Karnataka Weather Forecast: ಬೆಂಗಳೂರಿಗರೇ ಎಚ್ಚರ! ಮುಂದಿನ 3 ದಿನಗಳ ಕಾಲ ನಗರದಲ್ಲಿ ವರುಣಾರ್ಭಟ – Kannada News | Karnataka Weather Forecast: Heavy Rain and Thunderstorm Alert Till May 25
ಮುಂಬರುವ ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ Image Credit source: MediaForge AI ಬೆಂಗಳೂರು, ಮೇ 22: ಇಂದೂ ಸಹ ರಾಜ್ಯದ ಅನೇಕ ಕಡೆ ಮಳೆಯಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ (Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಏರುಪೇರಾಗಲಿದ್ದು, ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ…