಬರೊಂದಿಗೆ ಮಾತನಾಡುವಾಗ ಮಾತುಗಳ ಮೇಲೆ ಎಚ್ಚರ ಇರಲಿ. ಪ್ರಯಾಣದಲ್ಲಿ ವಿಘ್ನ ಬಂದರೂ ಕೊನೆಗೆ ಅಂತ್ಯ ಕಾಣುವಿರಿ.‌ ವೆಚ್ಚಗಳು ಹೆಚ್ಚಾಗಬಹುದು, ಆದ್ದರಿಂದ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನ ಮಾಡಿಕೊಳ್ಳಬೇಕು. ವಿದೇಶದಲ್ಲಿರುವ ವಿದ್ಯಾರ್ಥಿಗಳಿಗೆ ಮನೆಯ ನೆನಪಾಗಬಹುದು. ಪಿತ್ತ ಮತ್ತು ಕಫಗಳ ಸಂಬಂಧದಿಂದ ರೋಗಗಳು ಬರಬಹುದು.

ತುಲಾ ರಾಶಿ:

ಯಾವುದಾನ್ನಾದರೂ ಬರವಣಿಗೆಯ ಮೂಲಕವೇ ವ್ಯವಹರಿಸಿ. ಆಲಂಕಾರಿಕ ವಸ್ತುಗಳನ್ನು ಹೆಚ್ಚು ಖರೀದಿಸುವಿರಿ. ಬಟ್ಟೆ ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಾಗಲಿದೆ. ವ್ಯಾಪಾರಕ್ಕಾಗಿ ನೀವು ನಿಮ್ಮ ತಂದೆಯಿಂದ ಹಣವನ್ನು ಪಡೆಯಬಹುದು. ಆದಾಯದ ಮೂಲ ಹೆಚ್ಚಾಗಲಿದೆ. ಹಣ ಸಂಪಾದನೆಗೆ ಉತ್ತಮವಾದ ಮಾರ್ಗವು ನಿಮಗೆ ಗೊತ್ತಾಗಲಿದೆ. ದೇವಾಲಯದಿಂದ ನಿಮಗೆ ಸಕಾರಾತ್ಮಕ ಅಂಶಗಳನ್ನು ಪಡೆದುಕೊಳ್ಳಿ. ಸಹೋದರನಿಂದ ಭಾವನೆಗೆ ಪೆಟ್ಟುಬೀಳುವ ಸಾಧ್ಯತೆ ಇದೆ.

ವೃಶ್ಚಿಕ ರಾಶಿ:

ಹೂಡಿಕೆಯ ಮೇಲೆ ನಿಮಗೆ ಪೂರ್ಣ ವಿಶ್ವಾಸ ಬರಬಹುದು. ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಹಂಬಲವಿರಲಿದೆ‌. ವೃತ್ತಿಪರವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಸಂಗಾತಿಯೊಂದಿಗಿನ ಸಂಬಂಧವು ಸುಧಾರಿಸುತ್ತದೆ. ಹಿರಿಯರಿಂದ ಆಶೀರ್ವಾದ ಪಡೆಯುವಿರಿ. ನಿಮ್ಮ ಯಶಸ್ಸಿನ ಗುಟ್ಟನ್ನು ಬಿಟ್ಟುಕೊಡಬೇಡಿ. ನಿಮ್ಮನ್ನು ನೋಡುವ ದೃಷ್ಟಿಯೇ ಬದಲಾದೀತು. ನೀವೇ ನಿಮ್ಮ ಶತ್ರುಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮ್ಮವರನ್ನು ಸಂತೋಷಗೊಳಿಸುವಿರಿ. ಇಂದು ನಿಮಗೆ ಕಷ್ಟವಾದರೂ ತಾಳ್ಮೆಯಿಂದ ವ್ಯವಹರಿಸಿ.

ಇದನ್ನೂ ಓದಿ: ವಾರ ಭವಿಷ್ಯ: ಗ್ರಹಗಳ ಉಚ್ಚಸ್ಥಾನ ಸಂಚಾರದಿಂದ ಈ 4 ರಾಶಿಯವರಿಗೆ ಭರ್ಜರಿ ರಾಜಯೋಗ; ನಿಮಗಿದೆಯೇ ಧನಲಾಭದ ಲಕ್?

ಧನು ರಾಶಿ:

ಮನೆಯ ಕಾರಣಕ್ಕೆ ಉದ್ಯೋಗದ ಕಿರಿಕಿರಿಯು ನಿಮ್ಮನ್ನು ಬಾಧಿಸದೇ ಇರದು. ನಿಮಗಿಂದು ಅದೃಷ್ಟದ ದಿನವೆಂದೇ ಹೇಳಬಹುದು. ಕೆಲಸದ ರೀತಿ ನೀತಿ ಬದಲಾವಣೆಯಾಗಬಹುದು. ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಮಂಗಲಕರವಾದ ವಸದತುವಬ್ನು ಸೇವಿಸಿ. ಇಂದು ಸ್ತ್ರೀಯರ ತಾಳ್ಮೆಗೆ ಪರೀಕ್ಷೆಯಾಗಬಹುದು. ಸಾಮಾಜಿಕ ವಲಯದಲ್ಲಿ ಯಶಸ್ವಿಯಾಗಿ ಮುನ್ನಡೆಯುವಿರಿ. ನ್ಯಾಯಾಲಯದಲ್ಲಿ ನಿಮ್ಮ ವಾದಕ್ಕೆ ಸೋಲಾಗಬಹುದು.

ಮಕರ ರಾಶಿ:

ವಿವಾಹ ಯೋಗವು ಕೂಡಿಬರಲಿದ್ದು, ಅಲ್ಲಗಳೆಯುವುದು ಬೇಡ. ದುಃಸ್ವಪ್ನದಿಂದ ಮಾನಸಿಕವಾಗಿ ಕುಗ್ಗುವಿರಿ. ನಿಮ್ಮ ಹಾಗೂ ಪ್ರೇಮಿಯ ಮನಃಸ್ಥಿತಿಯಲ್ಲಿ ಏರಿಳಿತಗಳು ಇರಬಹುದು. ಪೂರ್ಣ ವಿಶ್ವಾಸ ಇರುತ್ತದೆ. ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಲವನ್ನು ಮಾಡಿ ವಾಹನವನ್ನು, ಖರೀದಿಸುದು ಬೇಡ. ಸಮಯಸ್ಫೂರ್ತಿಯಿಂದ ನೀವು ನಿಮ್ಮವರನ್ನು ಸಂತೋಷವಾಗಿರಿಸುವಿರಿ. ಇಂದು ನಿಮ್ಮ ಸಹೋದರರು ಆರ್ಥಿಕ ಸಹಾಯವನ್ನು ಕೇಳಬಹುದು.

ಕುಂಭ ರಾಶಿ:

ಇಂದಿನ ಹಣಕಾಸಿನ‌ ಬಿಕ್ಕಟ್ಟು ಮನಸ್ಸಿನ ವೇಗವನ್ನು ಹೆಚ್ಚಿಸುವುದು. ಸಣ್ಣ ವಿಚಾರಗಳೂ ನಿಮಗೆ ಸಮಸ್ಯೆಯಂತೆ ತೋರುವುದು. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಿರುತ್ತದೆ, ಆದಾಯ ಹೆಚ್ಚಲಿದೆ. ಶುಭ ಕಾರ್ಯಕ್ಕೆ ಎಲ್ಲರನ್ನು ಒಟ್ಟುಗೂಡಿಸುವಿರಿ. ನೂತನ ವಾಹನ ಖರೀದಿಯನ್ನು ಮಾಡುವಿರಿ. ಇಂದಿನ ನಿಮ್ಮ ಪ್ರಯಾಣವು ಬಹಳ ಖರ್ಚಿನದ್ದಾಗಲಿದೆ. ಹೂಡಿಕೆಯನ್ನು ಮಾಡುವಾಗ ಮಾನಸಿಕ ನಿಯಂತ್ರಣವನ್ನು ಇಟ್ಟುಕೊಳ್ಳಿ.

ಮೀನ ರಾಶಿ:

ಹಿತೈಷಿಗಳ ಬೆಂಬಲವೂ ನಿಮಗೆ ಅತ್ಯವಶ್ಯವಾಗಿ ಬೇಕು. ರಾಜಕೀಯದಲ್ಲಿ ಅನಿರೀಕ್ಷಿತ ಬದಲಾವಣೆಯನ್ನು ನೀವು ಒಪ್ಪಿಕೊಳ್ಳಬೇಕಾಗುವುದು. ಅಜ್ಞಾತವಾಗಿರುವುದರಲ್ಲಿ ಖುಷಿ ಇದೆ. ನೀವು ಕೆಲಸದಲ್ಲಿ ನಿರತರಾಗಿರಬಹುದು. ಸ್ನೇಹಿತರೊಂದಿಗೆ ಸುತ್ತಾಡಲು ಎಲ್ಲೋ ಹೋಗಬಹುದು. ಬೆನ್ನು ನೋವಿನ ಸಮಸ್ಯೆಯು ಕಾಣಿಸಿಕೊಳ್ಬಹುದು. ನೀವಿಂದು ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದೀರಿ. ನಿಮ್ಮ ಮಾತಿಗೆ ಮನ್ನಣೆ ಸಿಗಲಿಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ರೇವತೀ, ಯೋಗ : ಪ್ರೀತಿ, ಕರಣ : ಭದ್ರ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 51 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:24 – 14:01, ಯಮಗಂಡ ಕಾಲ 07:33 – 09:10, ಗುಳಿಕ ಕಾಲ 10:47 – 12:24

– ಲೋಹಿತ್ ಹೆಬ್ಬಾರ್ -8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್ ಜಲಸಂಧಿ ಮೇಲೆ ಅಮೆರಿಕದ ಹೆಲಿಕಾಪ್ಟರ್‌ ಪತನ; ಇರಾನ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆಂದ ಟ್ರಂಪ್ – Kannada News

ವಾಷಿಂಗ್ಟನ್, ಜೂನ್ 9: ಪಶ್ಚಿಮ ಏಷ್ಯಾ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಮಧ್ಯಸ್ಥಿಕೆ ವಹಿಸುತ್ತಿದೆ. ಕದನವಿರಾಮ ಘೋಷಣೆಗೆ ಟ್ರಂಪ್ (Donald Trump) ಕರೆ ನೀಡುತ್ತಲೇ ಇದ್ದಾರೆ. ಈ ನಡುವೆ ಅತ್ಯಂತ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಸೇನೆಗೆ ಸೇರಿದ ಅತ್ಯಾಧುನಿಕ ಅಪಾಚೆ (AH-64 Apache) ಯುದ್ಧ ಹೆಲಿಕಾಪ್ಟರ್ ಪತನಗೊಂಡಿದೆ. ಈ ಹೆಲಿಕಾಪ್ಟರ್ ಅನ್ನು ಇರಾನ್ ಪಡೆಗಳೇ ಹೊಡೆದುರುಳಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇರವಾಗಿ ಆರೋಪಿಸಿದ್ದು, ಈ ದಾಳಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲು ಅಮೆರಿಕದ ಸಶಸ್ತ್ರ ಪಡೆಗಳಿಗೆ ಆದೇಶಿಸಿದ್ದಾರೆ.

“ನಿನ್ನೆ ರಾತ್ರಿ ಹಾರ್ಮುಜ್ ಜಲಸಂಧಿಯ ಮೇಲೆ ಗಸ್ತು ತಿರುಗುತ್ತಿದ್ದಾಗ ಇರಾನಿಯನ್ನರು ನಮ್ಮ ಅತ್ಯಾಧುನಿಕ ಅಪಾಚೆ ಹೆಲಿಕಾಪ್ಟರ್‌ಗಳಲ್ಲಿ ಒಂದನ್ನು ಹೊಡೆದುರುಳಿಸಿದ್ದಾರೆ ಎಂದು ನಮ್ಮ ಗ್ರೇಟ್ ಮಿಲಿಟರಿಯಿಂದ ನನಗೆ ತಿಳಿಸಲಾಗಿದೆ. ಇಬ್ಬರು ಪೈಲಟ್‌ಗಳು ಕೂಡ ಸುರಕ್ಷಿತರಾಗಿದ್ದಾರೆ. ಅವರಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಅಮೆರಿಕ ಈ ದಾಳಿಗೆ ಖಂಡಿತ ಪ್ರತೀಕಾರ ತೀರಿಸಿಕೊಳ್ಳಲುತ್ತದೆ” ಎಂದು ಟ್ರಂಪ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಇರಾನ್​ನಲ್ಲಿನ ಭಾರತೀಯರು ತಕ್ಷಣ ದೇಶ ಬಿಟ್ಟು ಹೊರಡಿ; ಭಾರತ ಆದೇಶ

ಇತಿಹಾಸದಲ್ಲೇ ಮೊದಲ ಬಾರಿಗೆ ‘ಸೀ ಡ್ರೋನ್’ ಮೂಲಕ ಪೈಲಟ್‌ಗಳ ರಕ್ಷಣೆ ಮಾಡಲಾಗಿದೆ ಎಂದು ಅಮೆರಿಕದ ಮಿಲಿಟರಿ ಸೆಂಟ್ರಲ್ ಕಮಾಂಡ್ (CENTCOM) ಮಾಹಿತಿಯನ್ನು ನೀಡಿದೆ. ಹೆಲಿಕಾಪ್ಟರ್ ಪತನಗೊಂಡ ಕೇವಲ 2 ಗಂಟೆಗಳ ಒಳಗೆ ಇಬ್ಬರೂ ಪೈಲಟ್‌ಗಳನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಬಹ್ರೇನ್‌ನಲ್ಲಿರುವ ಯುಎಸ್ ಫಿಫ್ತ್ ಫ್ಲೀಟ್‌ನ ‘ಟಾಸ್ಕ್ ಫೋರ್ಸ್ 59’ ವಿಭಾಗಕ್ಕೆ ಸೇರಿದ ಮಾನವರಹಿತ ಸ್ವಯಂಚಾಲಿತ ಸಮುದ್ರ ಡ್ರೋನ್ ಒಂದನ್ನು ಬಳಸಿ ಪೈಲಟ್‌ಗಳನ್ನು ನೀರಿನಿಂದ ರಕ್ಷಿಸಲಾಗಿದೆ.

ಅಮೆರಿಕದ ಮಿಲಿಟರಿ ಇತಿಹಾಸದಲ್ಲೇ ಸಮುದ್ರದಲ್ಲಿ ನಡೆದ ಅಪಘಾತವೊಂದರಲ್ಲಿ ಪೈಲಟ್‌ಗಳನ್ನು ರಕ್ಷಿಸಲು ಇಂತಹ ಸೀ ಡ್ರೋನ್ ಬಳಸಿರುವುದು ಇದೇ ಮೊದಲು ಎನ್ನಲಾಗಿದೆ. ಸದ್ಯ ಇಬ್ಬರೂ ಸೈನಿಕರು ಆರೋಗ್ಯವಾಗಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕೇವಲ ಒಂದು ದಿನದ ಹಿಂದೆಯಷ್ಟೇ ಅತ್ಯಂತ ಸೂಕ್ಷ್ಮವಾದ ಕದನ ವಿರಾಮವನ್ನು ಜಾರಿಗೆ ತರಲಾಗಿತ್ತು. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಡುವ ಅಂತಿಮ ಹಂತದಲ್ಲಿ ಈ ಘಟನೆ ನಡೆದಿರುವುದು ಜಾಗತಿಕ ವಲಯದಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಟ್ರಂಪ್ ಘೋಷಣೆ

ಒಂದೆಡೆ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ರಾಜತಾಂತ್ರಿಕ ಒಪ್ಪಂದಕ್ಕೆ ಒತ್ತು ನೀಡುತ್ತಿದ್ದರೆ, ಮತ್ತೊಂದೆಡೆ ಅಮೆರಿಕದ ಹೆಲಿಕಾಪ್ಟರ್ ಮೇಲಿನ ದಾಳಿಯು ಈ ಶಾಂತಿ ಮಾತುಕತೆಗಳು ಸಂಪೂರ್ಣವಾಗಿ ಮುರಿದುಬೀಳುವಂತೆ ಮಾಡುವ ಸಾಧ್ಯತೆ ಇದೆ. ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನಗೊಂಡಿದೆಯೇ ಅಥವಾ ನಿಜವಾಗಿಯೂ ಇರಾನ್ ಕ್ಷಿಪಣಿ ದಾಳಿ ನಡೆಸಿದೆಯೇ ಎಂಬುದರ ಕುರಿತು ಅಮೆರಿಕ ರಕ್ಷಣಾ ಇಲಾಖೆ ತನಿಖೆ ನಡೆಸುತ್ತಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಇಡೀ ಊರೇ ಮುಳುಗಿದ್ರೂ ಬಾರದ ಜನಪ್ರತಿನಿಧಿ: ‘ನಮ್ಮ ಶಾಸಕರು ನಾಪತ್ತೆಯಾಗಿದ್ದಾರೆ ಹುಡುಕಿಕೊಡಿ’ ಎಂದು ಜನಾಕ್ರೋಶ!

ಬೆಳಗಾವಿ, ಜೂ.9: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಭಾರಿ ಮಳೆಯು ಹತ್ತಾರು ಕೋಟಿ ರೂಪಾಯಿಗಳಷ್ಟು ನಷ್ಟವನ್ನುಂಟು ಮಾಡಿದೆ. ವ್ಯಾಪಾರಸ್ಥರು ಮತ್ತು ಸ್ಥಳೀಯ ನಿವಾಸಿಗಳು ತೀವ್ರ ತೊಂದರೆಗೊಳಗಾಗಿದ್ದಾರೆ. ಮಳೆಯಿಂದಾಗಿ ಸುಮಾರು ಹತ್ತರಿಂದ ಹದಿನೈದು ಕೋಟಿಗೂ ಹೆಚ್ಚು ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಹಲವಾರು ಅಂಗಡಿಗಳು, ಗೋದಾಮುಗಳು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಮೊಬೈಲ್ ಅಂಗಡಿಗಳು, ಹಣ್ಣಿನ ಅಂಗಡಿಗಳು, ಚಪ್ಪಲಿ ಅಂಗಡಿಗಳು ಮತ್ತು ಬಟ್ಟೆ ಗೋದಾಮುಗಳಿಗೆ ಹಾನಿಯಾಗಿದೆ. ಕೆಲವು ಮನೆಗಳು ಕುಸಿದು, ವಾಹನಗಳು ನೀರಿನಲ್ಲಿ ಸಿಲುಕಿವೆ. ಇಂತಹ ಭೀಕರ ಪರಿಸ್ಥಿತಿಯಲ್ಲೂ ಸ್ಥಳೀಯ ಶಾಸಕರು ಘಟನಾ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ, ಅವರನ್ನು ಹುಡುಕಿಕೊಡುವಂತೆ ಜನರು ಆಗ್ರಹಿಸಿದ್ದಾರೆ. ನಗರಸಭೆಯ ಅಧಿಕಾರಿಗಳು ಸರಿಯಾಗಿ ಚರಂಡಿ ವ್ಯವಸ್ಥೆ ಮಾಡದಿರುವುದು ಮತ್ತು ಅದರಲ್ಲಿ ಸಿಲುಕಿರುವ ಕಸವನ್ನು ತೆಗೆಯದೇ ನಿರ್ಲಕ್ಷ್ಯ ತೋರಿರುವುದು ಈ ದೊಡ್ಡ ಪ್ರಮಾಣದ ಹಾನಿಗೆ ಕಾರಣ ಎಂದು ವ್ಯಾಪಾರಸ್ಥರು ದೂಷಿಸಿದ್ದಾರೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಹಾಗೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಬಲರಾಮನ ದಿನಗಳು ನನ್ನ ಜೀವನದ ಅತಿ ದೊಡ್ಡ ಸಿನಿಮಾ’: ವಿನೋದ್ ಪ್ರಭಾಕರ್ – Kannada News

ನಟ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಾಜೆಕ್ಟ್. ಆ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆ.ಎಂ. ಚೈತನ್ಯ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ‘ನನ್ನ ಸಿನಿಮಾಗಳ ಗ್ರಾಫ್ ನೋಡಿದರೆ ಮಾದೇವ ಚಿತ್ರದ ಬಳಿಕ ತುಂಬ ಬದಲಾವಣೆ ಆಗಿದೆ. ನನ್ನ ವೃತ್ತಿಜೀವನದಲ್ಲಿ ಇದು ದೊಡ್ಡ ಸಿನಿಮಾ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಪ್ರಚಾರಕ್ಕಾಗಿ ನಾವು ಸಾಕಷ್ಟು ಪ್ಲ್ಯಾನ್ ಮಾಡಿಕೊಂಡಿದ್ದೇವೆ. ನಿರ್ದೇಶಕರ ಜೊತೆ ಪ್ರಚಾರ ಮಾಡುತ್ತಿದ್ದೇನೆ. ಅವರ ಜ್ಞಾನ ತುಂಬ ದೊಡ್ಡದು. ಅವರ ಜೊತೆ ಕೆಲಸ ಮಾಡಿದ್ದಕ್ಕೆ ನನಗೆ ಬಹಳ ಹೆಮ್ಮೆ ಇದೆ. ಈ ಸಿನಿಮಾದ ನಂತರವೂ ಅವರ ಜೊತೆ ಕೆಲಸ ಮಾಡಲು ನಾನು ಸಿದ್ಧವಾಗಿರುತ್ತೇನೆ’ ಎಂದು ವಿನೋದ್ ಪ್ರಭಾಕರ್ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ – Kannada News

ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ‌ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತೆ ಅಂತ IISC ವರದಿ ಕೊಟ್ಟಿದೆ. ಅಲ್ಲದೇ ರಿಯಾಯಿತಿ ನೀಡಿದರೆ ವಿದ್ಯಾರ್ಥಿಗಳು ಮೆಟ್ರೋ ಪ್ರಯಾಣ ಮಾಡಲಿದ್ದು,ಇದರಿಂದ ಬೆಂಗಳೂರು ರಸ್ತೆಗಳಲ್ಲಿ ವಾಹನ ಸಂಚಾರದ ದಟ್ಟಣೆ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.

ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ಗಾಗಿ ಮನವಿ ಮಾಡುತ್ತಿರುವ ವಿದ್ಯಾರ್ಥಿಗಳು ನಮಗೆ ಉಚಿತ ಪಾಸ್ ಬೇಡ.ಕನಿಷ್ಠ ರಿಯಾಯತಿ ದರದಲ್ಲಿ ಪಾಸ್ ವ್ಯವಸ್ಥೆ ಕಲ್ಪಿಸಿ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತೆ ಅಂತ IISC ವರದಿ ಕೊಟ್ಟಿದೆ. ಹಾಗಾಗಿ, ವಿದ್ಯಾರ್ಥಿಗಳು ಮೆಟ್ರೋ ಪ್ರಯಾಣ ಮಾಡುವುದರಿಂದ ಪೊಲ್ಯೂಷನ್ ನಿಂದ ಮುಕ್ತರಾಗಬಹುದು. ಖಾಸಗಿ ವಾಹನಗಳನ್ನ ಬಳಸುವುದರಿಂದ ದೂರವಿಡಬಹುದು. ಬೈಕ್ ಗಳಲ್ಲಿ ಬರುವುದರಿಂದ ಅಪಘಾತಗಳು ಸಂಭವಿಸುತ್ತೆ. ಮೆಟ್ರೋ ಪಾಸ್ ವಿತರಿಸಿದ್ರೆ ಖಾಸಗಿ ವಾಹನದಿಂದ ದೂರ ಆಗಬಹುದು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್ ನೀಡಬೇಕೆಂದು ಎಂದಿದ್ದಾರೆ.

ಇದನ್ನೂ ಓದಿ: ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಅರ್ಜಿ ಸಲ್ಲಿಕೆ ಹೇಗೆ? ಏನೇನು ದಾಖಲೆಗಳು ಬೇಕು? ಇಲ್ಲಿದೆ ವಿವರ

ಡಿಕೆ ಶಿವಕುಮಾರ್ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನ ಸಚಿವ ಸಂಪುಟ ಸಭೆ ಮಾಡಿ, ಶಾಲಾ ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ನೀಡೋದಾಗಿ ಘೋಷಣೆ ಮಾಡಿದ್ದರು. ಸದ್ಯ ಪಾಸ್ ವಿತರಣೆಯ ಸಿದ್ಧತೆ ನಡೆಯುತ್ತಿದೆ. ಇದರ ಮಧ್ಯೆ ಇದೀಗ ಬೆಂಗಳೂರಿನ ವಿದ್ಯಾರ್ಥಿಗಳು ಸಹ ಮೆಟ್ರೋ ಪಾಸ್ ರಿಯಾಯಿತಿ ನೀಡಬೇಕೆಂದು ಮನವಿ ಮಾಡಿದ್ದು, ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಏನು ತೀರ್ಮಾನಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕುವೈತ್ ದೊರೆ ಜೊತೆ ಪ್ರಧಾನಿ ಮೋದಿ ಮಾತುಕತೆ; ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆ – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು (ಜೂನ್ 9) ಕುವೈತ್ ರಾಜ್ಯದ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದಲ್ಲಿ ಬೆಳೆಯುತ್ತಿರುವ ಭದ್ರತಾ ಪರಿಸ್ಥಿತಿಯ ಕುರಿತು ಚರ್ಚಿಸಿದರು ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ ಜೂನ್ 3ರಂದು ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನಿನ ಡ್ರೋನ್ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಈ ಇಬ್ಬರು ನಾಯಕರ ನಡುವಿನ ಮಾತುಕತೆ ನಡೆದಿದೆ.

ಕುವೈತ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಅಖಂಡತೆಯ ಮೇಲಿನ ದಾಳಿಗಳನ್ನು ಪ್ರಧಾನಿ ಮೋದಿ ಅವರು ಭಾರತದ ಪರವಾಗಿ ತೀವ್ರವಾಗಿ ಖಂಡಿಸಿದರು. ಇತ್ತೀಚೆಗೆ ಕುವೈತ್‌ನ ವಾಯುಪ್ರದೇಶ ಮತ್ತು ಪ್ರಮುಖ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಗಳು ಅಂತಾರಾಷ್ಟ್ರೀಯ ಕಾನೂನು ಮತ್ತು ವಿಶ್ವಸಂಸ್ಥೆಯ ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮೋದಿ ಪ್ರತಿಪಾದಿಸಿದರು. ಈ ಕಷ್ಟದ ಸಮಯದಲ್ಲಿ ಭಾರತವು ಕುವೈತ್‌ನ ಭದ್ರತೆ ಮತ್ತು ಸ್ಥಿರತೆಯ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಅವರು ಭರವಸೆ ನೀಡಿದರು.

ಇದನ್ನೂ ಓದಿ: ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ; ಭಾರತೀಯ ಪ್ರಜೆಯ ದುರಂತ ಸಾವು

ಕುವೈತ್ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ ಪ್ರಧಾನಿ ತೀವ್ರ ಕಳವಳ ವ್ಯಕ್ತಪಡಿಸಿದರು. ಪರಿಸ್ಥಿತಿಯನ್ನು ತಿಳಿಗೊಳಿಸಲು ಎರಡೂ ಕಡೆಯಿಂದ ಶಾಂತಿ ಮಾತುಕತೆಯ ಅಗತ್ಯವಿದೆ ಎಂದು ಅವರು ಒತ್ತಿಹೇಳಿದರು. ಶಾಂತಿ ಮತ್ತು ಸ್ಥಿರತೆಯನ್ನು ಆದಷ್ಟು ಬೇಗ ಮರುಸ್ಥಾಪಿಸಲು “ಮಾತುಕತೆ ಮತ್ತು ರಾಜತಾಂತ್ರಿಕತೆ” ಏಕೈಕ ಮಾರ್ಗವಾಗಿದೆ ಎಂದು ಭಾರತದ ನಿಲುವನ್ನು ಪುನರುಚ್ಚರಿಸಿದರು.

ಕುವೈತ್‌ನಲ್ಲಿ ಇತ್ತೀಚೆಗೆ ನಡೆದ ವಾಯುದಾಳಿಗಳಲ್ಲಿ (ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ದಾಳಿ ಸೇರಿದಂತೆ) ಭಾರತೀಯ ನಾಗರಿಕರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ, ಅಲ್ಲಿ ವಾಸಿಸುತ್ತಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಯು ಭಾರತ ಸರ್ಕಾರಕ್ಕೆ ಪ್ರಮುಖ ಕಾಳಜಿಯಾಗಿದೆ. ಕುವೈತ್‌ನಲ್ಲಿರುವ ಬೃಹತ್ ಭಾರತೀಯ ಸಮುದಾಯದ ಯೋಗಕ್ಷೇಮ ಮತ್ತು ಸುರಕ್ಷತೆಗೆ ವೈಯಕ್ತಿಕವಾಗಿ ಗಮನ ಹರಿಸುತ್ತಿರುವುದಕ್ಕಾಗಿ ಕುವೈತ್ ಅಮೀರ್ ಅವರಿಗೆ ಪ್ರಧಾನಿ ಮೋದಿ ಧನ್ಯವಾದಗಳನ್ನು ಅರ್ಪಿಸಿದರು.

ಇದನ್ನೂ ಓದಿ: ಕುವೈತ್, ಬಹ್ರೇನ್‌ನಲ್ಲಿರುವ ಅಮೆರಿಕ ನೆಲೆಗಳ ಮೇಲೆ ಇರಾನ್ ದಾಳಿ

ಇಸ್ರೇಲ್ ಮತ್ತು ಇರಾನ್ ನಡುವಿನ ಉಲ್ಬಣಗೊಂಡಿರುವ ಸಂಘರ್ಷದ ಹಿನ್ನೆಲೆಯಲ್ಲಿ ಇತ್ತೀಚೆಗೆ ಗಲ್ಫ್ ಪ್ರದೇಶದ ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಪ್ರಮುಖ ಜಲ ಹಾಗೂ ವಿದ್ಯುತ್ ಸ್ಥಾವರಗಳ ಮೇಲೆ ಇರಾನ್ ಪಡೆಗಳಿಂದ ದಾಳಿಗಳು ನಡೆದಿದ್ದವು. ಈ ದಾಳಿಗಳಲ್ಲಿ ಕುವೈತ್‌ನಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ನಾಗರಿಕರು ಕೂಡ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಭಾರತವು ಕುವೈತ್‌ನೊಂದಿಗೆ ರಾಜತಾಂತ್ರಿಕ ಸಂಪರ್ಕವನ್ನು ಮತ್ತಷ್ಟು ತೀವ್ರಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬ್ರೇನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೊಂದೇ ಪರಿಹಾರವೇ? ಮಿಥ್ ಮತ್ತು ಫ್ಯಾಕ್ಟ್ಸ್ ಬಗ್ಗೆ ತಿಳಿದುಕೊಳ್ಳಿ

ಬ್ರೇನ್ ಟ್ಯೂಮರ್ (Brain Tumors) ಎಂಬ ಪದವೇ ಭಯ ಮತ್ತು ಆತಂಕ ಹುಟ್ಟಿಸುತ್ತದೆ. ಇದರ ಬಗ್ಗೆ ಹೇಳುವುದೇ ಬೇಡ ಏಕೆಂದರೆ ಇದೊಂದು ಗಂಭೀರ ಕಾಯಿಲೆ ಎಂಬುದು ಎಲ್ಲರಿಗೂ ಸರ್ವೇ ಸಾಮಾನ್ಯವಾಗಿ ತಿಳಿದಿರುತ್ತದೆ. ಆದರೆ ಈ ಆರೋಗ್ಯ ಸಮಸ್ಯೆಯ ಬಗ್ಗೆ ಇರುವ ವಿಷಯಕ್ಕಿಂತ ಇಲ್ಲದಿರುವ ಸುಳ್ಳು ಸುದ್ದಿಗಳೇ ಹೆಚ್ಚು ಪ್ರಚಲಿತದಲ್ಲಿರುವುದರಿಂದ ಜನ ಯಾವುದನ್ನೂ ನಂಬಬೇಕು ಮತ್ತು ಯಾವುದು ಸುಳ್ಳು ಎಂಬುದರ ನಡುವೆ ಗೊಂದಲದಲ್ಲಿ ಇರುತ್ತಾರೆ. ಅಂತವುಗಳಲ್ಲಿ ಬ್ರೇನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೇ ಮದ್ದು ಎಂಬ ಮಾತು ಕೂಡ ಒಂದು. ಹಾಗಾದರೆ ಬ್ರೇನ್ ಟ್ಯೂಮರ್‌ ಎಂಬ ಗಂಭೀರ ಕಾಯಿಲೆಯಿಂದ ಮುಕ್ತಿ ಪಡೆಯಲು ಚಿಕಿತ್ಸೆ ಮಾತ್ರ ಪರಿಹಾರವೇ, ಈ ಬಗ್ಗೆ ತಜ್ಞರ ಅಭಿಪ್ರಾಯವೇನು ಎಂದು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ತಜ್ಞರು ಹೇಳುವುದೇನು?

ನ್ಯೂರೋ ಸರ್ಜನ್ ಡಾ. ಪ್ರವೀಣ್ ಗುಪ್ತಾ ಅವರು ಹೇಳುವ ಪ್ರಕಾರ, ಪ್ರತಿಯೊಬ್ಬ ರೋಗಿಗೂ ಚಿಕಿತ್ಸೆ ಒಂದೇ ರೀತಿಯಲ್ಲಿರದು. ಕೆಲವು ಸಣ್ಣ ಹಾಗೂ ನಿಧಾನವಾಗಿ ಬೆಳೆಯುವ ಟ್ಯೂಮರ್‌ಗಳು ವರ್ಷಗಳ ಕಾಲ ಯಾವುದೇ ದೊಡ್ಡ ಸಮಸ್ಯೆ ಉಂಟುಮಾಡದೇ ಸ್ಥಿರವಾಗಿರಬಹುದು. ಅಂತಹ ಸಂದರ್ಭಗಳಲ್ಲಿ ನಿಯಮಿತ ಎಂ ಆರ್ ಐ (MRI) ಸ್ಕ್ಯಾನ್ ಮತ್ತು ವೈದ್ಯಕೀಯ ಮೇಲ್ವಿಚಾರಣೆ ಸಾಕಾಗಬಹುದು. ಜೊತೆಗೆ ಪ್ರತಿಯೊಂದು ಬ್ರೇನ್ ಟ್ಯೂಮರ್‌ಗೂ ಆಪರೇಷನ್ ಅಗತ್ಯವಿಲ್ಲ. ಟ್ಯೂಮರ್‌ನ ಗಾತ್ರ, ಅದು ಇರುವ ಸ್ಥಳ, ಅದರ ಸ್ವಭಾವ ಹಾಗೂ ರೋಗಿಯ ಆರೋಗ್ಯ ಸ್ಥಿತಿಯನ್ನು ಆಧರಿಸಿ ಚಿಕಿತ್ಸೆಯನ್ನು ನಿರ್ಧರಿಸಲಾಗುತ್ತದೆ. ಕೆಲವು ಬಿನೈನ್ (ಕ್ಯಾನ್ಸರ್ ಅಲ್ಲದ) ಟ್ಯೂಮರ್‌ಗಳು ಮೆದುಳಿನ ಸಂವೇದನಾಶೀಲ ಭಾಗಗಳಿಂದ ದೂರವಿದ್ದರೆ ಮತ್ತು ಯಾವುದೇ ಲಕ್ಷಣಗಳನ್ನು ಉಂಟುಮಾಡದಿದ್ದರೆ ತಕ್ಷಣ ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿಲ್ಲ.

ಇದನ್ನೂ ಓದಿ: ಪದೇಪದೇ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಹೃದಯದ ಆರೋಗ್ಯ ಸರಿಯಾಗಿದ್ಯಾ ಪರೀಕ್ಷೆ ಮಾಡಿಸಿಕೊಳ್ಳಿ

ಯಾವ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು?

ನಿರಂತರ ತಲೆನೋವು, ಸೆಳೆತ (ಸೀಜರ್ಸ್), ದೃಷ್ಟಿ ಸಮಸ್ಯೆ, ಮಾತನಾಡಲು ಕಷ್ಟವಾಗುವುದು, ದೇಹದ ಭಾಗದಲ್ಲಿ ದುರ್ಬಲತೆ ಇಂತಹ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಬೇಕು. ಕೆಲವು ಸಂದರ್ಭಗಳಲ್ಲಿ ಶಸ್ತ್ರಚಿಕಿತ್ಸೆ ಅಗತ್ಯವಾಗಬಹುದು. ಇತ್ತೀಚಿನ ತಂತ್ರಜ್ಞಾನಗಳಾದ ಹೈ-ರಿಸೊಲ್ಯೂಶನ್ MRI, ನ್ಯೂರೋ ನ್ಯಾವಿಗೇಶನ್, ಫಂಕ್ಷನಲ್ ಬ್ರೇನ್ ಮ್ಯಾಪಿಂಗ್ ಮತ್ತು ಅವೇಕ್ ಕ್ರೇನಿಯೋಟಮಿ ಮುಂತಾದವು ಬ್ರೇನ್ ಟ್ಯೂಮರ್ ಚಿಕಿತ್ಸೆಯನ್ನು ಹೆಚ್ಚು ಸುರಕ್ಷಿತ ಮತ್ತು ಪರಿಣಾಮಕಾರಿ ಮಾಡಿವೆ.

ಇಂಟರ್ನೆಟ್ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಸಿಗುವ ಅಪೂರ್ಣ ಮಾಹಿತಿಯನ್ನು ನಂಬಿ ಚಿಕಿತ್ಸೆ ಮಾಡಿಸುವ ಬಗ್ಗೆ ತೀರ್ಮಾನ ಮಾಡಬಾರದು. ಬ್ರೇನ್ ಟ್ಯೂಮರ್ ಒಂದು ಸಂಕೀರ್ಣ ಸಮಸ್ಯೆಯಾಗಿದ್ದು, ಪ್ರತಿಯೊಬ್ಬರಲ್ಲೂ ಅದರ ಸ್ಥಿತಿ ವಿಭಿನ್ನವಾಗಿರುತ್ತದೆ. ಸರಿಯಾದ ಸಮಯದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವುದು ಮತ್ತು ತಜ್ಞ ವೈದ್ಯರ ಸಲಹೆ ಪಡೆಯುವುದು ಬಹಳ ಮುಖ್ಯ. ಹಲವು ರೋಗಿಗಳು ಶಸ್ತ್ರಚಿಕಿತ್ಸೆಯಿಲ್ಲದೆ ಸಹ ಆರೋಗ್ಯಕರ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಭಯಪಡದೇ ಜಾಗೃತಿಯಿಂದ ವೈದ್ಯಕೀಯ ಸಲಹೆ ಪಡೆಯುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version