Headlines

ದಾವಣಗೆರೆ: ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್ – Kannada News | Crime in Davanagere: Honeytrap Gang of Five Busted; Gram Panchayat Member Brutally Murdered in Channagiri

ಪಂಚಮಿ, ವೆಂಕಟೇಶ್, ಗಂಗಾ ಮಲ್ಲೇಶ್ ನಾಯ್ಕ ಹಾಗೂ ಜಗದೀಶImage Credit source: tv9 ದಾವಣಗೆರೆ, ಮೇ 16: ದಾವಣಗೆರೆ (Davanagere) ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐದು ಮಂದಿ ಕಿಲಾಡಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಂದೆಡೆ, ಹಣ ಹಾಗೂ ಕೌಟುಂಬಿಕ ದ್ವೇಷದ ಹಿನ್ನೆಲೆ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮುಖ್ಯಾಂಶಗಳು ಹನಿಟ್ರ್ಯಾಪ್ ಗ್ಯಾಂಗ್‌ನ…

Read More

ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ಮಾತನಾಡಿದ ಪವನ್ ಕಲ್ಯಾಣ್: ಆಗಿದ್ದ ಸಮಸ್ಯೆ ಏನು? – Kannada News | Pawan Kalyan talks about his health condition

ಪವನ್ ಕಲ್ಯಾಣ್ (Pawan Kalyan) ಇತ್ತೀಚೆಗಷ್ಟೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು, ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅವರ ಸಹೋದರ ಮೆಗಾಸ್ಟಾರ್ ಚಿರಂಜೀವಿ, ಅಲ್ಲು ಅರ್ಜುನ್ ಇನ್ನೂ ಹಲವರು ಟ್ವೀಟ್ ಮಾಡಿ ಶೀಘ್ರ ಗುಣಮುಖವಾಗುವಂತೆ ಕೋರಿದ್ದರು. ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರು ಪವನ್ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ವೈದ್ಯರ ಸಲಹೆಯಂತೆ ಕೆಲ ವಾರ ವಿಶ್ರಾಂತಿಯನ್ನೂ ಪಡೆದಿದ್ದರು. ಇದೀಗ ಶಸ್ತ್ರಚಿಕಿತ್ಸೆ ಬಳಿಕ ಮೊದಲ ಬಾರಿಗೆ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ಪವನ್ ಕಲ್ಯಾಣ್, ತಮಗಾಗಿದ್ದ ಆರೋಗ್ಯ…

Read More

ಓಯ್ ಅಂಧೇರೇ… ತಿಲಕ್ ವರ್ಮಾಗೆ ಅರ್ಷದೀಪ್ ನಿಂದನೆ! ಭಾರೀ ಆಕ್ರೋಶ – Kannada News | Arshdeep Singh’s Colorist Slur Against Tilak Varma Sparks Outrage!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ವಿವಾದಗಳು ಮುಂದುವರೆದಿದೆ. ಈ ವಿವಾದಗಳ ಪಟ್ಟಿಗೆ ಹೊಸ ಸೇರ್ಪಡೆ ಅರ್ಷದೀಪ್ ಸಿಂಗ್ ಅವರ ನಿಂದನೆ. ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯಕ್ಕೂ ಮುನ್ನ ಅರ್ಷದೀಪ್ ಸಿಂಗ್, ತಿಲಕ್ ವರ್ಮಾ ಅವರನ್ನು ಮೈ ಬಣ್ಣವನ್ನು ಪ್ರಸ್ತಾಪಿಸಿ ಕರೆಯುತ್ತಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ವೀಡಿಯೊದಲ್ಲೇನಿದೆ? ಅರ್ಷದೀಪ್ ಸಿಂಗ್ ತಮ್ಮದೇ ಆದ ಸ್ನ್ಯಾಪ್‌ಚಾಟ್ ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ತಿಲಕ್ ವರ್ಮಾ ಅವರನ್ನು ಉದ್ದೇಶಿಸಿ,…

Read More

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆ – Kannada News | Global Fuel Crisis: Minister Pralhad Joshi Slams Congress, Says India’s Petrol Price Hike Lowest Globally

ತೈಲ ಬೆಲೆ ಹೆಚ್ಚಳ ಭಾರತದಲ್ಲೇ ಕನಿಷ್ಠ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟನೆImage Credit source: PTI ನವದೆಹಲಿ, ಮೇ 16: ಜಾಗತಿಕ ಸಂಘರ್ಷ, ಬಿಕ್ಕಟ್ಟಿದ್ದರೂ ಭಾರತವು ತೈಲ ಬೆಲೆಯನ್ನು ಅತ್ಯಂತ ಕನಿಷ್ಠ ಮಟ್ಟದಲ್ಲಿ ಹೆಚ್ಚಳ ಮಾಡಿದೆ. ಬೇರೆ ಬೇರೆ ರಾಷ್ಟ್ರಗಳಲ್ಲಿ ಶೇ 20 ರಿಂದ 45ರಷ್ಟು ಏರಿಕೆ ಕಂಡಿದ್ದರೆ, ನಮ್ಮ ದೇಶದಲ್ಲಿ ಕೇವಲ ಶೇ 3.2ರಷ್ಟು ಮಾತ್ರವೇ ಹೆಚ್ಚಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸ್ಪಷ್ಟಪಡಿಸಿದ್ದಾರೆ. ಪೆಟ್ರೋಲ್ ಹಾಗೂ…

Read More

RCB 38 ವರ್ಷದ ಆಟಗಾರನನ್ನು ಆಯ್ಕೆ ಮಾಡಲು ಇದುವೇ ಕಾರಣ!

IPL 2026: ಐಪಿಎಲ್ 2026ರ ಟೂರ್ನಿಯ ಮಧ್ಯಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂಗ್ಲೆಂಡ್‌ನ ಅನುಭವಿ ವೇಗಿ ರಿಚರ್ಡ್ ಗ್ಲೀಸನ್ (Richard Gleeson) ಅವರನ್ನು 1.6 ಕೋಟಿ ರೂಪಾಯಿ ಮೂಲ ಬೆಲೆಗೆ ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಶ್ರೀಲಂಕಾದ ವೇಗಿ ನುವಾನ್ ತುಷಾರ ಅವರಿಗೆ ಪರ್ಯಾಯ ಆಟಗಾರನಾಗಿ ಗ್ಲೀಸನ್ RCB ಕ್ಯಾಂಪ್ ಸೇರಿದ್ದಾರೆ. ಆರ್​ಸಿಬಿ ಮ್ಯಾನೇಜ್‌ಮೆಂಟ್ ಈ ಹಠಾತ್ ನಿರ್ಧಾರ ತೆಗೆದುಕೊಳ್ಳಲು ಪ್ರಮುಖ ಕಾರಣಗಳು ಇಲ್ಲಿವೆ… (PC: RCB) ನುವಾನ್ ತುಷಾರ ಅನುಪಸ್ಥಿತಿ: RCB ತಂಡವು ಶ್ರೀಲಂಕಾದ…

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ! ಭಾನುವಾರ ಹೊಸಹಳ್ಳಿ-ಕಬ್ಬನ್ ಪಾರ್ಕ್ ಮೆಟ್ರೋ ಸಂಚಾರ ಬೆಳಿಗ್ಗೆ 9 ಗಂಟೆಗೆ ಆರಂಭ – Kannada News | Namma Metro Purple Line: Hosahalli Cubbon Park Metro to Start at 9 AM on May 17, Sunday

ಭಾನುವಾರ ಹೊಸಹಳ್ಳಿ-ಕಬ್ಬನ್ ಪಾರ್ಕ್ ಮೆಟ್ರೋ ಸಂಚಾರ ಬೆಳಿಗ್ಗೆ 9 ಗಂಟೆಗೆ ಆರಂಭ ಬೆಂಗಳೂರು, ಮೇ 16: ನಗರದ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 17ರ ಭಾನುವಾರದಂದು ಅತ್ಯಗತ್ಯ ತಾಂತ್ರಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 7:00 ಗಂಟೆಯಿಂದ 9:00 ಗಂಟೆಯವರೆಗೆ ಒಟ್ಟು ಎರಡು ಗಂಟೆಗಳ ಅವಧಿಗೆ ರೈಲು ಸಂಚಾರದಲ್ಲಿ ಭಾಗಶಃ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯಾಂಶಗಳು ಭಾನುವಾರ ಬೆಳಿಗ್ಗೆ ಏಳರಿಂದ ಒಂಬತ್ತರವರೆಗೆ ಎರಡು…

Read More

Daily Devotional: ಸದಾ ಹಣದ ಚಿಂತೆ ಮಾಡುತ್ತಿದ್ದರೆ ಜ್ಯೋತಿಷ್ಯದ ಪ್ರಕಾರ ಯಾವ ದೋಷ ಕಾಡುತ್ತೆ ಗೊತ್ತಾ? – Kannada News | The Perils of Excessive Money Obsession: A Spiritual and Astrological Perspective on Wealth and Well being

ಹಣ ಎಂದು ಚಿಂತಿಸುವುದುImage Credit source: Pinterest ಬೆಳಗ್ಗೆ ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಕೇವಲ ಹಣ, ಹಣ, ಹಣ ಎಂದು ಚಿಂತಿಸುವುದು ವ್ಯಕ್ತಿಯ ಜೀವನದ ಮೇಲೆ ಯಾವ ಪರಿಣಾಮ ಬೀರುತ್ತದೆ, ಮತ್ತು ಜ್ಯೋತಿಷ್ಯದ ಪ್ರಕಾರ ಯಾವ ದೋಷಗಳು ಉಂಟಾಗುತ್ತವೆ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿರಿಯರು ಹೇಳಿದಂತೆ “ಅತಿ ಸರ್ವತ್ರ ವರ್ಜಯೇತ್” – ಅಂದರೆ ಯಾವುದೇ ವಿಷಯದಲ್ಲಿ ಅತಿರೇಕ ಸಲ್ಲದು….

Read More

ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಹಾಸನ ಡಿಸಿ ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ವಿವಾಹವಾದ ಯುವ ಜೋಡಿ! – Kannada News | Intercaste Couple Marries in Front of Ambedkar Statue at Hassan DC Office Premises After Parents Oppose

ಹಾಸನ, ಮೇ 16: ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಮದುವೆಯಾಗಿದ್ದಾರೆ. ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನೋಜ್ (22) ಹಾಗೂ ಮೂಕಲಿ ಗ್ರಾಮದ ಪ್ರೀತಿ (19) ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿ ಮತ್ತು ಅಂತರ್ಜಾತಿ ವಿವಾಹಕ್ಕೆ ಕುಟುಂಬಸ್ಥರು ಒಪ್ಪದ ಕಾರಣ, ಈ ಯುವ ಜೋಡಿ ಸಂಘಟನೆಯ ಮುಖಂಡರ…

Read More

ಬರೋಬ್ಬರಿ 63 ರನ್: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ಬೌಲಿಂಗ್..! – Kannada News | Anshul Kamboj Creates Embarrassing IPL History

IPL 2026: ಐಪಿಎಲ್​ನಲ್ಲಿ ಹೀರೋ ಆಗಿದ್ದವನು ಕೇವಲ 2.4 ಓವರ್‌ಗಳಲ್ಲಿ ಝೀರೋ ಆಗಬಹುದು ಎಂಬುದಕ್ಕೆ ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯವೇ ಸಾಕ್ಷಿ. ಪಂದ್ಯದ ಆರಂಭದವರೆಗೂ ಸಿಎಸ್‌ಕೆ ತಂಡದ ಪ್ರಮುಖ ಅಸ್ತ್ರವಾಗಿದ್ದ ಅನ್ಶುಲ್ ಕಂಬೋಜ್, ಪಂದ್ಯ ಮುಗಿಯುವ ಹೊತ್ತಿಗೆ ಐಪಿಎಲ್ ಇತಿಹಾಸದ ಅತ್ಯಂತ ದುಬಾರಿ ಬೌಲರ್ ಆಗಿ ಹೊರಹೊಮ್ಮಿದ್ದರು. ಈ ಪಂದ್ಯದಲ್ಲಿ ಅನ್ಶುಲ್ ಕಂಬೋಜ್ ಅವರ ಬೌಲಿಂಗ್ ಅನ್ನು ಲಕ್ನೋ ಸೂಪರ್ ಜೈಂಟ್ಸ್​ ಬ್ಯಾಟರ್‌ಗಳು ಧೂಳೀಪಟ…

Read More

ರೈತರ ಹೆಸರಲ್ಲಿ ಕೋಟಿ ಕೋಟಿ ಸಾಲದ ಗೋಲ್‌ಮಾಲ್; ಕಾಳಂಗಿ ಸಹಕಾರಿ ಬ್ಯಾಂಕ್‌ಗೆ ಷೇರುದಾರರ ಮುತ್ತಿಗೆ! – Kannada News | Sirsi Bank Fraud: Farmers Protest Against Kalangi Co operative Bank Over Crores of Loan Scam

ಕಾಳಂಗಿ ಸಹಕಾರಿ ಬ್ಯಾಂಕ್‌ಗೆ ಷೇರುದಾರರ ಮುತ್ತಿಗೆ! ಶಿರಸಿ, ಮೇ 16: ಗ್ರಾಮೀಣ ರೈತರ ಆರ್ಥಿಕ ಪ್ರಗತಿಗೆ ಬೆಂಬಲವಾಗಿ ನಿಲ್ಲಬೇಕಾದ ಸಹಕಾರಿ ಬ್ಯಾಂಕ್‌ ಒಂದರಲ್ಲಿ, ರೈತರ ಹೆಸರನ್ನೇ ಬಳಸಿಕೊಂಡು ಕೋಟ್ಯಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿರುವ ಆಘಾತಕಾರಿ ಹಗರಣ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ಬೆಳಕಿಗೆ ಬಂದಿದೆ. ದಾಸನಕೊಪ್ಪದ ಕಾಳಂಗಿ ಸಹಕಾರಿ ಬ್ಯಾಂಕ್‌ನಲ್ಲಿ ಈ ಬೃಹತ್ ಗೋಲ್‌ಮಾಲ್ ನಡೆದಿದ್ದು, ವಂಚನೆಗೆ ಒಳಗಾದ ರೈತರು ಮತ್ತು ಷೇರುದಾರರು ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ….

Read More