ಔಟರ್ ರಿಂಗ್ ರಸ್ತೆಯಲ್ಲಿ ಶೀಘ್ರದಲ್ಲೇ ಆದ್ಯತಾ ಪಥ: ಟ್ರಾಫಿಕ್ ಕಿರಿಕಿರಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ – Kannada News | BMTC Bus Lane Returns to Bengaluru’s ORR: Solution to Ease IT Corridor Traffic Congestion
ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 15: ಬೆಂಗಳೂರಿನ (Bangaluru) ಹೊರವರ್ತುಲ ರಸ್ತೆಯಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಬಸ್ ಪಥವನ್ನ ಹೊಸ ರೂಪದಲ್ಲಿ ಅಂದರೆ ಆದ್ಯತಾ ಪಥವನ್ನಾಗಿ ಮತ್ತೆ ಅನುಷ್ಠಾನ ಮಾಡಲು ಅಧಿಕಾರಿಗಳು ಸಜ್ಜಾಗಿದ್ದಾರೆ. ಈ ಮೂಲಕ ಐಟಿಬಿಟಿ ಕಂಪನಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಟ್ರಾಫಿಕ್ (traffic) ದಟ್ಟಣೆ ನಿಯಂತ್ರಣ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರು ಸಿದ್ಥತೆ ನಡೆಸಿದ್ದಾರೆ. ಮುಖ್ಯಾಂಶಗಳು ಹೊರವರ್ತುಲ ರಸ್ತೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಬಿಎಂಟಿಸಿ ಆದ್ಯತಾ ಪಥ…