Headlines

ಅಸಮಾಧಾನ ಸ್ಫೋಟ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಹುಬ್ಬಳ್ಳಿ (ಮಾರ್ಚ್ 11): ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ (Lingaraj Patil) ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ (Karnataka BJP disciplinary committee chairman ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, …

Read More

ಸೆಕೆಯೆಂದು ಈಜಲು ಹೋದ ವಿದ್ಯಾರ್ಥಿಗಳು ನೀರುಪಾಲು: ಸಾವಲ್ಲೂ ಒಂದಾದ ಆಪ್ತ ಸ್ನೇಹಿತರು

ಹುಬ್ಬಳ್ಳಿ, ಮಾರ್ಚ್​ 11: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ರಣಬಿಸಿಲಿಗೆ ಜನರು ಬಸವಳಿಯುತ್ತಿದ್ದಾರೆ. ಎಲ್ಲಿಯಾದ್ರು ನೀರು ಕಂಡ್ರೆ ಸಾಕು ಅಲ್ಲಿ ಸ್ವಲ್ಪ ಹೊತ್ತು ಆಟವಾಡಿ, ರಿಲ್ಯಾಕ್ಸ್ ಆಕಬೇಕು ಎಂದು ಬಯಸುತ್ತಿದ್ದಾರೆ. ಆದ್ರೆ ನಿಮ್ಮ ಮಕ್ಕಳು ಈ ರೀತಿಯಾಗಿ ಹೋಗ್ತಿದ್ದರೆ ಅವರ ಬಗ್ಗೆ ಸ್ವಲ್ಪ ಎಚ್ಚರವಹಿಸೋದು ಉತ್ತಮ. ಯಾಕಂದ್ರೆ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಬೈರಿದೇವರಕೊಪ್ಪದಲ್ಲಿರುವ ರೇಣುಕಾ ನಗರದ ಸಮರ್ಥ್ ಮತ್ತು ಹರೀಶ್ ಎಂಬ ಹದಿನೇಳು ವರ್ಷದ…

Read More

ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ನೆಟ್ಟಿಗರ ಆಕ್ರೋಶ

ಪ್ಯಾನ್ ಇಂಡಿಯಾ ಸ್ಟಾರ್ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರ ವಿವಾಹದ ಸಂಭ್ರಮ ಜೋರಾಗಿತ್ತು. ಇತ್ತೀಚೆಗಷ್ಟೇ ಈ ಜೋಡಿಯು ತಮ್ಮ ಮೆಹಂದಿ ಶಾಸ್ತ್ರದ ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಆದರೆ, ಈ ಖುಷಿಯ ನಡುವೆಯೇ ರಶ್ಮಿಕಾ ತೊಟ್ಟಿದ್ದ ಉಡುಪಿನ ವಿನ್ಯಾಸ ಈಗ ವಿವಾದಕ್ಕೆ ಕಾರಣವಾಗಿದೆ. ಲಕ್ಷ್ಮಿ ದೇವಿಯ ಚಿತ್ರವಿರುವ ಉಡುಪು ಧರಿಸಿದ್ದಕ್ಕೆ ಕೆಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ರಶ್ಮಿಕಾ ಮಂದಣ್ಣ (Rashmika Mandanna) ಅವರ ಅಪ್ಪಟ ಅಭಿಮಾನಿಗಳು ನಟಿಯ ಬೆಂಬಲಕ್ಕೆ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?

2026ರ ಪರಾಭವನಾಮ ಸಂವತ್ಸರದ ಯುಗಾದಿಯಂದು ಮೀನ ರಾಶಿಯವರ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ರಾಶಿಯವರಿಗೆ ಶನಿ ಸಾಡೇ ಸಾತಿಯ ಗರ್ಭ ಭಾಗ ನಡೆಯುತ್ತಿದ್ದು, ಗುರು ನಾಲ್ಕರಿಂದ ಐದಕ್ಕೆ, ಶನಿ ಒಂದರಲ್ಲಿ, ರಾಹು 12ರಿಂದ 11ರಲ್ಲಿ ಮತ್ತು ಕೇತು ಆರರಿಂದ ಐದರಲ್ಲಿ ಇರುತ್ತಾರೆ. ಆದಾಯ 14 ಮತ್ತು ವ್ಯಯ 7 ಇರಲಿದೆ. ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾದರೂ ಆರ್ಥಿಕವಾಗಿ ಉತ್ತಮ ಪರಿಸ್ಥಿತಿ ಇರುತ್ತದೆ. ಸರ್ಕಾರಿ ಉದ್ಯೋಗ, ವ್ಯಾಪಾರ, ಪಾಲುದಾರಿಕೆ ಹಾಗೂ ಉದ್ಯೋಗದಲ್ಲಿ ಶುಭ ಫಲಗಳಿವೆ….

Read More

ಕೊನೆಗೂ ಕೊಪ್ಪಳ ಜನರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ: ಕಾರ್ಖಾನೆಗಳಿಗೆ ಬೀಗ ಫಿಕ್ಸ್

ಕೊಪ್ಪಳ, ಮಾರ್ಚ್​​ 11: ಜಿಲ್ಲೆಯ ಜನತೆಗೆ ಈಗ ಉಸಿರಾಡುವುದೇ ದೊಡ್ಡ ಸಾಹಸವಾಗಿದೆ. ಕಾರ್ಖಾನೆಗಳು (Factory) ಹೊರಸೂಸುವ ವಿಷಕಾರಿ ಹೊಗೆಗೆ ರೋಸಿ ಹೋಗಿದ್ದಾರೆ. ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ ಜಿಲ್ಲಾಡಳಿತ ಈಗ ಎಚ್ಚೆತ್ತುಕೊಂಡಿದೆ. ನಿಯಮ ಉಲ್ಲಂಘಿಸಿದ 5 ಕಾರ್ಖಾನೆಗಳಿಗೆ ನೋಟಿಸ್ ನೀಡಲಾಗಿದ್ದು, 3 ಕಾರ್ಖಾನೆಗಳಿಗೆ ಬೀಗ ಬೀಳುವುದು ಫಿಕ್ಸ್ ಆಗಿದೆ. ಕಪ್ಪು ಹೊಗೆ ಉಗಳೋ ಕಾರ್ಖಾನೆಗಳು ಬಹುತೇಕ ಬಂದ್ ಆಗೋ ಸಾಧ್ಯತೆ ಇದೆ. ಕಾರ್ಖಾನೆಗಳು ಬಂದ್ ಆಗಿದ್ದೆ ನಿಜವಾದರೆ ಜನ ನೆಮ್ಮದಿಯ ನಿಟ್ಟುಸಿರು ಬಿಡುತ್ತಾರೆ. ಗವಿಸಿದ್ದೇಶ್ವರನ ನಾಡು ಕೊಪ್ಪಳದಲ್ಲಿ ಒಂದು…

Read More

ಮಹೇಶ್ ಬಾಬು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಪವನ್ ಕಲ್ಯಾಣ್ ಆಪ್ತ ನಿರ್ದೇಶಕ

ತೆಲುಗು ರಾಜ್ಯಗಳಲ್ಲಿ ಫ್ಯಾನ್ಸ್ ವಾರ್​​ಗಳು ಸಾಮಾನ್ಯ. ಕರ್ನಾಟಕಕ್ಕೆ ಹೋಲಿಸಿದರೆ ತುಸು ಹೆಚ್ಚೇ ಎನ್ನಬಹುದು. ಮೆಗಾಸ್ಟಾರ್ ಅಭಿಮಾನಿಗಳು ಮತ್ತು ನಂದಮೂರಿ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್​​ಗೆ ದಶಕಗಳ ಇತಿಹಾಸವಿದೆ. ಇವುಗಳ ನಡುವೆ ಜೂ ಎನ್​​ಟಿಆರ್ vs ಪವನ್ ಕಲ್ಯಾಣ್, ಪವನ್ ಕಲ್ಯಾಣ್ (Pawan Kalyan) vs ಮಹೇಶ್ ಬಾಬು ಹೀಗೆ ಬೇರೆ ಬೇರೆ ಫ್ಯಾನ್ಸ್ ವಾರ್​​ಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಇದೀಗ ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ…

Read More

ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್​​: ತನಿಖೆ ವೇಳೆ ಸಿಸಿಟಿವಿ ರಹಸ್ಯ ಬಯಲು

ಬೆಂಗಳೂರು, ಮಾರ್ಚ್​​ 11: ನಗರದ ಅಮೃತಹಳ್ಳಿಯ ವಿಲ್ಲಾದಲ್ಲಿ ಕಾಲೇಜು ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪೊಲೀಸ್​​ ತನಿಖೆ ವೇಳೆ ಬಗೆದಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಲೇ ಇವೆ. ಬೆಂಗಳೂರಿನ ಬೇರೆ ಬೇರೆ ಕಡೆ, ಗೋವಾ ಮತ್ತು ವಿದೇಶದಲ್ಲಿಯೂ ಆರೋಪಿಗಳು ಪಾರ್ಟಿ ನಡೆಸಿದ್ದು, ಈ ವೇಳೆ ಡ್ರಗ್ಸ್​​ ಬಳಸಿರೋದು ದೃಢಪಟ್ಟಿದೆ. ಆರೋಪಿಗಳ ಮೆಡಿಕಲ್ ಟೆಸ್ಟ್ ವರದಿಯೂ ಪಾಸಿಟಿವ್​​ ಬಂದಿದ್ದು, ಗೋವಾದಿಂದ ಇವರಿಗೆ ಮಾದಕ ವಸ್ತು ಸರಬರಾಜಾಗಿತ್ತು ಎಂಬ ವಿಷಯವೂ ಪೊಲೀಸರಿಗೆ ಗೊತ್ತಾಗಿದೆ. ಸಿಸಿಟಿವಿ ದೃಶ್ಯಗಳು ಪತ್ತೆ ಗ್ಯಾಂಗ್​​…

Read More

ಮಲೈಕಾ ಫೋಟೋ ವೈರಲ್: ‘ನಮ್ಮ ಸಂಬಂಧ ಆ ರೀತಿ ಇಲ್ಲ’ ಎಂದ ಸೋರಬ್ ಬೇಡಿ

ಬಾಲಿವುಡ್‌ನ ಗ್ಲಾಮರಸ್ ನಟಿ ಮಲೈಕಾ ಅರೋರಾ (Malaika Arora)  ಮತ್ತು Splitsvilla X6 ಸ್ಪರ್ಧಿ ಸೋರಬ್ ಬೇಡಿ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿತ್ತು. ಇತ್ತೀಚೆಗೆ ಅವರಿಬ್ಬರು ಒಟ್ಟಿಗೆ ಕಾಣಿಸಿಕೊಂಡ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಈ ಚರ್ಚೆ ಶುರುವಾಗಿತ್ತು. ಈಗ ಈ ಎಲ್ಲಾ ವದಂತಿಗಳಿಗೆ ಸೋರಬ್ ಬೇಡಿ (Sorab Bedi) ತೆರೆ ಎಳೆದಿದ್ದಾರೆ. ‘ನಾವಿಬ್ಬರೂ ಕೇವಲ ಸ್ನೇಹಿತರು’ ಎಂದು ಅವರು ಹೇಳಿದ್ದಾರೆ. ಟ್ರೋಲ್ ಮಾಡುವವರ ವಿರುದ್ಧ…

Read More

ಚೀನಾ ಲಿಂಕ್ ಹೊಂದಿರುವ ಮಂಗಳೂರಿನ ಸೈಬರ್ ವಂಚಕರ ಬಂಧನ

ಬೆಂಗಳೂರು, ಮಾರ್ಚ್​ 11: ಮ್ಯೂಲ್ ಅಕೌಂಟ್​ಗಳ ವಿರುದ್ಧದ ಕಾರ್ಯಾಚರಣೆ ವೇಳೆ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರನ್ನು (cyber fraud) ರಾಜ್ಯ ಸೈಬರ್ ಕಮಾಂಡ್ ಯೂನಿಟ್​​ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್​​​ರನ್ನ ಬಂಧಿಸಲಾಗಿದೆ. ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ‌ ಮೇರೆಗೆ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ

2026ರ ಪರಾಭವನಾಮ ಸಂವತ್ಸರದ ಯುಗಾದಿಯು ಕುಂಭ ರಾಶಿಯವರಿಗೆ ಉತ್ಸಾಹ ಮತ್ತು ಪ್ರಗತಿಯ ವರ್ಷ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಭವಿಷ್ಯ ನುಡಿದಿದ್ದಾರೆ. ಧನಿಷ್ಠ, ಶತಭಿಷಾ, ಪೂರ್ವಾಭಾದ್ರ ನಕ್ಷತ್ರಗಳನ್ನೊಳಗೊಂಡ ಈ ರಾಶಿಗೆ ಗುರುವು ಐದರಿಂದ ಆರನೇ ಮನೆಗೆ, ಶನಿ ಎರಡನೇ ಮನೆಯಲ್ಲಿ, ರಾಹು ವ್ಯಯ ಸ್ಥಾನಕ್ಕೆ ಹಾಗೂ ಕೇತು ಆರನೇ ಮನೆಗೆ ಸಾಗಲಿದೆ. ಸಾಡೆ ಸಾತಿಯ ಕಟ್ಟ ಕಡೆಯ ಭಾಗದಲ್ಲಿದ್ದರೂ, ಈ ವರ್ಷ ಆದಾಯ 6, ವ್ಯಯ 4; ಆರೋಗ್ಯ 8, ಅನಾರೋಗ್ಯ 3; ಸುಖ…

Read More