Headlines

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯ; ಶಾಸಕ ಶ್ರೀನಿವಾಸ್ ಭರ್ಜರಿ ತಯಾರಿ! – Kannada News

ಡಿಕೆ ಶಿವಕುಮಾರ್ ಪ್ರಮಾಣ ವಚನ ಹಿನ್ನೆಲೆ 90 ಸಾವಿರ ಮನೆಗಳಿಗೆ ‘ಲಾಡು’ ಭಾಗ್ಯImage Credit source: Tv9 kannada ನೆಲಮಂಗಲ, ಜೂ.2: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಕ್ಷಣಕ್ಕೆ ಇಡೀ ನೆಲಮಂಗಲ ವಿಧಾನಸಭಾ ಕ್ಷೇತ್ರವೇ ವಧುವಿನಂತೆ ಸಿಂಗಾರಗೊಳ್ಳುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯ ಪ್ರತಿ ಮನೆಯಲ್ಲೂ ಸಂಭ್ರಮ ಮನೆ ಮಾಡಿದ್ದು, ಈ ಐತಿಹಾಸಿಕ ಸಂತಸವನ್ನು ಹಂಚಿಕೊಳ್ಳಲು ಸ್ಥಳೀಯ ಶಾಸಕರಾದ ಶ್ರೀನಿವಾಸ್ ಅವರ ನೇತೃತ್ವದಲ್ಲಿ…

Read More

ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ – Kannada News | Vande Bharat Sleeper Train, speed, safety, technology, food, ticket cancellation rules

ನವದೆಹಲಿ, ಜನವರಿ 19: ಪ್ರಧಾನಿ ನರೇಂದ್ರ ಮೋದಿ ಮೊನ್ನೆ ಬಿಡುಗಡೆ ಮಾಡಿದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್​ನಲ್ಲಿ (Vande Bharat Sleeper Train) ಹಲವು ಫೀಚರ್​ಗಳು ಹಾಗೂ ನಿಯಮಗಳಿವೆ. ಕೋಲ್ಕತಾದ ಹೌರಾ ಮತ್ತು ಅಸ್ಸಾಮ್​ನ ಗುವಾಹತಿಯಲ್ಲಿರುವ ಕಾಮಾಖ್ಯ ಜಂಕ್ಷನ್ ಮಾರ್ಗದಲ್ಲಿ ಇದು ಸಾಗುತ್ತದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ನಡುವೆ ಹೈಸ್ಪೀಡ್ ರೈಲು ಹಳಿ ವ್ಯವಸ್ಥೆಯ ಒಂದು ಭಾಗವಾಗಿ ಈ ರೈಲು ಮಾರ್ಗ ಇದೆ. ಟಿಕೆಟ್ ಕ್ಯಾನ್ಸಲೇಶನ್ ನಿಯಮ ಗಮನಿಸಿ…. ವಂದೇ ಭಾರತ್ ಸ್ಲೀಪರ್…

Read More

ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವವರಿಗೆ ಪೊಲೀಸರಿಂದ ವಾರ್ನಿಂಗ್! – Kannada News | Bangalore Police Warns Landlords: Mandatory Police Info for Foreign Tenants

ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವವರಿಗೆ ಪೊಲೀಸರಿಂದ ವಾರ್ನಿಂಗ್! ಬೆಂಗಳೂರು, ಜನವರಿ 27: ಇತ್ತೀಚೆಗೆ ನಗರದಲ್ಲಿ (Bengaluru) ಡ್ರಗ್ಸ್ ಶೇಕರಣೆ ಮತ್ತು ಪೆಡ್ಲಿಂಗ್ ದಂಧೆ ಹೆಚ್ಚುತ್ತಿದೆ. ಇಂತಹ ಪ್ರಕರಣಗಳಲ್ಲಿ ವಿದೇಶಿಗರ ಕೈವಾಡವೂ ಹೆಚ್ಚಾಗಿ ಕಾಣುತ್ತಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ವಿದೇಶಿಗರಿಗೆ (Foreigners) ಮನೆ ಬಾಡಿಗೆ ನೀಡುವ ಮೊದಲು ಸ್ಥಳೀಯ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಈಶಾನ್ಯ ವಿಭಾಗದ ಪೊಲೀಸರು ಸೂಚನೆ…

Read More

ಹೆಚ್ಚುತ್ತಿರುವ ಬಿಸಿಲು ಮತ್ತು ಉಷ್ಣಾಂಶದಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತಾ? ಏನ್ ಹೇಳ್ತಾರೆ ತಜ್ಞರು – Kannada News | Summer Heat And Your Heart: Why Cardiac Events Spike During Heatwaves

ದೇಶದ ಹಲವು ಭಾಗಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತೀವ್ರ ಬಿಸಿಲು ಮತ್ತು ಬಿಸಿಗಾಳಿ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆಸ್ಪತ್ರೆಗಳಲ್ಲಿ ಡಿಹೈಡ್ರೇಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ, ಹೆಚ್ಚುತ್ತಿರುವ ಬಿಸಿಲಿನಿಂದ ಹೃದಯಾಘಾತದ ಅಪಾಯವೂ ಹೆಚ್ಚುತ್ತದೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ದೆಹಲಿ ರಾಜೀವ್ ಗಾಂಧಿ ಆಸ್ಪತ್ರೆಯ ಹೃದಯರೋಗ ತಜ್ಞ ಡಾ. ಅಜಿತ್ ಜೈನ್ ಅವರ ಪ್ರಕಾರ, ಬಿಸಿಲು ನೇರವಾಗಿ ಹೃದಯಾಘಾತಕ್ಕೆ (Heart Attack) ಕಾರಣವಾಗುವುದಿಲ್ಲ. ಆದರೆ ಅತಿಯಾದ ಉಷ್ಣಾಂಶ ಹೃದಯದ…

Read More

ಸಿಹಿ ಸುದ್ದಿ ಹಂಚಿಕೊಂಡ ‘ಸು ಫ್ರಮ್ ಸೋ’ ಭಾನು

‘ಸು ಫ್ರಮ್ ಸೋ’ ಸಿನಿಮಾದಲ್ಲಿ ಭಾನು ಪಾತ್ರ ಮಾಡಿದ ಸಂಧ್ಯಾ ಅರಕೆರೆ ಬಾಳಲ್ಲಿ ಈಗ ಖುಷಿಯ ಕ್ಷಣ ಬಂದಿದೆ. ಅವರು ಶೀಘ್ರವೇ ತಾಯಿ ಆಗುತ್ತಿದ್ದಾರೆ. ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ತಾಯಿ ಆಗುತ್ತಿರುವ ಸಿಹಿ ಸುದ್ದಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ‘ಸು ಫ್ರಮ್ ಸೋ’ ಚಿತ್ರದಲ್ಲಿ ಭಾನು ಆಗಿ ಎಲ್ಲರನ್ನೂ ಆವರಿಸಿಕೊಂಡಿದ್ದರು ಸಂಧ್ಯಾ. ಅವರ ಬಾಳಲ್ಲಿ 2025 ವಿಶೇಷವಾಗಿತ್ತು. ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದ್ದು ಒಂದುಕಡೆಯಾದರೆ, ಅವರು ತಾಯಿ…

Read More

ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್ – Kannada News | ILT20: Desert Vipers have Qualified for Play off

ಯುಎಇನಲ್ಲಿ ನಡೆಯುತ್ತಿರುವ ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಡೆಸರ್ಟ್ ವೈಪರ್ಸ್ ತಂಡ ಪ್ಲೇಆಫ್​ಗೇರಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಟೂರ್ನಿಯ 24ನೇ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ಹಾಗೂ ಡೆಸರ್ಟ್ ವೈಪರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 124 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಎಂಐ…

Read More

Makar Sankranti 2026: ಮಕರ ಸಂಕ್ರಾಂತಿ ಯಾವಾಗ? ಸುಗ್ಗಿ ಹಬ್ಬದ ಸಂಪ್ರದಾಯ ಮತ್ತು ಮಹತ್ವ ತಿಳಿಯಿರಿ – Kannada News | Makar Sankranti 2026: Harvest Festival, Rituals and Auspicious Timings

ಸೂರ್ಯನು ಉತ್ತರ ದಿಕ್ಕಿಗೆ ಚಲಿಸುತ್ತಿದ್ದಂತೆ ಹಬ್ಬದ ಋತು ಪ್ರಾರಂಭವಾಗುತ್ತದೆ. ಇದು ಜನವರಿ 14 ರಂದು ಆಚರಿಸಲಾಗುವ ಶುಭ ಮಕರ ಸಂಕ್ರಾಂತಿಯೊಂದಿಗೆ ಪ್ರಾರಂಭವಾಗುತ್ತದೆ. ದೇಶಾದ್ಯಂತ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಆದರೆ, ಹಬ್ಬವನ್ನು ವಿಭಿನ್ನ ಹೆಸರುಗಳು ಮತ್ತು ವಿಧಾನಗಳೊಂದಿಗೆ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವು ಕತ್ತಲೆಯಿಂದ ಬೆಳಕಿಗೆ, ಶೀತದಿಂದ ಶಕ್ತಿಗೆ ಪರಿವರ್ತನೆಯ ಸಮಯವನ್ನು ಸೂಚಿಸುತ್ತದೆ. ಧನು ರಾಶಿಯಿಂದ ಸೂರ್ಯ ಮಕರ ರಾಶಿಗೆ ಪ್ರವೇಶಿಸುವ ಹಬ್ಬ ಇದು. ಸಂಕ್ರಾಂತಿ ಕೇವಲ ಹಬ್ಬವಲ್ಲ, ಪ್ರಕೃತಿಯಲ್ಲಿನ ಬದಲಾವಣೆಗಳ ಸಂಕೇತವೂ ಆಗಿದೆ. ಭಾರತೀಯ ಸಂಪ್ರದಾಯದಲ್ಲಿ, ಇದು…

Read More

ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಮುಕ್ತಗೊಳಿಸಲು ಬಿಗ್ ಪ್ಲಾನ್: 35 ಫ್ಲೈಓವರ್, 25 ಅಂಡರ್‌ಪಾಸ್

ಬೆಂಗಳೂರು, ಏ. 8: ಬೆಂಗಳೂರಿನ ರಸ್ತೆಗಳಲ್ಲಿ ಪ್ರತಿದಿನ ಸುಮಾರು 2,000 ಹೊಸ ವಾಹನಗಳು ಸೇರ್ಪಡೆಯಾಗುತ್ತಿವೆ. ಈ ಹೆಚ್ಚುತ್ತಿರುವ ಒತ್ತಡವನ್ನು ನಿಭಾಯಿಸಲು ಬೆಂಗಳೂರು ಸಂಚಾರ ಪೊಲೀಸರು 35 ಫ್ಲೈಓವರ್‌ಗಳು, 25 ಅಂಡರ್‌ಪಾಸ್‌ಗಳು ಮತ್ತು 101 ಸ್ಕೈವಾಕ್‌ಗಳನ್ನು ಒಳಗೊಂಡ ಬೃಹತ್ ಯೋಜನೆಯನ್ನು ಬೃಹತ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಸಲ್ಲಿಸಿದ್ದಾರೆ. ಪೂರ್ವ ಬೆಂಗಳೂರಿನ ಮಹದೇವಪುರ ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ಅತಿ ಹೆಚ್ಚು ಟ್ರಾಫಿಕ್ ಒತ್ತಡವಿದ್ದು, ಇಲ್ಲಿ ಹೆಚ್ಚಿನ ಫ್ಲೈಓವರ್ ಮತ್ತು ಪಾದಚಾರಿ ಮೂಲಸೌಕರ್ಯಗಳಿಗೆ ಒತ್ತು ನೀಡಲಾಗಿದೆ. ಹೆಬ್ಬಾಳ, ಸಾರಕ್ಕಿ ಸರ್ಕಲ್ ಮತ್ತು…

Read More

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆ: ರಾಜೀನಾಮೆ ಹಿಂಪಡೆಯೋ ವಿಚಾರ ಮಾತ್ರ ಸಸ್ಪೆನ್ಸ್! – Kannada News

ಮಧ್ಯರಾತ್ರಿ ಡಿಕೆಶಿ-ರಾಮಲಿಂಗಾ ರೆಡ್ಡಿ 2.5 ಗಂಟೆ ರಹಸ್ಯ ಸಂಧಾನ ಸಭೆImage Credit source: tv9 ಬೆಂಗಳೂರು, ಜೂನ್ 6: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿದ್ದ ದಿಢೀರ್ ರಾಜೀನಾಮೆ ಪರ್ವ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ, ಶುಕ್ರವಾರ ತಡರಾತ್ರಿ ಬೆಂಗಳೂರಿನ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ರಾಮಲಿಂಗಾ…

Read More

ರಾಕಸಕೊಪ್ಪ ಡ್ಯಾಂ ಖಾಲಿ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ – Kannada News | Belagavis Monsoon Crisis Deepens: Rakaskoppa Dam Runs Dry, City Faces Severe Water Shortage

ಬೆಳಗಾವಿ, ಜೂನ್ 23: ಬೆಳಗಾವಿ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ತೀವ್ರ ನೀರಿನ ಬಿಕ್ಕಟ್ಟು ಎದುರಾಗಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ರಾಕಸಕೊಪ್ಪ ಡ್ಯಾಂ ಸಂಪೂರ್ಣವಾಗಿ ಬರಿದಾಗಿದ್ದು, ಡೆಡ್ ಸ್ಟೋರೇಜ್ ನೀರನ್ನೇ ಬಳಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ಪರಿಸ್ಥಿತಿಯಿಂದಾಗಿ ಬೆಳಗಾವಿ ನಗರದಲ್ಲಿ ಪ್ರತಿ 12 ದಿನಗಳಿಗೊಮ್ಮೆ ಮಾತ್ರ ನೀರು ಸರಬರಾಜು ಮಾಡಲಾಗುತ್ತಿದೆ. ಸಾಮಾನ್ಯವಾಗಿ ಮೂರರಿಂದ ಐದು ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿತ್ತು. ಆದರೆ, ಈಗ ನೀರಿನ ಅಭಾವದಿಂದ ಈ ಅವಧಿ ಹೆಚ್ಚಾಗಿದೆ. ಡ್ಯಾಂನಲ್ಲಿ ಇನ್ನು ಕೇವಲ ಎರಡು ವಾರಗಳಷ್ಟು…

Read More