ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆಗೆ ಯತ್ನ: ಖಾಲಿ ಕೈಯಲ್ಲಿ ಹಿಂದಿರುಗಿದ ಕಳ್ಳರು – Kannada News | Uttara Kannada Bank Robbery Foiled: Thieves Drill Toilet Wall at Bank of Baroda
ಕಾರವಾರ, ಜನವರಿ 12: ಖದೀಮರು ಶೌಚಾಲಯದ (Toilet) ಗೋಡೆ ಕೊರೆದು ಬ್ಯಾಂಕ್ ದರೋಡೆಗೆ (Bank Robbery) ಯತ್ನಿಸಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಡೆದಿದೆ. ಸದ್ಯ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ದೀಪನ್ ಎಂ.ಎನ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶ್ವಾನ ದಳ ಸೇರಿದಂತೆ ತಜ್ಞರ ತಂಡ ಕಾರ್ಯಾಚರಣೆ ಮಾಡಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಷ್ಟ್ರೀಯ ಹೆದ್ದಾರಿ 63ರ ಪಕ್ಕದಲ್ಲೇ ಬ್ಯಾಂಕ್ ಆಫ್…