40 ವರ್ಷದ ನಂತರ ತಪ್ಪದೆ ಈ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ? ಇಲ್ಲಿದೆ ವೈದ್ಯರ ಸಲಹೆ

40 ವರ್ಷದ ನಂತರ ತಪ್ಪದೆ ಈ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ? ಇಲ್ಲಿದೆ ವೈದ್ಯರ ಸಲಹೆ

40 ವರ್ಷದ ನಂತರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದು ಅತ್ಯಂತ ಮುಖ್ಯವಾಗುತ್ತದೆ. ಈ ವಯಸ್ಸಿನಲ್ಲಿ ದೇಹದ ಮೆಟಾಬಾಲಿಸಮ್ ನಿಧಾನಗೊಳ್ಳಬಹುದು ಮತ್ತು ಜೀವನಶೈಲಿಗೆ ಸಂಬಂಧಿತ ರೋಗಗಳ ಅಪಾಯ ಹೆಚ್ಚಾಗುತ್ತದೆ. ಆದ್ದರಿಂದ ನಿಯಮಿತ ಆರೋಗ್ಯ ತಪಾಸಣೆಗಳ ಮೂಲಕ ದೇಹದಲ್ಲಿ ನಡೆಯುವ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಅಗತ್ಯ. ತಜ್ಞರ ಪ್ರಕಾರ, ಈ ನಿಯಮಗಳು ಮಹಿಳೆಯರು ಮತ್ತು ಪುರುಷರು ಇಬ್ಬರಿಗೂ ಸಮಾನವಾಗಿ ಅನ್ವಯಿಸುತ್ತವೆ. ವಯಸ್ಸು ಹೆಚ್ಚಾದಂತೆ ದೇಹದ ಅಗತ್ಯತೆಗಳು ಬದಲಾಗುತ್ತವೆ ಮತ್ತು ವಿವಿಧ ಅಂಗಾಂಗಗಳ ಕಾರ್ಯಕ್ಷಮತೆ ಮೇಲೆ ಪರಿಣಾಮ ಬೀರುತ್ತದೆ. ನಿಯಮಿತ ಪರೀಕ್ಷೆಗಳ ಮೂಲಕ ದೇಹ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ವೈದ್ಯರು ತಿಳಿದು, ಸರಿಯಾದ ಸಲಹೆ ನೀಡಬಹುದು. ಹಾಗಾದರೆ 40ರ ನಂತರ ಪುರುಷ ಮತ್ತು ಮಹಿಳೆಯರು (Women) ಯಾವ ತಪಾಸಣೆ ಮಾಡಿಸಿಕೊಳ್ಳಬೇಕು, ಇದರಿಂದ ಸಿಗುವ ಉಪಯೋಗಗಳೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪುರುಷರಿಗೆ ಅಗತ್ಯವಿರುವ ತಪಾಸಣೆಗಳು:

ವೈದ್ಯರ ಸಲಹೆಯಂತೆ, 40 ವರ್ಷದ ನಂತರ ಪುರುಷರು ಬ್ಲಡ್ ಪ್ರೆಶರ್, ಬ್ಲಡ್ ಶುಗರ್, ಲಿಪಿಡ್ ಪ್ರೊಫೈಲ್ ಮತ್ತು ಲಿವರ್ ಫಂಕ್ಷನ್ ಟೆಸ್ಟ್‌ಗಳನ್ನು ನಿಯಮಿತವಾಗಿ ಮಾಡಿಸಬೇಕು. ಇವು ಹೃದಯ ಆರೋಗ್ಯ ಮತ್ತು ಮೆಟಾಬಾಲಿಕ್ ಸಮಸ್ಯೆಗಳ ಅಪಾಯವನ್ನು ಅರ್ಥಮಾಡಿಕೊಳ್ಳಲು ಸಹಾಯಕವಾಗುತ್ತದೆ. ಕಿಡ್ನಿ ಫಂಕ್ಷನ್ ಮತ್ತು ಮೂತ್ರ ಪರೀಕ್ಷೆ ಕೂಡ ಮುಖ್ಯ. ಪ್ರೋಸ್ಟೇಟ್ ಸಮಸ್ಯೆಗಳ ಪತ್ತೆಗೆ ಪಿಎಸ್ಎ (PSA) ಟೆಸ್ಟ್ ಸಹ ಮಾಡಿಸಬಹುದು. ಕಣ್ಣು, ಹಲ್ಲು ಮತ್ತು ಈಸಿಜಿ (ECG) ಪರೀಕ್ಷೆಗಳು ಕೂಡ ಅವಶ್ಯಕ.

ಇದನ್ನೂ ಓದಿ: ಅತಿಯಾಗಿ ಕೂದಲು ಉದುರುತ್ತಿದೆಯೇ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಈ ರೋಗದ ಸೂಚನೆಯಾಗಿರಬಹುದು

ಮಹಿಳೆಯರಿಗೆ ಅಗತ್ಯವಿರುವ ತಪಾಸಣೆಗಳು:

ಮಹಿಳೆಯರಲ್ಲಿ 40 ನಂತರ ಹಾರ್ಮೋನಲ್ ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಬ್ಲಡ್ ಪ್ರೆಶರ್, ಬ್ಲಡ್ ಶುಗರ್ ಮತ್ತು ಕೊಲೆಸ್ಟ್ರಾಲ್ ಪರೀಕ್ಷೆಗಳನ್ನು ನಿಯಮಿತವಾಗಿ ಮಾಡಿಸಬೇಕು. ಥೈರಾಯ್ಡ್ ಫಂಕ್ಷನ್ ಟೆಸ್ಟ್ ಕೂಡ ಅಗತ್ಯ. ಮ್ಯಾಮೋಗ್ರಫಿ ಮತ್ತು ಬ್ರೆಸ್ಟ್ ಪರೀಕ್ಷೆಗಳಿಂದ ಸಮಸ್ಯೆಗಳನ್ನು ಬೇಗ ಗುರುತಿಸಬಹುದು. ಪ್ಯಾಪ್ ಸ್ಮಿಯರ್ ಟೆಸ್ಟ್ ಮೂಲಕ ಸರ್ವೈಕಲ್ ಆರೋಗ್ಯವನ್ನು ಪರಿಶೀಲಿಸಬಹುದು. ಜೊತೆಗೆ ಬೋನ್ ಡೆನ್ಸಿಟಿ ಟೆಸ್ಟ್ ಸಹ ಉಪಯುಕ್ತವಾಗಿದೆ.

ಎಷ್ಟು ಬಾರಿ ತಪಾಸಣೆ ಮಾಡಿಸಬೇಕು?

40 ವರ್ಷದ ನಂತರ ವರ್ಷಕ್ಕೆ ಕನಿಷ್ಠ ಒಂದು ಬಾರಿ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಬೇಕು. ಹೈ ಬ್ಲಡ್ ಪ್ರೆಶರ್ ಅಥವಾ ಡಯಾಬಿಟೀಸ್ ಇರುವವರು ವೈದ್ಯರ ಸಲಹೆಯಂತೆ ಹೆಚ್ಚು ಬಾರಿ ಪರೀಕ್ಷೆ ಮಾಡಿಸಬೇಕು. ನಿಯಮಿತ ತಪಾಸಣೆಗಳು ಉತ್ತಮ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಿವೆ. ಅಷ್ಟೇ ಅಲ್ಲ ಇದರಿಂದ ಆರೋಗ್ಯ ಸಮಸ್ಯೆಗಳನ್ನು ಮುಂಚಿತವಾಗಿ ಪತ್ತೆಹಚ್ಚಿ ಅದನ್ನು ತಡೆಗಟ್ಟಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೂಡುಬಿದ್ರೆ ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​

ಮಂಗಳೂರು, ಮಾರ್ಚ್​​ 17: ಮೂಡುಬಿದ್ರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್‌ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿರುವ ನಡುವೆ, ಇನ್ಸ್ಪೆಕ್ಟರ್ ಮಹಿಳೆಯೊಂದಿಗೆ ಮಾತನಾಡಿರುವ ಆಡಿಯೋ ಸಂಭಾಷಣೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾನು ಆಕೆಯ ಟಚ್ ಬಿಟ್ಟಿದ್ದೀನಿ, ದೇವರಾಣೆ ನೀನು ಬಿಟ್ರೆ ನನಗೆ ಯಾರೂ ಬೇಡ ಎಂಬಂತಹ ಪದಗಳು ಆಡಿಯೋದಲ್ಲಿದ್ದು, ನೂರಾರು ಮಹಿಳೆಯರಿಗೆ ಸಂದೇಶ್​​ ಕಿರುಕುಳ ನೀಡಿದ್ದಾರೆ ಎಂಬ ಸಂತ್ರಸ್ತೆಯ ಆರೋಪಗಳಿಗೆ ಇಂಬು ನೀಡುವಂತವೆ. ಹಳೆಯಂಗಡಿಯವಳು ಯಾರು ಅಂತಾ ಮಹಿಳೆ ಸಂದೇಶ್​​ರನ್ನು ತರಾಟೆಗೆ ಪಡೆದಿದ್ದು, ಟೀಚರ್ ಜೊತೆ ಏನು ಸಂಬಂಧ ಮತ್ತು ಮನೆ ಕೆಲಸದವಳ ಜೊತೆ ಏನು ನಡೀತಿದೆ ಅಂತಲೂ ಪ್ರಶ್ನಿಸಿರೋದು ಆಡಿಯೋದಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಒಂದಕ್ಕಿಂತ ಹೆಚ್ಚು ಇಪಿಎಫ್ ಅಕೌಂಟ್​ಗಳನ್ನು ವಿಲೀನಗೊಳಿಸುವ ಸುಲಭ ಕ್ರಮಗಳು

ಇವತ್ತು ಖಾಸಗಿ ಸಂಸ್ಥೆಗಳ ಉದ್ಯೋಗಿಗಳಿಗೆ ಭವಿಷ್ಯದ ಭದ್ರತೆಗೆ ಇರುವ ಸ್ಕೀಮ್​ಗಳಲ್ಲಿ ಇಪಿಎಫ್ ಅಕೌಂಟ್ ಪ್ರಮುಖವಾದುದು. ಪ್ರತೀ ಉದ್ಯೋಗಿಗೂ ಕಂಪನಿ ವತಿಯಿಂದ ಇಪಿಎಫ್ ಅಕೌಂಟ್ ತೆರೆಯಲಾಗುತ್ತದೆ. ಉದ್ಯೋಗಿಯ ಸಂಬಳದಲ್ಲಿ ಶೇ. 12ರಷ್ಟು ಹಣವನ್ನು ಕಡಿತಗೊಳಿಸಿ ಈ ಅಕೌಂಟ್​ಗೆ ಹಾಕಲಾಗುತ್ತದೆ. ಕಂಪನಿ (ಉದ್ಯೋಗದಾತರು) ವತಿಯಿಂದಲೂ ಅಷ್ಟೇ ಪ್ರಮಾಣದಲ್ಲಿ ಹಣವು ಇಪಿಎಫ್ ಅಕೌಂಟ್​ಗೆ ಸೇರ್ಪಡೆಯಾಗುತ್ತದೆ. ಸರ್ಕಾರದಿಂದ (ಇಪಿಎಫ್​​ಒ ಸಂಸ್ಥೆ) ಪ್ರತೀ ವರ್ಷ ಇಪಿಎಫ್ ಅಕೌಂಟ್​ನಲ್ಲಿರುವ ಹಣಕ್ಕೆ ಬಡ್ಡಿ ಸಂದಾಯ ಆಗುತ್ತದೆ. ಹೀಗೆ ಉದ್ಯೋಗಿ ನಿವೃತ್ತಿಯಾಗುವವರೆಗೂ ಹಣ ಬೆಳೆಯಬೇಕೆನ್ನುವುದು ಉದ್ದೇಶ.

ಇದೇ ವೇಳೆ, ಉದ್ಯೋಗಿಯು ಕಂಪನಿ ಬದಲಿಸಿ ಹೊಸ ಕಂಪನಿ ಸೇರಿದಾಗ ಹೊಸ ಇಪಿಎಫ್ ಅಕೌಂಟ್ ರಚನೆಯಾಗುತ್ತದೆ. ಉದ್ಯೋಗಿಯು ತನ್ನ ವೃತ್ತಿಜೀವನದಲ್ಲಿ ಹಲವು ಕಂಪನಿಗಳಲ್ಲಿ ಕೆಲಸ ಮಾಡಬಹುದಾದ್ದರಿಂದ ಬಹು ಇಪಿಎಫ್ ಅಕೌಂಟ್​ಗಳು ಇದ್ದಿರಲು ಸಾಕು. ಕಂಪನಿ ಬದಲಿಸಿದಾಗ ಹಿಂದಿನ ಕಂಪನಿಯ ಇಪಿಎಫ್ ಅಕೌಂಟ್ ಅನ್ನು ವಿಲೀನಗೊಳಿಸಲು ಹೊಸ ಕಂಪನಿಯ ಎಚ್​ಆರ್​ಗೆ ತಿಳಿಸಿದರೆ ಸುಲಭವಾಗಿ ವಿಲೀನಗೊಳಿಸಬಹುದು. ಇಲ್ಲದಿದ್ದರೆ ಒಬ್ಬ ವ್ಯಕ್ತಿಗೆ ಹಲವು ಇಪಿಎಫ್ ಅಕೌಂಟ್​ಗಳು ಇರುತ್ತವೆ.

ಇದನ್ನೂ ಓದಿ: ಹೂಡಿಕೆಗೆ ಯಾವ ರೀತಿಯ ಮ್ಯೂಚುವಲ್ ಫಂಡ್​ಗಳನ್ನು ಆಯ್ದುಕೊಳ್ಳಬೇಕು? ಗಮನಿಸಬೇಕಾದ ಅಂಶಗಳಿವು

ಒಂದಕ್ಕಿಂತ ಹೆಚ್ಚು ಇಪಿಎಫ್ ಅಕೌಂಟ್​ಗಳಿದ್ದರೆ ಅವನ್ನು ಇತ್ತೀಚಿನ ಇಪಿಎಫ್ ಅಕೌಂಟ್​ಗೆ ವಿಲೀನಗೊಳಿಸಬಹುದು. ಆನ್​ಲೈನ್​ನಲ್ಲೇ ಸುಲಭವಾಗಿ ಈ ಕೆಲಸ ಮಾಡಬಹುದು. ಹಾಗೆ ಮಾಡಲು ಯುಎಎನ್ ಆ್ಯಕ್ಟಿವೇಟ್ ಆಗಿರಬೇಕು. ಇಪಿಎಫ್ ಅಕೌಂಟ್​ಗಳನ್ನು ವಿಲೀನಗೊಳಿಸುವ ಕ್ರಮ ಹೀಗಿದೆ:

  • ಇಪಿಎಫ್​ಒ ವೆಬ್​ಸೈಟ್​ಗೆ ಭೇಟಿ ನೀಡಿ: www.epfindia.gov.in/site_en/index.php
  • ನಿಮ್ಮ ಯುಎಎನ್ ಮತ್ತು ಪಾಸ್ವರ್ಡ್ ಬಳಸಿ ಸೈನ್ ಇನ್ ಆಗಿ
  • ಆನ್​ಲೈನ್ ಸರ್ವಿಸ್ ಟ್ಯಾಬ್​ಗೆ ಹೋಗಿ, ‘ಒನ್ ಮೆಂಬರ್ ಅಂಡ್ ಒನ್ ಇಪಿಎಫ್ ಅಕೌಂಟ್’ ಲಿಂಕ್ ಕ್ಲಿಕ್ ಮಾಡಿ.
  • ಹೊಸ ವಿಂಡೋದಲ್ಲಿ ನಿಮ್ಮ ವೈಯಕ್ತಿಕ ವಿವರ ಮತ್ತು ಈಗಿರುವ ಕಂಪನಿಯ ಇಪಿಎಫ್ ಅಕೌಂಟ್ ಅನ್ನು ನೋಡಬಹುದು.
  • ನೊಂದಾಯಿತ ಫೋನ್ ನಂಬರ್ ಮತ್ತು ಯುಎಎನ್ ಸೇರಿದಂತೆ ಅಲ್ಲಿ ಕೇಳಲಾಗುವ ಮಾಹಿತಿ ಒದಗಿಸಿ.
  • ‘ಜನರೇಟ್ ಒಟಿಪಿ’ ಆಯ್ಕೆ ಆಯ್ದುಕೊಂಡು ವೆರಿಫಿಕೇಶನ್ ಪಡೆಯಿರಿ.
  • ಈಗ ಹೊಸ ಇಪಿಎಫ್ ಅಕೌಂಟ್​ಗೆ ವಿಲೀನವಾಗಬೇಕಿರುವ ಹಳೆಯ ಇಪಿಎಫ್ ಅಕೌಂಟ್​ಗಳ ಮಾಹಿತಿ ಕೇಳಲಾಗುತ್ತದೆ.
  • ಡಿಕ್ಲರೇಶನ್ ಬಾಕ್ಸ್ ಅನ್ನು ಚೆಕ್ ಮಾಡಿ, ‘ಸಬ್ಮಿಟ್’ ಕ್ಲಿಕ್ ಮಾಡಿ.

ಇದನ್ನೂ ಓದಿ: ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು

ಈಗ ವಿಲೀನಕ್ಕೆ ನೀವು ಅರ್ಜಿ ಸಲ್ಲಿಸಿದಂತಾಗುತ್ತದೆ. ಈ ಅರ್ಜಿಗೆ ನಿಮ್ಮ ಈಗಿನ ಕಂಪನಿಯು ಅನುಮೋದನೆ ನೀಡಬೇಕು. ಆಗ ಈ ಅರ್ಜಿಯನ್ನು ಇಪಿಎಫ್​ಒ ಪರಿಶೀಲಿಸಿ, ಇಪಿಎಫ್ ಅಕೌಂಟ್​ಗಳನ್ನು ವಿಲೀನಗೊಳಿಸುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಾಗಿಣಿ ದ್ವಿವೇದಿ, ವರಲಕ್ಷ್ಮೀ ‘ಪೊಲೀಸ್ ಕಂಪ್ಲೈಂಟ್’: ಸಾಕ್ಷಿಯಾದ ಹಿರಿಯ ನಟಿ ಪ್ರೇಮಾ

ಮಹಿಳಾ ಪ್ರಧಾನ ಆ್ಯಕ್ಷನ್ ಕಹಾನಿ ಇರುವ ‘ಪೊಲೀಸ್ ಕಂಪ್ಲೈಂಟ್’ ಸಿನಿಮಾದಲ್ಲಿ ವರಲಕ್ಷ್ಮೀ ಶರತಕುಮಾರ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ನವೀನ್ ಚಂದ್ರ, ಕೃಷ್ಣ ಸಾಯಿ ಅವರು ನಾಯಕ ನಟರಾಗಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಶರತ್ ಲೋಹಿತಾಶ್ವ, ಸಪ್ತಗಿರಿ, ಅನಿಲ್ ರಾಜ್, ಪೃಥ್ವಿರಾಜ್, ಜೆಮಿನಿ ಸುರೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ. ಈ ಹಿಂದೆ ‘ಅನು’, ‘ದಂಡು’, ‘ಆಪ್ತ’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಸಂಜೀವ ಮೆಗೋಟಿ ಅವರು ‘ಪೊಲೀಸ್ ಕಂಪ್ಲೈಂಟ್’ (Police Complaint) ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

‘ಎಂ.ಎಸ್.ಕೆ. ಪ್ರಮೀದಾಶ್ರೀ ಫಿಲ್ಮ್ಸ್’ ಬ್ಯಾನರ್ ಮೂಲಕ ‘ಪೊಲೀಸ್ ಕಂಪ್ಲೈಂಟ್’ ಚಿತ್ರ ನಿರ್ಮಾಣವಾಗಿದೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಟೀಸರ್ ಮತ್ತು ಹಾಡೊಂದನ್ನು ಬಿಡುಗಡೆ ಮಾಡಿದೆ. ನಟಿ ಪ್ರೇಮಾ ಟೀಸರ್ ರಿಲೀಸ್ ಮಾಡಿದರು. ಮೊದಲ ಹಾಡನ್ನು ಕನ್ನಡ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ. ವಿಶ್ವನಾಥ್ ಬಿಡುಗಡೆಗೊಳಿಸಿದರು.

ಈ ವೇಳೆ ನಿರ್ದೇಶಕ ಸಂಜೀವ್ ಮೆಗೋಟಿ ಮಾತನಾಡಿದರು. ‘ಸುಮಾರು 10 ವರ್ಷದ ನಂತರ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೆ ಬರುತ್ತಿರುವುದಕ್ಕೆ ಖುಷಿಯಾಗುತ್ತಿದೆ. ನಾವು ಮಾಡಿದ ಕರ್ಮ ಹೇಗೆ ನಮ್ಮನ್ನು ಕಾಡುತ್ತದೆ ಎಂಬ ಒಂದು ಎಳೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಕನ್ನಡ ಮತ್ತು ತೆಲುಗಿನ ಸುಮಾರು 50ಕ್ಕೂ ಹೆಚ್ಚಿನ ಕಲಾವಿದರು ನಟಿಸಿದ್ದಾರೆ. ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡುವ ಯೋಜನೆಯಿದೆ’ ಎಂದು ಅವರು ಹೇಳಿದರು.

ನಟಿ ರಾಗಿಣಿ ದ್ವಿವೇದಿ ಅವರು ‘ಪೊಲೀಸ್ ಕಂಪ್ಲೈಂಟ್’ ಚಿತ್ರದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ‘ನನ್ನ ವೃತ್ತಿಜೀವನದಲ್ಲಿ ಇದೊಂದು ವಿಭಿನ್ನ ಸಿನಿಮಾ. ಇದರಲ್ಲಿ ತಾಯಿ ಮತ್ತು ಮಗುವಿನ ಸಂಬಂಧದ ಸುತ್ತ ನನ್ನ ಪಾತ್ರ ಸಾಗುತ್ತದೆ. ಆ್ಯಕ್ಷನ್, ಹಾರರ್ ಜತೆಗೆ ಎಮೋಶನ್ಸ್ ಸಹ ಈ ಸಿನಿಮಾದಲ್ಲಿದೆ. ಎಲ್ಲಾ ರೀತಿಯ ಪ್ರೇಕ್ಷಕರಿಗೂ ಈ ಸಿನಿಮಾ ಇಷ್ಟವಾಗಲಿದೆ’ ಎಂದು ರಾಗಿಣಿ ಹೇಳಿದರು.

ಇದನ್ನೂ ಓದಿ: ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

‘ಈವರೆಗೆ ತೆಲುಗಿನಲ್ಲಿ ಕೆಲವು ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡದಲ್ಲಿ ಹೀರೋ ಆಗಿ ಇದು ನನಗೆ ಮೊದಲ ಸಿನಿಮಾ. ಸಿನಿಮಾದ ಕಥೆ ಮತ್ತು ಪಾತ್ರ ತುಂಬಾ ಚೆನ್ನಾಗಿದೆ’ ಎಂದು ಕೃಷ್ಣಸಾಯಿ ಹೇಳಿದರು. ಬಿಡುಗಡೆಯಾಗಿರುವ ಹಾಡಿಗೆ ಆರೋಹಣ ಸುಧೀಂದ್ರ ಸಂಗೀತ ನೀಡಿದ್ದು, ಬಿ.ಆರ್. ಛಾಯಾ ಧ್ವನಿಯಾಗಿದ್ದಾರೆ. ಈ ಸಿನಿಮಾಗೆ ಹರೀಶ್ ಸೊಂಡೇಕೊಪ್ಪ ಛಾಯಾಗ್ರಹಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಾಮರಾಜನಗರ: ವಿದ್ಯುತ್ ಶಾಕ್​​ಗೆ ಹೆಣ್ಣು ಹುಲಿ ಬಲಿ; ಅರಣ್ಯಾಧಿಕಾರಿಗಳ ಕಳ್ಳಾಟಕ್ಕೆ ರೊಚ್ಚಿಗೆದ್ದ ರೈತರು

ಚಾಮರಾಜನಗರ, ಮಾರ್ಚ್​​ 17: ಗಡಿನಾಡು ಚಾಮರಾಜನಗರದಲ್ಲಿ ಮಾನವ ಮತ್ತು ಕಾಡು ಪ್ರಾಣಿ ಸಂಘರ್ಷ ಮತ್ತೆ ಮುಂದುವರೆದಿದೆ. ಕಳೆದ ವಾರ ಮೂರು ಹಸುವನ್ನ ಕೊಂದು ತಿಂದಿದ್ದ 5 ವರ್ಷದ ಹೆಣ್ಣು ಹುಲಿ (tiger) ವಿದ್ಯುತ್ ಶಾಕ್​​ಗೆ ಬಲಿಯಾಗಿರುವಂತಹ (death) ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಜಾನುವಾರು ಸತ್ತಾಗ ಬಾರದ ಅರಣ್ಯ ಸಿಬ್ಬಂದಿ ಇದೀಗ ಹುಲಿ ಸಾವಿನ ವಿಚಾರ ತಿಳಿಯುತ್ತಿದ್ದಂತೆ ಓಡೋಡಿ ಬಂದಿದ್ದ ಅರಣ್ಯಾಧಿಕಾರಿಗಳಿಗೆ ರೈತರು ಚಳಿ ಕೂಡ ಬಿಡಿಸಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿಗೆ ಘೇರಾವ್ ಹಾಕಿದ ಅನ್ನದಾತರು 

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಜಮೀನು ಒಂದಕ್ಕೆ ನೀಡಿದ್ದ ವಿದ್ಯುತ್ ಸಂಪರ್ಕದಿಂದ 5 ವರ್ಷ ಪ್ರಾಯದ ಹೆಣ್ಣು ಹುಲಿ ಸಾವನ್ನಪ್ಪಿದೆ. ಈ ಹಿನ್ನಲೆ ಸ್ಥಳಕ್ಕೆ ಬಂದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿಗೆ ಘೇರಾವ್ ಹಾಕಿ ಅನ್ನದಾತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಹುಲಿ ಸಾವು ಕೇಸ್​: ಉರುಳು ಹಾಕಿದ್ದ ಆರೋಪಿ ಅರೆಸ್ಟ್

ಇನ್ನು ಕಳೆದ 15 ದಿನಗಳಲ್ಲಿ ರವಿಚಂದ್ರ ಎಂಬುವವರ ಜಮೀನಿನಲ್ಲಿ ಮೇಯುತ್ತಿದ್ದ ಮೂರು ಜಾನುವಾರುಗಳ ಮೇಲೆ ವ್ಯಾಘ್ರ ದಾಳಿ ಮಾಡಿತ್ತು. ಮೂರು ಹಸುವನ್ನ ಕೊಂದು ತಿಂದು ತೇಗಿತ್ತು. ಆಗ ಬಂಡೀಪುರ ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದರೆ ಸ್ಥಳಕ್ಕೆ ಬಾರದೆ ಉಡಾಫೆ ತೋರಿದ್ದರು. ಆದರೆ ಇಂದು ಹುಲಿ ಸತ್ತ ವಿಚಾರ ತಿಳಿದ ತಕ್ಷಣ ಇಡೀ ಬಂಡೀಪುರ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದರು. ಇದರಿಂದ ರೊಚ್ಚಿಗೆದ್ದ ರೈತ ವರ್ಗ ಅರಣ್ಯ ಸಿಬ್ಬಂದಿಗೆ ಘೇರಾವ್ ಹಾಕಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಹುಲಿಯ ಕಾಟಕ್ಕೆ ಈ ಭಾಗದ ರೈತರು ರೋಸಿಹೋಗಿದ್ದಾರೆ. ಆಗಲೇ ಅರಣ್ಯ ಸಿಬ್ಬಂದಿ ಬೋನಿಟ್ಟು ಹುಲಿಯನ್ನ ಹಿಡಿದಿದ್ದರೆ ಇಂದು ಹುಲಿ ಬಲಿಯಾಗುತ್ತಿರಲಿಲ್ಲ ಎಂದು ರೈತ ದಿನೇಶ್​ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ: ಗಂಡು ಹುಲಿ ಮೃತದೇಹ ಪತ್ತೆ: ಡ್ಯಾಂನಲ್ಲಿ ಶವ ತೇಲುತ್ತಿರುವುದನ್ನು ಕಂಡು ಬೆಚ್ಚಿಬಿದ್ದ ಪ್ರವಾಸಿಗರು

ಜಮೀನಿನಲ್ಲಿ ವಿದ್ಯುತ್ ಕೊಟ್ಟು ಹುಲಿ ಸಾವಿಗೆ ಕಾರಣವಾದವರ ಮೇಲೆ ಎಫ್​ಐಆರ್ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಿ, ಆದರೆ ಕರ್ತವ್ಯ ಲೋಪ ಎಸಗಿದ ಅರಣ್ಯ ಇಲಾಖೆಯ ಸಿಎಫ್ ಪ್ರಭಾಕರನ್ ಮೇಲೆ ಎಫ್ ಐ ಆರ್ ಮಾಡಿದರೆ ಮಾತ್ರ ರೈತನ ಮೇಲೆ ಎಫ್​ಐಆರ್ ಮಾಡಬೇಕು. ಇಲ್ಲದೆ ಹೋದರೆ ಯಾವುದೇ ಕಾರಣಕ್ಕೂ ಪ್ರಕರಣ ದಾಖಲು ಮಾಡುವುದಕ್ಕೆ ಬಿಡಲ್ಲವೆಂದು ರೈತರು ಪಟ್ಟುಹಿಡಿದರು. ರೈತರ ಉಗ್ರ ರೂಪಕ್ಕೆ ಬೆದರಿದ ಬಂಡೀಪುರ ಸಿಎಫ್ ಪ್ರಭಾಕರನ್, ಪೊಲೀಸ್ ರಕ್ಷಣೆ ಜೊತೆ ಸ್ಥಳಕ್ಕೆ ಬಂದಿದ್ದು ಹಾಸ್ಯಸ್ಪದವಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೆಯುಡಬ್ಲ್ಯೂಜೆ ಸಂಸ್ಥಾಪಕ ಡಿವಿಜಿ ಜನ್ಮ ದಿನಾಚರಣೆ: ಇತಿಹಾಸ ಸ್ಮರಿಸಿದ ಶಿವಾನಂದ ತಗಡೂರು

ಬೆಂಗಳೂರು, ಮಾರ್ಚ್​​ 17: ಆಧುನಿಕ ಕನ್ನಡ ಸಾಹಿತ್ಯದ ಸರ್ವಜ್ಞ, ಸಾಹಿತ್ಯ ದಿಗ್ಗಜ ಡಿ.ವಿ. ಗುಂಡಪ್ಪನವರು ಕೇವಲ ಸಾಹಿತಿಯಷ್ಟೇ ಅಲ್ಲದೆ ಪತ್ರಕರ್ತರ ಹಿತರಕ್ಷಣೆಗಾಗಿ 95 ವರ್ಷಗಳ ಹಿಂದೆಯೇ ಸಂಘಟನೆಯನ್ನು ಕಟ್ಟಿದ ದೂರದರ್ಶಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.
ನಗರದಲ್ಲಿ ನಡೆದ ಬೆಂಗಳೂರು ಜಿಲ್ಲಾ ಘಟಕದ ನೂತನ ಕಚೇರಿ ಪೂಜೆ ಹಾಗೂ ಡಿ.ವಿ.ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಡಿ.ವಿ.ಜಿ ಅವರು ಅಂದು ಹಾಕಿಕೊಟ್ಟ ಅಡಿಪಾಯದ ಮೇಲೆ ಇಂದು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ ಹೆಮ್ಮರವಾಗಿ ಬೆಳೆದಿದೆ. ಸುಮಾರು 10,000 ಸದಸ್ಯರನ್ನು ಹೊಂದಿರುವ ಇದು ದೇಶದ ಅತಿದೊಡ್ಡ ಸಂಘಟನೆಗಳಲ್ಲಿ ಒಂದಾಗಿದೆ. ಹಿರಿಯ ಪತ್ರಕರ್ತ ಖಾದ್ರಿ ಶಾಮಣ್ಣ ಸಮಿತಿಯ ಶಿಫಾರಸಿನ ಮೇರೆಗೆ ಹುಬ್ಬಳ್ಳಿಯಲ್ಲಿ ನಡೆದ ಸಮ್ಮೇಳನದಲ್ಲಿ ಈ ಸಂಘಕ್ಕೆ ಮರುನಾಮಕರಣ ಮಾಡಲಾಗಿದೆ ಎಂದು ಹೇಳುವ ಮೂಲಕ ಇತಿಹಾಸವನ್ನು ತಗಡೂರು ಸ್ಮರಿಸಿದ್ದಾರೆ.

ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯದ (ಕಂದಾಯ) ಸದಸ್ಯ ಕೆ.ಎಚ್. ಅಶ್ವತ್ಥನಾರಾಯಣ ಮಾತನಾಡಿ, ಡಿ.ವಿ.ಜಿ ಪ್ರೌಢಶಾಲೆವರೆಗೆ ಓದಿದ್ದರೂ ಕನ್ನಡ, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯಲ್ಲಿ ಅವರು ಹೊಂದಿದ್ದ ಪಾಂಡಿತ್ಯ ಅಪ್ರತಿಮವಾದುದು. ಅವರ ‘ಮಂಕುತಿಮ್ಮನ ಕಗ್ಗ’ ಕೃತಿಯು ಸಮಾಜದ ಪ್ರತಿಯೊಂದು ಸಮಸ್ಯೆಗೆ ಪರಿಹಾರ ನೀಡುವ ಶಕ್ತಿ ಹೊಂದಿವೆ ಎಂದಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, ದೇಶಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಹೇಗೋ, ಪತ್ರಕರ್ತರು ಮತ್ತು ಸಾಮಾನ್ಯ ಜನರ ಬದುಕಿಗೆ ಡಿ.ವಿ.ಜಿ ಅವರ ‘ಮಂಕುತಿಮ್ಮನ ಕಗ್ಗ’ ಸಂವಿಧಾನದಂತಿದೆ ಎಂದು ಕೊಂಡಾಡಿದ್ದಾರೆ.

ಇದನ್ನೂ ಓದಿ: SSLC ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ, ವಿಡಿಯೋ ವೈರಲ್

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತ ಭೋಪಯ್ಯ ಭಾಗವಹಿಸಿದ್ದರು. ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಬೆಂಗಳೂರು ನಗರ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷರಾದ ಎಸ್.ಸೋಮಶೇಖರ ಗಾಂಧಿ ಸ್ವಾಗತಿಸಿದರು. ಬೆಂಗಳೂರು ನಗರ ಜಿಲ್ಲೆ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ರವೀಶ್ ವಂದನಾರ್ಪಣೆ ಮಾಡಿದರು. ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಘಟಕದ ಕಚೇರಿಯಲ್ಲಿ ವಿದ್ಯುಕ್ತವಾಗಿ ಪೂಜೆ ಸಲ್ಲಿಸಿದ ನೂತನ ಪದಾಧಿಕಾರಿಗಳು ಸಂಘದ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹೈದರಾಬಾದ್ ತಂಡಕ್ಕೆ ಮಾರ್ನಸ್ ಲಬುಶೇನ್ ನಾಯಕ

Source link

Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಹಂಚುವುದರ ಹಿಂದಿನ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವೇನು?

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ… ಮತ್ತೆ ಯುಗಾದಿ ಬಂದಿದೆ.. ಹೊಸ ಆರಂಭ, ಹೊಸ ವರ್ಷ, ಶುದ್ಧತೆ, ಹೊಸ ನಿರೀಕ್ಷೆ ಮತ್ತು ಸಮೃದ್ಧಿಯ ಸಂಕೇತವಾಗಿ ಯುಗಾದಿ (Ugadi) ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದೂಗಳ ಈ ಪವಿತ್ರ ಹಬ್ಬದ ದಿನ ದೇವರ ಪೂಜಾ ಕಾರ್ಯದ ಜೊತೆಗೆ ಮನೆಮಂದಿಯೆಲ್ಲಾ ಬೇವು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಸ್ನೇಹಿತರು, ಸಂಬಂಧಿಕರಿಗೂ ಬೇವು-ಬೆಲ್ಲವನ್ನು ಹಂಚುತ್ತಾರೆ. ಹೌದು  ಸಂಕ್ರಾಂತಿ ಹಬ್ಬದಂದು ಎಳ್ಳು ಬೆಲ್ಲ ಸವಿಯುವ ಹಾಗೆ ಯುಗಾದಿ ಹಬ್ಬದಂದು ಬೇವು ಬೆಲ್ಲ ಸೇವಿಸುವ ಆಚರಣೆ ರೂಢಿಯಲ್ಲಿದೆ. ಇದು ಕೇವಲ ಆಚರಣೆಯಲ್ಲ, ಇದರ ಹಿಂದೆ ವೈಜ್ಞಾನಿಕ ಕಾರಣವೂ ಇದೆ. ಬೇವು-ಬೆಲ್ಲವನ್ನು ಸವಿಯುವುದರ ಹಿಂದಿರುವ ವೈಜ್ಞಾನಿಕ ಕಾರಣವೇನು ಎಂಬುದನ್ನು ತಿಳಿಯೋಣ ಬನ್ನಿ.

ಬೇವು-ಬೆಲ್ಲದ ಆಧ್ಯಾತ್ಮಿಕ ಮಹತ್ವವೇನು?

ನೋವು-ನಲಿವನ್ನು ಸಂಕೇತಿಸುತ್ತದೆ: ಕಹಿ ಬೇವು ಮತ್ತು ಸಿಹಿ ಬೆಲ್ಲವು ಜೀವನದ ದ್ವಂದ್ವ ಸ್ವಭಾವವನ್ನು ಸಂಕೇತಿಸುತ್ತದೆ.  ಸಂತೋಷ ಮತ್ತು ದುಃಖ, ಸವಾಲುಗಳು ಮತ್ತು ಯಶಸ್ಸು ಎಲ್ಲವನ್ನು ಬೇವು ಬೆಲ್ಲದಂತೆ ಸಮಾನವಾಗಿ ಸ್ವೀಕರಿಸಬೇಕು ಜೀವನವು ಕಹಿ ಮತ್ತು ಸಿಹಿ ಅನುಭವಗಳ ಮಿಶ್ರಣವಾಗಿದ್ದು, ಈ  ಎರಡನ್ನೂ ಸಮಾನವಾಗಿ ಸ್ವೀಕರಿಸುವುದರಿಂದ ಜೀವನವು ಸಂತೋಷದಿಂದ ಸಾಗುತ್ತದೆ ಎಂಬುದನ್ನು ಸಂಕೇತಿಸುತ್ತದೆ.

ಶುಭ ಆರಂಭದ ಸಂಕೇತ: ಹಿಂದೂ ಸಂಪ್ರದಾಯದಲ್ಲಿ, ಬೇವನ್ನು ದೈವಿಕ ಗುಣಗಳನ್ನು ಹೊಂದಿರುವ ಪವಿತ್ರ ಮರವೆಂದು ಪರಿಗಣಿಸಲಾಗುತ್ತದೆ. ಇದನ್ನು ಬೆಲ್ಲದೊಂದಿಗೆ ಪ್ರಸಾದವಾಗಿ ಅರ್ಪಿಸುವುದು ಶುದ್ಧೀಕರಣ ಮತ್ತು ಹೊಸ ವರ್ಷದ ಆಶೀರ್ವಾದದ ಆರಂಭವನ್ನು ಸೂಚಿಸುತ್ತದೆ. ಇದು ನಕಾರಾತ್ಮಕತೆಯನ್ನು ಶುದ್ಧೀಕರಿಸುತ್ತದೆ ಮತ್ತು ಸಕಾರಾತ್ಮಕತೆಯನ್ನು ಆಕರ್ಷಿಸುತ್ತದೆ, ಮುಂಬರುವ ವರ್ಷವನ್ನು ಸಮೃದ್ಧಗೊಳಿಸುತ್ತದೆ ಎಂದು ನಂಬಲಾಗಿದೆ. ಅದಕ್ಕಾಗಿಯೇ ಹೊಸ ವರ್ಷವಾದ ಯುಗಾದಿ ಹಬ್ಬದ ದಿನ ಬೇವು ಬೆಲ್ಲವನ್ನು ಸ್ವೀಕರಿಸಲಾಗುತ್ತದೆ.

ಬೇವು ಬೆಲ್ಲದ ಸೇವನೆಯ ವೈಜ್ಞಾನಿಕ ಮಹತ್ವವೇನು?

ಯುಗಾದಿ ಹಬ್ಬದ ದಿನದಿಂದ ವಸಂತ ಕಾಲ ಆರಂಭವಾಗುತ್ತದೆ. ಈ ಸಮಯದಲ್ಲಿ ಸೂರ್ಯನ ಪ್ರಖರತೆ ಹೆಚ್ಚಾದಂತೆ ವಾತಾವರಣವು ಒಣಗಿ, ಬಿಸಿಲಿನಿಂದ ಕೂಡಿ, ಬೆಚ್ಚಗಾಗುತ್ತದೆ ಮತ್ತು ಸೂರ್ಯನ ಶಾಖದ ಪ್ರಭಾವದಿಂದಾಗಿ ದೇಹದಲ್ಲಿ ಪಿತ್ತರದ ಅಂಶವೂ ಹೆಚ್ಚಾಗುತ್ತದೆ. ಇದರಿಂದಾಗಿ ಹೊಟ್ಟೆ ಸಂಬಂಧಿ ಕಾಯಿಲೆಗಳು, ಬಾಯಿ ಹುಣ್ಣು, ವಾಂತಿ, ಎದೆಯುರಿ, ಅತಿಯಾದ ಬೆವರುವಿಕೆ, ತುರಿಕೆ ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಕಾಯಿಲೆಗಳನ್ನು ತಡೆಗಟ್ಟಲು, ಅತಿಯಾದ ಪಿತ್ತರಸದ ಅಂಶವನ್ನು ಕಡಿಮೆ ಮಾಡಲು ಮತ್ತು ರೋಧನಿರೋಧಕ ಶಕ್ತಿಯನ್ನು ಹೆಚ್ಚಿಸಲು ಯುಗಾದಿ ಹಬ್ಬದಂದು ಬೇವು ಬೆಲ್ಲವನ್ನು ಸೇವನೆ ಮಾಡಲಾಗುತ್ತದೆ.

ಇದನ್ನೂ ಓದಿ: ವರ್ಷ ಯುಗಾದಿ ಹಬ್ಬ ಯಾವಾಗ ? ದಿನ ಏನು ಮಾಡಬೇಕು ಮತ್ತು ಏನು ಮಾಡಬಾರದು?

ಬೇವು-ಬೆಲ್ಲದ ಆರೋಗ್ಯ ಪ್ರಯೋಜನಗಳೇನು?

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಬೇವು-ಬೆಲ್ಲದ ಮಿಶ್ರಣವು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್ ಮತ್ತು ಶಿಲೀಂಧ್ರನಾಶಕ ಗುಣಗಳನ್ನು ಹೊಂದಿದ್ದು, ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ದೇಹವನ್ನು ತಂಪಾಗಿಸುತ್ತದೆ: ಕಹಿಯಾದ ಬೇವನ್ನು ಸಿಹಿಯಾದ ಬೆಲ್ಲದೊಂದಿಗೆ ಸೇವಿಸಿದಾಗ, ದೇಹದಲ್ಲಿನ ಪಿತ್ತರಸ ಅಂಶವು ಕಡಿಮೆಯಾಗುತ್ತದೆ ಮತ್ತು ಇದು ದೇಹವನ್ನು ತಂಪಾಗಿಸುತ್ತದೆ.

ಬೇವು ದೇಹವನ್ನು ನಿರ್ವಿಷಗೊಳಿಸುತ್ತದೆ: ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ವಿಷವನ್ನು ತೆಗೆದುಹಾಕುತ್ತದೆ, ಚರ್ಮ ಮತ್ತು ಜೀರ್ಣಕ್ರಿಯೆಯ ಆರೋಗ್ಯವನ್ನು ಉತ್ತೇಜಿಸುತ್ತದೆ.

ಬೇವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ: ಬೇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ.

ಬೆಲ್ಲ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ: ಬೆಲ್ಲ ನೈಸರ್ಗಿಕ ಜೀರ್ಣಕಾರಿ ಸಹಾಯಕವಾಗಿ ಕಾರ್ಯನಿರ್ವಹಿಸುತ್ತದೆ, ಆಮ್ಲೀಯತೆ ಮತ್ತು ಉಬ್ಬುವಿಕೆಯನ್ನು ತಡೆಯುತ್ತದೆ.

ಬೆಲ್ಲ ಕಬ್ಬಿಣದಿಂದ ಸಮೃದ್ಧವಾಗಿದೆ: ಇದು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವ ಮೂಲಕ ರಕ್ತಹೀನತೆಯ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಬೆಲ್ಲ ತ್ವರಿತ ಶಕ್ತಿಯನ್ನು ಒದಗಿಸುತ್ತದೆ:  ಬೆಲ್ಲವು ನೈಸರ್ಗಿಕ ಶಕ್ತಿಯ ಮೂಲವಾಗಿದ್ದು, ಇದು ಬೇಸಿಗೆಯಲ್ಲಿ ದೇಹ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಗಾಯಗಳನ್ನು ಗುಣಪಡಿಸುತ್ತದೆ: ಬೇವು ಬೆಲ್ಲದ ಮಿಶ್ರಣವು ಉರಿಯೂತ ನಿವಾರಕ ಗುಣಗಳನ್ನು ಹೊಂದಿರುವುದರಿಂದ, ಇದು ಗಾಯಗಳನ್ನು ಗುಣಪಡಿಸುತ್ತದೆ ಮತ್ತು ಅವುಗಳನ್ನು ಬೇಗನೆ ಗುಣಪಡಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇರ್ಫಾನ್ ಪಠಾಣ್ ಬಿಟ್ಟು ವಾಸಿಂ ಜಾಫರ್ ಹಿಂದೆ ಬಿದ್ದ ಹಾರ್ದಿಕ್ ಪಾಂಡ್ಯ

Source link

ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ಬೆಳಗಾವಿ, (ಮಾರ್ಚ್ 17): ಕರ್ನಾಟಕದಲ್ಲಿ (Karnataka) ಬೇಸಿಗೆಯ (Summer)  ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ (Rain) ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹೌದು… ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಹಾಗೂ ಸಾಧಾರಣ ಮಳೆಯಾಗುತ್ತಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆಗೆ ವರುಣ ತಂಪೆರೆದಂತಾಗಿದೆ. ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಶಿವಬಸವನಗರ, ನೆಹರು ನಗರ, ಎಸ್ ಪಿ ಕಚೇರಿ ಸುತ್ತಮುತ್ತ ಭಾರಿ ಆಲಿಕಲ್ಲು ಮಳೆಯಾಅಗುತ್ತಿದ್ದು, ಏಕಾಏಕಿ ಸುರಿದ ಮಳೆಗೆ ಜನರು ಕಂಗಾಲಾಗಿದ್ದಾರೆ.

ಇದನ್ನೂ ಓದಿ: Bangalore Rain: ಬೆಂಗಳೂರಿನ ಹಲವೆಡೆ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ವರುಣ

Source link

Exit mobile version