ಪ್ರವಾಸಿಗರ ತಪ್ಪಿಗೆ ಪರಿತಪ್ಪಿಸಿದ ವಾನರ​: ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​ – Kannada News | Chamarajanagar: Monkey Struggles After Getting Stuck in Plastic Cover; Video Goes Viral

ಚಾಮರಾಜನಗರ, ಮೇ 15: ಪ್ರವಾಸಿಗರ ಬೇಜವಾಬ್ದಾರಿಗೆ ಮೂಕಪ್ರಾಣಿಗಳು ಸಂಕಷ್ಟಕ್ಕೆ ಸಿಲುಕುವ ಘಟನೆಗಳು ಬಂಡೀಪುರದಲ್ಲಿ ಮರುಕಳಿಸುತ್ತಲೇ ಇವೆ. ತಿಂದು ಬಿಸಾಡಿದ ಪ್ಲಾಸ್ಟಿಕ್ ಚೀಲ ಕೋತಿಯ ತಲೆಗೆ ಸಿಲುಕಿ ಅರ್ಧ ಗಂಟೆಗೂ ಹೆಚ್ಚು ಕಾಲ ಪರದಾಡಿದ ಹೃದಯ ವಿದ್ರಾವಕ ಘಟನೆ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಊಟಿ-ಗುಂಡ್ಲುಪೇಟೆ ಹೆದ್ದಾರಿಯಲ್ಲಿ, ಬಂಡೀಪುರ ಹಳೆಯ ಡಿಸಿಎಫ್ ಕಚೇರಿಯ ಕೂಗಳತೆ ದೂರದಲ್ಲೇ ಈ ಘಟನೆ ನಡೆದಿದ್ದು, ಪ್ಲಾಸ್ಟಿಕ್ ಚೀಲದಲ್ಲಿ ಮುಖ ಸಿಲುಕಿಕೊಂಡು ನಡೆದಾಡುತ್ತಿದ್ದ ಕೋತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ವಾರ ನಡೆದ ಈ ಘಟನೆಯನ್ನು ನೋಡಿ ಪರಿಸರ ಪ್ರೇಮಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದು ಕಾಡುಪ್ರಾಣಿಗಳಿಗೆ ಮಾರಕವಾಗುತ್ತಿದ್ದು, ಬಂಡೀಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತಗೊಳಿಸಬೇಕು ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

1300 ಕೋಟಿ ರೂ. ಬೆಲೆಯ ಡ್ರೆಸ್ ಧರಿಸಿ ಕಾನ್ ಚಿತ್ರೋತ್ಸವಕ್ಕೆ ಬಂದಿದ್ದ ದರ್ಶನ್ ಸಿನಿಮಾ ನಟಿ – Kannada News | Urvashi Rautela most expensive Cannes Red Carpet look costs Rs 1300 Cr in 2025

ಕಳೆದ ಎರಡು ದಶಕಗಳಲ್ಲಿ ಕಾನ್ ಸಿನಿಮೋತ್ಸವ (Cannes Film Festival) ಕೇವಲ ಸಿನಿಮಾಗಳ ಪ್ರದರ್ಶನಕ್ಕಷ್ಟೇ ಸೀಮಿತವಾಗಿರದೆ, ವಿಶ್ವದ ಅತ್ಯಂತ ದೊಡ್ಡ ಫ್ಯಾಷನ್ ಹಬ್ಬವಾಗಿಯೂ ಹೊರಹೊಮ್ಮಿದೆ. ಜಗತ್ತಿನ ಹೆಸರಾಂತ ತಾರೆಯರು ಟಾಪ್ ಡಿಸೈನರ್‌ಗಳು ವಿನ್ಯಾಸಗೊಳಿಸಿದ ಉಡುಗೆ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ವಜ್ರಾಭರಣಗಳನ್ನು ತೊಟ್ಟು ಇಲ್ಲಿನ ರೆಡ್ ಕಾರ್ಪೆಟ್ ಮೇಲೆ ಮಿಂಚುತ್ತಾರೆ. ಒಬ್ಬರಿಗಿಂತ ಒಬ್ಬರು ಅದ್ದೂರಿಯಾಗಿ ಕಾಣಿಸಿಕೊಳ್ಳಲು ಪೈಪೋಟಿ ನಡೆಸುತ್ತಾರೆ. ಕನ್ನಡದ ‘ಮಿಸ್ಟರ್ ಐರಾವತ’ ಸಿನಿಮಾದಲ್ಲಿ ದರ್ಶನ್ ಜೊತೆ ಅಭಿನಯಿಸಿದ್ದ ನಟಿ ಊರ್ವಶಿ ರೌಟೇಲಾ (Urvashi Rautela) ಕಳೆದ ವರ್ಷ ಕಾನ್ ಇತಿಹಾಸದಲ್ಲೇ ಯಾರೂ ಊಹಿಸಲೂ ಸಾಧ್ಯವಿಲ್ಲದಂತಹ ಬರೋಬ್ಬರಿ 156 ಮಿಲಿಯನ್ ಡಾಲರ್ (ಸುಮಾರು 1,300 ಕೋಟಿ ರೂಪಾಯಿಗೂ ಅಧಿಕ) ಮೌಲ್ಯದ ಲುಕ್‌ನಲ್ಲಿ ಕಾಣಿಸಿಕೊಂಡು ಇಡೀ ಜಗತ್ತೇ ಹುಬ್ಬೇರಿಸುವಂತೆ ಮಾಡಿದ್ದರು.

2025ರ ಕಾನ್ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದ ಊರ್ವಶಿ ರೌಟೇಲಾ ಒಟ್ಟು ಮೂರು ಬಾರಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ್ದರು. ಅವರ ಮೊದಲ ದಿನದ ಲುಕ್ ಅತ್ಯಂತ ಹೆಚ್ಚು ಗಮನ ಸೆಳೆಯಿತು. ಅಂದು ಅವರು ಮೈಕಲ್ ಸಿಂಕೋ ವಿನ್ಯಾಸಗೊಳಿಸಿದ ಹೊಳೆಯುವ ಗೌನ್ ಧರಿಸಿದ್ದರು. ಇದರೊಂದಿಗೆ ಹಕ್ಕಿಯ ಆಕಾರದಲ್ಲಿದ್ದ ವಿಶಿಷ್ಟವಾದ ಕೈಚೀಲ ಮತ್ತು ಅತ್ಯಂತ ಅಪರೂಪದ ಆಭರಣಗಳನ್ನು ಧರಿಸಿದ್ದರು.

ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿ ಪ್ರಕಾರ, ಊರ್ವಶಿ ಅವರ ಆ ದಿನದ ಸಂಪೂರ್ಣ ಲುಕ್‌ನ ಒಟ್ಟು ಮೌಲ್ಯ ಬರೋಬ್ಬರಿ 155.9 ಮಿಲಿಯನ್ ಡಾಲರ್ (1300 ಕೋಟಿ ರೂಪಾಯಿಗೂ ಅಧಿಕ). ವಿಶೇಷವೆಂದರೆ, ಈ ಮೊತ್ತವು ಕಳೆದ ವರ್ಷ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಅತಿ ಹೆಚ್ಚು ಕಮಾಯಿ ಮಾಡಿದ್ದ ‘ಧುರಂಧರ್’ ಸಿನಿಮಾದ ಒಟ್ಟು ಗಳಿಕೆಗಿಂತಲೂ ಹೆಚ್ಚಾಗಿತ್ತು!

ಈ ಮೂಲಕ ಕಾನ್ ಸಿನಿಮೋತ್ಸವದ ಇತಿಹಾಸದಲ್ಲೇ ಅತ್ಯಂತ ದುಬಾರಿ ಉಡುಗೆ ತೊಟ್ಟಿದ್ದ ಕಿಮ್ ಕರ್ದಾಶಿಯಾನ್ (ಮರ್ಲಿನ್ ಮನ್ರೋ ಅವರ 5 ಮಿಲಿಯನ್ ಡಾಲರ್ ಮೌಲ್ಯದ ಐಕಾನಿಕ್ ಡ್ರೆಸ್) ಅವರ ದಾಖಲೆಯನ್ನು ಊರ್ವಶಿ ಅತ್ಯಂತ ಸುಲಭವಾಗಿ ಮುರಿದರು. ಹಾಗಾದರೆ ಊರ್ವಶಿ ಧರಿಸಿದ್ದ ಆ ಬಟ್ಟೆಯಲ್ಲಿ ಅಂತಹ ವಿಶೇಷ ಏನಿತ್ತು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಇದನ್ನೂ ಓದಿ: ‘ಯಾರೂ ನಿನ್ನನ್ನು ಗಮನಿಸಲಿಲ್ಲ’ ಎಂದು ಟ್ರೋಲ್ ಮಾಡಿದವರಿಗೆ ಆಲಿಯಾ ಭಟ್ ಖಡಕ್ ಉತ್ತರ

ಊರ್ವಶಿ ಧರಿಸಿದ್ದ ಮೈಕಲ್ ಸಿಂಕೋ ಗೌನ್ ಸಂಪೂರ್ಣವಾಗಿ ಮೆಕ್ಸಿಕನ್ ಕಲೆಯ ಮೊಸಾಯಿಕ್ ವಿನ್ಯಾಸದಿಂದ ಕೂಡಿತ್ತು. ಅದರ ಅದ್ಭುತ ಕರಕುಶಲತೆ, ವಿನ್ಯಾಸ ಮತ್ತು ಸಾಂಸ್ಕೃತಿಕ ಮಹತ್ವದಿಂದಾಗಿ ಆ ಗೌನ್‌ನ ಬೆಲೆಯೇ ಬರೋಬ್ಬರಿ 4.8 ಮಿಲಿಯನ್ ಡಾಲರ್ (ಸುಮಾರು 40 ಕೋಟಿ ರೂಪಾಯಿ) ಆಗಿತ್ತು. ಇನ್ನು, ಅವರು ಕೈಯಲ್ಲಿ ಹಿಡಿದಿದ್ದ ಗಿಳಿಯ ಆಕಾರದ ಕ್ಲಚ್ ಬೆಲೆ 50,000 ಡಾಲರ್ (41 ಲಕ್ಷ ರೂಪಾಯಿಗೂ ಅಧಿಕ ) ಎಂದು ವರದಿಯಾಗಿತ್ತು.

ಅಷ್ಟೇ ಅಲ್ಲದೇ, 151 ಮಿಲಿಯನ್ ಡಾಲರ್ ಮೌಲ್ಯದ ವಜ್ರಗಳನ್ನು ಅವರು ಧರಿಸಿದ್ದರು. ಊರ್ವಶಿ ಅವರ ಇಡೀ ಲುಕ್ ಇಷ್ಟೊಂದು ದುಬಾರಿಯಾಗಲು ಇದೇ ಮುಖ್ಯ ಕಾರಣ. ‘ಮನಿ ಕಂಟ್ರೋಲ್’ ವರದಿ ಪ್ರಕಾರ, ಊರ್ವಶಿ ಅಂದು ಜಗತ್ತಿನ ಅತ್ಯಂತ ಅಪರೂಪದ ಮತ್ತು ಅತ್ಯಮೂಲ್ಯವಾದ ವಜ್ರಗಳನ್ನು ಧರಿಸಿದ್ದರು. ಮೌಸಾಯೆಫ್ ರೆಡ್ ಡೈಮಂಡ್, ಒಪೆನ್‌ಹೈಮರ್ ಬ್ಲೂ ಡೈಮಂಡ್, ಡ್ರೆಸ್ಡೆನ್ ಗ್ರೀನ್ ಡೈಮಂಡ್, ಟಿಫಾನಿ ಯೆಲ್ಲೋ ಡೈಮಂಡ್ ಸೇರಿ ಎಲ್ಲ ಆಭರಣಗಳ ಬೆಲೆ 151 ಮಿಲಿಯನ್ ಡಾಲರ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

LSG vs CSK IPL 2026 Live Score: ಸಿಎಸ್​ಕೆ ಬ್ಯಾಟಿಂಗ್ ಆರಂಭ – Kannada News | Lucknow Super Giants vs Chennai Super Kings IPL 2026 Live Cricket Score LSG vs CSK Match on 15th May latest news in Kannada

  • 15 May 2026 07:41 PM (IST)

    LSG vs CSK IPL 2026: ಇನಿಂಗ್ಸ್ ಆರಂಭ

    ಸಿಎಸ್‌ಕೆ ಪರ ಸಂಜು ಸ್ಯಾಮ್ಸನ್ ಮತ್ತು ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸಿದರು. ಶಮಿ ಮೊದಲ ಓವರ್ ಎಸೆದರು, ಸಂಜು ಅವರ ಬೌಲಿಂಗ್‌ನಲ್ಲಿ ಮೂರು ಬೌಂಡರಿ ಬಾರಿಸಿದರು.

  • 15 May 2026 07:13 PM (IST)

    LSG vs CSK IPL 2026: ಸಿಎಸ್​ಕೆ

    ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಪ್ರಶಾಂತ್ ವೀರ್, ಅನ್ಶುಲ್ ಕಾಂಬೋಜ್, ನೂರ್ ಅಹ್ಮದ್, ಸ್ಪೆನ್ಸರ್ ಜಾನ್ಸನ್, ಮುಖೇಶ್ ಚೌಧರಿ.

  • 15 May 2026 07:12 PM (IST)

    LSG vs CSK IPL 2026: ಲಕ್ನೋ ತಂಡ

    ಮಿಚೆಲ್ ಮಾರ್ಷ್, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್ (ವಿಕೆಟ್ ಕೀಪರ್/ನಾಯಕ), ಮುಕುಲ್ ಚೌಧರಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಮೊಹಮ್ಮದ್ ಶಮಿ, ಮಯಾಂಕ್ ಯಾದವ್, ಆಕಾಶ್ ಮಹಾರಾಜ್ ಸಿಂಗ್, ಪ್ರಿನ್ಸ್ ಯಾದವ್.

  • 15 May 2026 07:02 PM (IST)

    LSG vs CSK IPL 2026 Live Score: ಟಾಸ್ ಗೆದ್ದ ಲಕ್ನೋ

    ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ನಾಯಕ ರಿಷಭ್ ಪಂತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಸಿಎಸ್​ಕೆ ಮೊದಲು ಬ್ಯಾಟಿಂಗ್ ಮಾಡಲಿದೆ.

  • Source link

    ಹಾರ್ಮುಜ್ ಜಲಸಂಧಿಯ ತಲೆನೋವೇ ಬೇಡ; ಆಯಿಲ್ ಪೈಪ್​ಲೈನ್ ಯೋಜನೆ ಜಾರಿಗೆ ಯುಎಇ ಮುಂದು – Kannada News | UAE’s New Pipeline Project: Enhancing Energy Security & Global Oil Supply from Fujairah

    ಆಯಿಲ್ ಪೈಪ್​ಲೈನ್ ಯೋಜನೆImage Credit source: AI/Mediaforge/TV9

    ದುಬೈ, ಮೇ 15: ತೈಲ ರಫ್ತು ವಿಸ್ತರಿಸಲು ಮತ್ತು ಸುಗಮಗೊಳಿಸಲು ಯುಎಇ ದೇಶವು ತನ್ನ ಆಯಿಲ್ ಪೈಪ್​ಲೈನ್ ಯೋಜನೆಯ (UAE Oil Pipeline Project) ಕಾರ್ಯಕ್ಕೆ ಚುರುಕು ನೀಡಲು ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿಯು (Strait of Hormuz) ಇರಾನ್-ಅಮೆರಿಕ ಯುದ್ಧದಿಂದಾಗಿ ತಡೆಗೊಂಡಿರುವುದರಿಂದ ತೈಲ ಪೂರೈಕೆಯಲ್ಲಿ ಬಹಳ ವ್ಯತ್ಯಯ ಆಗಿದೆ. ಯುಎಇ ಇತ್ಯಾದಿ ಗಲ್ಫ್ ರಾಷ್ಟ್ರಗಳ ತೈಲ ರಫ್ತಿಗೆ ಸಂಚಕಾರವಾಗಿದೆ. ಹೀಗಾಗಿ, ತೈಲ ರಫ್ತಿಗೆ ಹಾರ್ಮುಜ್ ಜಲಸಂಧಿಯ ಮೇಲೆ ಅವಲಂಬನೆ ಕಡಿಮೆ ಮಾಡಲು ಯುಎಇಗೆ ಈಗ ಆಯಿಲ್ ಪೈಪ್​ಲೈನ್ ಯೋಜನೆ ಒಂದು ಪ್ರಮುಖ ಮಾರ್ಗವಾಗಿದೆ. ಈ ಯೋಜನೆ ಜಾರಿಯನ್ನು ಬೇಗ ಮಾಡಲು ಯುಎಇ ನಿರ್ಧರಿಸಿದೆ.

    ಈ ಯೋಜನೆಯನ್ನು ‘ವೆಸ್ಟ್-ಈಸ್ಟ್ ಪೈಪ್‌ಲೈನ್’ (West-East Pipeline) ಎಂದು ಕರೆಯಲಾಗುತ್ತದೆ. ಒಮನ್ ಕೊಲ್ಲಿಯ ಕರಾವಳಿಯಲ್ಲಿರುವ ಫುಜೈರಾ (Fujairah) ಮೂಲಕ ತೈಲ ರಫ್ತು ಮಾಡುವ ಸಾಮರ್ಥ್ಯವನ್ನು ದ್ವಿಗುಣಗೊಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಪೈಪ್‌ಲೈನ್ ನಿರ್ಮಾಣ ಕಾರ್ಯವು ಈಗಾಗಲೇ ನಡೆಯುತ್ತಿದ್ದು, 2027 ರ ವೇಳೆಗೆ ಇದು ಪೂರ್ಣಗೊಂಡು ಕಾರ್ಯಾಚರಣೆಗೆ ಮುಕ್ತವಾಗುವ ನಿರೀಕ್ಷೆಯಿದೆ.

    ಇದನ್ನೂ ಓದಿ: ಹಾರ್ಮುಜ್‌ ಸುತ್ತಲಿನ ಪ್ರದೇಶವೂ ಸುರಕ್ಷಿತವಲ್ಲ! ಮತ್ತೆ ಭಾರತದ ಹಡಗಿನ ಮೇಲೆ ದಾಳಿ

    ಈ ಆಯಿಲ್ ಪೈಪ್​ಲೈನ್ ಯೋಜನೆಯ ಹಿನ್ನೆಲೆ ಮತ್ತು ಮಹತ್ವ

    ಹಾರ್ಮುಜ್ ಜಲಸಂಧಿಯು ವಿಶ್ವದ ಅತ್ಯಂತ ಪ್ರಮುಖ ಮತ್ತು ಜನನಿಬಿಡ ತೈಲ ಸಾಗಣೆ ಮಾರ್ಗವಾಗಿದೆ. ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಾಗಣೆಗೆ ಅಡ್ಡಿಯಾಗುವ ಆತಂಕ ಎದುರಾಗಿದೆ.

    ಪ್ರಸ್ತುತ ಯುಎಇ ತನ್ನ ಬಹುಪಾಲು ತೈಲವನ್ನು ಹಾರ್ಮುಜ್ ಜಲಸಂಧಿಯ ಮೂಲಕವೇ ರಫ್ತು ಮಾಡುತ್ತದೆ. ಹೊಸ ಪೈಪ್‌ಲೈನ್ ಪೂರ್ಣಗೊಂಡರೆ, ಜಲಸಂಧಿಯಲ್ಲಿ ಯಾವುದೇ ಸಮಸ್ಯೆ ಎದುರಾದರೂ ಯುಎಇ ಸುರಕ್ಷಿತವಾಗಿ ತೈಲವನ್ನು ರಫ್ತು ಮಾಡಬಹುದಾಗಿದೆ.

    ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿಗೆ (ADNOC) ಈ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ.

    ಇದನ್ನೂ ಓದಿ: ಪ್ರಧಾನಿ ಮೋದಿ ಯುಎಇ ಭೇಟಿಯಲ್ಲಿ ಹಲವು ಒಪ್ಪಂದಗಳಿಗೆ ಸಹಿ

    ಪ್ರಸ್ತುತ ಇರುವ ಪೈಪ್‌ಲೈನ್ ದಿನಕ್ಕೆ ಸುಮಾರು 1.8 ಮಿಲಿಯನ್ ಬ್ಯಾರೆಲ್‌ಗಳಷ್ಟು ತೈಲವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಹೊಸ ಪೈಪ್‌ಲೈನ್ ಬಂದ ನಂತರ ಫುಜೈರಾ ಮೂಲಕ ರಫ್ತು ಸಾಮರ್ಥ್ಯವು ದಿನಕ್ಕೆ 4 ಮಿಲಿಯನ್ ಬ್ಯಾರೆಲ್‌ಗಳಿಗೆ ಏರಿಕೆಯಾಗುವ ಸಾಧ್ಯತೆಯಿದೆ.

    ಈ ಕ್ರಮವು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಯುಎಇ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಮತ್ತು ಸಂಘರ್ಷದ ಸಮಯದಲ್ಲಿ ತೈಲ ಪೂರೈಕೆಯಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ.

    ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

    Source link

    ಭಾರತದಲ್ಲಿ ‘ಧುರಂಧರ್ 2’ ಯಾವಾಗ ನೋಡಬಹುದು? ಇಲ್ಲಿದೆ ಮಾಹಿತಿ – Kannada News | Dhurandhar 2 movie to be released on Jio Hotstar on June 4

    ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ‘ಧುರಂಧರ್ 2’ ಸಿನಿಮಾದ ಅಬ್ಬರಕ್ಕೆ ಹಲವು ಹಳೆಯ ದಾಖಲೆಗಳೆಲ್ಲ ದೂಳಿಪಟವಾಗಿವೆ. ಸಿನಿಮಾ ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬಂದಿದ್ದು, ಇದೀಗ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಆದರೆ ಭಾರತೀಯರಿಗಲ್ಲ ಬದಲಿಗೆ ವಿದೇಶಿಗರಿಗೆ ಮಾತ್ರ. ‘ಧುರಂಧರ್ 2’ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ, ಆದರೆ ಭಾರತದಲ್ಲಿ ಅಲ್ಲ. ಇದೀಗ ಸಿನಿಮಾವನ್ನು ಭಾರತದಲ್ಲಿ ಯಾವಾಗ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ.

    ಕಳೆದೊಂದು ತಿಂಗಳಿನಿಂದಲೂ ‘ಧುರಂಧರ್ 2’ ಸಿನಿಮಾದ ಒಟಿಟಿ ರಿಲೀಸ್ ಬಗ್ಗೆ ಸಾಕಷ್ಟು ಗೊಂದಲಗಳಿತ್ತು. ಸಿನಿಮಾ ಯಾವ ಒಟಿಟಿಯಲ್ಲಿ ಬರುತ್ತದೆ ಎಂಬ ಬಗ್ಗೆ ಖಾತ್ರಿ ಇರಲಿಲ್ಲ. ಏಕೆಂದರೆ ‘ಧುರಂಧರ್’ ಮೊದಲ ಭಾಗ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿತ್ತು. ಆದರೆ ಎರಡನೇ ಭಾಗಕ್ಕೆ ಹಲವು ಒಟಿಟಿಗಳಿಂದ ಭಾರಿ ಬೇಡಿಕೆ ಬಂದಿತ್ತು. ಇದೀಗ ಚಿತ್ರತಂಡವು ಭಾರತದ ಹೊರಗೆ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಮಾಡಿದ್ದು, ಭಾರತದಲ್ಲಿ ಇದೇ ಸಿನಿಮಾವನ್ನು ಜಿಯೋ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಬಹುದಾಗಿದೆ.

    ‘ಧುರಂಧರ್ 2’ ನೆಟ್​​ಫ್ಲಿಕ್ಸ್​ನಲ್ಲಿ ಈಗಾಗಲೇ ಬಿಡುಗಡೆ ಆಗಿದೆ. ಆದರೆ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗುವ ದಿನಾಂಕ ಖಾತ್ರಿ ಆಗಿರಲಿಲ್ಲ. ಇದೀಗ ಜಿಯೋ ಹಾಟ್​​ಸ್ಟಾರ್ ‘ಧುರಂಧರ್ 2’ ಸಿನಿಮಾದ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ‘ಧುರಂಧರ್ 2’ ಸಿನಿಮಾ ಜೂನ್ 04 ರಂದು ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಲಿದೆ. ಜಿಯೋ ಹಾಟ್​​ಸ್ಟಾರ್​​ನಲ್ಲಿ ಪ್ರಸ್ತುತ ಐಪಿಎಲ್ ನೇರ ಪ್ರಸಾರ ನಡೆಯುತ್ತಿದ್ದು, ಐಪಿಎಲ್ ಮುಗಿದ ಬಳಿಕ ಸಿನಿಮಾ ಬಿಡುಗಡೆ ಮಾಡುವ ಯೋಜನೆ ಒಟಿಟಿ ವೇದಿಕೆಯದ್ದು.

    ಇದನ್ನೂ ಓದಿ:‘ಧುರಂಧರ್ 2’ ಒಟಿಟಿ ಬಿಡುಗಡೆ ದಿನಾಂಕ ನಿಗದಿ, ಇರಲಿದೆ ಟ್ವಿಸ್ಟ್

    ಗಮನಿಸಬೇಕಾದ ಅಂಶವೆಂದರೆ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಯ್ತು. ಅದೇ ದಿನ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗಬೇಕಿತ್ತು ಆದರೆ ಸಿನಿಮಾ ಬಿಡುಗಡೆ ಮುಂದಕ್ಕೆ ಹಾಕಲಾಯ್ತು. ಬಳಿಕ ಜೂನ್ 4 ರ ದಿನಾಂಕ ಪ್ರಕಟಿಸಲಾಯ್ತು. ಈಗ ಅದನ್ನೂ ಮುಂದಕ್ಕೆ ಹಾಕಲಾಗಿದೆ. ಇದೀಗ ‘ಧುರಂಧರ್ 2’ ಸಿನಿಮಾ ಜೂನ್ 4 ರಂದು ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಅದೇ ದಿನ ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

    ಭಾರತದ ಗೂಢಚಾರಿಯ ಕತೆ ಒಳಗೊಂಡಿರುವ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 1800 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಸಿನಿಮಾ ಅನ್ನು ಆದಿತ್ಯ ಧರ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ರಣ್ವೀರ್ ಸಿಂಗ್ ಜೊತೆಗೆ ಆರ್ ಮಾಧವನ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್, ಸಂಜಯ್ ದತ್ ಇನ್ನೂ ಕೆಲವು ಪ್ರಮುಖ ನಟರು ನಟಿಸಿದ್ದಾರೆ.

    ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

    Source link

    ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ! – Kannada News | Will Contest From JDS In 2025 Assembly Election clarified By GT Devegowda after Met HD Devegowda at Bengaluru

    ಬೆಂಗಳೂರು, (ಮೇ 15): ಜೆಡಿಎಸ್​​ನಿಂದ (JDS) ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ (GT Devegowda) ಅವರು ದಿಢೀರ್ ಅಂತ ಪಕ್ಷದ ವರಿಷ್ಠ ಎಚ್​​ಡಿ ದೇವೇಗೌಡ (HD Devegowda) ಅವರನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಇಂದು (ಮೇ 15) ಬೆಂಗಳೂರಿನ (Bengaluru) ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿ ದೇವೇಗೌಡರ ಭೇಟಿ ಮಾಡಿದರು. ಕೆಲ ಕಾರಣಾಂತರಗಳಿಂದ ಜಿಟಿ ದೇವೇಗೌಡ ಅವರು ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಆದ್ರೆ ಇದೀಗ ಏಕಾಏಕಿ ದೇವೇಗೌಡ್ರನ್ನ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ. ಇನ್ನು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿ ಮಧ್ಯೆ  2025ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​​ನಿಂದಲೇ ಸ್ಪರ್ಧಿಸುವುದಾಗಿ ಜಿಟಿ ದೇವೇಗೌಡ ಜಿಟಿಸ್ಪಷ್ಟಪಡಿಸಿದ್ದಾರೆ.

    • H.D.ದೇವೇಗೌಡರ ಭೇಟಿಯಾದ ಶಾಸಕ ಜಿ.ಟಿ.ದೇವೇಗೌಡ
    • ಬೆಂಗಳೂರಿನ ಪದ್ಮನಾಭನಗರದ HDD ನಿವಾಸದಲ್ಲಿ ಭೇಟಿ
    • ಬಹಳ ದಿನಗಳ ಬಳಿಕ ದೇವೇಗೌಡರ ಭೇಟಿಯಾದ ಜಿಟಿಡಿ
    • ಬಳಿಕ ಮುಂದಿನ ಚುನಾವಣೆಯಲ್ಲಿ ಜೆಡಿಎಸ್​​ನಿಂದಲೇ ಸರ್ಧೆ ಎಂದ ಜಿಟಿ ದೇವೇಗೌಡ
    • ಈ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಅಂತೆ ಕಂತೆಗಳಿಗೆ ಜಿಟಿಡಿ ತೆರೆ

    ಇನ್ನು ದೇವೇಗೌಡರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಟಿ ದೇವೇಗೌಡ, ಇವತ್ತು ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿ ಮಾಡಿದ್ದೆ. ಇಡೀ ದೇಶದಲ್ಲಿ ಪ್ರಧಾನಿಯಾಗಿ ಪ್ರಖ್ಯಾತಿ ಪಡೆದವರು. ರೈತರ ಪರ ನಿಂತು ದುಡಿದವರು. ಹೀಗಾಗಿ ಮೋದಿಯವರೇ ಅವರನ್ನ ಗುಣಗಾನ ಮಾಡಿದ್ದಾರೆ. ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ. ಅವರ ಬಗ್ಗೆ ಅಪಾರ ಗೌರವ ಇದೆ ಎಂದರು.

    ಇದನ್ನೂ ಓದಿ: ಜೆಡಿಎಸ್ 25ರ ಸಂಭ್ರಮದಲೇ ಜಿಟಿ ದೇವೇಗೌಡಗೆ ಶಾಕ್ ಕೊಟ್ಟ ಕುಮಾರಸ್ವಾಮಿ

    2025ಲ್ಲಿ ಜೆಡಿಎಸ್​​ನಿಂದಲೇ ಸ್ಪರ್ಧೆ ಎಂದ ಜಿಟಿಡಿ


    ಇನ್ನು ಇದೇ ವೇಳೆ ಪಕ್ಷದಿಂದ ಅಂತರ ಕಾಯ್ದುಕೊಂಡ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಟಿಡಿ, ದೇವೇಗೌಡ್ರು ರಾಜಕೀಯ ಮಾತಾಡಿಲ್ಲ. ನಾನು ಮಾತಾಡಿಲ್ಲ. ಚೆನ್ನಾಗಿರು, ಒಳ್ಳೆದಾಗಲಿ ಅಂತ ಅಶೀರ್ವಾದ ಮಾಡಿದ್ದಾರೆ. ನಾನು ಎಷ್ಟು ಪ್ರಮಾಣಿಕವಾಗಿ ದುಡಿದ್ದೇನೆ ಅಂತ ಅವರಿಗೆ ಗೊತ್ತಿದೆ. ಕ್ಷೇತ್ರ ದೊಡ್ಡದಿದೆ. ಹಾಗಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿದ್ದೇನೆ . ನಾನು ಇನ್ನೂ ಜನತಾದಳದಲ್ಲೆ ಇದ್ದೇನೆ. 2025 ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ನಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಜಿಟಿ ದೇವೇಗೌಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದರು.

    ಜಿಟಿಡಿ-ಎಚ್​​ಡಿಕೆ ಮಧ್ಯೆ ಮುಸುಕಿನ ಗುದ್ದಾಟ

    ಇನ್ನು ಜಿಟಿ ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​​ಡಿ ಕುಮಾರಸ್ವಾಮಿ ಮಧ್ಯೆ ಯಾವುದು ಸರಿ ಇಲ್ಲ. ಇಬ್ಬರು ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇನ್ನು ಜಿಟಿಡಿ ವಿರುದ್ಧ ಕುಮಾರಸ್ವಾಮಿ ಬಹಿರಂಗವಾಗಿಯೇ ಕಿಡಿಕಾರಿದ್ದರು. ಅವರು ನಮ್ಮ ಜತೆ ಇಲ್ಲ, ಅವರ ಬಗ್ಗೆ ಪದೇ ಪದೇ ಮಾತನಾಡಬೇಡಿ ಎಂದಿದ್ದಾರೆ. ನಮ್ಮ ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಅವರಿಗೆ ಇಲ್ಲ. ಅಂತಹವರನ್ನು ನಮ್ಮ ಜತೆ ಇಟ್ಟುಕೊಳ್ಳಬೇಕಾ ಎಂದು ಕುಮಾರಸ್ವಾಮಿ ಖಾರವಾಗಿ ಹೇಳಿದ್ದರು.

    ಇನ್ನು ಜೆಡಿಎಸ್​ ಹಿರಿಯ ನಾಯಕ ಜಿಟಿ ದೇವೇಗೌಡ ಅವರು ಸಹ ಆಗಾಗ ಪರೋಕ್ಷವಾಗಿ ಪಕ್ಷದಿಂದ ದೂರ ಸರಿಯುವ ಮಾತಾಡಿದ್ದು ಉಂಟು. ಹಾಗೇ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಇದಕ್ಕೆ ಕಾರಣ ಕೋರ್‌ ಕಮಿಟಿ ಅಧ್ಯಕ್ಷರ ಬದಲಾವಣೆ. ಕೋರ್‌ ಕಮಿಟಿಗೆ ಅಧ್ಯಕ್ಷರಾಗಿದ್ದ ಜಿ.ಟಿ.ದೇವೇಗೌಡ ಅವರನ್ನು ಬದಲಿಸಿ ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿಗೆ ಕಮಿಟಿಯ ಸಾರಥ್ಯವನ್ನು ನೀಡಲಾಗಿದೆ.

    ಈ ಹಿಂದೆಯೇ ಸಮಾಧಾನಪಡಿಸಿದ್ದ ಎಚ್​​ಡಿಡಿ

    ಕುಮಾರಸ್ವಾಮಿ ನಡೆಗೆ ಬೇಸರಗೊಂಡು ಪಕ್ಷದಿಂದ ದೂರ ಉಳಿದಿದ್ದ ಜಿಟಿ ದೇವೇಗೌಡ ಅವರನ್ನ ಸ್ವತಃ ಎಚ್​​ಡಿ ದೇವೇಗೌಡ್ರೆ ಸಮಾಧಾನಪಡಿಸಿದ್ದರು. ಅವರ ನಿವಾಸಕ್ಕೆ ತೆರಳಿ ಜಿಟಿ ದೇವೇಗೌಡರನ್ನ ಮನವೊಲಿಸಿದ್ದರು. ಬಳಿಕ ಎಲ್ಲವೂ ಕೂಲ್ ಆಗಿತ್ತು. ತದನಂತರ  ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಗೇಟ್ ಪಾಸ್ ನೀಡಿದ್ದು ಜಿಟಿಡಿ ಆಕ್ರೋಶಕ್ಕೆ ಕಾರಣವಾಗಿತ್ತು. ಏನು ಹೇಳದೇ ಕೇಳದೇ ಕಿತ್ತಾಕಿದ್ದಾರೆ ಎಂದು ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದರು. ಇದೀಗ ಏಕಾಏಕಿ ಜಿಟಿಡಿ, ದೇವೇಗೌಡ ಅವರನ್ನ ಭೇಟಿ ಮಾಡಿ ಜೆಡಿಎಸ್​​ನಲ್ಲೇ ಇರುತ್ತೇನೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್​​ನಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದರೊಂದಿಗೆ ಜಿಟಿಡಿಗಿದ್ದ ಮುನಿಸು ತಣ್ಣಗಾದಂತಾಗಿದೆ.

    ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

    Published On – 7:26 pm, Fri, 15 May 26

    Source link

    ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್​ ವಿದೇಶಾಂಗ ಸಚಿವ ಅರಘ್ಚಿ – Kannada News | We Dont have trust in Americans India can play bigger role for peace in West Asia Iran FM Araghchi says

    Iran Ministrer Araghchi With Indian Minister S JaishankarImage Credit source: PTI

    ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಿದೆ ಎಂದು ಇರಾನ್​ನ (Iran War) ವಿದೇಶಾಂಗ ಸಚಿವ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಎಲ್ಲೆಡೆ ಬಹಳ ಉತ್ತಮ ಹೆಸರಿದೆ. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತ ಬಹಳ ಪ್ರಮುಖ ಪಾತ್ರ ವಹಿಸಲು ಸಾಧ್ಯವಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

    ಬ್ರಿಕ್ಸ್ ಸಭೆಗಾಗಿ ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅರಘ್ಚಿ, ಇರಾನ್ ಮತ್ತು ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ಒಳಗೊಂಡ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮಾತುಕತೆ ಮತ್ತು ರಾಜತಾಂತ್ರಿಕತೆಯೊಂದೇ ಏಕೈಕ ಮಾರ್ಗವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

    ಇದನ್ನೂ ಓದಿ: ಅಮೆರಿಕ ನಂಬಿಕೆಗೆ ಯೋಗ್ಯವಲ್ಲ, ಮತ್ತೆ ಯುದ್ಧ ಆರಂಭವಾಗಬಹುದು; ಇರಾನ್ ಸ್ಫೋಟಕ ಹೇಳಿಕೆ

    ಇರಾನ್‌ಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮಿಲಿಟರಿ ಸಂಘರ್ಷದ ಮೂಲಕ ಪರಿಹಾರ ಸಿಗಲು ಸಾಧ್ಯವಿಲ್ಲ ಎಂಬುದು ನಮಗೂ ಗೊತ್ತಾಗಿದೆ. ಈ ಪ್ರದೇಶದಲ್ಲಿ ಸ್ಥಿರತೆ ಮತ್ತು ಶಾಂತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಭಾರತದ ಎಲ್ಲ ರೀತಿಯ ಪ್ರಯತ್ನವನ್ನು ನಾವು ಬೆಂಬಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.

    ಇರಾನಿನ ಸಚಿವರು ಹಾರ್ಮುಜ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿಯ ಬಗ್ಗೆಯೂ ಮಾತನಾಡಿದ್ದಾರೆ. ಹಾರ್ಮುಜ್ ಜಲಸಂಧಿ ತುಂಬಾ ಸಂಕೀರ್ಣವಾದುದು. ಜಾಗತಿಕ ತೈಲ ವ್ಯಾಪಾರಕ್ಕೆ ನಿರ್ಣಾಯಕವಾದ ಈ ಜಲಮಾರ್ಗದ ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಇರಾನ್ ಸಹಾಯ ಮಾಡಲು ಸಿದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಯುದ್ಧ ಕೊನೆಗೊಳಿಸಲು ಇರಾನ್ ಮುಂದೆ ಹೊಸ ಕದನವಿರಾಮದ ಪ್ರಸ್ತಾಪವಿಟ್ಟ ಟ್ರಂಪ್

    ನಮಗೆ ಅಮೆರಿಕದ ಮೇಲೆ ನಂಬಿಕೆಯಿಲ್ಲ. ವಿಶ್ವಾಸದ ಕೊರತೆಯಿಂದಾಗಿ ಅಮೆರಿಕದೊಂದಿಗೆ ಮಾತುಕತೆಗಳು ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ. “ಯುದ್ಧ ಆರಂಭವಾಗಿ 40 ದಿನಗಳಾಗಿವೆ. ಈ ಸಮಯದಲ್ಲಿ ಇರಾನ್ ವಿರುದ್ಧದ ಆಕ್ರಮಣದಲ್ಲಿ ಯಾವುದೇ ಗುರಿಯನ್ನು ಸಾಧಿಸಲು ಅಮೆರಿಕ ವಿಫಲವಾಗಿದೆ. ನಮಗೆ ಅಮೆರಿಕನ್ನರ ಮೇಲೆ ನಂಬಿಕೆಯಿಲ್ಲ. ಯಾವುದೇ ರಾಜತಾಂತ್ರಿಕ ಪ್ರಯತ್ನದ ದಾರಿಯಲ್ಲಿ ಇದು ಮುಖ್ಯ ಅಡಚಣೆಯಾಗಿದೆ. ಅಮೆರಿಕನ್ನರನ್ನು ನಂಬದಿರಲು ನಮಗೆ ಹಲವು ಕಾರಣಗಳಿವೆ. ಆದರೆ ಅವರು ನಮ್ಮನ್ನು ನಂಬದಿರಲು ಯಾವುದೇ ಕಾರಣವಿಲ್ಲ” ಎಂದು ಅವರು ಹೇಳಿದ್ದಾರೆ.

    ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    ‘ಮಕ್ಕಳ ಬದಲು ನಾಯಿಗಳನ್ನು ಸಾಕಿ’: ಮದುವೆ ಬಗ್ಗೆ ನಟಿ ಶೆಫಾಲಿ ಶಾ ಅಚ್ಚರಿಯ ಹೇಳಿಕೆ – Kannada News | Bollywood Actress Shefali Shah says have Dogs instead Of having kids

    ಬಾಲಿವುಡ್‌ನ ಖ್ಯಾತ ನಟಿ ಶೆಫಾಲಿ ಶಾ (Shefali Shah) ಇತ್ತೀಚಿನ ಸಂದರ್ಶನವೊಂದರಲ್ಲಿ ಮದುವೆ, ರಿಲೇಷನ್​ಶಿಪ್ ಮತ್ತು ಮಕ್ಕಳ ಬಗ್ಗೆ ಮುಕ್ತವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದಿನ ಯುವ ಪೀಳಿಗೆಗೆ ಮದುವೆ (Marriage) ಮತ್ತು ಪೋಷಕರಾಗುವ ಬಗ್ಗೆ ಇರುವ ಸಾಮಾಜಿಕ ಒತ್ತಡಗಳ ಕುರಿತು ಮಾತನಾಡಿದ ಅವರು, ‘ಯುವಕರು ತಮ್ಮನ್ನು ತಾವು ಸರಿಯಾಗಿ ಅರ್ಥಮಾಡಿಕೊಳ್ಳುವ ಮೊದಲು ಜೀವನದ ಇಂತಹ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವಸರ ಪಡಬಾರದು’ ಎಂದು ಸಲಹೆ ನೀಡಿದ್ದಾರೆ. ಇದೇ ವೇಳೆ ತಮಾಷೆಯಾಗಿ, ‘ಮಕ್ಕಳನ್ನು ಹೆರುವ ಬದಲು ನಾಯಿಗಳನ್ನು (Dogs) ಸಾಕಿ, ಏಕೆಂದರೆ ಅವು ಯಾವುದೇ ಸ್ವಾರ್ಥವಿಲ್ಲದ ನಿಜವಾದ ಪ್ರೀತಿಯನ್ನು ನೀಡುತ್ತವೆ’ ಎಂದು ಹೇಳಿದ್ದಾರೆ.

    ಲಿಲ್ಲಿ ಸಿಂಗ್ ಅವರೊಂದಿಗಿನ ವಿಶೇಷ ಸಂವಾದದಲ್ಲಿ ಮಾತನಾಡಿದ ಶೆಫಾಲಿ ಶಾ, ಯುವತಿಯರಿಗೆ ಬೇಗ ಮದುವೆ ಆಗದಂತೆ ಕಿವಿಮಾತು ಹೇಳಿದ್ದಾರೆ. ‘ನೀವಿನ್ನೂ ಮಕ್ಕಳಾಗಿದ್ದಾಗ ಮದುವೆಯ ನಿರ್ಧಾರ ತೆಗೆದುಕೊಳ್ಳಬೇಡಿ. ಆ ವಯಸ್ಸಿನಲ್ಲಿ ನಿಮಗೆ ನಿಮ್ಮ ಬಗ್ಗೆಯೇ ಸರಿಯಾದ ತಿಳುವಳಿಕೆ ಇರುವುದಿಲ್ಲ. ಹಾಗಾಗಿ ದಯವಿಟ್ಟು ನಿಧಾನಿಸಿ. ಜೀವನದ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮುನ್ನ ಜನರನ್ನ ಭೇಟಿಯಾಗಿ, ಅವರನ್ನು ಅರ್ಥಮಾಡಿಕೊಳ್ಳಿ. ನೀವು ಮದುವೆ ಎಂಬ ವ್ಯವಸ್ಥೆಯನ್ನು ನಂಬದಿದ್ದರೆ, ದಯವಿಟ್ಟು ಆ ಸಾಹಸಕ್ಕೆ ಕೈಹಾಕಬೇಡಿ. ಏಕೆಂದರೆ ಸಂಸಾರ ನಡೆಸುವುದು ಅಷ್ಟು ಸುಲಭದ ಕೆಲಸವಲ್ಲ’ ಎಂದು ಅವರು ಹೇಳಿದ್ದಾರೆ.

    ಭಾವನಾತ್ಮಕವಾಗಿ ಪ್ರಬುದ್ಧರಾಗುವ ಮುನ್ನ, ಜೀವನ ಹಾಗೂ ಸಂಬಂಧಗಳಿಂದ ತಮಗೇನು ಬೇಕು ಎಂಬುದು ಸಂಪೂರ್ಣವಾಗಿ ಖಚಿತವಾಗುವ ಮುನ್ನ ಯಾರೂ ಮದುವೆಯ ನಿರ್ಧಾರವನ್ನು ಸಾಧಾರಣವಾಗಿ ತೆಗೆದುಕೊಳ್ಳಬಾರದು ಎಂದು ಶೆಫಾಲಿ ಶಾ ಅವರು ಒತ್ತಿ ಹೇಳಿದ್ದಾರೆ. ಅವರು ಕೂಡ ಖಾಸಗಿ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ.

    ಇದೇ ಸಂದರ್ಶನದ ವೇಳೆ ತಮಗೆ 37 ವರ್ಷ ವಯಸ್ಸಾಗಿದ್ದರೂ ಇನ್ನೂ ಮದುವೆಯಾಗಿಲ್ಲ ಎಂದು ಲಿಲ್ಲಿ ಸಿಂಗ್ ಬಹಿರಂಗಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶೆಫಾಲಿ, ‘ನಾನೊಂದು ಮಾತು ಹೇಳಲೇ? ಇದಕ್ಕಾಗಿ ನನ್ನನ್ನು ಜನ ಕೆಟ್ಟ ರೀತಿಯಲ್ಲಿ ಟ್ರೋಲ್ ಮಾಡಬಹುದು. ಆದರೂ ಪರವಾಗಿಲ್ಲ, ಮಕ್ಕಳನ್ನು ಮಾಡಿಕೊಳ್ಳಬೇಡಿ. ಅದರ ಬದಲು ನಾಯಿಗಳನ್ನು ಸಾಕಿ. ಕೇವಲ ನಾಯಿಗಳನ್ನು ತಂದುಕೊಳ್ಳಿ’ ಎಂದಿದ್ದಾರೆ. ಮನುಷ್ಯನ ಜೀವನದಲ್ಲಿ ನಾಯಿಗಳು ಮಾತ್ರವೇ ಬೇಷರತ್ ಪ್ರೀತಿ ನೀಡಲು ಸಾಧ್ಯ ಎಂದು ಅವರು ಹೇಳಿದ್ದಾರೆ.

    ಇದನ್ನೂ ಓದಿ: ಮೊನಾಲಿಸಾ ವಯಸ್ಸು ಕೇವಲ 16: ಗಂಡ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್

    ಶೆಫಾಲಿ ಶಾ ಅವರು ಈ ಹಿಂದೆ ಕಿರುತೆರೆ ನಟ ಹರ್ಷ್ ಛಾಯಾ ಅವರನ್ನು ವಿವಾಹವಾಗಿದ್ದರು. ಆದರೆ, ನಾಲ್ಕು ವರ್ಷಗಳ ವೈವಾಹಿಕ ಜೀವನದ ನಂತರ ಈ ದಂಪತಿ ದೂರಾಗಿದ್ದರು. ನಂತರ, 2000ನೇ ಇಸವಿಯಲ್ಲಿ ಶೆಫಾಲಿ ಅವರು ಚಲನಚಿತ್ರ ನಿರ್ಮಾಪಕ ವಿಪುಲ್ ಅಮೃತ್​ಲಾಲ್ ಶಾ ಅವರನ್ನು ಆಪ್ತರ ಸಮ್ಮುಖದಲ್ಲಿ ಮದುವೆಯಾದರು. ಈ ದಂಪತಿಗೆ ಆರ್ಯಮನ್ ಮತ್ತು ಮೌರ್ಯ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

    ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

    Source link

    ಅರೇ ಇದೇನಿದು! ರೈತರ ಭೂಮಿಯನ್ನೇ ಒತ್ತುವರಿ ಮಾಡಿದ ಅರಣ್ಯ ಇಲಾಖೆ; ಅಚ್ಚರಿ ಎನ್ನಿಸಿದ್ರೂ ಸತ್ಯ – Kannada News | Land Grab Twist: Forest Dept Illegally Encroached Farmers’ 180 Acres, Joint Survey Reveals

    ರೈತರ ಭೂಮಿ ಒತ್ತುವರಿ Image Credit source: tv9 kannada

    ಕೋಲಾರ, ಮೇ 15: ಕಳೆದ ನಾಲ್ಕೈದು ವರ್ಷಗಳಿಂದ ಕೋಲಾರ (kolar) ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಮತ್ತು ರೈತರ ನಡುವೆ ತೀವ್ರ ಸ್ವರೂಪ ಪಡೆದುಕೊಂಡಿದ್ದ ಅರಣ್ಯ ಭೂಮಿ ಒತ್ತುವರಿ (Land encroachment) ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಇಷ್ಟು ದಿನ ರೈತರೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಈಗ ಉಲ್ಟಾ ಅರಣ್ಯ ಇಲಾಖೆಯೇ ರೈತರ ನೂರಾರು ಎಕರೆ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದೆ ಎಂಬ ಆಘಾತಕಾರಿ ಸತ್ಯ ಜಂಟಿ ಸರ್ವೆಯಿಂದ ಬಯಲಾಗಿದೆ ಎಂದು ರೈತರು ದಾಖಲೆ ಸಮೇತ ಆರೋಪಿಸುತ್ತಿದ್ದಾರೆ.

    ಮುಖ್ಯಾಂಶಗಳು

    • ಕೋಲಾರ ಅರಣ್ಯ ಭೂಮಿ ವಿವಾದಕ್ಕೆ ಭಾರೀ ಟ್ವಿಸ್ಟ್​​
    • ಜಂಟಿ ಸರ್ವೆಯಲ್ಲಿ ಬಯಲಾಯ್ತು ಅರಣ್ಯ ಇಲಾಖೆಯ ಕಳ್ಳಾಟ
    • ಮರಳಿ ಭೂಮಿ ಮರುಪಡೆಯಲು ಮುಂದಾದ ರೈತರು

    ಜಿಲ್ಲೆಯ ಶ್ರೀನಿವಾಸಪುರ, ಮಾಲೂರು, ಕೋಲಾರ ಮತ್ತು ಮುಳಬಾಗಿಲು ತಾಲೂಕುಗಳಲ್ಲಿ ಅರಣ್ಯ ಇಲಾಖೆ ಈ ಹಿಂದೆ ದೊಡ್ಡ ಮಟ್ಟದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿತ್ತು. ಆದರೆ, ಸೆಪ್ಟೆಂಬರ್ 2025ರಲ್ಲಿ ಕೋಲಾರ ತಾಲೂಕಿನ ಹರಟಿ ಗ್ರಾಮದ ಬಳಿಯಿರುವ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ನಡೆದ ತೆರವು ಕಾರ್ಯಾಚರಣೆ ಈಗ ತೀವ್ರ ವಿವಾದಕ್ಕೆ ಈಡುಮಾಡಿದೆ. ಅರಣ್ಯ ಇಲಾಖೆ ತನ್ನ ವ್ಯಾಪ್ತಿಯನ್ನು ಮೀರಿ, ರೈತರಿಗೆ ಸೇರಿದ ಸುಮಾರು 180 ಎಕರೆಯಷ್ಟು ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ರೈತ ಮುಖಂಡರು ದೂರಿದ್ದಾರೆ.

    ಜಂಟಿ ಸರ್ವೆಯಲ್ಲಿ ಬಯಲಾಯ್ತು ಅರಣ್ಯ ಇಲಾಖೆಯ ಅಕ್ರಮ

    ಸೆಪ್ಟೆಂಬರ್ 2025ರ ಕಾರ್ಯಾಚರಣೆಯ ಸಂದರ್ಭದಲ್ಲಿ ಅರಣ್ಯ ಇಲಾಖೆಯು ಜೆಸಿಬಿಗಳನ್ನು ಬಳಸಿ ರೈತರು ಕಷ್ಟಪಟ್ಟು ಬೆಳೆದಿದ್ದ ಲಕ್ಷಾಂತರ ರೂ ಮೌಲ್ಯದ ಬೆಳೆಗಳು, ಮನೆಗಳು ಹಾಗೂ ಬೋರ್‌ವೆಲ್ ಪಂಪ್ ಮೋಟಾರ್‌ಗಳನ್ನು ಧ್ವಂಸಗೊಳಿಸಲಾಗಿತ್ತು. ಈ ದಬ್ಬಾಳಿಕೆಯ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ ಸಚಿವರು ಜಂಟಿ ಸರ್ವೆಗೆ ಆದೇಶಿಸಿದ್ದರು. ಅದರಂತೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ನಡೆಸಿದ ಭೂ ಸರ್ವೆ ಕಾರ್ಯ ಮುಕ್ತಾಯಗೊಂಡಿದ್ದು, ಕಂದಾಯ ಇಲಾಖೆಯ ಭೂದಾಖಲೆಗಳ ಅಧಿಕಾರಿಗಳು ನೀಡಿರುವ ನಕ್ಷೆಯು ರೈತರ ಆರೋಪಕ್ಕೆ ಪುಷ್ಟಿ ನೀಡಿದೆ.

    ದಾಖಲೆಗಳು ಏನು ಹೇಳುತ್ತವೆ?

    ಲಭ್ಯವಿರುವ ಅಧಿಕೃತ ದಾಖಲೆಗಳ ಪ್ರಕಾರ, 1941ರ ಸೆಟಲ್‌ಮೆಂಟ್ ಅನ್ವಯ ಅರಣ್ಯ ಇಲಾಖೆಗೆ ಸೇರಿರುವುದು ಕೇವಲ 409.35 ಎಕರೆ ಪ್ರದೇಶ ಮಾತ್ರ. ಆದರೆ ಅರಣ್ಯ ಇಲಾಖೆಯೂ ಈ ನಿಗದಿತ ಗಡಿಯನ್ನು ಮೀರಿ ಹೆಚ್ಚುವರಿಯಾಗಿ ರೈತರಿಗೆ ಸೇರಿದ 180 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದೆ. ಅಲ್ಲದೆ, ಸುಮಾರು 200 ಎಕರೆಯಲ್ಲಿದ್ದ ರೈತರ ವಿವಿಧ ಬೆಳೆಗಳನ್ನು ಕಾನೂನುಬಾಹಿರವಾಗಿ ತೆರವುಗೊಳಿಸಿದೆ ಎಂಬ ಅಂಶ ಜಂಟಿ ಸರ್ವೆ ವೇಳೆ ಬಹಿರಂಗವಾಗಿದೆ.

    ಜಂಟಿ ಸರ್ವೆಯ ನಕ್ಷೆಯಿಂದ ಸತ್ಯ ಹೊರಬರುತ್ತಿದ್ದಂತೆ ಎಚ್ಚೆತ್ತಿರುವ ಹರಟಿ ಗ್ರಾಮದ ರೈತರು ಹಾಗೂ ರೈತ ಮುಖಂಡ ಗೋಪಾಲ್ ಮತ್ತು ಜಮೀನು ಕಳೆದುಕೊಂಡಿರುವ ಶ್ರೀನಿವಾಸ್, ‘ಅರಣ್ಯ ಇಲಾಖೆ ತಕ್ಷಣವೇ ತನ್ನ ಹಠಮಾರಿ ಧೋರಣೆ ಬಿಟ್ಟು, ವಶಪಡಿಸಿಕೊಂಡಿರುವ ರೈತರ ಭೂಮಿಯನ್ನು ಮರಳಿ ಬಿಟ್ಟುಕೊಡಬೇಕು. ಕಂದಾಯ ಇಲಾಖೆಯು ತಕ್ಷಣವೇ ರೈತರಿಗೆ ಅಧಿಕೃತ ನಕ್ಷೆಯನ್ನು ಸಿದ್ಧಪಡಿಸಿಕೊಡಬೇಕು’ ಎಂದು ಆಗ್ರಹಿಸಿದ್ದಾರೆ. ಪ್ರಸ್ತುತ ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದ ಜಾಗಕ್ಕೆ ರೈತರು ಮರುಪ್ರವೇಶ ಮಾಡಿ ಮತ್ತೆ ಗಿಡಗಳನ್ನು ನೆಟ್ಟು ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಿದ್ದಾರೆ.

    ಇದನ್ನೂ ಓದಿ: ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ!

    ಒಟ್ಟಾರೆಯಾಗಿ ರೈತರು ಹಾಗೂ ಅರಣ್ಯ ಇಲಾಖೆ ನಡುವಿನ ಸಂಘರ್ಷಕ್ಕೆ ಈಗ ಹೊಸ ತಿರುವು ಸಿಕ್ಕಿದ್ದು, ಜಂಟಿ ಸರ್ವೆಯ ನಕ್ಷೆ ಸಿದ್ಧವಾದ ಮೇಲೆ ಅರಣ್ಯ ಇಲಾಖೆ ದಾಖಲಾತಿಗಳನ್ನು ಒಪ್ಪದೆ ಹೋದಲ್ಲಿ ಮುಂದಿನ ದಿನಗಳಲ್ಲಿ ರೈತರು ಹಾಗೂ ಅರಣ್ಯ ಇಲಾಖೆಯ ನಡುವಿನ ಎರಡನೇ ಹಂತದ ಸಂಘರ್ಷ ಶುರುವಾಗುವುದರಲ್ಲಿ ಅನುಮಾನವಿಲ್ಲ.

    ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

    Source link

    IPL 2026: 10 ತಂಡಗಳಿಂದಲೂ ಶತಕ; ಇತಿಹಾಸ ಸೃಷ್ಟಿಸಿದ 19ನೇ ಸೀಸನ್ – Kannada News | IPL 2026 Record: All 10 Teams Score Centuries, A Historic Season of Batting Brilliance

    19ನೇ ಆವೃತ್ತಿಯ ಐಪಿಎಲ್​ನ (IPL 2026) ಲೀಗ್ ಹಂತ ಮುಗಿಯಲು ಇನ್ನು ಕೆಲವೇ ಪಂದ್ಯಗಳು ಬಾಕಿ ಉಳಿದಿವೆ. ಇದಾದ ಬಳಿಕ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಕಳೆದೆರಡು ಆವೃತ್ತಿಗಳಂತೆ ಈ ಆವೃತ್ತಿಯಲ್ಲೂ ಬ್ಯಾಟ್ಸ್‌ಮನ್​ಗಳ ಅಬ್ಬರವೇ ಹೆಚ್ಚಿತ್ತು. ಇದರಿಂದಾಗಿ ಸಾಕಷ್ಟು ಪಂದ್ಯಗಳಲ್ಲಿ 200 ಕ್ಕೂ ಅಧಿಕ ಮೊತ್ತವನ್ನು ಕಲೆಹಾಕಲಾಯಿತು. ಹಾಗೆಯೇ 200 ಕ್ಕೂ ಅಧಿಕ ಮೊತ್ತವನ್ನು ಬೆನ್ನಟ್ಟಿ ಗೆದ್ದ ದಾಖಲೆಯೂ ಸೃಷ್ಟಿಯಾಯಿತು. ರನ್ ಮಳೆಯೇ ಹರಿದ ಈ ಆವೃತ್ತಿಯಲ್ಲಿ ಶತಕಗಳ ಮೇಲೆ ಶತಕಗಳು ಸಿಡಿದವು. ಈ ಮೂಲಕ 2026 ರ ಐಪಿಎಲ್ ಹೊಸ ಇತಿಹಾಸವನ್ನು ಸೃಷ್ಟಿಸಿತು. ವಾಸ್ತವವಾಗಿ 2026 ರ ಐಪಿಎಲ್‌ನಲ್ಲಿ ಪ್ರತಿಯೊಂದು ತಂಡದಿಂದಲೂ ಶತಕಗಳು ಸಿಡಿದಿವೆ. ಇದು ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಸಂಭವಿಸಿದೆ.

    ಎಲ್ಲಾ ತಂಡಗಳಿಂದಲ್ಲೂ ಶತಕ

    ಆರ್​ಸಿಬಿ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ ಶತಕ ಬಾರಿಸಿದರು. ಇದು ಕೊಹ್ಲಿ ಅವರ ಒಂಬತ್ತನೇ ಐಪಿಎಲ್ ಶತಕವಾಗಿದ್ದು, ಈ ಶತಕ ಆರ್​ಸಿಬಿ ಭರ್ಜರಿ ಗೆಲುವು ದಾಖಲಿಸಲು ಸಹಾಯ ಮಾಡಿತು. ಕೊಹ್ಲಿ ತಮ್ಮ ಶತಕದೊಂದಿಗೆ ದಾಖಲೆ ನಿರ್ಮಿಸಿದ್ದಲ್ಲದೆ, ಐಪಿಎಲ್ 2026 ಕ್ಕೆ ಹೊಸ ಮೈಲಿಗಲ್ಲು ಸ್ಥಾಪಿಸಿದರು. ಐಪಿಎಲ್ ಇತಿಹಾಸದಲ್ಲಿ ಒಂದೇ ಆವೃತ್ತಿಯಲ್ಲಿ ಎಲ್ಲಾ 10 ತಂಡಗಳು ಶತಕ ಬಾರಿಸಿದ್ದು ಇದೇ ಮೊದಲು.

    ಯಾವ ತಂಡದಿಂದ ಯಾವ ಆಟಗಾರ ಶತಕ ಬಾರಿಸಿದ್ದಾರೆ?

    • ಚೆನ್ನೈ ಸೂಪರ್ ಕಿಂಗ್ಸ್: ಸಂಜು ಸ್ಯಾಮ್ಸನ್ ಸಿಎಸ್​ಕೆ ಪರ ಇದುವರೆಗೆ ಎರಡು ಶತಕಗಳನ್ನು ಬಾರಿಸಿದ್ದಾರೆ.
    • ಮುಂಬೈ ಇಂಡಿಯನ್ಸ್: ಆರಂಭಿಕ ಕ್ವಿಂಟನ್ ಡಿ ಕಾಕ್, ತಿಲಕ್ ವರ್ಮಾ ಮತ್ತು ರಯಾನ್ ರಿಕಲ್ಟನ್ ಮುಂಬೈ ಇಂಡಿಯನ್ಸ್ ಪರ ಶತಕಗಳನ್ನು ಸಿಡಿಸಿದ್ದಾರೆ.
    • ಗುಜರಾತ್ ಟೈಟಾನ್ಸ್: ಆರಂಭಿಕ ಸಾಯಿ ಸುದರ್ಶನ್ ಗುಜರಾತ್ ಟೈಟಾನ್ಸ್ ಪರ ಶತಕ ಸಿಡಿಸಿದ್ದಾರೆ.
    • ಸನ್​ರೈಸರ್ಸ್​ ಹೈದರಾಬಾದ್: ಆರಂಭಿಕ ಅಭಿಷೇಕ್ ಶರ್ಮಾ ಸನ್‌ರೈಸರ್ಸ್ ಹೈದರಾಬಾದ್ ಪರ ಶತಕದ ಇನ್ನಿಂಗ್ಸ್ ಆಡಿದ್ದಾರೆ.
    • ರಾಜಸ್ಥಾನ್ ರಾಯಲ್ಸ್‌: ಐಪಿಎಲ್ ಇತಿಹಾಸದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದ 15 ವರ್ಷದ ವೈಭವ್ ಸೂರ್ಯವಂಶಿ ಮತ್ತೊಮ್ಮೆ ಬಿರುಗಾಳಿಯ ಇನ್ನಿಂಗ್ಸ್ ಆಡಿ 36 ಎಸೆತಗಳಲ್ಲಿ ಶತಕ ಬಾರಿಸಿದರು.
    • ಲಕ್ನೋ ಸೂಪರ್ ಜೈಂಟ್ಸ್: ಲಕ್ನೋ ತಂಡ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿರಬಹುದು, ಆದರೆ ಈ ತಂಡದ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ತಂಡದ ಪರ ಶತಕ ಬಾರಿಸಿದ್ದಾರೆ.
    • ದೆಹಲಿ ಕ್ಯಾಪಿಟಲ್ಸ್: ಪ್ಲೇಆಫ್​ ರೇಸ್​​ನಲ್ಲಿ ಸ್ಥಾನ ಪಡೆಯಲು ಹೆಣಗಾಡುತ್ತಿರುವ ದೆಹಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ ಶತಕ ಬಾರಿಸಿದ್ದಾರೆ.
    • ಪಂಜಾಬ್ ಕಿಂಗ್ಸ್: ಆಸ್ಟ್ರೇಲಿಯಾದ ಯುವ ಬ್ಯಾಟರ್ ಕೂಪರ್ ಕೊನೊಲಿ ಪಂಜಾಬ್ ಕಿಂಗ್ಸ್ ಪರ ಅದ್ಭುತ ಶತಕ ಸಿಡಿಸಿದ್ದಾರೆ.
    • ಕೋಲ್ಕತ್ತಾ ನೈಟ್ ರೈಡರ್ಸ್​: ಪ್ಲೇಆಫ್​ನಿಂದ ಹೊರಬಿದ್ದಿರುವ ಕೆಕೆಆರ್ ಪರ ಆರಂಭಿಕ ಫಿನ್ ಅಲೆನ್ ಶತಕದ ಇನ್ನಿಂಗ್ಸ್ ಆಡಿದರು.
    • ರಾಯಲ್ ಚಾಲೆಂಜರ್ಸ್ ಬೆಂಗಳೂರು: ಇನ್ನು ಕೆಕೆಆರ್ ವಿರುದ್ಧ ಆರ್​ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಶತಕದ ಇನ್ನಿಂಗ್ಸ್ ಆಡಿದ್ದಾರೆ.

    ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Source link

    Exit mobile version