ವಾಣಿಜ್ಯ ಸಿಲಿಂಡರ್ ಕೊರತೆ: ಹುಬ್ಬಳ್ಳಿಯಲ್ಲಿ ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಹುಬ್ಬಳ್ಳಿ, ಮಾರ್ಚ್ 12: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವದಿಂದಾಗಿ ಹುಬ್ಬಳ್ಳಿಯ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಸಿಲಿಂಡರ್‌ಗಳು ಸಿಗದೆ ಹಲವು ಹೋಟೆಲ್‌ಗಳು ತಮ್ಮ ಕಾರ್ಯಚಟುವಟಿಕೆ ನಿಲ್ಲಿಸುವ ಭೀತಿ ಎದುರಿಸುತ್ತಿವೆ. ಈ ಪರಿಸ್ಥಿತಿಯನ್ನು ಎದುರಿಸಲು, ಹೋಟೆಲ್ ಮಾಲೀಕರು ಪರ್ಯಾಯ ಮಾರ್ಗವಾಗಿ ಕಟ್ಟಿಗೆ ಒಲೆಗಳತ್ತ ಮುಖ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಹುಬ್ಬಳ್ಳಿ ನಗರದ ಎಂಜಿ ಮಾರ್ಕೆಟ್‌ನಲ್ಲಿ ಕಟ್ಟಿಗೆ ಒಲೆಗಳ ಬೇಡಿಕೆ ಅನಿರೀಕ್ಷಿತವಾಗಿ ಏರಿಕೆಯಾಗಿದೆ. ಈ ಹಿಂದೆ ಯಾರೂ ಖರೀದಿಸದ ಕಟ್ಟಿಗೆ ಒಲೆಗಳಿಗೆ ಇದೀಗ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು,…