ಮೈಸೂರು ರೇಷ್ಮೆ ಸೀರೆ ಇನ್ನು ಆನ್ಲೈನಲ್ಲಿ ಸಿಗೋದು ಅನುಮಾನ! ಕಾರಣ ಇಲ್ಲಿದೆ
ಬೆಂಗಳೂರು, ಮಾರ್ಚ್ 10: ಸರ್ಕಾರಿ ಸ್ವಾಮ್ಯದ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (KSIC) ತಯಾರಿಸುವ ಪ್ರಸಿದ್ಧ ಮೈಸೂರು ಸಿಲ್ಕ್ ಸೀರೆಗಳಿಗೆ (Mysore Silk Sarees) ಇತ್ತೀಚಿನ ದಿನಗಳಲ್ಲಿ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದಾಗಿ ಪೂರೈಕೆಯೇ ಸವಾಲಾಗಿ ಪರಿಣಮಿಸಿದ್ದು, ಸೀರೆಗಳ ಆನ್ಲೈನ್ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿಗಮ ಚಿಂತನೆ ನಡೆಸಿದೆ. ಕೆಎಸ್‌ಐಸಿ ಸೀರೆ ಮಳಿಗೆಗಳ ಹೊರಗೆ ಜನರು ಉದ್ದನೆಯ ಸಾಲಿನಲ್ಲಿ ನಿಂತಿದ್ದ ದೃಶ್ಯಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಕುರಿತು ರೇಷ್ಮೆ ಸಚಿವ ಕೆ. ವೆಂಕಟೇಶ್…