ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೊರನಡೆದ ಖಾದರ್​​

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆದ ಸ್ಪೀಕರ್​​ ಯು.ಟಿ. ಖಾದರ್​​ ಸಮಯ ಹೇಳದೆ ಕಲಾಪವನ್ನು ಮುಂದೂಡಿರುವ ಪ್ರಸಂಗ ನಡೆದಿದೆ. ಸಚಿವರ ನಡೆಗೆ ಬೇಸರ ವ್ಯಕ್ತಪಡಿಸಿದ ಸ್ಪೀಕರ್​​ ಉತ್ತರ ಕೊಡದಿರಲು ಕಾರಣ ಹೇಳುವವರೆಗೂ ಸದನ ನಡೆಸಲ್ಲ ಎಂದು ಕಲಾಪ ಮೊಟಕು ಮಾಡಿ ಪೀಠದಿಂದ ತೆರಳಿದ್ದಾರೆ. ಲಿಖಿತ ರೂಪದ 230 ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡನೆ ವೇಳೆ ಈ ಪ್ರಸಂಗ ನಡೆದಿದೆ.

ಸದನದಲ್ಲಿ ಸಚಿವ ಪರಮೇಶ್ವರ್ ಉತ್ತರಗಳನ್ನು ಮಂಡಿಸುತ್ತಿದ್ದ ವೇಳೆ ವಿಪಕ್ಷಗಳ ಸದಸ್ಯರಿಂದ ಟೀಕೆ ವ್ಯಕ್ತವಾಗಿದೆ. ಕಲಾಪ ಆರಂಭದಿಂದಲೂ ಸಚಿವರಿಂದನಿರೀಕ್ಷಿತ ಉತ್ತರ ಬಂದಿಲ್ಲ. ಸರ್ಕಾರ ಸತ್ತು ಹೋಗಿದೆ, ತಿಥಿ‌ ಮಾಡಬೇಕು, ತಿಥಿ ಊಟಕ್ಕೆ ಹೋಗಬೇಕು ಅಂತಾ ವಿಪಕ್ಷ ನಾಯಕ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಚಿವರ ವಿರುದ್ಧ ಸ್ಪೀಕರ್ ಖಾದರ್​ ಅಸಮಾಧಾನ ಹೊರಹಾಕಿದ್ದಾರೆ. ಸದನದಲ್ಲಿ ಎಲ್ಲಾ ಶಾಸಕರೂ ಪ್ರಶ್ನೆ ಕೇಳುತ್ತಾರೆ. ಎಲ್ಲವೂ ಚುಕ್ಕೆ ಗುರುತಿನ ಪ್ರಶ್ನೆ ಆಗಲ್ಲ. ಗಮನ ಸೆಳೆಯುವ ಸೂಚನೆಗೂ ಸಚಿವರು ಉತ್ತರ ಕೊಡಲ್ಲ. 3 ಸಲ ಸಚಿವರಿಗೆ ಹೇಳಿದರೂ ಸುಧಾರಣೆ ಕಂಡು ಬರುತ್ತಿಲ್ಲ. ಸಂಬಂಧಿಸಿದ ಸಚಿವರು ಬಂದು ಸ್ಪಷ್ಟತೆ, ಕಾರಣ ಕೊಡಬೇಕು. ಅಲ್ಲಿಯವರೆಗೂ ನಾನು ಸದನ ನಡೆಸುವುದಿಲ್ಲ ಎಂದು ಖಾರವಾಗಿ ಹೇಳುವ ಮೂಲಕ ಆಡಳಿತ ಪಕ್ಷಕ್ಕೆ ಸ್ಪೀಕರ್​​ ಖಾದರ್​​ ಬಿಸಿ ಮುಟ್ಟಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್​​. ಅಶೋಕ್​​, ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಸಭಾತ್ಯಾಗ ಮಾಡಿದ್ದಾರೆ. ಪ್ರತಿದಿನವೂ ಶೇ. 10-30 ಲಿಖಿತ ಪ್ರಶ್ನೆಗಳಿಗೆ ಮಾತ್ರ ಉತ್ತರ ಕೊಡುತ್ತಿದ್ದಾರೆ. ಸರ್ಕಾರ ಹೆಣದಂತಾಗಿದ್ದು, ಸಿಎಂ ಹಿಡಿತ ಕಳೆದುಕೊಂಡಿದ್ದಾರೆ. ಸಚಿವರು ಸದನಕ್ಕೆ ಬರುತ್ತಿಲ್ಲ. ಯಾರು ಸಿಎಂ ಅಂತಾ ತೀರ್ಮಾನ ಆಗದಿರುವ ಕಾರಣ ಈ ರೀತಿ ಆಗುತ್ತಿದೆ. ಸ್ಪೀಕರ್ ನೊಂದು ಹೊರ ಹೋಗಿರುವುದು ಸರ್ಕಾರಕ್ಕೆ ಚಾಟಿ ಏಟು ನೀಡಿದಂತಾಗಿದೆ. ಸ್ಪೀಕರ್ ನಡೆಯನ್ನು ಸ್ವಾಗತಿಸುತ್ತೇವೆ. ಸರ್ಕಾರ ಬದುಕಿದ್ದರೆ ಸಿಎಂ ಬಂದು ಕ್ಷಮೆ ಕೇಳಬೇಕು. ಮಾನ, ಮಾರ್ಯಾದೆ ಇದ್ದರೆ ಸಚಿವರು ರಾಜೀನಾಮೆ ಕೊಟ್ಟು ಹೋಗಬೇಕು ಎಂದು ತಿವಿದಿದ್ದಾರೆ. ವಿಧಾನಸಭೆ ಇತಿಹಾಸದಲ್ಲಿಯೇ ಸರ್ಕಾರದ ಧೋರಣೆ ಖಂಡಿಸಿ ಸ್ಪೀಕರ್ ಪೀಠ ಬಿಟ್ಟು ಹೊರ ಹೋಗಿದ್ದಾರೆ. ಇದು ಆಘಾತಕಾರಿಯಾಗಿದ್ದು, ಸಿಎಂ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು. 40 ದಿನದ ಅಧಿವೇಶನದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರವೇ ಬರುವುದಿಲ್ಲ. ಸ್ಪೀಕರ್ ತೆಗೆದುಕೊಂಡಿರುವ ನಿರ್ಣಯಕ್ಕೆ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಶಾಸಕ ಸುನಿಲ್​​ ಕುಮಾರ್​​ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಾರ್ಮುಜ್​ನಿಂದ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್ ಸಾಗಲು ಅನುಮತಿ; ಇದು ಮಾತುಕತೆಯ ಫಲ ಎಂದ ಸಚಿವ ಜೈಶಂಕರ್

ನವದೆಹಲಿ, ಮಾರ್ಚ್ 16: ಹಾರ್ಮುಜ್ ಜಲಸಂಧಿಯನ್ನು ಬ್ಲಾಕ್ ಮಾಡಿದ್ದ ಇರಾನ್ ಮೊನ್ನೆಯಷ್ಟೇ ಎರಡು ಭಾರತೀಯ ಗ್ಯಾಸ್ ಟ್ಯಾಂಕರ್​ಗಳು (Indian flagged gas tankers) ಸಾಗಲು ಅನುಮತಿ ಕೊಟ್ಟಿದೆ. ಈ ವಿಚಾರದ ಬಗ್ಗೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಹಡಗುಗಳಿಗೆ ಇರಾನ್ ಅನುಮತಿಸಿರುವುದರ ಹಿಂದೆ ಯಾವುದೇ ಒಪ್ಪಂದ ಇಲ್ಲ. ಇದು ಎರಡು ದೇಶಗಳ ನಡುವಿನ ಸಂಬಂಧದ ಫಲ, ಮಾತುಕತೆಯ ಫಲ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ.

ಇರಾನ್ ಜೊತೆ ಭಾರತ ಒಪ್ಪಂದ ಮಾಡಿಕೊಂಡಿದೆ. ಹೀಗಾಗಿ, ಭಾರತದ ಹಡಗುಗಳಿಗೆ ಇರಾನ್ ಒಪ್ಪಿಗೆ ಕೊಟ್ಟಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಜೈಶಂಕರ್ ಅವರು ಈ ಸ್ಪಷ್ಟನೆ ಕೊಟ್ಟಿದ್ದು, ಇರಾನ್ ಮಾಡಿರುವ ಸಹಾಯಕ್ಕೆ ಬದಲಾಗಿ ಭಾರತ ಮತ್ತೇನೂ ನೆರವು ಕೊಟ್ಟಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಸರ್ಕಾರದಿಂದ ಎಲ್​ಪಿಜಿ ಪೂರೈಕೆ ನಿಯಮದಲ್ಲಿ ಬದಲಾವಣೆ; ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ

‘ಇದು ವಿನಿಮಯದ ವಿಚಾರ ಅಲ್ಲ. ಭಾರತ ಮತ್ತು ಇರಾನ್ ನಡುವೆ ಸಂಬಂಧ ಮೊದಲಿಂದಲೂ ಇದೆ. ಇದರ ಆಧಾರದ ಮೇಲೆ ನಾನು ಮಾತುಕತೆ ನಡೆಸುತ್ತಿದ್ದೇನೆ. ಈ ಮಾತುಕತೆಯು ಕೆಲ ಫಲ ಕೊಟ್ಟಿದೆ. ಈ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಮಾತುಕತೆಯಿಂದ ಫಲ ದೊರಕುತ್ತಿದೆ ಎಂದಾದರೆ ಸಹಜವಾಗಿ ನಾನು ಅದೇ ನಿಟ್ಟಿನಲ್ಲಿ ಮುಂದುವರಿಯುತ್ತೆನೆ’ ಎಂದು ಸಚಿವರು ತಿಳಿಸಿದ್ದಾರೆ.

‘ಇವು ಇನ್ನೂ ಆರಂಭಿಕ ದಿನಗಳಷ್ಟೇ. ನಮ್ಮ ಇನ್ನೂ ಹಲವು ಹಡಗುಗಳು ಅಲ್ಲಿವೆ. ಈಗ ಎರಡು ಹಡಗುಗಳನ್ನು ಬಿಟ್ಟಿರುವುದು ಸ್ವಾಗತಾರ್ಹ ಬೆಳವಣಿಗೆ. ಹಾಗೆಯೇ, ಮಾತುಕತೆ ಮುಂದುವರಿಯುತ್ತಿರುವುದೂ ಹೌದು’ ಎಂದು ಜೈಶಂಕರ್ ವಿವರಿಸಿದ್ದಾರೆ.

ಇದನ್ನೂ ಓದಿ: ಗ್ಯಾಸ್​ ಬುಕಿಂಗ್ ಆಗುತ್ತಿಲ್ಲವೇ? ವಾಟ್ಸಾಪ್ ಮೂಲಕ ಸುಲಭವಾಗಿ LPG ಬುಕ್ ಮಾಡುವುದು ಹೇಗೆ?

ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಇರಾನ್ ಅಧ್ಯಕ್ಷ ಮಸೂದ್ ಪೆಜೆಶಕಿಯನ್ ಜೊತೆ ಮಾತನಾಡಿ, ಇಂಧನ ಮತ್ತು ಸರಕುಗಳ ಸಾಗಣೆ ವಿಚಾರವನ್ನು ಚರ್ಚಿಸಿದ್ದಾರೆ. ಅದೇ ವೇಳೆ, ಇರಾನ್​ನಿಂದ ತಡೆ ಎದುರಿಸುತ್ತಿರುವ ಹಾರ್ಮುಜ್ ಜಲಸಂಧಿ ಮೂಲಕ ಎಲ್​ಪಿಜಿ ಹೊತ್ತ ಎರಡು ಭಾರತೀಯ ಟ್ಯಾಂಕರ್​ಗಳು ಅರೇಬಿಯನ್ ಸಮುದ್ರ ಪ್ರವೇಶಿಸಿ ಭಾರತವನ್ನು ತಲುಪುತ್ತಿವೆ ಎನ್ನಲಾಗುತ್ತಿದೆ. ಶಿವಾಲಿಕ್ ಮತ್ತು ನಂದಾದೇವಿ ಹೆಸರಿನ ಈ ಹಡಗುಗಳು ಇನ್ನೆರಡು ದಿನದೊಳಗೆ ಮುಂದ್ರಾ ಮತ್ತು ಕಾಂಡ್ಲಾ ಪೋರ್ಟ್​ಗಳಿಗೆ ಬರುವ ನಿರೀಕ್ಷೆ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಜಿಬಿಎ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ಹಂತ ಹಂತವಾದ ಮಾಹಿತಿ ಇಲ್ಲಿದೆ

Source link

ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಇವು ಕ್ಯಾನ್ಸರ್​​ ತವರು ಮನೆ ಎಂದ ಡಾಕ್ಟರ್ಸ್​​!

ಬೆಂಗಳೂರು, ಮಾರ್ಚ್​​ 16: ಎಲ್​​ಪಿಜಿ ಸಿಲಿಂಡರ್​​ಗಳ ಅಭಾವದಿಂದ ಜನರೀಗ ಮತ್ತೆ ಸಾಂಪ್ರದಾಯಿಕ ಸೌದೆ ಒಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ ವೈದ್ಯರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಕ್ಯಾನ್ಸರ್, ಟಿಬಿ, ಅಸ್ತಮಾ ಸೇರಿದಂತೆ ನೂರಾರು ರೋಗಗಳಿಗೆ ಇವೇ ತವರುಮನೆ ಎಂದು ಎಚ್ಚರಿಸಿದ್ದಾರೆ. ಸೌದೆಯಿಂದ ಹೊರ ಬರುವ ಹೊಗೆ ಲಂಗ್ಸ್ ಕ್ಯಾನ್ಸರ್, ಟಿಬಿ, ಬ್ರೆಸ್ಟ್ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್​​ಗೆ ಕಾರಣವಾಗುತ್ತದೆ. ಈ ಹೊಗೆಯಲ್ಲಿ ಬೆಂಜೀನ್ ಮತ್ತು ಪಾಲಿ ಸೈಕ್ಲಿಕ್ ಆರೋಮ್ಯಾಟಿಕ್ ಹೈಡ್ರೋಕಾರ್ಬನ್​​ಗಳು ಹೊರ ಹೊಮ್ಮುತ್ತವೆ ಎಂದು ತಿಳಿಸಿದ್ದಾರೆ. ಆದರೆ ಇವು ಅಲ್ಪ ಕಾಲದಲ್ಲಿ ದೊಡ್ಡ ಪರಿಣಾಮ ಬೀರಲ್ಲ. ಬದಲಾಗಿ ದೀರ್ಘ ಕಾಲದಲ್ಲಿ ಸೌದೆ ಒಲೆಗಳ ಬಳಕೆ ಮಾರಕ ರೋಗಗಳಿಗೆ ಕಾರಣವಾಗಬಹುದು. ಹೀಗಾಗಿ ಅಡುಗೆ ಮಾಡಲು ಸಾಧ್ಯವಾದಷ್ಟು ಒಣ ಸೌದೆ ಬಳಸಿ, ಹಸಿ ಸೌದೆಗಳ ಬಳಕೆ ಬೇಡ. ಇದರಿಂದ ಸಂಭಾವ್ಯ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಾರ್ಗ ಮಧ್ಯದಲ್ಲೇ ಶತ್ರುಗಳ ಕಣ್ತಪ್ಪಿಸುವ ಡ್ಯಾನ್ಸಿಂಗ್ ಮಿಸೈಲ್! ಇಸ್ರೇಲ್ ವಿರುದ್ಧ ಇರಾನ್ ಬಳಸಿದ ಸೆಜ್ಜಿಲ್ ಅಸಲಿಯತ್ತು ಇಲ್ಲಿದೆ

ನವದೆಹಲಿ, ಮಾರ್ಚ್ 16: ಯುದ್ಧದ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ಇರಾನ್ (Iran) ಅತ್ಯಾಧುನಿಕ, ದೇಶೀಯ ನಿರ್ಮಿತ ‘ಡ್ಯಾನ್ಸಿಂಗ್ ಮಿಸೈಲ್ (Dancing Missile)’ ಸೆಜ್ಜಿಲ್ (Sejjil) ಮೂಲಕ ಇಸ್ರೇಲ್ ವಿರುದ್ಧ ದಾಳಿ ನಡೆಸಿದೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ, ಇರಾನ್ ಮೊತ್ತಮೊದಲ ಬಾರಿಗೆ ಇಸ್ರೇಲ್ ವಿರುದ್ಧ ಡ್ಯಾನ್ಸಿಂಗ್ ಮಿಸೈಲ್ ಪ್ರಯೋಗ ಮಾಡಿದಂತಾಗಿದೆ. ಇಸ್ರೇಲ್​ನ ಪ್ರಮುಖ ಪ್ರದೇಶಗಳನ್ನು ಗುರಿಯಾಗಿಸಿ ಇರಾನ್, ಸೆಜ್ಜಿಲ್ ಮೂಲಕ ದಾಳಿ ನಡೆಸಿದೆ.

ಸದ್ಯ ‘ಡ್ಯಾನ್ಸಿಂಗ್ ಮಿಸೈಲ್’ ಎಂಬ ಹೆಸರು ಜಗತ್ತಿನ ಗಮನ ಸೆಳೆದಿದೆ. ‘ಡ್ಯಾನ್ಸಿಂಗ್ ಮಿಸೈಲ್’ ಎಂದರೇನು? ಡ್ಯಾನ್ಸಿಂಗ್ ಮಿಸೈಲ್ ಸೆಜ್ಜಿಲ್ ಇದರ ವಿಶೇಷ ಏನು ಎಂಬ ಮಾಹಿತಿ ಇಲ್ಲಿದೆ.

ಸೆಜ್ಜಿಲ್ ಕ್ಷಿಪಣಿ ಎಂದರೇನು?

ಸೆಜ್ಜಿಲ್-2 ಇರಾನ್​ನಲ್ಲೇ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿರುವ ಎರಡು ಹಂತಗಳ ಘನ ಇಂಧನ (Solid Fuel) ಬಳಸುವ ಮಧ್ಯಮ ದೂರದ ಬಾಲಿಸ್ಟಿಕ್ ಕ್ಷಿಪಣಿಯಾಗಿದೆ. ಈ ಕ್ಷಿಪಣಿಯ ಅಂದಾಜು ವ್ಯಾಪ್ತಿ ಸುಮಾರು 2,000 ಕಿಲೋಮೀಟರ್ ಆಗಿದ್ದು, ಸುಮಾರು 700 ಕಿಲೋಗ್ರಾಂ ತೂಕದ ಪೇಲೋಡ್ ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ.

ಡ್ಯಾನ್ಸಿಂಗ್ ಮಿಸೈಲ್ ಹೆಸರು ಯಾಕೆ ಬಂತು?

ಈ ಕ್ಷಿಪಣಿಯು ಗುರಿಯತ್ತ ಸಾಗುತ್ತಿರುವಾಗ ಚುರುಕಾಗಿ ದಿಕ್ಕು ಬದಲಾಯಿಸುವ ಸಾಮರ್ಥ್ಯ ಹೊಂದಿದೆ. ಅಲ್ಲದೆ, ಶತ್ರುಗಳ ರೇಡಾರ್ ಕಣ್ತಪ್ಪಿಸಿ ನೆಗೆಯಬಲ್ಲದ್ದಾಗಿದೆ. ಛಂಗನೆ ದಿಕ್ಕು ಬದಲಾಯಿಸಿ ರೇಡಾರ್​ಗಳ ಕಣ್ತಪ್ಪಿಸಿ ನೆಗೆಯಬಲ್ಲದ್ದಾದ್ದರಿಂದ ಇದಕ್ಕೆ ‘ಡ್ಯಾನ್ಸಿಂಗ್ ಮಿಸೈಲ್’ ಎಂಬ ಹೆಸರು ಬಂದಿದೆ.

ಅಮೆರಿಕದ ಸೆಂಟರ್ ಫಾರ್ ಸ್ಟ್ರಾಟಜಿಕ್ ಆ್ಯಂಡ್ ಇಂಟರ್​​ನ್ಯಾಷನಲ್ ಸ್ಟಡೀಸ್(CSIS) ಮಾಹಿತಿಯ ಪ್ರಕಾರ, ಸೆಜ್ಜಿಲ್ ಕ್ಷಿಪಣಿ ಸುಮಾರು 18 ಮೀಟರ್ ಉದ್ದ, 1.25 ಮೀಟರ್ ವ್ಯಾಸ ಹೊಂದಿದ್ದು, ಸುಮಾರು 23,600 ಕಿಲೋಗ್ರಾಂ ತೂಕವಿದೆ.

ಘನ ಇಂಧನ ಬಳಸುವ ಕ್ಷಿಪಣಿಯಾದ್ದರಿಂದ ಹಳೆಯ ಶಹಾಬ್ ಮಿಸೈಲ್​ನಂಥ ದ್ರವ ಇಂಧನ ಕ್ಷಿಪಣಿಗಳಿಗಿಂತ ಇದು ಬೇಗ ಸಿದ್ಧಪಡಿಸಿ ಉಡಾಯಿಸಲು ಸಾಧ್ಯವಾಗುತ್ತದೆ.

ಸೆಜ್ಜಿಲ್ ಕ್ಷಿಪಣಿಯ ವಿನ್ಯಾಸ ಕಾರ್ಯ 1990ರ ದಶಕದ ಆರಂಭದಲ್ಲೇ ಪ್ರಾರಂಭಗೊಂಡಿತ್ತು. ಮೊದಲ ಪರೀಕ್ಷಾ ಉಡಾವಣೆ 2008ರಲ್ಲಿ ನಡೆದಿದ್ದು, ಆಗ ಕ್ಷಿಪಣಿ ಸುಮಾರು 800 ಕಿಲೋಮೀಟರ್ ದೂರದ ಗುರಿ ತಲುಪಿತ್ತು. ನಂತರ 2009ರ ಮೇ ತಿಂಗಳಲ್ಲಿ ಎರಡನೇ ಪರೀಕ್ಷೆ ನಡೆಸಿ ಗೈಡೆನ್ಸ್ ಆ್ಯಂಡ್ ನ್ಯಾವಿಗೇಶನ್ ವ್ಯವಸ್ಥೆಯನ್ನು ಸುಧಾರಿಸಲಾಯಿತು. 2009ರಿಂದ ಬಳಿಕ ಇನ್ನೂ ನಾಲ್ಕು ಪರೀಕ್ಷಾರ್ಥ ಉಡಾವಣೆಗಳು ನಡೆದಿದ್ದು, ಆರನೇ ಪರೀಕ್ಷೆಯಲ್ಲಿ ಕ್ಷಿಪಣಿ ಸುಮಾರು 1,900 ಕಿಲೋಮೀಟರ್ ದೂರ ಇಂಡಿಯನ್ ಓಷನ್ ಕಡೆಗೆ ಪ್ರಯಾಣಿಸಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ರಕ್ಷಣೆ: ಭಾರತದ ನೆರವಿಗೆ ಅಮೆರಿಕ ಯಾಚನೆ?

ಮಧ್ಯಪ್ರಾಚ್ಯದಲ್ಲಿ ಯುದ್ಧೋನ್ಮಾದ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಸೆಜ್ಜಿಲ್ ಕ್ಷಿಪಣಿಯ ಬಳಕೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ

ಯಾವುದೇ ಸೆಲೆಬ್ರಿಟಿ ಹೊರಗೆ ಕಾಣಿಸಿಕೊಂಡರೆ ಸಾಕು, ಅವರನ್ನು ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಹೀಗಾಗದಂತೆ ತಡೆಯಲು ಭದ್ರತಾ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಅದು ಸಾಧ್ಯವಾಗೋದಿಲ್ಲ. ಈಗ ಕಾಜೋಲ್ ಅವರಿಗೆ ಹಾಗೆಯೇ ಆಗಿದೆ. ಅವರು ಬಾಲಿವುಡ್ ನಟಿ. ಅಜಯ್ ದೇವಗನ್ ಪತ್ನಿ. ಅವರು ಬರುತ್ತಾರೆ ಎಂದರೆ ಸಾಕಷ್ಟು ಭದ್ರತೆ ನೀಡಲಾಗುತ್ತದೆ. ಆದಾಗ್ಯೂ ಅಭಿಮಾನಿಗಳು ಮುತ್ತಿಕೊಂಡರು. ಕೊನೆಗೆ ಅವರು ಕಷ್ಟಪಟ್ಟು ಕಾರನ್ನು ಏರಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

Source link

ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರಲು ಭಾರತವೂ ಸೇರಿ ಹಲವು ರಾಷ್ಟ್ರಗಳಿಗೆ ಅಮೆರಿಕ ಮನವಿ

ನವದೆಹಲಿ, ಮಾರ್ಚ್ 16: ಜಗತ್ತಿನ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದೆನಿಸಿರುವ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ತೈಲ ಹಡಗುಗಳ ಸಾಗಣೆಗೆ ರಕ್ಷಣೆ ಒದಗಿಸಲು ಅಮೆರಿಕವು ಹಲವು ದೇಶಗಳ ನೆರವು ಯಾಚಿಸುತ್ತಿದೆ. ಇರಾನ್ ಯುದ್ಧದಿಂದಾಗಿ ಈ ಹಾರ್ಮುಜ್ ಸ್ಟ್ರೇಟ್ ಬಹುತೇಕ ಸ್ಥಗಿತಗೊಂಡಿದೆ. ತೈಲ ಹೊತ್ತ ಕೆಲವೇ ಕೆಲವು ಹಡಗುಗಳ ಮಾತ್ರ ಆಗಾಗ್ಗೆ ಹೊರಬರುತ್ತಿವೆ. ಇದರ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರುತ್ತಿದೆ.

ಇದೇ ವೇಳೆ, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಹಡಗುಗಳನ್ನು ಸಾಗಿಸಲು ಬಿಡುವುದಿಲ್ಲ ಎಂದು ಇರಾನ್ ಹೇಳಿರುವ ಹಿನ್ನೆಲೆಯಲ್ಲಿ ಅಮೆರಿಕ ಇತರ ರಾಷ್ಟ್ರಗಳ ನೆರವು ಕೇಳುತ್ತಿದೆ. ತನ್ನ ನೌಕಾಸೇನೆಯ ಭದ್ರತೆಯಲ್ಲಿ ತೈಲ ಹಡಗುಗಳನ್ನು ಸಾಗಲು ವ್ಯವಸ್ಥೆ ಮಾಡುವುದಾಗಿ ಹೇಳಿದ್ದ ಅಮೆರಿಕ ಈಗ ಇತರ ದೇಶಗಳ ನೆರವು ಕೇಳುವಂತಾಗಿದೆ. ವರದಿ ಪ್ರಕಾರ ಭಾರತದ ನೆರವನ್ನೂ ಕೇಳಲು ಅಮೆರಿಕ ಯೋಜಿಸಿದೆ.

ಚೀನಾ, ಜಪಾನ್, ಫ್ರಾನ್ಸ್, ಆಸ್ಟ್ರೇಲಿಯಾ, ಬ್ರಿಟನ್, ಸೌತ್ ಕೊರಿಯ, ಹಾಗೆಯೇ ನಾಟೋ ಕೂಟದ ದೇಶಗಳನ್ನು ಹಾರ್ಮುಜ್ ಜಲಸಂಧಿಯಲ್ಲಿ ಭದ್ರತೆಗೆ ಬರಬೇಕೆಂದು ಕೇಳಿಕೊಂಡಿರುವುದಾಗಿ ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ನಿನ್ನೆ ಹೇಳಿದ್ದರು.

ಇದನ್ನೂ ಓದಿ: ಮೊಜ್ತಬಾ ಖಮೇನಿ ಜೀವಂತವಿಲ್ಲ, ಇರಾನ್ ಕದನ ವಿರಾಮಕ್ಕೆ ಸಿದ್ಧವಾಗಿದೆ, ಆದರೆ ನಮಗೆ ಮನಸ್ಸಿಲ್ಲ ಎಂದ ಟ್ರಂಪ್

ಅವರ ಪ್ರಕಾರ, ಕೆಲ ದೇಶಗಳು ಅಮೆರಿಕದ ಮನವಿಗೆ ಸಮ್ಮತಿಸಿವೆ. ಕೆಲ ವರದಿಗಳ ಪ್ರಕಾರ ಅಮೆರಿಕದ ಹಲವು ಮಿತ್ರ ದೇಶಗಳು ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎನ್ನಲಾಗಿದೆ. ಆಸ್ಟ್ರೇಲಿಯಾ ಮತ್ತು ಜಪಾನ್ ದೇಶಗಳು ಹಾರ್ಮುಜ್ ಜಲಸಂಧಿ ಬಳಿ ತಮ್ಮ ನೌಕೆಗಳನ್ನು ಕಳುಹಿಸಲು ನಿರಾಕರಿಸಿವೆ.

ಭಾರತ ಸೇರಿದಂತೆ ಇನ್ನೂ ಕೆಲ ದೇಶಗಳನ್ನು ಹಾರ್ಮುಜ್ ಜಲಸಂಧಿ ಭದ್ರತೆಗೆ ಬರಬೇಕೆಂದು ಆಹ್ವಾನಿಸುವ ಆಲೋಚನೆಯಲ್ಲಿ ಅಮೆರಿಕ ಇದೆ. ಹಾರ್ಮುಜ್ ಜಲಸಂಧಿ ಮೂಲಕ ಬರುವ ತೈಲದ ಮೇಲೆ ಹೆಚ್ಚು ಅವಲಂಬಿತವಾಗಿರುವ ಭಾರತ, ಜಪಾನ್, ಕೊರಿಯಾ, ಚೀನಾ, ಥಾಯ್ಲೆಂಡ್ ಮೊದಲಾದ ಏಷ್ಯನ್ ದೇಶಗಳು ಹಾರ್ಮುಜ್ ಸ್ಟ್ರೇಟ್ ರಕ್ಷಣೆಗೆ ಬರಬಹುದು ಎಂದು ಅಮೆರಿಕ ನಿರೀಕ್ಷಿಸುತ್ತಿದೆ.

ಹಾರ್ಮುಜ್ ಜಲಸಂಧಿ ಯಾಕೆ ಮುಖ್ಯ?

ಹಾರ್ಮುಜ್ ಜಲಸಂಧಿಯು ಪರ್ಷಿಯನ್ ಕೊಲ್ಲಿ ಹಾಗೂ ಅರೇಬಿಯನ್ ಸಮುದ್ರವನ್ನು ಸಂಪರ್ಕಿಸುತ್ತದೆ. ಬಹಳ ಕಿರಿದಾಗಿರುವ ಜಲಮಾರ್ಗವಾದ್ದರಿಂದ ಹಡಗುಗಳ ಸಾಗಾಟ ಬಹಳ ಸೂಕ್ಷ್ಮ ಎನಿಸುತ್ತದೆ. ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ಮಾಡಿದ ಹಿನ್ನೆಲೆಯಲ್ಲಿ ಈ ಜಲಸಂಧಿಗೆ ಕಂಟಕ ಶುರುವಾಗಿದೆ.

ಇದನ್ನೂ ಓದಿ: ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ಕೊಲ್ಲಿ ದೇಶಗಳ ತೈಲಗಳು ಇತರೆಡೆ ಸಾಗಲು ಈ ಜಲಸಂಧಿಯೇ ಮುಖ್ಯ ಮಾರ್ಗ. ಜಗತ್ತಿನ ಶೇ. 40ರಷ್ಟು ತೈಲ ಸಾಗಾಟ ಇಲ್ಲಿಂದಲೇ ನಡೆಯುತ್ತದೆ. ಭಾರತ, ಚೀನಾ ಸೇರಿದಂತೆ ಹೆಚ್ಚಿನ ಏಷ್ಯನ್ ದೇಶಗಳಿಗೆ ಬೇಕಾದ ಹೆಚ್ಚಿನ ತೈಲವು ಇಲ್ಲಿಂದಲೇ ಪೂರೈಕೆಯಾಗುವುದು. ಹೀಗಾಗಿ, ಕೊಲ್ಲಿ ದೇಶಗಳು ಹಾಗೂ ಏಷ್ಯನ್ ದೇಶಗಳಿಗೆ ಈ ಜಲಸಂಧಿಯ ಭದ್ರತೆ ಬಹಳ ಮುಖ್ಯವಾಗುತ್ತದೆ. ಜಾಗತಿಕವಾಗಿ ತೈಲ ಬೆಲೆಯಲ್ಲಿ ಏರುಪೇರಾಗದಂತೆ ನೋಡಿಕೊಳ್ಳಲೂ ಇದು ಮುಖ್ಯ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರು

ಬಾಗಲಕೋಟೆ, ಮಾರ್ಚ್​​ 16: ಉಪ ಚುನಾವಣೆಗೆ ದಿನಾಂಕ ಘೋಷಣೆ ಬೆನ್ನಲ್ಲೇ ಬಾಗಲಕೋಟೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​​ ಆಕಾಂಕ್ಷಿಗಳ ನಡುವೆ ಫೈಟ್​​ ಜೋರಾಗಿದೆ. ಹೈಕಮಾಂಡ್​​ ಮಟ್ಟದಲ್ಲಿ ಲಾಭಿ ಶುರುವಾಗಿದ್ದು, ಪ್ರಬಲ ಆಕಾಂಕ್ಷಿ ವೀರಣ್ಣ ಹಳೆಗೌಡರ ಪತ್ರ ಕೂಡ ಬರೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪ್ರಮುಖರಿಗೆ ಟಿಕೆಟ್​​ಗಾಗಿ ಮನವಿ ಮಾಡಿದ್ದಾರೆ. ನಾನು ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿಯಾಗಿದ್ದು, ಬಾಗಲಕೋಟೆಯಲ್ಲಿ 25 ವರ್ಷಗಳಿಂದ ಒಂದು ಸಾರಿಯೂ ಈ  ವರ್ಗಕ್ಕೆ ಅವಕಾಶ ಕೊಟ್ಟಿಲ್ಲ. ಎದುರಾಳಿ ಅಭ್ಯರ್ಥಿ ಕೂಡ ಕುರುಬ ಸಮುದಾಯದವರೇ ಆಗುವುದು ಬಹುತೇಕ ಫಿಕ್ಸ್​​ ಆಗಿದೆ. ಕುರುಬ ಸಮುದಾಯದ ಪರವಾಗಿ ಸಾಕಷ್ಟು ಹೋರಾಟಗಳನ್ನು ಮಾಡಿರುವ ನಾನು, 2017ರಲ್ಲಿ ಇದೇ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವಾಗ್ವಾದ ಮಾಡಿ ಜೈಲಿಗೆ ಕೂಡ ಹೋಗಿ ಬಂದಿದ್ದೇನೆ. ನನ್ನಂತ ಒಬ್ಬ ಕಾರ್ಯಕರ್ತನಿಗೆ ಅವಕಾಶ ಒದಗಿಸಿ ಕೊಟ್ಟರೆ ನೂರಕ್ಕೆ ನೂರರಷ್ಟು ಒಳ್ಳೆಯದಾಗುತ್ತದೆ ಎಂದು ಆತ್ಮವಿಶ್ವಾಸವಿರೋದಾಗಿ ಟಿವಿ9ಗೆ ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನಷ್ಟವನ್ನೇ ಮಾಡಿವೆ’; ವಿಜಯ್ ಸೇತುಪತಿ ಬೇಸರ

ಸ್ಟಾರ್ ಹೀರೋ ಆಗಿ ಬೆಳೆದ ಬಳಿಕ ಕೆಲವರಿಗೆ ಸಿನಿಮಾ ನಿರ್ಮಾಣ ಮಾಡುವ ಹುಮ್ಮಸ್ಸು ಬರುತ್ತದೆ. ಹಾಗಂತ ಅದನ್ನು ಮಾಡೋದ್ರಲ್ಲಿ ಸ್ವಾರ್ಥ ಇದೆ ಎಂದರ್ಥವಲ್ಲ. ಹೊಸ ಪ್ರತಿಭೆಗಳಿಗೆ ಅವಕಾಶ ಸಿಗಲಿ ಎಂಬುದು ಇದರ ಮುಖ್ಯ ಉದ್ದೇಶ ಆಗಿರುತ್ತದೆ. ತಮಿಳಿನ ಸ್ಟಾರ್ ನಟ ವಿಜಯ್ ಸೇತುಪತಿ ಕೂಡ ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ಹೊಸ ಸಿನಿಮಾಗಳನ್ನು ಅವರು ನಿರ್ಮಿಸುತ್ತಿದ್ದಾರೆ. ಅವರು ಬಂಡವಾಳ ಹಾಕಿದ ಸಿನಿಮಾಗಳೆಲ್ಲ ಬಾಕ್ಸ್ ಆಫೀಸ್​​​ನಲ್ಲಿ ಸೋತಿವೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

ಭಾರದ್ವಾಜ್ ರಂಗನ್ ಜೊತೆ ‘ಗಲಾಟಾ ಪ್ಲಸ್’ ಅಲ್ಲಿ ಮಾತನಾಡಿದ ವಿಜಯ್ ಸೇತುಪತಿ, ‘ನಾನು ನಿರ್ಮಿಸಿದ ಎಲ್ಲಾ ಸಿನಿಮಾಗಳು ನನಗೆ ನಷ್ಟವನ್ನೇ ತಂದಿವೆ’ ಎಂದರು. ಕೆಲವು ನಿರ್ಮಾಪಕರು ಈ ವಿಷಯದಲ್ಲಿ ಓಪನ್ ಆಗಿ ಮಾತನಾಡುವುದಿಲ್ಲ. ಆದರೆ, ವಿಜಯ್ ಸೇತುಪತಿ ಆ ರೀತಿ ಮಾತನಾಡಿಲ್ಲ.

‘ನನ್ನ ಬ್ಯಾನರ್‌ನಲ್ಲಿ ‘ಸಂಗುತೇವನ್’ ಎಂಬ ಚಿತ್ರ ಪ್ರಾರಂಭಿಸಿದ್ದೆ. ಆದರೆ, ಅದು ಅರ್ಧದಲ್ಲೇ ನಿಂತುಹೋಯಿತು. ಇದರಿಂದಾಗಿ 1.75 ಕೋಟಿ ರೂ. ನಷ್ಟವಾಯಿತು. ಅದರ ನಂತರ ನಾನು ನಾಲ್ಕು ಚಿತ್ರಗಳನ್ನು ನಿರ್ಮಿಸಿದೆ. ‘ಆರೆಂಜ್ ಮಿಠೈ’ ‘ಮೆರ್ಕು ದೊಡರ್ಚಿ ಮಲೈ’, ‘ಜಂಗ್’, ‘ಮಹಾಬಾತ್’ ಚಿತ್ರಗಳು. ಇವುಗಳಲ್ಲಿ ಒಂದೂ ನನಗೆ ಯಾವುದೇ ಲಾಭ ತಂದುಕೊಡಲಿಲ್ಲ. ಕನಿಷ್ಠ ಹೂಡಿಕೆಯನ್ನು ಸಹ ಅವರು ಮರಳಿ ಪಡೆಯಲು ವಿಫಲವಾದವು’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಜೈಲರ್ 2’ ಸಿನಿಮಾದಿಂದ ಬಾಲಯ್ಯ ಔಟ್? ವಿಜಯ್ ಸೇತುಪತಿಗೆ ದೊಡ್ಡ ಚಾನ್ಸ್

‘ಬಾಕ್ಸ್ ಆಫೀಸ್‌ನಲ್ಲಿ ಅವು ಸೋತರೂ, ಆ ಎಲ್ಲಾ ಸಿನಿಮಾಗಳು ನನಗೆ ಇನ್ನೂ ಇಷ್ಟ. ಅದಕ್ಕಾಗಿಯೇ ನನಗೆ ಅವುಗಳನ್ನು ಮಾಡಲು ಇಷ್ಟ’ ಎಂದು ಅವರು ಹೇಳಿದರು. ಪ್ರಸ್ತುತ ವಿಜಯ್ ಸೇತುಪತಿ ಸಿನಿಮಾ ನಟನೆಯಲ್ಲಿ ಬ್ಯುಸಿ ಇದ್ದಾರೆ. ತಮಿಳು, ತೆಲುಗು ಭಾಷೆಯಲ್ಲಿ ಅವರು ಮಿಂಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version