ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳ, ಮಾರ್ಚ್ 11: ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಹಾಡಹಗಲೇ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ಕಾಣಿಸಿಕೊಂಡ ಚಿರತೆ ಸ್ಥಳೀಯರಲ್ಲಿ ಭಾರಿ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ರಾತ್ರಿ ವೇಳೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಇದೀಗ ಹಗಲು ಹೊತ್ತಿನಲ್ಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಮಲ್ಲಾಪುರ ಗ್ರಾಮವು ತುಂಗಭದ್ರಾ ನದಿಯ ಸಮೀಪದಲ್ಲಿರುವ ಕಾರಣ, ನದಿಯ ಆಸುಪಾಸಿನ ಪ್ರದೇಶಗಳಿಂದ ಚಿರತೆ ಬಂದಿರಬಹುದೆಂದು ಅಂದಾಜಿಸಲಾಗಿದೆ. ತಮ್ಮ ಗ್ರಾಮದಲ್ಲಿ ಚಿರತೆಯ ಸಂಚಾರ ಹೆಚ್ಚಾಗಿರುವುದರಿಂದ, ಜನ ಜಾನುವಾರುಗಳಿಗೆ ಅಪಾಯವಾಗಬಹುದು ಎಂದು ಗ್ರಾಮಸ್ಥರು…