ಮಗಳು ಬೆಳೆದು ದೊಡ್ಡವಳಾದಮೇಲೆ ಬಾಯ್​​ಫ್ರೆಂಡ್ ಮಾಡಿಕೊಂಡ್ರೆ? ಕಿಯಾರಾ ಕೊಟ್ಟ ಉತ್ತರ ಏನು? – Kannada News | I will Not Restrict My Daughter Over Her Relationship Says Kiara Advani

ಬಾಲಿವುಡ್‌ನ ಕ್ಯೂಟ್ ಜೋಡಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ 2023ರಲ್ಲಿ ವಿವಾಹವಾದರು. 2025ರಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದರು. ಈ ಮುಗುವಿಗೆ ಸರಾಯಾ ಮಲ್ಹೋತ್ರಾ ಎಂದು ನಾಮಕರಣ ಮಾಡಿದ್ದಾರೆ. ಇತ್ತೀಚಿನ ಸಂದರ್ಶನ ಒಂದರಲ್ಲಿ ಕಿಯಾರಾ ತಮ್ಮ ಮಗಳ ಪಾಲನೆ ಮತ್ತು ಆಧುನಿಕ ಜಗತ್ತಿನಲ್ಲಿ ಅವಳು ಸಂಬಂಧಗಳನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ.

‘ನನ್ನ ತಂದೆ ತಾಯಿ ಲವ್ ಮಾಡಿದ್ದರು. ನಂತರ ಮದುವೆ ಆದರು. ನಾನು ಕೂಡ ಅದೇ ನಂಬಿಕೆಯಲ್ಲಿ ಬೆಳೆದಿದ್ದೆ’ ಎಂದು ಅವರು ಹೇಳಿದ್ದರು. ‘ನನ್ನ ಮಗಳು ಮದುವೆ ಅಥವಾ ಪ್ರೀತಿಯ ಬಗ್ಗೆ ಯಾವುದೇ ಪೂರ್ವಗ್ರಹ ಪೀಡಿತ ಆಲೋಚನೆಗಳೊಂದಿಗೆ ಬೆಳೆಯುವುದು ನನಗೆ ಇಷ್ಟವಿಲ್ಲ. ಅವಳಿಗೆ ಇಷ್ಟವಿದ್ದರೆ ಮದುವೆಯಾಗಲಿ, ಇಲ್ಲದಿದ್ದರೆ ಬೇಡ. ಅವಳ ನಿರ್ಧಾರ ಅವಳದ್ದೇ ಆಗಿರಬೇಕು’ ಎಂದು ಕಿಯಾರಾ ಹೇಳಿದ್ದಾರೆ.

ಮಕ್ಕಳು ತಮ್ಮ ಜೀವನದ ಹಾದಿಯಲ್ಲಿ ತಪ್ಪುಗಳನ್ನು ಮಾಡುವುದು ಸಹಜ. ಪೋಷಕರ ಅನುಭವದ ಕನ್ನಡಕದಿಂದ ಜೀವನವನ್ನು ನೋಡುವ ಬದಲು, ಮಗಳು ಸ್ವತಃ ಲೋಕವನ್ನು ನೋಡಿ ಕಲಿಯಬೇಕು ಎಂಬುದು ಕಿಯಾರಾ ಅವರ ಆಸೆ. ಜೀವನವನ್ನು ಪೂರ್ಣ ಪ್ರಮಾಣದಲ್ಲಿ ಅನುಭವಿಸಿ, ಯಾವುದು ಸರಿ ಯಾವುದು ತಪ್ಪು ಎಂದು ಅವಳೇ ನಿರ್ಧರಿಸುವ ಸ್ವಾತಂತ್ರ್ಯ ನೀಡಲು ಇಚ್ಛಿಸುತ್ತಾರೆ.

ಭವಿಷ್ಯದಲ್ಲಿ ಮಗಳು ಬಾಯ್‌ಫ್ರೆಂಡ್ ಮಾಡಿಕೊಂಡರೆ ನಿಮ್ಮ ಪ್ರತಿಕ್ರಿಯೆ ಏನು ಎಂದು ಕಿಯಾರಾ ಒಮ್ಮೆ ಸಿದ್ಧಾರ್ಥ್ ಅವರನ್ನು ಕೇಳಿದ್ದರಂತೆ. ಅದಕ್ಕೆ ಸಿದ್ಧಾರ್ಥ್ ನೀಡಿದ ಉತ್ತರ ಕಿಯಾರಾ ಅವರಿಗೆ ಅಚ್ಚರಿ ಮೂಡಿಸಿದೆ. ‘ಪೋಷಕರಾಗಿ ನಮ್ಮ ಕೆಲಸ ಅವಳನ್ನು ನಿರ್ಬಂಧಿಸುವುದಲ್ಲ. ಬದಲಾಗಿ, ಅವಳು ತನಗೆ ಯಾವುದು ಸರಿ ಮತ್ತು ಯಾವುದು ತಪ್ಪು ಎಂಬುದನ್ನು ಸ್ವತಃ ಆಯ್ಕೆ ಮಾಡುವಂತೆ ಬೆಳೆಸುವುದಷ್ಟೇ ನಮ್ಮ ಜವಾಬ್ದಾರಿ’ ಎಂದು ಸಿದ್ಧಾರ್ಥ್ ಹೇಳಿದ್ದರಂತೆ.

ಇದನ್ನೂ ಓದಿ: ‘ಟಾಕ್ಸಿಕ್’ ಶೂಟಿಂಗ್ ವೇಳೆ ವ್ಯಾನ್ ಅಲ್ಲಿ ಕುಳಿತು ಹೊಟ್ಟೆಯಲ್ಲಿರೋ ಮಗು ಜೊತೆ ಮಾತನಾಡುತ್ತಿದ್ದ ಕಿಯಾರಾ

‘ಕಿಯಾರಾ’ ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಾಸನ: ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್, 36 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು! – Kannada News | Moving Private Bus Catches Fire Near Hassan Shanthigrama After Tyre Burst; 36 Passengers Narrowly Escape

ಹಾಸನ, ಮೇ 16: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದರ ಟೈರ್ ಸ್ಫೋಟಗೊಂಡು ಅದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಬಸ್‌ನಲ್ಲಿ ಸುಮಾರು 36 ಪ್ರಯಾಣಿಕರಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಚಾಲಕ ತಕ್ಷಣವೇ ಜಾಗರೂಕತೆಯಿಂದ ಬಸ್ ನಿಲ್ಲಿಸಿ ಎಲ್ಲರನ್ನೂ ಕೆಳಗಿಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಪ್ರಯಾಣಿಕರ ಲಗೇಜ್‌ಗಳು, ಮೊಬೈಲ್‌ಗಳು ಹಾಗೂ ಬೆಲೆಬಾಳುವ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಧಾವಿಸಿದ್ದು, ಕಾರ್ಯಾಚರಣೆ ನಡೆಸಿದ್ದಾರೆ. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB ಕೈಯಲ್ಲಿ CSK ಪ್ಲೇಆಫ್ ಭವಿಷ್ಯ: ಹೀಗಿದೆ ಲೆಕ್ಕಾಚಾರ

Source link

‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’: ಮಾಧ್ಯಮ ವರದಿಗೆ ಪ್ರಧಾನಿ ಮೋದಿ ಖಡಕ್ ಪ್ರತಿಕ್ರಿಯೆ! ಕಾರಣ ಇಲ್ಲಿದೆ – Kannada News | “Not An Iota Of Truth”: PM Narendra Modi Rejects Reports Of Tax On Foreign Travel

ಪ್ರಧಾನಿ ನರೇಂದ್ರ ಮೋದಿImage Credit source: TV9 Network

ನವದೆಹಲಿ, ಮೇ 16: ವಿದೇಶಿ ಪ್ರವಾಸ ಕೈಗೊಳ್ಳುವವರ ಮೇಲೆ ಸರ್ಕಾರವು ಹೊಸದಾಗಿ ಸೆಸ್ ಅಥವಾ ಹೆಚ್ಚುವರಿ ತೆರಿಗೆ ವಿಧಿಸಲು ಚಿಂತನೆ ನಡೆಸುತ್ತಿದೆ ಎಂಬ ಮಾಧ್ಯಮ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಬಲವಾಗಿ ತಳ್ಳಿಹಾಕಿದ್ದಾರೆ. ಮಾಧ್ಯಮವೊಂದರ ವರದಿಗೆ ಸಾಮಾಜಿಕ ಜಾಲತಾಣ ಎಕ್ಸ್​​ನನಲ್ಲಿ ಖುದ್ದಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ, ಈ ಸುದ್ದಿಯಲ್ಲಿ ‘ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ’ ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ, ಮಾಧ್ಯಮ ಸಂಸ್ಥೆಯು ವರದಿಯನ್ನು ಅಳಿಸಿಹಾಕಿದೆ.

ಮುಖ್ಯಾಂಶಗಳು

  • ವಿದೇಶಿ ಪ್ರಯಾಣದ ಮೇಲೆ ತೆರಿಗೆ ವಿಧಿಸುವ ಪ್ರಸ್ತಾವನೆ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದು ವರದಿಯಾಗಿತ್ತು.
  • ಈ ವರದಿ ಸಂಪೂರ್ಣ ಸುಳ್ಳು ಎಂದ ಪ್ರಧಾನಿ ಮೋದಿ.
  • ಜನಜೀವನ ಸುಗಮಗೊಳಿಸಲು ಬದ್ಧ ಎಂದ ಪ್ರಧಾನಿ.

ಅಮೆರಿಕ, ಇಸ್ರೇಲ್, ಇರಾನ್ ಯುದ್ಧದಿಂದಾಗಿ ಜಾಗತಿಕವಾಗಿ ಕಚ್ಚಾತೈಲ ಹಾಗೂ ಆಮದು ವೆಚ್ಚ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಈ ಆರ್ಥಿಕ ಹೊರೆಯನ್ನು ಸರಿದೂಗಿಸಲು ಕೇಂದ್ರ ಸರ್ಕಾರವು ವಿದೇಶಿ ಪ್ರವಾಸದ ಮೇಲೆ ಒಂದು ವರ್ಷದ ಅವಧಿಗೆ ವಿಶೇಷ ಸೆಸ್ ವಿಧಿಸುವ ಬಗ್ಗೆ ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿತ್ತು. ಈ ಬಗ್ಗೆ ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ವರದಿ ಸುಳ್ಳಿನಿಂದ ಕೂಡಿದೆ ಎಂದಿದ್ದಾರೆ.

ಮೋದಿ ಎಕ್ಸ್ ಸಂದೇಶದಲ್ಲೇನಿದೆ?

‘ವರದಿಯಲ್ಲಿ ಸಾಸಿವೆ ಕಾಳಿನಷ್ಟೂ ಸತ್ಯವಿಲ್ಲ. ವಿದೇಶಿ ಪ್ರಯಾಣದ ಮೇಲೆ ಯಾವುದೇ ನಿರ್ಬಂಧಗಳನ್ನು ಹೇರುವ ಪ್ರಶ್ನೆಯೇ ಇಲ್ಲ. ದೇಶದ ಜನರ ಸುಲಭ ಜೀವನ ಸುಲಭಗೊಳಿಸುವುದು ಮತ್ತು ಸುಗಮ ವ್ಯವಹಾರಕ್ಕೆ ಅನುವು ಮಾಡಿಕೊಡುವ ಬಗ್ಗೆ ನಮ್ಮ ಸರ್ಕಾರ ಬದ್ಧವಾಗಿದೆ’ ಎಂದು ಮೋದಿ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಪ್ರಧಾನಿ ಅವರಿಂದ ಖಡಕ್ ಪ್ರತಿಕ್ರಿಯೆ ಹೊರಬೀಳುತ್ತಿದ್ದಂತೆಯೇ ವರದಿ ಅಳಿಸಿಹಾಕಿದ ಮಾಧ್ಯಮ ಸಂಸ್ಥೆಯು ತಪ್ಪು ವರದಿಗೆ ವಿಷಾದ ವ್ಯಕ್ತಪಡಿಸಿದೆ.

ಮೋದಿ ಎಕ್ಸ್ ಸಂದೇಶ

ಇತ್ತೀಚೆಗಷ್ಟೇ ಹೈದರಾಬಾದ್​ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಯುದ್ಧದ ಸಂದರ್ಭದಲ್ಲಿ ಇಂಧನ ಉಳಿತಾಯ ಮತ್ತು ವಿದೇಶಿ ವಿನಿಮಯ ಮೀಸಲು ರಕ್ಷಿಸಲು ಸಾರ್ವಜನಿಕ ಸಾರಿಗೆ ಬಳಸಿ, ಅನಗತ್ಯ ವಿದೇಶಿ ಪ್ರವಾಸ ಹಾಗೂ ಚಿನ್ನದ ಖರೀದಿಯಿಂದ ದೂರವಿರಿ ಎಂದು ದೇಶದ ಜನತೆಗೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಲೀಟರ್‌ಗೆ 3 ರೂಪಾಯಿಯಷ್ಟು ದುಬಾರಿಯಾಗಿದ್ದು, ತೈಲ ಕಂಪನಿಗಳ ನಷ್ಟದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಮೋದಿ ಕರೆಗೆ ಓಗೊಟ್ಟ ವಿವಿಧ ರಾಜ್ಯಗಳ ನಾಯಕರು; ಯೋಗಿಯಿಂದ ಹಿಡಿದು ರೇಖಾವರೆಗೆ ಯಾರಿಂದೇನು ಕ್ರಮ?

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Karnataka Weather Forecast: ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ! – Kannada News | Karnataka rain Update: Heavy Rain Alert For Next 4 Days; Early Monsoon To Hit Kerala On May 26

ಮುಂದಿನ 3-4 ದಿನ ರಾಜ್ಯಾದ್ಯಂತ ಭಾರೀ ಮಳೆ, ಯೆಲ್ಲೋ ಅಲರ್ಟ್​ ಘೋಷಣೆ!

ಬೆಂಗಳೂರು, ಮೇ 16: ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 3 ರಿಂದ 4 ದಿನಗಳ ಕಾಲ (ಮೇ 15 ರಿಂದ 18 ರವರೆಗೆ) ಕರ್ನಾಟಕದಾದ್ಯಂತ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ  (Weather)  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಗಲಿನಲ್ಲಿ ತಾಪಮಾನ ಏರಿಕೆಯಾಗಿ ಬಿಸಿಲಿನ ಬೇಗೆ ಮುಂದುವರಿದರೂ, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಸಂಜೆ ಅಥವಾ ರಾತ್ರಿಯ ವೇಳೆಗೆ ಬಿರುಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಸಿಡಿಲು ಮತ್ತು 40-50 ಕಿ.ಮೀ ವೇಗದ ಗಾಳಿಯ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.

ಮುಖ್ಯಾಂಶಗಳು

  • ಮುಂದಿನ ನಾಲ್ಕು ದಿನ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ.
  • ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ.
  • ಮೇ 26ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ; ಜೂನ್ ಆರಂಭದಲ್ಲಿ ಕರ್ನಾಟಕಕ್ಕೆ ಆಗಮನ.

ಎಲ್ಲೆಲ್ಲಿ ಮಳೆ?

ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಒಳನಾಡಿಗೆ ಈ ಎರಡು ದಿನ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತನ್ನ ಅಧಿಕೃತ X ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಕೋರಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 18 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ 64.5mm ನಿಂದ 115.5mm ವರೆಗೆ ಮಳೆ ದಾಖಲಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗಲಿದೆ. ಇಂದು ಮತ್ತು ನಾಳೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ (Hailstorm) ಮುನ್ಸೂಚನೆ ಇರುವುದರಿಂದ ಈ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಮುಂಗಾರು ಪ್ರವೇಶ: ಮೇ 26ಕ್ಕೆ ಕೇರಳಂಗೆ, ಕರ್ನಾಟಕಕ್ಕೆ ಯಾವಾಗ ಎಂಟ್ರಿ?

ಮುಂಗಾರು ಮಳೆಯ ಆಗಮನ

ದೇಶದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಳೆಯು ಈ ವರ್ಷ ನಿಗದಿತ ಸಮಯಕ್ಕಿಂತ ಒಂದು ವಾರ ಮುಂಚಿತವಾಗಿಯೇ ಅಂದರೆ ಮೇ 26 ರಂದೇ ಕೇರಳವನ್ನು ಪ್ರವೇಶಿಸಲಿದೆ ಎಂದು ಐಎಂಡಿ ತಿಳಿಸಿದೆ. ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪಿರುವ ಮುಂಗಾರು, ಅಲ್ಲಿಂದ ವೇಗವಾಗಿ ಭಾರತದ ಪ್ರಧಾನ ಭೂಭಾಗದತ್ತ ಮುನ್ನಡೆಯುತ್ತಿದೆ. ಕೇರಳಕ್ಕೆ ಮುಂಗಾರು ಅಪ್ಪಳಿಸಿದ ಕೇವಲ ಒಂದು ವಾರದಲ್ಲಿ, ಅಂದರೆ ಜೂನ್ ಮೊದಲ ವಾರದಲ್ಲೇ ಕರ್ನಾಟಕಕ್ಕೂ ಮುಂಗಾರು ಪ್ರವೇಶಿಸಲಿದೆ. ಕಳೆದ ವರ್ಷ ತೀವ್ರ ಬರಗಾಲ ಎದುರಿಸಿದ್ದ ಕರುನಾಡಿನ ರೈತರಿಗೆ ಈ ಮುಂಚಿತ ಮುಂಗಾರಿನ ವರದಿ ಹೊಸ ಭರವಸೆ ಮತ್ತು ಸಂತಸವನ್ನು ತಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಜನ ನಾಯಗನ್’ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ದಳಪತಿ ವಿಜಯ್ – Kannada News | No CM Thalapathy Vijay Tittle For Jana Nayagan Vijay Strong Stand

ತಮಿಳು ಚಿತ್ರರಂಗದ ಖ್ಯಾತ ನಟ, ತಮಿಳು ನಾಡು ಸಿಎಂ ದಳಪತಿ ವಿಜಯ್ ಅಭಿನಯದ ಕೊನೆಯ ಸಿನಿಮಾ ‘ಜನ ನಾಯಗನ್’ ಸಂಚಲನ ಮೂಡಿಸುತ್ತಿದೆ. ಈ ಸಿನಿಮಾದ ಮೂಲಕ ವಿಜಯ್ ತಮ್ಮ ಚಿತ್ರರಂಗದ ಸುದೀರ್ಘ ಪಯಣಕ್ಕೆ ವಿರಾಮ ಹಾಡಿ, ಪೂರ್ಣ ಪ್ರಮಾಣದಲ್ಲಿ ರಾಜಕೀಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಹೀಗಿರುವಾಗ, ಸಿನಿಮಾದ ಟೈಟಲ್ ಕಾರ್ಡ್ ವಿಷಯದಲ್ಲಿ ವಿಜಯ್ ತೆಗೆದುಕೊಂಡಿದ್ದಾರೆ ಎನ್ನಲಾದ ನಿರ್ಧಾರವೊಂದು ಈಗ ಸುದ್ದಿಯಲ್ಲಿದೆ.

ವರದಿಗಳ ಪ್ರಕಾರ, ‘ಜನ ನಾಯಗನ್’ ಚಿತ್ರದ ಆರಂಭದಲ್ಲಿ ವಿಜಯ್ ಅವರಿಗೆ ‘ಹಾನರೆಬಲ್ ಚೀಫ್ ಮಿನಿಸ್ಟರ್ ದಳಪತಿ ವಿಜಯ್’ ಎಂದು ಟೈಟಲ್ ಕಾರ್ಡ್ ಹಾಕಲು ಚಿತ್ರತಂಡ ಯೋಜಿಸಿತ್ತು. ವಿಜಯ್ ಅವರ ರಾಜಕೀಯ ಮಹತ್ವಾಕಾಂಕ್ಷೆಗೆ ಪೂರಕವಾಗಿ ಈ ಬಿರುದು ನೀಡಲು ಚಿತ್ರತಂಡ ಉತ್ಸುಕವಾಗಿತ್ತು. ಆದರೆ, ಈ ಪ್ರಸ್ತಾಪವನ್ನು ವಿಜಯ್ ನಯವಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ಬದಲಾಗಿ, ದಶಕಗಳಿಂದ ತಮ್ಮ ಅಭಿಮಾನಿಗಳು ಪ್ರೀತಿಯಿಂದ ಕರೆಯುವ ‘ದಳಪತಿ’ ಎಂಬ ಬಿರುದನ್ನೇ ಉಳಿಸಿಕೊಳ್ಳಲು ಅವರು ಸೂಚಿಸಿದ್ದಾರೆ ಎನ್ನಲಾಗಿದೆ.

ತಮ್ಮ ಸಿನಿಮಾ ಬದುಕು ಮತ್ತು ರಾಜಕೀಯ ಬದುಕಿನ ನಡುವೆ ಸ್ಪಷ್ಟವಾದ ಗೆರೆ ಇರಲಿ ಎಂಬುದು ವಿಜಯ್ ಅವರ ಆಶಯ. ಸಿನಿಮಾ ಪ್ರೇಕ್ಷಕರು ತಮ್ಮನ್ನು ಯಾವ ರೂಪದಲ್ಲಿ ನೋಡಲು ಇಷ್ಟಪಡುತ್ತಾರೋ ಅದೇ ಶೈಲಿಯಲ್ಲಿ ತೆರೆಯ ಮೇಲೆ ಕಾಣಿಸಿಕೊಳ್ಳುವುದು ಅವರ ಉದ್ದೇಶ. ‘ದಳಪತಿ’ ಎಂಬ ಬಿರುದು ಕೇವಲ ಹೆಸರಲ್ಲ, ಅದು ಅಭಿಮಾನಿಗಳ ಭಾವನೆ. ಹಾಗಾಗಿ ತಮ್ಮ ಕೊನೆಯ ಸಿನಿಮಾದಲ್ಲೂ ಅದೇ ಹೆಸರಿನಿಂದ ಗುರುತಿಸಿಕೊಳ್ಳಲು ಅವರು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ‘ಜನ ನಾಯಗನ್’ ಸಿನಿಮಾ ಬಿಡುಗಡೆ ತಡೆದಿದ್ದು ಯಾರು? ಮಾಹಿತಿ ನೀಡಿದ ನಿರ್ಮಾಪಕ

‘ಜನ ನಾಯಗನ್’ ಸಿನಿಮಾ ಈಗಾಗಲೇ ಸೆನ್ಸಾರ್ ಮಂಡಳಿಯ ತೊಡಕುಗಳು ಹಾಗೂ ದೃಶ್ಯಗಳ ಸೋರಿಕೆಯಿಂದಾಗಿ ಸಾಕಷ್ಟು ವಿಳಂಬವಾಗಿದ್ದು, ಸದ್ಯದಲ್ಲೇ ಹೊಸ ಬಿಡುಗಡೆಯ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿದೆ. ಈ ಚಿತ್ರದ ಮೂಲಕ ತಮ್ಮ ಸಿನಿಮಾ ಕೆರಿಯರ್‌ಗೆ ವಿಜಯ್ ಅದ್ಧೂರಿ ಮುಕ್ತಾಯ ಹಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Horoscope Today: ಇಂದು ಈ ರಾಶಿಯವರ ವಿವಾಹ ವಿಷಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 16, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷ, ಅಮಾವಾಸ್ಯೆ ತಿಥಿ ಮತ್ತು ಭರಣಿ ನಕ್ಷತ್ರದೊಂದಿಗೆ ವಿಶಿಷ್ಟ ಮಹತ್ವವನ್ನು ಹೊಂದಿದೆ.

ಇಂದಿನ ದಿನವು ಶನಿ ಜಯಂತಿ ಎಂದೂ ಆಚರಿಸಲ್ಪಡುವುದರಿಂದ, ಶನಿ ಸಾಡೆಸಾತಿ, ಅರ್ಧಾಷ್ಟಮ ಅಥವಾ ಅಷ್ಟಮ ಶನಿಯ ಪ್ರಭಾವದಲ್ಲಿರುವವರಿಗೆ ಶನಿ ಆರಾಧನೆಯಿಂದ ವಿಮುಕ್ತಿ ಪಡೆಯಲು ಉತ್ತಮ ಅವಕಾಶವಿದೆ. ಇದನ್ನು ಬಾದಾಮಿ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ. ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿ ಸಂಚರಿಸುತ್ತಾನೆ ಎಂದು ಗುರೂಜಿ ಹೇಳಿದ್ದಾರೆ. ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಅವರು ವಿವರಿಸಿದ್ದಾರೆ.

 

 

 

Source link

Daily Devotional: ಇದನ್ನು ಮಾಡಿ, ನಿಮ್ಮ ಶನಿ ದೋಷ ಬೇಗ ನಿವಾರಣೆಯಾಗುತ್ತದೆ! – Kannada News | How to Please Lord Shani? Shani Amavasya Puja Vidhi and Dosha Nivarana Tips

ಇಂದೇ ಶನೇಶ್ಚರ ಜಯಂತಿ. ಶನಿ ದೋಷ ನಿವಾರಣೆಗೆ ದಾರಿ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಶನಿ ದೇವನನ್ನು ನ್ಯಾಯಕಾರಕನೆಂದು ಪರಿಗಣಿಸಲಾಗುತ್ತದೆ. ನಮ್ಮ ಕರ್ಮಗಳಿಗೆ ಅನುಗುಣವಾಗಿ ಶುಭ ಅಶುಭ ಫಲಗಳನ್ನು ನೀಡುವವನು ಶನಿ. ಸಾಡೆ ಸಾತಿ, ಅರ್ಧಾಷ್ಟಮ, ಅಷ್ಟಮ, ಪಂಚಮ ಶನಿ ದೃಷ್ಟಿ ಮುಂತಾದ ಶನಿ ದೋಷಗಳಿಂದ ಬಳಲುತ್ತಿರುವವರಿಗೆ ಈ ದಿನ ಬಹಳ ಮುಖ್ಯವಾಗಿದೆ.

ಈ ಅಮಾವಾಸ್ಯೆಯಂದು ಶನಿ ದೋಷ ನಿವಾರಣೆಗಾಗಿ ಉಪವಾಸ, ಧ್ಯಾನ, ಪೂಜೆ ಹಾಗೂ ದಾನ ಮಾಡುವುದು ಅತ್ಯಂತ ಶುಭ. ಸಾಸಿವೆ ಎಣ್ಣೆ, ಎಳ್ಳೆಣ್ಣೆ, ಎಳ್ಳಿನ ಬತ್ತಿ ದೀಪಗಳನ್ನು ಹಚ್ಚುವುದು, ಶನಿ ಅಷ್ಟೋತ್ತರ ಪಠಿಸುವುದು, ಶನಿಗೆ ವಸ್ತ್ರ ಮತ್ತು ನೈವೇದ್ಯ ಅರ್ಪಿಸುವುದು ಉತ್ತಮ. ಹನುಮಾನ್ ಮತ್ತು ವೆಂಕಟೇಶ್ವರ ಸ್ವಾಮಿ ದೇಗುಲಗಳಿಗೆ ಭೇಟಿ ನೀಡುವುದೂ ಸಹ ಶನಿದೋಷ ನಿವಾರಣೆಗೆ ಸಹಕಾರಿ. ಪ್ರತಿಯೊಬ್ಬರೂ ಭಕ್ತಿಯಿಂದ ಆಚರಿಸುವುದರಿಂದ ಶನಿ ದೇವರ ಕೃಪೆಗೆ ಪಾತ್ರರಾಗಿ ಜೀವನದಲ್ಲಿ ಎದುರಾಗುವ ಕಷ್ಟಗಳಿಂದ ಮುಕ್ತಿ ಪಡೆಯಬಹುದು ಎಂದು ಗುರೂಜಿ ವಿವರಿಸಿದ್ದಾರೆ.

 

Source link

ಮೋದಿ ಬೆಂಗಳೂರು ಭೇಟಿ ವೇಳೆ ಜಿಲೆಟಿನ್ ಪತ್ತೆ ಪ್ರಕರಣದ ಅಸಲಿ ಕಾರಣ ಕೊನೆಗೂ ಬಯಲು! – Kannada News | Real Reason Behind Gelatin Sticks Found Near Art of Living During PM Modi’s Bengaluru Visit Revealed

ಜಿಲೆಟಿನ್ ಪತ್ತೆ ಪ್ರಕರಣImage Credit source: tv9

ಬೆಂಗಳೂರು, ಮೇ 16: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬೆಂಗಳೂರು (Bengaluru) ಭೇಟಿಯ ವೇಳೆ ಆರ್ಟ್ ಆಫ್ ಲೀವಿಂಗ್ (Art of Living) ಆಶ್ರಮದ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದ ಅಸಲಿ ಕಾರಣ ಕೊನೆಗೂ ತನಿಖೆಯಲ್ಲಿ ಬಯಲಾಗಿದೆ. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಈ ಪ್ರಕರಣವು ಯಾವುದೇ ಪ್ರಮುಖ ಉಗ್ರ ಸಂಘಟನೆಯ ಕೃತ್ಯವಲ್ಲ, ಬದಲಿಗೆ ಆಶ್ರಮದ ಮೇಲಿನ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಸಂಚು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಮುಖ್ಯಾಂಶಗಳು

  • ಪ್ರಧಾನಿ ಮೋದಿ ಅವರ ಭೇಟಿಯನ್ನು ರದ್ದುಗೊಳಿಸಿ, ಆಶ್ರಮಕ್ಕೆ ಭದ್ರತಾ ಭೀತಿ ಸೃಷ್ಟಿಸುವುದೇ ಜಿಲೆಟಿನ್ ಇಟ್ಟವರ ಮುಖ್ಯ ಉದ್ದೇಶವಾಗಿತ್ತು.
  • ಪತ್ತೆಯಾದ ಜಿಲೆಟಿನ್ ಬಾಕ್ಸ್‌ನಲ್ಲಿ ಡಿಟೋನೇಟರ್ ಇರಲಿಲ್ಲ
  • ಆಶ್ರಮದ ವಿರೋಧಿಗಳೇ ಸಿಸಿಟಿವಿ ಕ್ಯಾಮೆರಾಗಳಿಗೆ ಸಿಗದಂತೆ ಜಿಲೆಟಿನ್ ಇಟ್ಟು ಹೋಗಿರುವ ಶಂಕೆ.

ಘಟನೆಯ ವಿವರ

ಮೇ 10 ರಂದು ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಜನ್ಮದಿನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಶ್ರಮಕ್ಕೆ ಆಗಮಿಸಿದ್ದರು. ಆದರೆ ಪ್ರಧಾನಿ ಭೇಟಿಯ ಕೆಲವೇ ಗಂಟೆಗಳ ಮುನ್ನ ಆಶ್ರಮದ ಸಮೀಪ ಜಿಲೆಟಿನ್ ಪತ್ತೆಯಾಗಿದ್ದು ಇಡೀ ಪೊಲೀಸ್ ಇಲಾಖೆಯ ಭದ್ರತೆಯನ್ನೇ ಪ್ರಶ್ನಿಸುವಂತೆ ಮಾಡಿತ್ತು. ವಿಧಿವಿಜ್ಞಾನ ಪ್ರಯೋಗಾಲಯದ ಪರಿಶೀಲನೆ ವೇಳೆ, ಒಂದು ವೇಳೆ ಈ ಜಿಲೆಟಿನ್‌ಗೆ ಬೆಂಕಿ ತಗುಲಿದ್ದರೂ ಇದು ಸ್ಫೋಟಗೊಳ್ಳುತ್ತಿರಲಿಲ್ಲ ಎಂದು ತಿಳಿದುಬಂದಿದೆ. ರವಿಶಂಕರ್ ಗುರೂಜಿ ಅವರ ಪ್ರಭಾವವನ್ನು ಕುಗ್ಗಿಸಲು ಮತ್ತು ಪ್ರಧಾನಿ ಆಶ್ರಮಕ್ಕೆ ಬರದಂತೆ ತಡೆಯಲು ಈ ಸಂಚು ರೂಪಿಸಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಪೊಲೀಸರಿಗೆ ತಿಳಿದುಬಂದಿದೆ.

ಯಾವುದೇ ಸಿಸಿಟಿವಿ ಕ್ಯಾಮೆರಾಗಳಲ್ಲಿ ದೃಶ್ಯಾವಳಿಗಳು ದಾಖಲಾಗದ ಅತ್ಯಂತ ಸುರಕ್ಷಿತವಾದ ಜಾಗವನ್ನು ಆಯ್ದುಕೊಂಡು, ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 7 ಗಂಟೆಯ ಅವಧಿಯಲ್ಲಿ ಈ ಜಿಲೆಟಿನ್ ಇರಿಸಲಾಗಿತ್ತು. ಪ್ರಸ್ತುತ ಬೆಂಗಳೂರು ದಕ್ಷಿಣ ವಲಯ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಮೊಬೈಲ್ ಟವರ್ ಲೋಕೇಶನ್ (Tower Location) ಮತ್ತು ತಾಂತ್ರಿಕ ವಿಶ್ಲೇಷಣೆಯ ಮೂಲಕ ಆರೋಪಿಗಳ ಸುಳಿವು ಪತ್ತೆಹಚ್ಚಿದ್ದಾರೆ. ಪ್ರಧಾನಿ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದ್ದು, ಇನ್ನೆರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಆಕಾಂಕ್ಷೆಗಳು ಅಲ್ಪವಾದರೂ ಈಡೇರಿ, ಸಂತಸ… – Kannada News | Horoscope May 16 Satursday 2026; Dina Rashi Bhavishya Today, Checkout the details here

ಮೇಷ ರಾಶಿ:

ಒಂದೇ ರೀತಿಯ ಕೆಲಸದಿಂದ ಆಸಕ್ತಿ ಕುಂದಬಹುದು.‌ ಮಧ್ಯ ಸಣ್ಣ ವಿರಾಮವನ್ನು ನೀವು ಬಯಸುವಿರಿ. ನಿಮ್ಮನ್ನು ಲಕ್ಷಿಸಲು ಸಾಧ್ಯವಾಗದ ದೊಡ್ಡ ವ್ಯಕ್ತಿತ್ವ ನಿಮ್ಮದಾಗುವುದು. ಸ್ವಕೀಯರೇ ನಿಮ್ಮ ನಿಜವಾದ ವೇಗವನ್ನು ಕುಂಠಿತಗೊಳಿಸುವರು. ತಪ್ಪು ಮಾಹಿತಿ ನೀಡಿ ನಿಮ್ಮ ದಾರಿ ತಪ್ಪಿಸಬಹುದು. ನಿಮ್ಮ ಕೈಲಾಗುವ ಕೆಲಸವನ್ನು ಮಾಡಿ ಕಿಂಚಿತ್ ಆದಾಯವನ್ನು ಮಾಡಿಕೊಳ್ಳುವಿರಿ. ನಿಮ್ಮ ಪ್ರಗತಿಯ ಬಗ್ಗೆ ಇತರರು ಪ್ರಶಂಸಿಸಬಹುದು. ಉದ್ಯಮದ ವಿಚಾರದಲ್ಲಿ ನೌಕರರಿಂದ ಹಿನ್ನಡೆಯಾಗಲಿದೆ.

ವೃಷಭ ರಾಶಿ:

ಅತಿಯಾದ ತಂಪು ವಸ್ತುಗಳನ್ನು ಸೇವಿಸಿ ಆರೋಗ್ಯ ಕೆಡುವುದು. ನಿಮ್ಮ ದೌರ್ಬಲ್ಯವನ್ನು ಉಪಯೋಗಿಸಿಕೊಳ್ಳಬಹುದು. ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗುವುದು. ಕೆಲಸದ ಮೆಚ್ಚುಗೆಗಳು ಸಂತೋಷವನ್ನುಂಟುಮಾಡುತ್ತವೆ. ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ಪ್ರವೃತ್ತರಾಗಿ ಕಾರ್ಯದಲ್ಲಿ ನಿಷ್ಠೆಯನ್ನು ತೋರಿಸಿ. ಮನೆಯ ವಾಸವನ್ನು ಬದಲಾಯಿಸುವಿರಿ. ಪ್ರೀತಿಯ ಸುಖದಿಂದ ವಂಚಿತರಾಗುವಿರಿ.

ಮಿಥುನ ರಾಶಿ:

ಯಾರೇ ಆದರೂ ಅವರನ್ನು ಒಂದು ಹಂತದವರಗೆ ಮಾತ್ರ ಒಳಗೆ ಕರೆಯುವುದು ಸೂಕ್ತ. ಬಾಂಧವ್ಯದಲ್ಲಿ ವ್ಯವಹಾರ ಕಷ್ಟವಾದೀತು. ನೆರೆಯವರು ನಿಮ್ಮ ಹಳೆಯ ವಿಷಯಗಳನ್ನು ನೆನೆಸಿಕೊಳ್ಳದೇ ಪ್ರಸ್ತುತದತ್ತ ಗಮನ ಹರಿಸಿ. ಹಿಂದೆ ಮುಂದೆ ಯೋಚಿಸದೆ ಏಕಾಏಕಿಯಾಗಿ ಯಾರಿಗೂ ಮಾತು ಕೊಡುವುದು ಬೇಡ. ಸಣ್ಣ ವಿಚಾರಕ್ಕೆ ದ್ವೇಷ ಸಾಧಿಸುವುದು ಸರಿಯಾಗದು. ಹೊಂದಾಣಿಕೆಯ ಕಡೆ ನಿಮ್ಮ ಗಮನವಿರಲಿ.

ಕರ್ಕಾಟಕ ರಾಶಿ:

ಎಲ್ಲ ಕಾರ್ಯ ಮಾಡಲು ನಿಮಗೆ ಇಂದು ಬಹಳ ಸಮಯ ಇರುವಂತೆ ತೋರುತ್ತದೆ. ಕಾನೂನು ಕೆಲಸದಲ್ಲಿ ಎಚ್ಚರಿಕೆ ಇರಲಿ. ಯಾವ ಕಾರ್ಯಕ್ಕೂ ಮುಂಚಿತವಾಗಿ ಹಣ ಕೊಡುವುದು ಬೇಡ. ಆರ್ಥಿಕ ಒತ್ತಡದಿಂದ ಚಿಕ್ಕ ಏರುಪೇರು ಆಗಬಹುದು. ನಿಮಗೆ ಸಂಬಂಧಿಸಿದ ವಿಚಾರದಲ್ಲಿ ಮಾತ್ರ ನಿಮ್ಮ ಹಸ್ತಕ್ಷೇಪ ಇರಲಿ. ಪೋಷಕರಿಗೆ ಮಹತ್ವಾಕಾಂಕ್ಷೆಯನ್ನು ಬಹಿರಂಗಪಡಿಸುವಿರಿ. ಇಂದು ತಲ್ಲೀನರಾಗಿ ಎಲ್ಲ ಕಾರ್ಯವನ್ನು ಮಾಡುವಿರಿ.

ಸಿಂಹ ರಾಶಿ :

ಇಂದು ನೀವು ಅನಾಯಾಸವಾಗಿ ವೃತ್ತಿಯಲ್ಲಿ ತೊಡಗುವಿರಿ. ಕುಟುಂಬದಲ್ಲಿ ನಡೆಯಲಿರುವ ವಿವಾಹ ಕಾರ್ಯದ ಓಡಾಟವಿರುವುದು. ಉತ್ತಮ ಯೋಚನಾ ಶಕ್ತಿಯಿಂದ ಮಾರ್ಗವನ್ನು ಹುಡುಕುವಿರಿ. ಜಾಣ್ಮೆಯಿಲ್ಲದೇ ಸಣ್ಣ ಖರ್ಚು ಕೂಡ ದೊಡ್ಡದಾಗಬಹುದು. ಪ್ರಭಾವಿಗಳ ಶಿಫಾರಸು ಇದ್ದರೂ ಕೆಲಸ ಸಾಧ್ಯವಾಗದು. ಯಾರನ್ನೂ ದೂಷಿಸುವುದು ನಿಮಗೆ ಹೇಳಿಸಿದ್ದಲ್ಲ. ಕೃಷಿಗೆ ಸಂಬಂಧಿಸಿದ ಕಾರ್ಯವನ್ನು ವೇಗವಾಗಿ ಮಾಡಿಕೊಳ್ಳಿ. ಮಕ್ಕಳ ವಿವಾಹದ ಚಿಂತೆಯು ಕಾಡಬಹುದು.

ಕನ್ಯಾ ರಾಶಿ:

ವಾಹನ ಸಂಚಾರಕ್ಕೆ ನಿಮಗೆ ಅನೇಕ ಅಡ್ಡಿಗಳು ಬರಬಹುದು. ಇಂದಿನ ಕೆಲಸಗಳು ಬೇಗ ಕೆಲಸದಲ್ಲಿ ನಿಮ್ಮ ಚುರುಕು ಮೆಚ್ಚುಗೆಯನ್ನು ಗಳಿಸಬಹುದು. ಔಷಧದಿಂದ ದುಷ್ಪರಿಣಾಮವಾಗಬಹುದು. ಹಳೆಯ ಹೂಡಿಕೆಗಳು ಲಾಭದ ಸಂಕೇತ ತೋರಿಸುತ್ತವೆ. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ನಿಮ್ಮ ಬಗ್ಗೆ ನಕಾರಾತ್ಮಕ ಮಾತುಗಳನ್ನು ಕೇಳಬೇಕಾಗುವುದು. ಒಮ್ಮೆಲೆ ಕಷ್ಟಗಳು ಬರುವುದರಿಂದ ಧೃತಿಗೆಡುವ ಅವಶ್ಯಕತೆ ಇರುವುದಿಲ್ಲ.

ತುಲಾ ರಾಶಿ:

ನಿಮ್ಮ ವ್ಯಾಪಾರವು ಅಜ್ಞಾನದಿಂದ ನಷ್ಟವಾಗುತ್ತದೆ. ಮಕ್ಕಳಿಂದ ನೆಮ್ಮದಿಯು ನಿಮಗೆ ಸಿಗುತಗತದೆ. ಹಣಕ್ಕಾಗಿ ಕಿರಿಕಿರಗಳು ಅಧಿಕವಾದಂತೆ ತೋರುವುದು. ಹೂಡಿಕೆಗೆ ಮೊದಲು ಎಲ್ಲವನ್ನೂ ಅಧ್ಯಯನ ಮಾಡಿ. ನಿಮ್ಮ ತಾಳ್ಮೆಯೇ ಗುರಿಯನ್ನು ತಲುಪಲು ಸಹಕಾರಿಯಾಗಿರುವುದು. ಮನಃಶಾಂತಿಗೆ ಧ್ಯಾನವನ್ನು ರೂಢಿ ಮಾಡಿಕೊಳ್ಳಿ. ಮಹಿಳೆಯರಿಗೆ ಈ ದಿನ‌ ಶುಭವಿರುವುದು. ಅಧಿಕ ಆದಾಯದಿಂದ ನಿಮ್ಮ ನೆಮ್ಮದಿಯ ಹರಣವಾಗಿದೆ ಎಂದು ಅನ್ನಿಸಬಹುದು.

ವೃಶ್ಚಿಕ ರಾಶಿ:

ನಿಮ್ಮ ಆದಾಯವನ್ನು ಶ್ರಮದಿಂದ ಹೆಚ್ಚು ಮಾಡಿಕೊಳ್ಳುವಿರಿ. ಕೆಲಸದಲ್ಲಿ ಅವಕಾಶಗಳು ಸಿಗಬಹುದು ಆದರೆ ತೀರ್ಮಾನದಲ್ಲಿ ತಾಳ್ಮೆ ಅಗತ್ಯ. ಬಟ್ಟೆಯನ್ನು ಮನೆಯವರಿಗೆ ಖರೀದಿ‌ಮಾಡುವಿರಿ. ಖರ್ಚುಗಳು ನಿಮ್ಮ ಮೇಲೆ ಒತ್ತಡ ತರುತ್ತವೆ. ಅದೃಷ್ಟವನ್ನು ಮಾತ್ರ ನಂಬಿ ಕೆಲಸ ಮಾಡುವುದು ಬೇಡ. ನೀವು ಪಡೆದ ಸಾಲವನ್ನು ಮರುಪಾವತಿಸುವಿರಿ. ಸರ್ಜನಾತ್ಮಕವಾಗಿ ಏನನ್ನಾದರೂ ಮಾಡಲು ಹೋಗಿ ಎಡವುವಿರಿ.

ಧನು ರಾಶಿ:

ಚಂಚಲ ಮನಸ್ಸಿನಿಂದ ಕಾರ್ಯವನ್ನು ಸಾಧಿಸಲಾಗದು. ಬಹಳ ದಿನಗಳ ಅನಂತರ ಸಹೋದರರ ಭೇಟಿಯಾಗಲಿದ್ದು, ಸಂತೋಷವು ಇಮ್ಮಡಿಸುವುದು. ನಿಮ್ಮ ಆಕ್ರೋಶವನ್ನು ಮನೆಯಲ್ಲಿ ಹೊರಹಾಕುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ಉಜ್ವಲ ಭವಿಷ್ಯಕ್ಕಾಗಿ ಸಮರ್ಪಿತ ಯತ್ನ ಅಗತ್ಯ. ಅಧಿಕಾರ ಪ್ರಾಪ್ತಿಗಾಗಿ ನೀವು ತಂತ್ರ ಹೂಡುವಿರಿ. ಅನಗತ್ಯ ವಾದ ವಿವಾದಗಳಿಂದ ದೂರವಿರಿ.

ಮಕರ ರಾಶಿ:

ನೀವು ಕುಟುಂಬದವರ ಅನಾರೋಗ್ಯದ ಕಾಳಜಿ‌ ಮಾಡಬೇಕಾಗುವುದು. ಕೆಲಸದ ಕಡೆಗೆ ಹೆಚ್ಚಿನ ಗಮನ ನೀಡಿದರೂ ಮನಸ್ಸು ಬೇರೆಡೆ ಇರಬಹುದು. ಹಣಕಾಸು ಸ್ಥಿತಿಯಲ್ಲಿ ನಿರ್ವಹಣಾ ಜಾಣತನ ಅಗತ್ಯ. ಸಹೋದ್ಯೋಗಿಯಿಂದ ಸ್ಪರ್ಧಾತ್ಮಕ ಮನೋಭಾವನೆ ಎದುರಾಗಬಹುದು. ಅಂತರ್ಜಾಲದಿಂದ ಸಂಗಾತಿಯನ್ನು ಹುಡುಕುವ ಪ್ರಯತ್ನ ಮಾಡುವಿರಿ. ಹೊಸ ವಿಷಯ ಕಲಿಯಲು ಉತ್ತಮ ಸಮಯ. ಅಶಕ್ತರಿಗೆ ಸಹಾಯ ನಿಮ್ಮಿಂದ ಸಹಕಾರ ನೀಡಿ.

ಕುಂಭ ರಾಶಿ:

ಪರಸ್ಪರ ಪ್ರೀತಿಯು ದಾಂಪತ್ಯದಲ್ಲಿ ಹೊಂದಾಣಿಕೆ ಬೆಳೆಯುವುದು. ಉದ್ಯೋಗದಲ್ಲಿ ಚುರುಕು ಮತ್ತು ಯೋಜನೆ ಮುಖ್ಯ. ಹಣಕಾಸಿನಲ್ಲಿ ಸ್ಥಿರತೆ ಇದ್ದರೂ ಸಾಲ ಅಥವಾ ಸಾಲಕೊಡಿಕೆ ಬೇಡ. ಇಂದು ನಿಮ್ಮಲ್ಲಿ ಆತ್ಮಸ್ಥೈರ್ಯವು ಇರಲಿದೆ. ಮೈಯ್ಯಲ್ಲ ಕಣ್ಣಿದ್ದರೂ ನಿಮಗೆ ವಂಚಿಸುವವರು ಇರುವರು. ದುಸ್ಸಾಹಸಕ್ಕೆ ಹೋಗಿ ಕೈ ಸುಟ್ಟುಕೊಳ್ಳುವಿರಿ. ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ.

ಮೀನ ರಾಶಿ:

ಅನ್ಯರ ಕಾರಣದಿಂದ ಧನವು ವ್ಯಯವಾಗುವ ಬಗ್ಗೆ ನಿಮಗೆ ಅಸಮಾಧಾನವಿದ್ದು, ಅದನ್ನು ಸರಿಯಾದ ಉಳಿಸಿಕೊಳ್ಳುವಂತೆ ನೋಡಿಕೊಳ್ಳಿ. ಹಣಕಾಸು ಸಂಬಂಧಿತ ವಿಷಯಗಳು ನಿಮ್ಮ ಗಮನಕ್ಕೆ ಬರುತ್ತವೆ. ಮಕ್ಕಳ ಸಾಧನೆ ಸಂತೋಷ ನೀಡಲಿದೆ. ಪ್ರೀತಿಯಲ್ಲಿ ಚಿಕ್ಕ ಚಿಕ್ಕ ವ್ಯತ್ಯಾಸಗಳನ್ನು ಸಮಾಧಾನದಿಂದ ಮುಗಿಸಿ. ಅನಗತ್ಯ ಚರ್ಚೆಗಳಿಗೆ ದೂರವಿರಿ. ಮನೆ ಹಿರಿಯರ ಆರೋಗ್ಯದ ಕಡೆ ಗಮನ ನೀಡಿ. ಕಾರ್ಯದಲ್ಲಿ ಶ್ರದ್ಧೆಯು ಕಡಿಮೆಯಾಗುವುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಕೃತ್ತಿಕಾ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಭರಣೀ, ಯೋಗ : ಸೌಭಾಗ್ಯ, ಕರಣ : ಚತುಷ್ಪಾತ್, ಸೂರ್ಯೋದಯ – 05 – 58 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:10 – 10:45, ಯಮಗಂಡ ಕಾಲ 13:57 – 15:32, ಗುಳಿಕ ಕಾಲ 05:58 – 07:34

-ಲೋಹಿತ ಹೆಬ್ಬಾರ್ – 8762924271 (what’s app only)

Source link

Exit mobile version