IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ ಗೌರವ!

Source link

ಬೆಂಗಳೂರು: ಪಿಂಕ್ ಲೈನ್ ಮೆಟ್ರೋಗೆ ಬಂತು ನಾಲ್ಕನೇ ರೈಲು, ಮೇನಲ್ಲಿ ಸಂಚಾರ ನಿರೀಕ್ಷೆ

ಬೆಂಗಳೂರು, ಮಾರ್ಚ್ 16: ನಮ್ಮ ಮೆಟ್ರೋ (Namma Metro) ವಿಸ್ತರಣೆಗೆ ಮತ್ತೊಂದು ಹೆಜ್ಜೆ ಇಟ್ಟಿರುವ ಬಿಎಂಆರ್​ಸಿಎಲ್ (BMRCL) ಮೇ ತಿಂಗಳಲ್ಲಿ ಪಿಂಕ್ ಲೈನ್‌ನಲ್ಲಿ ಕಾರ್ಯಾಚರಣೆ ಶುರು ಮಾಡಲು ಸಿದ್ಧತೆ ಶುರುಮಾಡಿದೆ. ಪಿಂಕ್ ಲೈನ್‌ ಮೆಟ್ರೋಗಾಗಿ ನಾಲ್ಕನೇ ರೈಲು ಭಾನುವಾರ ಬಂದಿಳಿದಿದೆ. ಆರು ಕೋಚ್‌ಗಳಿರುವ ಈ ಹೊಸ ರೈಲು ಸೆಟ್‌ ಅನ್ನು ಮಾರ್ಚ್‌ 13ರಂದು ಬಿಇಎಂಎಲ್ ಸಂಸ್ಥೆಯ ನ್ಯೂ ತಿಪ್ಪಸಂದ್ರ ಘಟಕದಿಂದ ಬನ್ನೇರುಘಟ್ಟ ರಸ್ತೆಯಲ್ಲಿರುವ ಕೊತ್ತನೂರು ಡಿಪೋಗೆ ತರಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಈ ರೈಲನ್ನು ಪ್ರಸ್ತುತ ಕೊತ್ತನೂರು ಡಿಪೋದಲ್ಲಿನ ಇನ್ಸ್‌ಪೆಕ್ಷನ್ ಬೇ ಲೈನ್ (IBL) ಗೆ ಸ್ಥಳಾಂತರಿಸಿ ಅಗತ್ಯ ತಾಂತ್ರಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಎಲ್ಲಾ ಪರೀಕ್ಷೆಗಳು ಮತ್ತು ನಿಯಮಾನುಸಾರ ಅನುಮತಿ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ರೈಲು ಸೇವೆಗೆ ಸಿದ್ಧವಾಗಲಿದೆ.

ಪಿಂಕ್ ಲೈನ್‌ನ ಮೊದಲ ರೈಲನ್ನು ಬಿಇಎಂಎಲ್ ಸಂಸ್ಥೆ 2025ರ ಡಿಸೆಂಬರ್‌ 11ರಂದು ಬಿಡುಗಡೆ ಮಾಡಿತ್ತು. ಬಳಿಕ ಫೆಬ್ರವರಿಯಲ್ಲಿ ಇನ್ನೂ ಎರಡು ರೈಲುಗಳನ್ನು ಬಿಎಂಆರ್‌ಸಿಎಲ್‌ಗೆ ಹಸ್ತಾಂತರಿಸಿತ್ತು. ಈಗ ನಾಲ್ಕನೇ ರೈಲು ಕೂಡ ಬಂದಿರುವುದರಿಂದ ಪಿಂಕ್ ಲೈನ್ ಸೇವೆ ಆರಂಭದ ಸಿದ್ಧತೆಗಳು ವೇಗ ಪಡೆದುಕೊಂಡಿವೆ.

ಸುಮಾರು 7.5 ಕಿಲೋಮೀಟರ್ ಉದ್ದದ ಕಾಳೇನ ಅಗ್ರಹಾರ – ತಾವರೆಕೆರೆಯ ಪಿಂಕ್ ಲೈನ್ ಮಾರ್ಗದಲ್ಲಿ ಮೇ ತಿಂಗಳಲ್ಲಿ ರೈಲು ಸಂಚಾರ ಆರಂಭಿಸಲು ಬಿಎಂಆರ್‌ಸಿಎಲ್ ಉದ್ದೇಶಿಸಿದೆ.

ನೇರಳೆ ಮತ್ತು ಹಸಿರು ಮಾರ್ಗಗಳ ಪ್ರಯಾಣಿಕರಿಗೂ ಗುಡ್ ನ್ಯೂಸ್

ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿನ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಕೋಲ್ಕತ್ತಾ ಮೂಲದ ಟಿಟಾಗಢ್ ರೈಲ್ ಸಿಸ್ಟಮ್ಸ್ ಲಿಮಿಟೆಡ್ (TRSL) ಸಂಸ್ಥೆ ಪರ್ಪಲ್ ಹಾಗೂ ಗ್ರೀನ್ ಲೈನ್‌ಗಳಿಗಾಗಿ ಎರಡನೇ ಡಿಟಿಜಿ ರೈಲು ಸೆಟ್‌ ಅನ್ನು ಕಳುಹಿಸಿದೆ. ಈ ರೈಲಿನ ಮೂರು ಕೋಚ್‌ಗಳನ್ನು ಮಾರ್ಚ್‌ 13ರಂದು ಕಳುಹಿಸಲಾಗಿದ್ದು, ಉಳಿದ ಮೂರು ಕೋಚ್‌ಗಳು ಮರುದಿನ ರಾತ್ರಿ ರವಾನೆಯಾಗಿವೆ. ಈ ರೈಲು ಈ ತಿಂಗಳ ಅಂತ್ಯದೊಳಗೆ ಪೀಣ್ಯಾ ಡಿಪೋ ತಲುಪುವ ಸಾಧ್ಯತೆ ಇದೆ.

ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ?

ಈ ಎರಡು ಹೊಸ ರೈಲುಗಳು ಮೇ–ಜೂನ್ ವೇಳೆಗೆ ಪರ್ಪಲ್ ಮತ್ತು ಗ್ರೀನ್ ಲೈನ್‌ಗಳಲ್ಲಿ ಸಂಚಾರ ಶುರು ಮಾಡುವ ನಿರೀಕ್ಷೆ ಇದೆ. ಇದರಿಂದ ಪೀಕ್ ಅವಧಿಯಲ್ಲಿ ಮೆಟ್ರೋದಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆ ಕಡಿಮೆಯಾಗಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಪರ್ಪಲ್ ಮತ್ತು ಗ್ರೀನ್ ಲೈನ್‌ಗಳಲ್ಲಿ ಒಟ್ಟು 57 ರೈಲುಗಳು ಸಂಚಾರ ಮಾಡುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದ್ದು, ಇದಕ್ಕೆ ಡಾಲಿ ನಿರ್ಮಾಣ ಇದೆ ಎನ್ನಲಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ!

ಬೆಂಗಳೂರು, ಮಾರ್ಚ್​ 16: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 158ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು. ಆದರೆ ಇಂದು ಹುಬ್ಬಳ್ಳಿ, ಬೆಳಗಾವಿ ಸೇರಿ ಹಲವೆಡೆ ಏರ್ ಕ್ವಾಲಿಟಿ 100ಕ್ಕಿಂತ ಕಡಿಮೆ ಇದೆ. ಆದರೆ ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –158
  • ಮಂಗಳೂರು-150
  • ಮೈಸೂರು –151
  • ಬೆಳಗಾವಿ – 76
  • ಕಲಬುರ್ಗಿ-119
  • ಶಿವಮೊಗ್ಗ – 158
  • ಬಳ್ಳಾರಿ – 178
  • ಹುಬ್ಬಳ್ಳಿ- 97
  • ಉಡುಪಿ –158
  • ವಿಜಯಪುರ –80

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ

ಕಟಕ್, ಮಾರ್ಚ್ 16: ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ (SCB Medical College & Hospital) ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು (Fire Accident) ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ.

ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಘಟನೆಯಲ್ಲಿ ಐಸಿಯುನಲ್ಲಿದ್ದ 10 ರೋಗಿಗಳು ಬಲಿಯಾಗಿದ್ದಾರೆ. ಅವರನ್ನು ರಕ್ಷಿಸಲು ಯತ್ನಿಸಿದ ಸಿಬ್ಬಂದಿ ಪೈಕಿ 11 ಮಂದಿಗೆ ಗಾಯಗಳಾಗಿವೆ.

ಘಟನೆ ಬಗ್ಗೆ ಎಎನ್​ಐ ಸುದ್ದಿಸಂಸ್ಥೆ ವರದಿ

ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕೂಡ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಸಿಯುನಲ್ಲಿದ್ದ ಇತರ ರೋಗಿಗಳನ್ನು ಆಸ್ಪತ್ರೆಯ ಬೇರೆ ವಾರ್ಡ್​ಗಳಿಗೆ ಶಿಫ್ಟ್ ಮಾಡಲಾಗಿದೆ. ಒಟ್ಟು 23 ರೋಗಿಗಳನ್ನು ಬೇರೆಡೆ ವರ್ಗಾಯಿಸಲಾಗಿದೆ. ಹೀಗೆ ಬೇರೆಡೆ ಸಾಗಿಸುವ ಹಂತದಲ್ಲಿ 7 ಮಂದಿ ರೋಗಿಗಳು ಅಸುನೀಗಿದ್ದಾರೆ. ಮೂರು ರೋಗಿಗಳು ನಂತರ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಏಪ್ರಿಲ್ 1ರಿಂದ ಫಾಸ್​ಟ್ಯಾಗ್ ವಾರ್ಷಿಕ ಪಾಸ್ ಶುಲ್ಕದಲ್ಲಿ ಏರಿಕೆ; ಇಲ್ಲಿದೆ ಹೊಸ ದರ

ಮೃತರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ಘೋಷಣೆ

ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಆರೋಗ್ಯ ಸಚಿವ ಮುಕೇಶ್ ಮಹಾಲಿಂಗ್ ಅವರು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಮೃತಪಟ್ಟಿರುವ ರೋಗಿಗಳ ಸಂಬಂಧಿಕರಿಗೆ 25 ಲಕ್ಷ ರೂ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ. ಹಾಗೆಯೇ, ಗಾಯಗೊಂಡಿರುವ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಬಾಲಿವುಡ್‌ನ ಪ್ರಸಿದ್ಧ ನಿರ್ದೇಶಕ ಕರಣ್ ಜೋಹರ್ ಪರಿಚಯಿಸಿದ ಆಲಿಯಾ ಭಟ್ ಇಂದು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಕರಣ್ ಜೋಹರ್ ನಿರ್ದೇಶನದ ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಆಲಿಯಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು, ನಂತರ ಆಲಿಯಾ ಹಿಂತಿರುಗಿ ನೋಡಿಲ್ಲ. ಇಂದು ಆಲಿಯಾ ಬಾಲಿವುಡ್‌ನ ಪ್ರಸಿದ್ಧ ಮತ್ತು ಜನಪ್ರಿಯ ನಟಿಯರಲ್ಲಿ ಒಬ್ಬರು. ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ನಂತರ, ನಟಿ ‘2 ಸ್ಟೇಟ್ಸ್’, ‘ಹೈವೇ’, ‘ಡಿಯರ್ ಜಿಂದಗಿ’, ‘ರಾಝಿ’, ‘ಗಲ್ಲಿ ಬಾಯ್’ ಮತ್ತು ‘ಗಂಗೂಬಾಯಿ ಕಥಿಯಾವಾಡಿ’ ಮುಂತಾದ ಚಿತ್ರಗಳಲ್ಲಿ ನಟಿಸಿ ಫೇಮಸ್ ಆದರು. ಅವರ ಆಸ್ತಿ ಬಗ್ಗೆ ಇಲ್ಲಿದೆ ವಿವರ.

ಆಲಿಯಾ ಬಹಳ ಕಡಿಮೆ ಸಮಯದಲ್ಲಿ ಉದ್ಯಮದಲ್ಲಿ ಹೆಸರು ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಲಿಯಾ ಅವರ ಅಭಿಮಾನಿಗಳ ಸಂಖ್ಯೆಯೂ ಕಡಿಮೆಯಿಲ್ಲ. ಆಲಿಯಾ ಅವರ ಸಂಪತ್ತಿನ ಬಗ್ಗೆ ಹೇಳುವುದಾದರೆ, ನಟಿ 550 ಕೋಟಿ ರೂ ಆಸ್ತಿ ಒಡತಿ. ಆಲಿಯಾ ಚಲನಚಿತ್ರಗಳಿಂದ ಮಾತ್ರವಲ್ಲದೆ ಇತರ ಮಾರ್ಗಗಳಿಂದಲೂ ಕೋಟಿ ಗಳಿಸುತ್ತಾರೆ.

ಆಲಿಯಾ ಒಂದು ಚಿತ್ರಕ್ಕೆ 10 ರಿಂದ 20 ಕೋಟಿ ರೂಪಾಯಿಗಳಷ್ಟು ಸಂಭಾವನೆ ಪಡೆಯುತ್ತಾರೆ… ಆರ್‌ಆರ್‌ಆರ್ ಚಿತ್ರದಲ್ಲಿ ಕೇವಲ 20 ನಿಮಿಷಗಳ ದೃಶ್ಯಕ್ಕೆ ಆಲಿಯಾ 9 ಕೋಟಿ ರೂಪಾಯಿಗಳನ್ನು ಸಂಭಾವನೆ ಪಡೆದಿದ್ದರು… ಇದಲ್ಲದೆ, ಆಲಿಯಾ ವೆಬ್ ಸರಣಿಗಳಲ್ಲಿ ನಟಿಸಿ ಭಾರಿ ಮೊತ್ತದ ಆದಾಯವನ್ನು ಗಳಿಸುತ್ತಾರೆ. ವಿವಿಧ ಜಾಹೀರಾತುಗಳ ಮೂಲಕವೂ ಆಲಿಯಾ ದೊಡ್ಡ ಮೊತ್ತವನ್ನು ಗಳಿಸುತ್ತಾರೆ.

ಆಲಿಯಾ ತನ್ನದೇ ಆದ ಬಟ್ಟೆ ಬ್ರಾಂಡ್ ಅನ್ನು ಸಹ ಹೊಂದಿದ್ದಾರೆ. ‘ಎಡ್-ಎ-ಮಮ್ಮಾ’ ಎಂಬುದು ಆಲಿಯಾಳ ಬ್ರ್ಯಾಂಡ್‌ನ ಹೆಸರು. ಆಲಿಯಾಳ ಬಟ್ಟೆ ಬ್ರಾಂಡ್ 2 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಮಾತ್ರ. ಸಾಕಾಷ್ಟು ಆದಾಯವನ್ನು ಇದು ಗಳಿಸುತ್ತದೆ. ಆಲಿಯಾ ಯಾವಾಗಲೂ ತನ್ನ ಬ್ರ್ಯಾಂಡ್ ಬಗ್ಗೆ ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ: ಆಲಿಯಾ ಭಟ್ ಮೇಲೆ ನಂಬಿಕೆ 215 ಕೋಟಿ ಆಫರ್ ತಿರಸ್ಕರಿಸಿದ ವೈಆರ್​ಎಫ್

ಆಲಿಯಾ ಅವರ ಆಸ್ತಿಗಳ ಬಗ್ಗೆ ಹೇಳುವುದಾದರೆ, ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಸಹ, ಆಲಿಯಾ ಅವರಿಗೆ ಕೋಟ್ಯಂತರ ಮೌಲ್ಯದ ಆಸ್ತಿಗಳಿವೆ. ಆಲಿಯಾ ಲಂಡನ್‌ನ ಕೋವೆಂಟ್ ಗಾರ್ಡನ್ ಪ್ರದೇಶದಲ್ಲಿ ಒಂದು ಮನೆಯನ್ನು ಹೊಂದಿದ್ದಾರೆ ಮತ್ತು ಆ ಮನೆಯ ಬೆಲೆ 25 ಕೋಟಿ ರೂ. ಇದಲ್ಲದೆ, ನಟಿ ಮುಂಬೈನ ಬಾಂದ್ರಾದಲ್ಲಿ ಒಂದು ಬಂಗಲೆಯನ್ನು ಹೊಂದಿದ್ದಾರೆ. ಬಂಗಲೆಯ ಬೆಲೆ 32 ಕೋಟಿ ರೂ. ನಟಿ ಬಳಿ ಅನೇಕ ಐಷಾರಾಮಿ ಕಾರುಗಳಿವೆ. ಅವುಗಳಲ್ಲಿ ಆಡಿ Q7, BMW 7 ಸರಣಿ, ರೇಂಜ್ ರೋವರ್ ವೋಗ್, ಮರ್ಸಿಡಿಸ್-ಬೆನ್ಜ್ GLS, ಆಡಿ A6 ಸೇರಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬಿಸಿಸಿಐ ‘ನಮನ್’ ಪ್ರಶಸ್ತಿ ಪಡೆದ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ

ದೆಹಲಿಯಲ್ಲಿ ಭಾನುವಾರ (ಮಾರ್ಚ್ 15) ನಡೆದ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ವಾರ್ಷಿಕ ನಮನ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಸಮಾರಂಭದಲ್ಲಿ ದಿಗ್ಗಜ ರಾಹುಲ್ ದ್ರಾವಿಡ್​ ಅವರಿಗೆ ಪ್ರತಿಷ್ಠಿತ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇನ್ನು ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್, ಟೀಮ್ ಇಂಡಿಯಾ ಬ್ಯಾಟರ್​ ಸ್ಮೃತಿ ಮಂಧಾನ ಸೇರಿದಂತೆ ಹಲವರಿಗೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಕೆಳಗಿನಂತಿದೆ…

2025ರ ನಮನ್ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ:

  1. 2024-25ರ ಅತ್ಯುತ್ತಮ ಮಹಿಳಾ ಆಟಗಾರ್ತಿ (ಜೂನಿಯರ್ – ದೇಶೀಯ) – ಇರಾ ಜಾಧವ್
  2. 2024-25ರ ಅತ್ಯುತ್ತಮ ಮಹಿಳಾ ಕ್ರಿಕೆಟಿಗ (ಸೀನಿಯರ್ – ದೇಶೀಯ ವುಮೆನ್ಸ್ ಒನ್ ಡೇ) – ಶಫಾಲಿ ವರ್ಮಾ
  3. 2024-25ರ ವಿಜಯ್ ಮರ್ಚೆಂಟ್ ಟ್ರೋಫಿಯ ಅತ್ಯುತ್ತಮ ಬೌಲರ್ – (ಎಲೈಟ್ ಗ್ರೂಪ್) – ಯಶ್ವರ್ಧನ್ ಸಿಂಗ್ ಚೌಹಾಣ್
  4. 2024-25ರ ವಿಜಯ್ ಮರ್ಚೆಂಟ್ ಟ್ರೋಫಿಯ ಅತ್ಯುತ್ತಮ ಬೌಲರ್ – (ಪ್ಲೇಟ್ ಗ್ರೂಪ್) – ಕಿಶನ್ ಸರ್ಕಾರ್
  5. 2024-25ರ ವಿಜಯ್ ಮರ್ಚೆಂಟ್ ಟ್ರೋಫಿಯ ಅತ್ಯುತ್ತಮ ಬ್ಯಾಟರ್ – (ಎಲೈಟ್ ಗ್ರೂಪ್) – ಶಾಂತನು ಸಿಂಗ್
  6. 2024-25ರ ವಿಜಯ್ ಮರ್ಚೆಂಟ್ ಟ್ರೋಫಿಯ ಅತ್ಯುತ್ತಮ ಬ್ಯಾಟರ್ – (ಪ್ಲೇಟ್ ಗ್ರೂಪ್) – ಪ್ರೀತಮ್ ರಾಜ್
  7. 2024-25 ರ ಕೂಚ್ ಬೆಹಾರ್ ಟ್ರೋಫಿಯ ಅತ್ಯುತ್ತಮ ಬೌಲರ್​ – (ಎಲೈಟ್ ಗ್ರೂಪ್) – ಹೇಮಚುದೇಷನ್ ಜೆ.
  8. 2024-25 ರ ಕೂಚ್ ಬೆಹಾರ್ ಟ್ರೋಫಿಯ ಅತ್ಯುತ್ತಮ ಬೌಲರ್ – (ಪ್ಲೇಟ್ ಗ್ರೂಪ್) – ಅರ್ಕಾಜಿತ್ ರಾಯ್
  9. 2024-25 ರ ಕೂಚ್ ಬೆಹಾರ್ ಟ್ರೋಫಿಯ ಅತ್ಯುತ್ತಮ ಬ್ಯಾಟರ್ – (ಎಲೈಟ್ ಗ್ರೂಪ್) – ನಿತ್ಯ ಜೆ ಪಾಂಡ್ಯ
  10. 2024-25 ರ ಕೂಚ್ ಬೆಹಾರ್ ಟ್ರೋಫಿಯ ಅತ್ಯುತ್ತಮ ಬ್ಯಾಟರ್ – (ಪ್ಲೇಟ್ ಗ್ರೂಪ್) – ರಾಗವನ್ ರಾಮಮೂರ್ತಿ
  11. 2024-25ರಲ್ಲಿ ಕರ್ನಲ್ ಸಿಕೆ ನಾಯ್ಡು ಟ್ರೋಫಿಯ ಅತ್ಯುತ್ತಮ ಬೌಲರ್ – (ಎಲೈಟ್ ಗ್ರೂಪ್) – ವಿಕಿ ಓಸ್ಟ್ವಾಲ್
  12. 2024-25ರ ಕರ್ನಲ್ ಸಿಕೆ ನಾಯ್ಡು ಟ್ರೋಫಿಯ ಅತ್ಯುತ್ತಮ ಬೌಲರ್ – (ಪ್ಲೇಟ್ ಗ್ರೂಪ್) – ದೀಪ್ ಜ್ಯೋತಿ ಸೈಕಿಯಾ
  13. 2024-25ರ ಕರ್ನಲ್ ಸಿಕೆ ನಾಯ್ಡು ಟ್ರೋಫಿಯ ಅತ್ಯುತ್ತಮ ಬ್ಯಾಟರ್ – (ಎಲೈಟ್ ಗ್ರೂಪ್) – ಮ್ಯಾಕ್ನೀಲ್ ಎಚ್ಎನ್
  14. 2024-25ರಲ್ಲಿ ಕರ್ನಲ್ ಸಿಕೆ ನಾಯ್ಡು ಟ್ರೋಫಿಯ ಅತ್ಯುತ್ತಮ ಬ್ಯಾಟರ್ – (ಪ್ಲೇಟ್ ಗ್ರೂಪ್) – ಆರ್ ಜಶ್ವಂತ್ ಶ್ರೀರಾಮ್
  15. 2024-25ರ ರಣಜಿ ಟ್ರೋಫಿಯ ಅತ್ಯುತ್ತಮ ಬೌಲರ್ – (ಎಲೈಟ್ ಗ್ರೂಪ್) – ಹರ್ಷ್ ದುಬೆ
  16. 2024-25ರ ರಣಜಿ ಟ್ರೋಫಿಯ ಅತ್ಯುತ್ತಮ ಬೌಲರ್ – (ಪ್ಲೇಟ್ ಗ್ರೂಪ್) – ಜಗದೀಶ್ ಸುಚಿತ್
  17. 2024-25ರ ರಣಜಿ ಟ್ರೋಫಿಯ ಅತ್ಯುತ್ತಮ ಬ್ಯಾಟರ್ – (ಎಲೈಟ್ ಗ್ರೂಪ್) – ಯಶ್ ರಾಥೋಡ್
  18. 2024-25ರ ರಣಜಿ ಟ್ರೋಫಿಯ ಅತ್ಯುತ್ತಮ ಬ್ಯಾಟರ್ – (ಪ್ಲೇಟ್ ಗ್ರೂಪ್) – ಸ್ನೇಹಲ್ ಕೌತಂಕರ್
  19. 2024-25ರ ದೇಶೀಯ ಸೀಮಿತ ಓವರ್‌ಗಳ ಟೂರ್ನಿಯ ಅತ್ಯುತ್ತಮ ಆಲ್-ರೌಂಡರ್ – ಆಯುಷ್ ಮ್ಹಾತ್ರೆ
  20. 2024-25ರ ರಣಜಿ ಟ್ರೋಫಿಯ ಅತ್ಯುತ್ತಮ ಆಲ್-ರೌಂಡರ್ – ಹರ್ಷ್ ದುಬೆ
  21. 2024-25ರ ಬಿಸಿಸಿಐ ದೇಶೀಯ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ – ಮುಂಬೈ ಕ್ರಿಕೆಟ್ ಅಸೋಸಿಯೇಷನ್
  22. 2024-25ರ ದೇಶೀಯ ಕ್ರಿಕೆಟ್‌ನ ಅತ್ಯುತ್ತಮ ಅಂಪೈರ್ – ಉಲ್ಹಾಸ್ ಗಾಂಧೆ
  23. 2024-25ರ ಮಹಿಳಾ ಏಕದಿನ ಕ್ರಿಕೆಟ್​ನ ಅತ್ಯುತ್ತಮ ಬೌಲರ್ – ದೀಪ್ತಿ ಶರ್ಮಾ
  24. 2024-25ರ ಮಹಿಳಾ ಏಕದಿನ ಕ್ರಿಕೆಟ್​ನ ಅತ್ಯುತ್ತಮ ಬ್ಯಾಟರ್- ಸ್ಮೃತಿ ಮಂಧಾನ
  25. 2024-25 ರ ಅತ್ಯುತ್ತಮ ಪಾದಾರ್ಪಣೆ  (ಮಹಿಳಾ ತಂಡ) – ಎನ್. ಶ್ರೀ ಚರಣಿ
  26. 2024-25 ರ ಅತ್ಯುತ್ತಮ ಪಾದಾರ್ಪಣೆ – (ಪುರುಷರ ತಂಡ) – ಹರ್ಷಿತ್ ರಾಣಾ
  27. 2024-25ರ ಅತ್ಯುತ್ತಮ ಅಂತರರಾಷ್ಟ್ರೀಯ ಆಟಗಾರ್ತಿ –  – ಸ್ಮೃತಿ ಮಂಧಾನ
  28. 2024-25ರ ಅತ್ಯುತ್ತಮ ಅಂತಾರಾಷ್ಟ್ರೀಯ ಆಟಗಾರ – ಶುಭ್​ಮನ್ ಗಿಲ್
  29. ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ – ರಾಹುಲ್ ದ್ರಾವಿಡ್, ರೋಜರ್ ಬಿನ್ನಿ
  30. ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ – ಮಿಥಾಲಿ ರಾಜ್

 

 

Source link

ಕರ್ನಾಟಕ ಹವಾಮಾನ ವರದಿ: ಬಿಸಿಲ ಬೇಗೆ ಆರಿಸಲು ರಾಜ್ಯದಲ್ಲಿ ತುಂತುರು ಮಳೆಯ ಸಾಧ್ಯತೆ!

ಬೆಂಗಳೂರು, ಮಾರ್ಚ್​ 16: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿತ್ತು. ಆದರೆ ಇಂದು ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರೆಯಲಿದ್ದು, ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ತುಂತುರು ಮಳೆ?

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಅದರೊಂದಿಗೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಎಲ್ಲೆಲ್ಲಿ ಒಣ ಹವೆ?

ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಾಮರಾಜನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾರ್ಚ್​ ಎರಡನೇ ವಾರದಲ್ಲಿ ತಾಪಮಾನ ಹೆಚ್ಚಳ

ನಗರದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು.

ಹೆಚ್ಚಾಗಿ ನೀರು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸಿ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ನಟ ಪುನೀತ್ ರಾಜ್ಕುಮಾರ್ ಅವರಿಗೆ (Puneeth Rajkumar) ಮಾರ್ಚ್ 17 ಜನ್ಮದಿನ. ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಅವರನ್ನು ಕಳೆದುಕೊಂಡು ಕೆಲವು ವರ್ಷಗಳು ಕಳೆದಿವೆ. ಆದಾಗ್ಯೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗಾಗ ಆಗುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ಅವರ ವಹಲವು ವಿಷಯಗಳು ಚರ್ಚೆ ಆಗುತ್ತಿವೆ. ಅದೇ ರೀತಿ ಅವರು ಅಕ್ರಮವಾಗಿ ಗ್ರ್ಯಾನೇಟ್ ಬಿಸ್ನೆಸ್ ಮಾಡುತ್ತಿದ್ದರು ಎಂಬ ಆರೋಪ ಇತ್ತು. ಈ ವಿಷಯವಾಗಿ ಅವರು ಮಾತನಾಡಿದ್ದರು. ಈ ಕಾರಣಕ್ಕೆ ಅವರ ತಂದೆ ರಾಜ್ಕುಮಾರ್ ಅವರನ್ನು ಬಂಧಿಸಲಾಗಿತ್ತು ಎನ್ನುವ ಆರೋಪ ಇತ್ತು. ಇದಕ್ಕೆ ಪುನೀತ್ ಅವರು ಸ್ಪಷ್ಟನೆ ಕೊಟ್ಟಿದ್ದರು.

ಪುನೀತ್ ರಾಜ್ಕುಮಾರ್ ಅವರು ಕೇವಲ ನಟಾಗಿರಲಿಲ್ಲ. ಅವರಿಗೆ ನಟನೆಗಿಂತ ಹೆಚ್ಚು ಉದ್ಯಮದ ಕಡೆಗಳಲ್ಲಿ ಆಸಕ್ತಿ ಇತ್ತು. ಈ ಕಾರಣದಿಂದ ಉದ್ಯಮದ ಬಗ್ಗೆ ಹೆಚ್ಚು ಗಮನ ಹರಿಸಿದ್ದರು. ಅವರ‘ಪಿಆರ್ಕೆ’ ನಿರ್ಮಾಣ ಸಂಸ್ಥೆ ಈಗಲೂ ಕಾರ್ಯನಿರ್ವಹಿಸುತ್ತಿದೆ. ಅವರ ಬಗ್ಗೆ ಕೇಳಿಬಂದ ಗಂಭೀರ ಆರೋಪದ ಬಗ್ಗೆ ಪುನೀತ್ ಮಾತನಾಡಿದ್ದರು.

‘ನಮ್ಮ ತಂದೆಯವರು ವೀರಪ್ಪನ್ ಅವರಿಂದ ಕಿಡ್ನ್ಯಾಪ್ ಆದಾಗ ಅನೇಕ ಚರ್ಚೆಗಳು ನಡೆದವು. ನಾನು ಗ್ರಾನೈಟ್ ಬಿಸ್ನೆಸ್ ಮಾಡುತ್ತಿದ್ದೆ. ಅದಕ್ಕಾಗಿ ನಮ್ಮ ತಂದೆಯನ್ನು ವೀರಪ್ಪನ್ ಹಿಡಿದುಕೊಂಡು ಹೋದರು ಎಂಬ ಸುದ್ದಿ ಹರಿದಾಡಿತ್ತು. ಈ ರೀತಿಯ ಹಲವಾರು ಸುದ್ದಿ ಬಂತು’ ಎಂದು ಪುನೀತ್ ರಾಜ್ಕುಮಾರ್ ಹೇಳಿದ್ದರು.

‘ನಾನು ಗ್ರಾನೈಟ್ ಬಿಸ್ನೆಸ್ ಮಾಡಲು ಮುಂದಾಗಿದ್ದೆ ಎಂಬುದು ಅನೇಕರಿಗೆ ತಿಳಿದೇ ಇಲ್ಲ. ಆಗ ಇದು ಅಕ್ರಮ ಗ್ರಾನೈಟ್ ಬಿಸ್ನೆಸ್ ಎಂದು ನನ್ನ ಫೋಟೋ ಪೇಪರ್ನಲ್ಲಿ ಬಂದಿತ್ತು. ಈ ರೀತಿಯಲ್ಲ ಏಕೆ ಹಾಕುತ್ತಾರೆ ಎಂಬುದು ನನ್ನ ಪ್ರಶ್ನೆ ಆಗಿತ್ತು. ನನ್ನ ಬಿಸ್ನೆಸ್ ಅದು. ಅದು ಅಕ್ರಮವೇ ಆಗಿದ್ದರೆ ಕಾನೂನು ನೋಡಿಕೊಳ್ಳುತ್ತಿತ್ತು. ಹೊರಗಡೆ ಇದ್ದವರು ಕಮೆಂಟ್ ಮಾಡೋದೇಕೆ ಎಂದು ನನ್ನ ಮನಸ್ಸಿಗೆ ಅನಿಸಿತ್ತು’ ಎಂದಿದ್ದರು ಅವರು.

‘ಯಾರೋ ಹೀಗೆ ಹೇಳಿದ್ರೂ ತೊಂದರೆ ಇಲ್ಲ. ಆದರೆ, ತಂದೆ ಅಪಹರಣ ಆದಾಗ ಅನೇಕರು ಇದನ್ನು ಲಿಂಕ್ ಮಾಡಿದಾಗ ಸಾಕಷ್ಟು ಬೇಸರ ಆಯಿತು. ನಾನು ಬಿಸ್ನೆಸ್ ಮಾಡ್ತಾ ಇದ್ದಿದ್ದು ಕನಕಪುರದಲ್ಲಿ. ನನಗೇನು ಬುದ್ಧಿ ಇಲ್ವ? ಕುಟುಂಬದವರಿಗೆ ಸತ್ಯ ಏನು ಎಂಬುದು ಗೊತ್ತಿತ್ತು’ ಎಂದಿದ್ದರು ಪುನೀತ್ ರಾಜ್ಕುಮಾರ್. ಈ ರೀತಿಯ ಸುದ್ದಿಯಿಂದ ರಾಜ್ಕುಮಾರ್ ಬೇಸರಗೊಂಡಿದ್ದರು. ಪುನೀತ್ಗೆ ಇದೆಲ್ಲ ನಿಲ್ಲಿಸುವಂತೆ ಕೋರಿಕೊಂಡಿದ್ದರು.

ಇದನ್ನೂ ಓದಿ: ‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ

ಪುನೀತ್ ರಾಜ್ಕುಮಾರ್ ಅವರು 2021ರ ಅಕ್ಟೋಬರ್ 29ರಂದು ಅವರು ನಿಧನ ಹೊಂದಿದರು. ಅವರಿಗೆ 46 ವರ್ಷ ವಯಸ್ಸು ಆಗಿತ್ತು. ಹೃದಯಾಘಾತದಿಂದ ಅಪ್ಪು ನಿಧನ ಹೊಂದಿದರು. ಅವರು ಇಷ್ಟು ಬೇಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರಿಲ್ಲ ಎನ್ನುವ ನೋವು ಎಲ್ಲರನ್ನೂ ಈಗಲೂ ಕಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂಬ ಕಾರಣಕ್ಕೆ ಬಾರದ ಜನ

ಚಿಕ್ಕಬಳ್ಳಾಪುರ, ಮಾರ್ಚ್ 16: ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದ ರಾಜ್ಯದ್ಯಂತ ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಇನ್ನೂ ಕೆಲವೆಡೆ ಸೌದೆ ಒಲೆಗಳನ್ನೇ ನಂಬಿಕೊಂಡು ಹೋಟೆಲ್ ನಡೆಸುವ ಸ್ಥಿತಿ ಇದೆ. ಇದರ ಪರಿಣಾಮ ಪ್ರವಾಸೋದ್ಯಮದ ಮೇಲೂ ತಟ್ಟಿದೆ. ವಾರಾಂತ್ಯಗಳಲ್ಲಿ ಜನರಿಂದ ಕಿಕ್ಕಿರಿದು ತುಂಬಿರುತ್ತಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ದ ಪ್ರವಾಸಿತಾಣ ನಂದಿಗಿರಿಧಾಮ ಭಾನುವಾರ ಜನ ಇಲ್ಲದೆ ಬಿಕೊ ಎನ್ನುತ್ತಿತ್ತು. ಗಿರಿಧಾಮದಕ್ಕೆ ಹೊದರೆ ಅಲ್ಲಿರುವ ಹೋಟೆಲ್​​ಗಳಲ್ಲಿ ತಿಂಡಿ-ಊಟ ಸಿಗುತ್ತದೆಯೋ ಇಲ್ಲವೋ ಎಂಬ ಅನುಮಾನದಿಂದ ಪ್ರವಾಸಿಗರು ಅತ್ತ ಮುಖ ಮಾಡಿಲ್ಲ. ಮತ್ತೊಂದೆಡೆ ನಂದಿಗಿರಿಧಾಮದಲ್ಲಿರುವ ಪ್ರವಾಸೋದ್ಯಮ ಇಲಾಖೆಯ ಹೋಟೆಲ್​ಗಳಲ್ಲಿ ಕಮರ್ಷಿಯಲ್ ಗ್ಯಾಸ್ ಗಳಿಗೆ ಕೊರತೆ ಇಲ್ಲ. ಅವು ಎಂದಿನಂತೆಯೇ ಕಾರ್ಯನಿರ್ವಹಿಸುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version