ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ
ಬೆಂಗಳೂರು, ಮೇ 14: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ಗೆ ಮತ್ತೆ ಅವಕಾಶ ನೀಡಿರುವುದಕ್ಕೆ ಬಿಜೆಪಿ ಕೆರಳಿ ಕೆಂಡವಾಗಿದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನ ತೀವ್ರವಾಗಿ ಖಂಡಿಸಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಕೀಯ ಜಟಾಪಟಿ ಶುರುವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನಿಮಗೆ ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ತುಷ್ಠಿಕರಣದ ರಾಜಕಾರಣ ಮಾಡಿರುವವರನ್ನು ಜನರು ಮನೆಗೆ ಕಳುಹಿಸಿದ್ದಾರೆ ಎಂದರು. ದೇಶದಲ್ಲಿ ಈಗಲೂ ಶೇಕಡಾ 80ರಷ್ಟು…