Gold Rate: ಸತತ ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ದರಪಟ್ಟಿ – Kannada News | Gold Price Today on 15th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 15: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಇಳಿದಿವೆ. ನಿನ್ನೆ ಗುರುವಾರ ಗ್ರಾಮ್​ಗೆ 500 ರೂಗೂ ಅಧಿಕ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rates) ಶುಕ್ರವಾರ 205 ರೂನಷ್ಟು ತಗ್ಗಿದೆ. ಎರಡು ದಿನದಲ್ಲಿ 700ಕ್ಕೂ ಹೆಚ್ಚು ರೂಗಳಷ್ಟು ಬೆಲೆ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಬೆಲೆ ಅಲ್ಪ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯೂ ಸತತ ಎರಡನೇ ಬಾರಿ 10 ರೂ ಇಳಿದಿದೆ. ಎರಡು ದಿನದಲ್ಲಿ 20 ರೂ ಕಡಿಮೆಗೊಂಡಿದೆ. ಮತ್ತೊಮ್ಮೆ ಅದರ ಬೆಲೆ 300 ರೂ ಗಡಿಯೊಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,60,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 15ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,009 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,675 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,007 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,009 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,675 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,675 ರೂ
  • ಚೆನ್ನೈ: 14,950 ರೂ
  • ಮುಂಬೈ: 14,675 ರೂ
  • ದೆಹಲಿ: 14,690 ರೂ
  • ಕೋಲ್ಕತಾ: 14,675 ರೂ
  • ಕೇರಳ: 14,675 ರೂ
  • ಅಹ್ಮದಾಬಾದ್: 14,680 ರೂ
  • ಜೈಪುರ್: 14,690 ರೂ
  • ಲಕ್ನೋ: 14,690 ರೂ
  • ಭುವನೇಶ್ವರ್: 14,675 ರೂ

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 560 ರಿಂಗಿಟ್ (13,612 ರುಪಾಯಿ)
  • ದುಬೈ: 522 ಡಿರಾಮ್ (13,634 ರುಪಾಯಿ)
  • ಅಮೆರಿಕ: 146.50 ಡಾಲರ್ (14,054 ರುಪಾಯಿ)
  • ಸಿಂಗಾಪುರ: 183.80 ಸಿಂಗಾಪುರ್ ಡಾಲರ್ (13,805 ರುಪಾಯಿ)
  • ಕತಾರ್: 519.50 ಕತಾರಿ ರಿಯಾಲ್ (13,672 ರೂ)
  • ಸೌದಿ ಅರೇಬಿಯಾ: 531 ಸೌದಿ ರಿಯಾಲ್ (13,574 ರುಪಾಯಿ)
  • ಓಮನ್: 55.30 ಒಮಾನಿ ರಿಯಾಲ್ (13,778 ರುಪಾಯಿ)
  • ಕುವೇತ್: 42.85 ಕುವೇತಿ ದಿನಾರ್ (13,418 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 290 ರೂ
  • ಚೆನ್ನೈ: 305 ರೂ
  • ಮುಂಬೈ: 290 ರೂ
  • ದೆಹಲಿ: 290 ರೂ
  • ಕೋಲ್ಕತಾ: 290 ರೂ
  • ಕೇರಳ: 305 ರೂ
  • ಅಹ್ಮದಾಬಾದ್: 290 ರೂ
  • ಜೈಪುರ್: 290 ರೂ
  • ಲಕ್ನೋ: 290 ರೂ
  • ಭುವನೇಶ್ವರ್: 305 ರೂ
  • ಪುಣೆ: 290

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

International Day of Families 2026: ಮೇ 15 ರಂದೇ ಅಂತಾರಾಷ್ಟ್ರೀಯ ಕುಟುಂಬ ದಿನ ಆಚರಿಸುವುದು ಏಕೆ? – Kannada News | International Day of Families 2026: What are the History and significance of International Day of Families

ಅಂತಾರಾಷ್ಟ್ರೀಯ ಕುಟುಂಬ ದಿನImage Credit source: Pinterest

ಮನೆಯೇ ಮೊದಲ ಪಾಠ ಶಾಲೆ. ಕುಟುಂಬವಿಲ್ಲದೇ ವ್ಯಕ್ತಿಯಿಲ್ಲ. ಕುಟುಂಬ’ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಮನೆ ಮಂದಿ ಹಾಗೂ ತನ್ನ ಕುಟುಂಬದಿಂದಲೇ ಜೀವನಕ್ಕೆ ಬೇಕಾದ ಪಾಠವನ್ನು ಕಲಿಯುತ್ತಾನೆ. ಇಲ್ಲಿ ನೋವಿರಲಿ, ನಲಿವಿರಲಿ ಕುಟುಂಬದ ಸದಸ್ಯರು ಸದಾ ಜತೆಗೆ ನಿಲ್ಲುತ್ತಾರೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ವಿಭಿಕ್ತ ಕುಟುಂಬಗಳು ಹೆಚ್ಚಾಗುತ್ತಿದೆ. ಅವಿಭಕ್ತ ಕುಟುಂಬಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಕುಟುಂಬದ ಮಹತ್ವವನ್ನು ಸಾರುವ ದೃಷ್ಟಿಯಿಂದ ಅಂತಾರಾಷ್ಟ್ರೀಯ ಕುಟುಂಬ ದಿನವನ್ನು (International Day of Families) ಮೇ 15 ರಂದು ಆಚರಿಸಲಾಗುತ್ತಿದೆ.

ಅಂತಾರಾಷ್ಟ್ರೀಯ ಕುಟುಂಬ ದಿನದ ಇತಿಹಾಸವೇನು?

ವಿಶ್ವ ಸಂಸ್ಥೆ 1993 ರ ಮೇ 15ರಂದು ಜನರಲ್ ಅಸೆಂಬ್ಲಿಯಲ್ಲಿ ಅಂತಾರಾಷ್ಟ್ರೀಯ ಕುಟುಂಬ ದಿನಾಚರಣೆಯನ್ನು ಆಚರಿಸುವ ಮಹತ್ವದ ನಿರ್ಧಾರ ತೆಗೆದುಕೊಂಡಿತು. ಅಂದಿನಿಂದ ಪ್ರಪಂಚದಾದಂತ್ಯ ಮೇ 15 ರಂದು ವಿಶ್ವ ಕುಟುಂಬ ದಿನವನ್ನಾಗಿ ಆಚರಿಸಲಾಗುತ್ತದೆ.

ಇದನ್ನೂ ಓದಿ: National Technology Day 2026: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ

ಅಂತಾರಾಷ್ಟ್ರೀಯ ಕುಟುಂಬ ದಿನದ ಮಹತ್ವವೇನು?

ಕುಟುಂಬ ಹಾಗೂ ಸದಸ್ಯರಿಲ್ಲದೇ ಒಬ್ಬಂಟಿಯಾಗಿ ಬದುಕಲು ಅಸಾಧ್ಯ. ಕುಟುಂಬಗಳ ಮೌಲ್ಯ ಹಾಗೂ ಮಹತ್ವವನ್ನು ತಿಳಿಸುವ ದೃಷ್ಟಿಯಿಂದ ಈ ದಿನವು ಮಹತ್ವದ್ದಾಗಿದೆ. ಈ ದಿನದಂದು ಕಾರ್ಯಾಗಾರಗಳು, ವಿಚಾರಗೋಷ್ಠಿಗಳು, ಜಾಗೃತಿ ಕಾರ್ಯಕ್ರಮಗಳು ಸೇರಿದಂತೆ ಪ್ರದರ್ಶನಗಳನ್ನು ಆಯೋಜಿಸಲಾಗುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗೋವಾ ಕಾಂಗ್ರೆಸ್‌ನ ಭರವಸೆಯ ನಾಯಕ ಕೇತನ್ ಭಾಟಿಕರ್ ನಿಧನ: ದಾಂಡೇಲಿಗೆ ತೆರಳುತ್ತಿದ್ದಾಗ ಹಾವು ಕಚ್ಚಿ ಘೋರ ದುರಂತ – Kannada News | Goa Congress Leader Ketan Bhatikar Dies of Snakebite Near Karnataka Border

ಕೇತನ್ ಭಾಟಿಕರ್ (ಚಿತ್ರ: ಕೇತನ್ ಭಾಟಿಕರ್ ಅವರ ಫೇಸ್​​ಬುಕ್ ಖಾತೆಯಿಂದ)Image Credit source: Facebook

ಪಣಜಿ, ಮೇ 15: ಗೋವಾ ಕಾಂಗ್ರೆಸ್ (Congress) ನಾಯಕ ಕೇತನ್ ಭಾಟಿಕರ್ (38) (Ketan Bhatikar) ಹಾವಿನ ಕಡಿತದಿಂದ ಮೃತಪಟ್ಟಿದ್ದಾರೆ. ಗೋವಾ-ಕರ್ನಾಟಕ ಗಡಿ ಭಾಗದಲ್ಲಿ ಕರ್ಮಲ್ ಘಾಟ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಕೇತನ್ ಭಾಟಿಕರ್ ದಾಂಡೇಲಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪಕ್ಷದ ಉದಯೋನ್ಮುಖ ನಾಯಕನ ಅಕಾಲಿಕ ನಿಧನಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಖ್ಯಾಂಶಗಳು

  • ಗೋವಾ-ಕರ್ನಾಟಕ ಗಡಿಯ ಕರ್ಮಲ್ ಘಾಟ್ ಬಳಿ ಹಾವಿನ ಕಡಿತಕ್ಕೊಳಗಾಗಿ ಕೇತನ್ ಭಾಟಿಕರ್ ಸಾವು.
  • ಕರ್ನಾಟಕದ ದಾಂಡೇಲಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ.
  • ಇತ್ತೀಚೆಗೆ ರದ್ದಾದ ಫೋಂಡಾ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು ಭಾಟಿಕರ್.

ಪೊಲೀಸ್ ಮೂಲಗಳ ಪ್ರಕಾರ, ಗುರುವಾರ ರಾತ್ರಿ ಕೇತನ್ ಭಾಟಿಕರ್ ಅವರು ಕರ್ನಾಟಕದ ದಾಂಡೇಲಿ ಗ್ರಾಮಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ಗೋವಾ-ಕರ್ನಾಟಕ ಗಡಿಯಲ್ಲಿರುವ ಕರ್ಮಲ್ ಘಾಟ್ ಬಳಿ ಯಾವುದೋ ಕಾರಣಕ್ಕಾಗಿ ವಾಹನದಿಂದ ಕೆಳಗಿಳಿದಾಗ ಹಾವೊಂದು ಕಡಿದಿದೆ. ತಕ್ಷಣ ಅವರನ್ನು ಗೋವಾದ ಧಾರವಾಡೋರಾದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ, ದುರದೃಷ್ಟವಶಾತ್ ಅವರು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಕೇತನ್ ಭಾಟಿಕರ್ ಅವರು ಗೋವಾ ಕಾಂಗ್ರೆಸ್‌ನ ಭರವಸೆಯ ನಾಯಕರಾಗಿದ್ದರು. ಫೋಂಡಾ ಉಪಚುನಾವಣೆಗೆ ಇವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ, ಹೈಕೋರ್ಟ್ ತೀರ್ಪಿನಿಂದಾಗಿ ಉಪಚುನಾವಣೆ ರದ್ದಾಗಿತ್ತು. ಹೈಕೋರ್ಟ್ ಆದೇಶದ ವಿರುದ್ಧ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಸದ್ಯ ಪ್ರಕರಣ ವಿಚಾರಣೆಯ ಹಂತದಲ್ಲಿದೆ.

ಇದನ್ನೂ ಓದಿ: ದೆಹಲಿ-ಗೋವಾ ಆಕಾಶ ಏರ್​ ವಿಮಾನದ ವಾಶ್​ರೂಂನಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಪ್ರಯಾಣಿಕ

ಕೇತನ್ ಭಾಟಿಕರ್ ನಿಧನಕ್ಕೆ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಯೂರಿ ಅಲೆಮಾವೊ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಕೇತನ್ ಅವರ ಸಾರ್ವಜನಿಕ ಸೇವೆ ಮತ್ತು ಬದ್ಧತೆಯನ್ನು ನೆನೆಯುತ್ತಾ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕಾಂಗ್ರೆಸ್ ಪಕ್ಷ ಪ್ರಾರ್ಥಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Kedarnath Yatra: ಕೇದಾರನಾಥದಲ್ಲಿ 5 ಲಕ್ಷ ದಾಟಿದ ಭಕ್ತರ ಸಂಖ್ಯೆ; ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್! – Kannada News | Kedarnath Yatra: Record 5 Lakh Pilgrims Spark Health Alert and Safety Measures

ಡೆಹ್ರಾಡೂನ್: ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗಳಲ್ಲಿ ಒಂದಾದ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಈ ಬಾರಿ ದಾಖಲೆ ಮಟ್ಟಕ್ಕೆ ತಲುಪಿದೆ. ಪ್ರಸ್ತುತ ಯಾತ್ರಾ ಋತುವಿನಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ ಭಕ್ತರ ಸಂಖ್ಯೆ ಈಗಾಗಲೇ 5 ಲಕ್ಷದ ಗಡಿ ದಾಟಿದೆ. ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗುತ್ತಿರುವ ಬೆನ್ನಲ್ಲೇ, ರುದ್ರಪ್ರಯಾಗ ಜಿಲ್ಲಾ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ‘ಹೈ ಅಲರ್ಟ್’ ಘೋಷಿಸಿದೆ.

ದಾಖಲೆ ಬರೆದ ಭಕ್ತರ ಸಾಗರ:

ಹಿಮಾಲಯದ ಮಡಿಲಲ್ಲಿರುವ ಕೇದಾರನಾಥಕ್ಕೆ ಈ ವರ್ಷ ದೇಶದ ವಿವಿಧ ಮೂಲೆಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆರಂಭಿಕ ಹಂತದಲ್ಲೇ ಈ ಮಟ್ಟದ ಸಂಖ್ಯೆ ದಾಖಲಾಗಿರುವುದು ಪ್ರವಾಸೋದ್ಯಮ ಇಲಾಖೆಗೂ ಅಚ್ಚರಿ ಮೂಡಿಸಿದೆ. ಆದರೆ, ಭಕ್ತರ ದಟ್ಟಣೆಯು ಸ್ಥಳೀಯ ಆಡಳಿತ ಮತ್ತು ಆರೋಗ್ಯ ವ್ಯವಸ್ಥೆಯ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತಿದೆ.

ಆರೋಗ್ಯ ಇಲಾಖೆಯ ಸನ್ನದ್ಧತೆ ಮತ್ತು ಕ್ರಮಗಳು:

ಯಾತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಇಲಾಖೆಯು ಈ ಕೆಳಗಿನ ಕ್ರಮಗಳನ್ನು ಕೈಗೊಂಡಿದೆ:

ವೈದ್ಯಕೀಯ ತಪಾಸಣೆ:

ಯಾತ್ರಾ ಮಾರ್ಗದುದ್ದಕ್ಕೂ ಸುಮಾರು 52,000ಕ್ಕೂ ಹೆಚ್ಚು ಭಕ್ತರಿಗೆ ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಲಾಗಿದೆ. ಈವರೆಗೆ 62,000 ಜನರು ಒಪಿಡಿ (OPD) ಸೌಲಭ್ಯವನ್ನು ಬಳಸಿಕೊಂಡಿದ್ದಾರೆ. ಗಂಭೀರ ಅನಾರೋಗ್ಯಕ್ಕೆ ಒಳಗಾದ 26 ಯಾತ್ರಿಕರನ್ನು ಹೆಲಿಕಾಪ್ಟರ್ ಮೂಲಕ ತುರ್ತಾಗಿ ಏರ್‌ಲಿಫ್ಟ್ ಮಾಡಿ ಉನ್ನತ ಚಿಕಿತ್ಸೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಕೇದಾರನಾಥದಲ್ಲಿ ಶಿವಲಿಂಗ ತ್ರಿಕೋನ ಆಕಾರದಲ್ಲಿ ಯಾಕಿದೆ ಗೊತ್ತಾ? ಇಲ್ಲಿದೆ ಪೌರಾಣಿಕ ರಹಸ್ಯ!

ಇಸಿಜಿ ತಪಾಸಣೆ:

ಎತ್ತರದ ಪ್ರದೇಶಗಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಿರುವುದರಿಂದ, ಈ ಬಾರಿ ಇಸಿಜಿ (ECG) ತಪಾಸಣೆಯನ್ನು ಕಡ್ಡಾಯಗೊಳಿಸಲಾಗಿದೆ. ಇತ್ತೀಚೆಗೆ 8 ಜನರಲ್ಲಿ ಹೃದಯ ಸಂಬಂಧಿ ಸಮಸ್ಯೆಗಳನ್ನು ಮುಂಚಿತವಾಗಿಯೇ ಪತ್ತೆಹಚ್ಚಿ ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.

ಮುಖ್ಯ ವೈದ್ಯಕೀಯ ಅಧಿಕಾರಿ ಮನವಿ:

“ಎತ್ತರದ ಪ್ರದೇಶಗಳಲ್ಲಿನ ಹವಾಮಾನ ವೈಪರೀತ್ಯವು ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು. ಆದ್ದರಿಂದ, ಶ್ವಾಸಕೋಶದ ಕಾಯಿಲೆ ಇರುವವರು ಮತ್ತು ಸಣ್ಣ ಮಕ್ಕಳನ್ನು ಈ ಕಠಿಣ ಯಾತ್ರೆಗೆ ಕರೆತರಬೇಡಿ,” ಎಂದು ರುದ್ರಪ್ರಯಾಗದ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ರಾಮ್ ಪ್ರಕಾಶ್ ಮನವಿ ಮಾಡಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ಮರ್ಡರ್ ಮಿಸ್ಟರಿ ಸಿನಿಮಾ ನೋಡಿದರೆ ಹೊಟ್ಟೆ ಹುಣ್ಣಾಗುವಂತೆ ನಗ್ತೀರಾ; ಕನ್ನಡದಲ್ಲೂ ಲಭ್ಯ – Kannada News | Bharathanatyam 2: Mohiniyattam Netflix Review – Malayalam Dark Comedy Thriller, Kannada Dubbed

ಮಲಯಾಳಂ (Malayalam Movie) ಚಿತ್ರರಂಗವು ಸದಾ ವಿಭಿನ್ನ ಪ್ರಯೋಗಗಳಿಗೆ ಹೆಸರುವಾಸಿ. ಈ ಸಾಲಿಗೆ ಹೊಸ ಸೇರ್ಪಡೆ ‘ಭರತನಾಟ್ಯಂ 2: ಮೋಹಿನಿಯಾಟಂ’. ಕಳೆದ ಏಪ್ರಿಲ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿದ್ದ ಈ ಸಿನಿಮಾ, ಇದೀಗ ಮೇ 8ರಿಂದ ಜನಪ್ರಿಯ ಒಟಿಟಿ ವೇದಿಕೆ ನೆಟ್‌ಫ್ಲಿಕ್ಸ್​​ನಲ್ಲಿ ಪ್ರಸಾರವಾಗುತ್ತಿದ್ದು, ಟ್ರೆಂಡಿಂಗ್‌ನಲ್ಲಿದೆ.

ಇದು 2024ರಲ್ಲಿ ತೆರೆಕಂಡಿದ್ದ ‘ಭರತನಾಟ್ಯಂ’ ಚಿತ್ರದ ಮುಂದುವರಿದ ಭಾಗ. ಹೀಗಾಗಿ, ಮೊದಲ ಭಾಗ ನೋಡಿ ಎರಡನೇ ಭಾಗ ನೋಡಿದರೆ ಸಿನಿಮಾ ಮತ್ತಷ್ಟು ಆಪ್ತವಾಗುತ್ತದೆ. ಮೊದಲ ಭಾಗವು ಕುಟುಂಬದೊಳಗಿನ ಸಣ್ಣಪುಟ್ಟ ಹಾಸ್ಯದ ಮೇಲೆ ಕೇಂದ್ರೀಕರಿಸಿದ್ದರೆ, ಈ ಎರಡನೇ ಭಾಗವು ಡಾರ್ಕ್ ಕಾಮಿಡಿ ಕ್ರೈಮ್ ಥ್ರಿಲ್ಲರ್ ಮಾದರಿಯಲ್ಲಿದೆ.

ಮೃತ ಭರತನ್ ನಾಯರ್ ಎರಡನೇ ಹೆಂಡತಿ ಮತ್ತು ಆಕೆಯ ಮಗನನ್ನು ಊರಿನಲ್ಲಿ ನೆಲೆಸುವಂತೆ ಮಾಡಲು ಹೊರಡುವ ಶಶಿ (ಸೈಜು ಕುರುಪ್) ಮತ್ತು ಆತನ ಕುಟುಂಬದ ಕಥೆ ಇದಾಗಿದೆ. ಆದರೆ, ತಂದೆಯ ಹಳೆಯ ಹಗರಣವೊಂದು ಹೊರಬಂದಾಗ ಕುಟುಂಬವು ಒಂದು ಕೊಲೆ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತದೆ. ಆ ಕಷ್ಟದಿಂದ ಪಾರಾಗಲು ಅವರು ಮಾಡುವ ಹರಸಾಹಸವೇ ಚಿತ್ರದ ಜೀವಾಳ.

ಮೂಲತಃ ಮಲಯಾಳಂ ಸಿನಿಮಾವಾದರೂ, ನೆಟ್‌ಫ್ಲಿಕ್ಸ್‌ನಲ್ಲಿ ಈ ಚಿತ್ರವು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಿಗೆ ಡಬ್ ಆಗಿ ಲಭ್ಯವಿದೆ. ಭಾಷೆಯ ಅಡೆತಡೆಯಿಲ್ಲದೆ ಕನ್ನಡದ ಪ್ರೇಕ್ಷಕರು ಈ ಚಿತ್ರವನ್ನು ಆನಂದಿಸಬಹುದಾಗಿದೆ.

ಇದನ್ನೂ ಓದಿ: ಮಲಯಾಳಂನ ‘ಪಳ್ಳಿ ಚಟ್ಟಂಬಿ’ ಚಿತ್ರದಲ್ಲಿ ಬಳಕೆ ಆಯ್ತು ಯಕ್ಷಗಾನ; ಇದೆ ಕನ್ನಡದ ಡೈಲಾಗ್

ಕೃಷ್ಣದಾಸ್ ಮುರಳಿ ನಿರ್ದೇಶನದ ಈ ಚಿತ್ರದಲ್ಲಿ ಸೈಜು ಕುರುಪ್, ಸೂರಜ್ ವೆಂಜಾರಮೂಡು, ಜಗದೀಶ್ ಮತ್ತು ವಿನಯ್ ಫೋರ್ಟ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವಾಗಿ ಸೂರಜ್ ಅವರ ವಿಲನ್ ಪಾತ್ರ ಮತ್ತು ಮಲಯಾಳಂ ಶೈಲಿಯ ‘ಡಾರ್ಕ್ ಹ್ಯೂಮರ್’ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. 40 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿರುವುದು ಸಿನಿಮಾದ ಹೆಚ್ಚುಗಾರಿಕೆ. ವಾರಾಂತ್ಯದಲ್ಲಿ ನೀವು ಒಳ್ಳೆಯ ಸಸ್ಪೆನ್ಸ್ ಮತ್ತು ಕಾಮಿಡಿ ಸಿನಿಮಾವನ್ನು ನೋಡಲು ಬಯಸಿದರೆ, ನೆಟ್‌ಫ್ಲಿಕ್ಸ್‌ನಲ್ಲಿರುವ ‘ಭರತನಾಟ್ಯಂ 2: ಮೋಹಿನಿಯಾಟಂ’ ಖಂಡಿತವಾಗಿಯೂ ಉತ್ತಮ ಆಯ್ಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ! – Kannada News | Karnataka Liquor Price Drop: Beer and Premium Scotch Get Cheaper Under New AiB Policy

ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ

ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ (Beer) ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ.

ಮುಖ್ಯಾಂಶಗಳು

  • ನೂತನ ಅಬಕಾರಿ ನೀತಿಯಿಂದ ಬಿಯರ್ ದರದಲ್ಲಿ ಶೇ 25 ರಷ್ಟು ಇಳಿಕೆ.
  •  ಪ್ರೀಮಿಯಂ ಸ್ಕಾಚ್ ವಿಸ್ಕಿಗಳ ಬೆಲೆ ಬಾಟಲಿಗೆ ಸಾವಿರ ರೂಪಾಯಿಗಳಷ್ಟು ಕಡಿತವಾಗಿದೆ.
  •  ಕಡಿಮೆ ದರದ ಮದ್ಯದ ಬೆಲೆ ಏರಿಕೆ, 16 ತೆರಿಗೆ ಸ್ಲ್ಯಾಬ್‌ಗಳು ಎಂಟಕ್ಕೆ ಇಳಿಕೆ.

ಬಿಯರ್ ದರದಲ್ಲಿ 20-25% ಇಳಿಕೆ

ಹೊಸ ನೀತಿಯನ್ವಯ ಶೇ 5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆ ಶೇ 20 ರಿಂದ 25 ರಷ್ಟು ಇಳಿಕೆಯಾಗಿದೆ. ಕಿಂಗ್‌ಫಿಶರ್ ಪ್ರೀಮಿಯಂ ಮತ್ತು ಅಲ್ಟ್ರಾ 650 ಎಂಎಲ್ ಬಾಟಲಿಗಳ ಮೇಲೆ ಸುಮಾರು 75 ರೂ. ಇಳಿಕೆಯಾಗಿದ್ದರೆ, ಹೈನೆಕೆನ್ ಮೇಲೆ 70 ರೂ., ಯುಬಿ ಎಕ್ಸ್‌ಪೋರ್ಟ್ ಮೇಲೆ 25 ರೂ. ಹಾಗೂ ಬಡ್‌ವೈಸರ್ ಪ್ರೀಮಿಯಂ ಮೇಲೆ 20 ರೂ.ಗಳವರೆಗೆ ರಿಯಾಯಿತಿ ಸಿಗಲಿದೆ.

ಪ್ರೀಮಿಯಂ ಸ್ಕಾಚ್ ಮತ್ತು ವಿಸ್ಕಿ ಅಗ್ಗ

ಬಿಯರ್ ಮಾತ್ರವಲ್ಲದೆ, ವಿದೇಶಿ ಬ್ರಾಂಡ್‌ನ ಸ್ಕಾಚ್ ವಿಸ್ಕಿಗಳ ಬೆಲೆಯೂ ಶೇ. 20 ರಷ್ಟು ಕಡಿಮೆಯಾಗಿದೆ. ಉದಾಹರಣೆಗೆ, ಬ್ಲ್ಯಾಕ್ ಲೇಬಲ್ ಮತ್ತು ಶಿವಾಸ್ ರೀಗಲ್‌ನ 750 ಎಂಎಲ್ ಬಾಟಲಿಯ ಬೆಲೆ 5,190 ರೂ.ಗಳಿಂದ 4,100 ರೂ.ಗೆ ಇಳಿದಿದೆ. ಇದು ಶ್ರೀಮಂತ ವರ್ಗದ ಮದ್ಯಪ್ರಿಯರಿಗೆ ದೊಡ್ಡ ಸಮಾಧಾನ ತಂದಿದೆ.

ಇದನ್ನೂ ಓದಿ ‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ

ಹೊಸ ನೀತಿಯ ವಿಶೇಷತೆ

ಕರ್ನಾಟಕವು ದೇಶದಲ್ಲೇ ಮೊದಲ ಬಾರಿಗೆ ಈ AiB ತೆರಿಗೆ ನೀತಿಯನ್ನು ಜಾರಿಗೆ ತಂದಿದೆ. ಈ ಹಿಂದೆ ಇದ್ದ 16 ತೆರಿಗೆ ಸ್ಲ್ಯಾಬ್‌ಗಳನ್ನು ಈಗ 8ಕ್ಕೆ ಇಳಿಸಲಾಗಿದೆ. ಅರವತ್ತು ವರ್ಷಗಳ ಹಳೆಯ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಅಂಶದ ಆಧಾರದ ಮೇಲೆ ತೆರಿಗೆ ವಿಧಿಸಲು ಸರ್ಕಾರ ನಿರ್ಧರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ! – Kannada News | NEET Scam: Education Minister’s Emergency Meet, Arrests, and Future of Exam Security

ದೆಹಲಿ, ಮೇ.15: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇನ್ನು ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ. ಪರೀಕ್ಷೆಯು ಈಗ ಜೂನ್ 21 ರಂದು ನಡೆಯಲಿದೆ. ಮೇ 3 ರಂದು ನಿಗದಿಯಾಗಿದ್ದ ಹಿಂದಿನ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ರದ್ದುಗೊಳಿಸಲಾಗಿದೆ.

ರದ್ದುಗೊಂಡಿರುವ ನೀಟ್ ಪರೀಕ್ಷೆಯನ್ನು ಮತ್ತೆ ಯಾವಾಗ ನಡೆಸಬಹುದು ಮತ್ತು ಭವಿಷ್ಯದಲ್ಲಿ ಇಂತಹ ಸೋರಿಕೆ ತಡೆಯಲು ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಎನ್‌ಟಿಎ ಮಹಾನಿರ್ದೇಶಕರು ಮತ್ತು ಸಿಬಿಎಸ್‌ಇ ಅಧ್ಯಕ್ಷರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದು, ಇನ್ನೂ ಇಬ್ಬರು ಶಂಕಿತರನ್ನು ಬಂಧಿಸಿದೆ. ಇದೊಂದು “ಸಂಘಟಿತ ಗ್ಯಾಂಗ್” ನಡೆಸುತ್ತಿರುವ ದಂಧೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ರಾಜಸ್ಥಾನದ ಸೀಕರ್ ಜಿಲ್ಲೆಯ ಕೋಚಿಂಗ್ ಸೆಂಟರ್‌ಗಳಿಗೆ ಈ ಸೋರಿಕೆಯಾದ ಪತ್ರಿಕೆ ತಲುಪಿದ್ದು, ಪ್ರತಿ ವಿದ್ಯಾರ್ಥಿಯಿಂದ 2 ರಿಂದ 5 ಲಕ್ಷ ರೂ. ಪಡೆಯಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

ಇದನ್ನೂ ಓದಿ: ರಮ್ಮಿ ಆಟಗಾರರಿಗೆ ದೊಡ್ಡ ಶಾಕ್! ಗೇಮ್ಸ್‌ಕ್ರಾಫ್ಟ್‌ನಿಂದ 526 ಕೋಟಿ ರೂ. ವಂಚನೆ? ಇಡಿಯಿಂದ ಮೂವರು ಬಿಗ್ ಬಾಸ್‌ಗಳ ಬಂಧನ

ದೆಹಲಿ, ಅಹಮದಾಬಾದ್ ಸೇರಿದಂತೆ ಹಲವು ಕಡೆ ವಿದ್ಯಾರ್ಥಿ ಸಂಘಟನೆಗಳು ಎನ್‌ಟಿಎ ರದ್ದುಪಡಿಸಲು ಮತ್ತು ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿವೆ.ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ 21 ವರ್ಷದ ವಿದ್ಯಾರ್ಥಿಯೊಬ್ಬ ಪರೀಕ್ಷೆ ರದ್ದಾದ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ವಸತಿ ವೈದ್ಯರ ಸಂಘದ ಒಕ್ಕೂಟ (FORDA) ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದು, ನೀಟ್ ಪರೀಕ್ಷೆಯನ್ನು ಪೆನ್-ಪೇಪರ್ ಬದಲಿಗೆ ಐಐಟಿ-ಜೆಇಇ ಮಾದರಿಯಲ್ಲಿ ಕಂಪ್ಯೂಟರ್ ಆಧಾರಿತವಾಗಿ ನಡೆಸುವಂತೆ ಒತ್ತಾಯಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪವನ್ ಕಲ್ಯಾಣ್ ಸಿನಿಮಾಗೆ ಕಂಬ್ಯಾಕ್ ತಡವಾಗುತ್ತಿರುವುದಕ್ಕೆ ರಾಜಕೀಯವಲ್ಲ ಕಾರಣ – Kannada News | Pawan Kalyan’s Health Issues: Why He’s Not Returning to Movies

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಮೂಗಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಪವನ್ ನಿವಾಸಕ್ಕೆ ಭೇಟಿ ನೀಡಿದ್ದಾಗ ಪವನ್ ಚೇತರಿಸಿಕೊಳ್ಳುತ್ತಿರುವುದು ಕಾಣಿಸಿದೆ. ಪವನ್ ಕಲ್ಯಾಣ್ ನಟನೆಗೆ ಮರಳಬೇಕು ಎಂಬುದು ಅನೇಕರ ಕೋರಿಕೆ ಆಗಿತ್ತು. ಅವರು ನಟನೆಗೆ ಮರಳದಿರಲು ರಾಜಕೀಯ ಕಾರಣ ಎನ್ನಲಾಗಿತ್ತು. ಆದರೆ, ಇದಕ್ಕೆ ಬೇರೆಯದೇ ಕಾರಣ ಇದೆ.

ಪವನ್ ಕಲ್ಯಾಣ್ ಅವರು ಡಿಸಿಎಂ ಆದ ಬಳಿಕ ಸಿನಿಮಾದಿಂದ ಅಂತರ ಕಾಯ್ದುಕೊಂಡರು. ಒಪ್ಪಿಕೊಂಡಿದ್ದ ಕೆಲಸ ಸಿನಿಮಾಗಳ ಕೆಲಸವನ್ನು ಕಷ್ಟಪಟ್ಟು ಮುಗಿಸಿದರು. ಹೊಸ ಸಿನಿಮಾ ಒಪ್ಪಿಕೊಳ್ಳದೆ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಕಾರಣ ಅವರ ಅನಾರೋಗ್ಯ.

ವರದಿಗಳ ಪ್ರಕಾರ, ಪವನ್ ಕಲ್ಯಾಣ್ ಅವರು ಈ ಹಿಂದೆ ಸಿನಿಮಾ ಶೂಟಿಂಗ್‌ಗಳ ಸಮಯದಲ್ಲಿ ಅನೇಕ ಬಾರಿ ಪೆಟ್ಟು ಮಾಡಿಕೊಂಡಿದ್ದರು. ಆಗಿನ ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಆ ಗಾಯಗಳನ್ನು ಸರಿಯಾಗಿ ಗಮನಿಸದೆ ನಿರ್ಲಕ್ಷಿಸಲಾಗಿತ್ತು. ವರ್ಷಗಳ ಕಾಲ ಹಾಗೆಯೇ ಉಳಿದಿದ್ದ ಆ ಸಣ್ಣಪುಟ್ಟ ಗಾಯಗಳು ಈಗ ಕೆಲವು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತಿವೆಯಂತೆ. ಈ ಬಗ್ಗೆ ಸ್ವತಃ ಪವನ್ ಅವರು ಚಂದ್ರಬಾಬು ನಾಯ್ಡು ಅವರ ಬಳಿ ಹಂಚಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸದ್ಯ ಪವನ್ ಕಲ್ಯಾಣ್ ಅವರು ಉಪಮುಖ್ಯಮಂತ್ರಿಯಾಗಿ ದೊಡ್ಡ ಜವಾಬ್ದಾರಿ ಹೊತ್ತಿದ್ದಾರೆ. ಸರಣಿ ಸಭೆಗಳು, ಕ್ಷೇತ್ರ ಭೇಟಿಗಳು ಮತ್ತು ಪಕ್ಷದ ಕೆಲಸಗಳ ನಡುವೆ ಅವರಿಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತಿಲ್ಲ. ಈ ಹಂತದಲ್ಲಿ ಮತ್ತೆ ಸಿನಿಮಾ ಶೂಟಿಂಗ್‌ನ ಅತಿಯಾದ ದೈಹಿಕ ಶ್ರಮದ ಕೆಲಸಗಳಿಗೆ ಕೈ ಹಾಕಿದರೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಬಹುದು ಎಂಬ ಆತಂಕ ಅವರ ಆಪ್ತ ವಲಯದಲ್ಲಿದೆ. ಹೀಗಾಗಿ, ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಕ್ಯಾಮೆರಾ ಮುಂದೆ ಬರಬೇಡಿ ಎಂಬ ಸಲಹೆ ಅವರಿಗೆ ಸಿಕ್ಕಿದೆ ಎನ್ನಲಾಗಿದೆ.

ಇದನ್ನೂ ಓದಿ: ಶಸ್ತ್ರ ಚಿಕಿತ್ಸೆ ಬಳಿಕ ಪವನ್ ಕಲ್ಯಾಣ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಚಿರಂಜೀವಿ

ಸುರೇಂದರ್ ರೆಡ್ಡಿ ಸಿನಿಮಾದಲ್ಲಿ ಪವನ್ ನಟಿಸಬೇಕಿತ್ತು. ಈ ಚಿತ್ರದ ಚರ್ಚೆ ನಡೆದಿದೆ. ಆದರೆ, ಪವನ್ ಅವರ ಸದ್ಯದ ಆದ್ಯತೆ ಆರೋಗ್ಯ ಮತ್ತು ಆಡಳಿತ. ಶೂಟಿಂಗ್ ಆರಂಭಿಸುವ ಮೊದಲು ತಮ್ಮ ದೈಹಿಕ ಸಾಮರ್ಥ್ಯವನ್ನು ಪೂರ್ಣ ಪ್ರಮಾಣದಲ್ಲಿ ವಾಪಸ್ ಪಡೆಯಲು ಅವರು ನಿರ್ಧರಿಸಿದ್ದಾರೆ. ಹೀಗಾಗಿ, ಸದ್ಯಕ್ಕಂತೂ ಸಿನಿಮಾ ಸೆಟ್ಟೇರಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!

ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ದರ ದಿಢೀರ್ ಏರಿಕೆಯಾಗಿರುವುದು ಬೆಂಗಳೂರಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 3.27 ರೂಪಾಯಿ ಹಾಗೂ ಡೀಸೆಲ್‌ಗೆ 3.12 ರೂಪಾಯಿ ಹೆಚ್ಚಳವಾಗಿದ್ದು, ಬೆಳಗ್ಗೆಯೇ ಪೆಟ್ರೋಲ್ ಬಂಕ್‌ಗಳಿಗೆ ಬಂದ ಸವಾರರು ಬೆಲೆ ಏರಿಕೆ ಕಂಡು ಕಂಗಾಲಾಗಿದ್ದಾರೆ. ಡೀಸೆಲ್ ದರ ಏರಿಕೆಯಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಾಗಲಿದ್ದು, ಇದರ ನೇರ ಪರಿಣಾಮ ದಿನಸಿ ಮತ್ತು ತರಕಾರಿ ಬೆಲೆಗಳ ಮೇಲೆ ಬೀಳಲಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ‘ಟಿವಿ9’ ಬಳಿ ಅಳಲು ತೋಡಿಕೊಂಡ ಬೆಂಗಳೂರಿಗರು, ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ನಮಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಡಿಕೆ ಶಿ​ವಕುಮಾರ್​ಗೆ 64ನೇ ಹುಟ್ಟುಹಬ್ಬದ ಸಂಭ್ರಮ: ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಜನ್ಮದಿನ ಆಚರಿಸಿಕೊಂಡ ಡಿಸಿಎಂ – Kannada News | DCM DK Shivakumar Celebrates 64th Birthday; Priests and Fans Throng Sadashivanagar Residence

ಬೆಂಗಳೂರು, ಮೇ 15: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು (ಮೇ 15) ತಮ್ಮ 64ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಸದಾಶಿವನಗರದ ಅವರ ನಿವಾಸದ ಬಳಿ ಹುಟ್ಟುಹಬ್ಬದ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಅವರು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಇದೇ ವೇಳೆ ವಿವಿಧ ಮಠಗಳ ಶ್ರೀಗಳು ಹಾಗೂ ಪುರೋಹಿತರು ಡಿಸಿಎಂ ನಿವಾಸಕ್ಕೆ ಭೇಟಿ ನೀಡಿ, ಮನ್ಯುಸೂಕ್ತ ಮಂತ್ರಗಳ ಪಠಣದೊಂದಿಗೆ ಅವರಿಗೆ ಆಯುಷ್ಯ, ಆರೋಗ್ಯ ಮತ್ತು ಅಧಿಕಾರ ಪ್ರಾಪ್ತಿಯಾಗಲೆಂದು ಹರಸಿದರು. ಅಭಿಮಾನಿಗಳ ಶುಭಾಶಯ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಸಂಭ್ರಮಾಚರಣೆಯ ನಂತರ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version