ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ? ಎಳೆ ಎಳೆಯಾಗಿ ಬಿಚ್ಚಿಟ್ಟ SP – Kannada News | Shidlaghatta Police Arrests Andra Pradesh Woman For theft 240 gram Gold In Chikkaballapur
ಚಿಕ್ಕಬಳ್ಳಾಪುರ, (ಜನವರಿ 12): ಕೆಎಸ್ಆರ್ಟಿಸಿ ಬಸ್ ನಲ್ಲಿ 22 ಲಕ್ಷ ರೂಪಾಯಿ ಮೌಲ್ಯದ 240 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದ ಮಹಿಳೆಯನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ ಗ್ರಾಮದ ಮಹಿಳೆ ವನಜಾಕ್ಷಿ ಎಂಬಾಕೆ, ದೇವಸ್ಥಾನಕ್ಕೆ ಹೋಗುವ ಸಲುವಾಗಿ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಕ್ರಾಸ್ ನಿಂದ ಸೂಲಿಬೆಲೆಗೆ ತೆರಳಲು ಬಸ್ ಹತ್ತುತ್ತಿದ್ದ ವೇಳೆ, ಚಿನ್ನಾಭರಣ ಕಳವು ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆಂದ್ರ…