KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಪ್ರಮುಖ ಹುದ್ದೆಗಳ ಭರ್ತಿಗೆ ಸಿದ್ಧವಾಗಿದೆ. ಈ ನೇಮಕಾತಿ ಅಡಿಯಲ್ಲಿ ‘ಹಣಕಾಸು ಅಧಿಕಾರಿ’ (Finance Officer) ಮತ್ತು ‘ಜಿಲ್ಲಾ ಪ್ರಮುಖ’ (District Lead) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಅಥವಾ ವಿಜಯನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ವೇತನ ಶ್ರೇಣಿಯು ಸಂಸ್ಥೆಯ ಮಾನದಂಡಗಳ ಪ್ರಕಾರ ಅತ್ಯುತ್ತಮವಾಗಿದ್ದು, ಅಭ್ಯರ್ಥಿಯ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಆಸಕ್ತರು ಮಾರ್ಚ್ 22 ರೊಳಗೆ ಆನ್‌ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅತ್ಯಂತ ಸರಳವಾಗಿದ್ದು, ಅಭ್ಯರ್ಥಿಗಳು ಕೆಎಚ್‌ಪಿಟಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು. ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಐಡಿ ಪ್ರೂಫ್, ಶೈಕ್ಷಣಿಕ ದಾಖಲೆಗಳು ಮತ್ತು ನವೀಕರಿಸಿದ ರೆಸ್ಯೂಮ್ ಅನ್ನು ಸಿದ್ಧವಾಗಿಟ್ಟುಕೊಳ್ಳುವುದು ಅವಶ್ಯಕ. ಆನ್‌ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ, ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿದ ನಂತರ ಅರ್ಜಿ ಶುಲ್ಕವಿದ್ದರೆ ಪಾವತಿಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಕೊನೆಯಲ್ಲಿ ಅರ್ಜಿ ಸಲ್ಲಿಕೆಯಾದ ನಂತರ ಸಿಗುವ ಅರ್ಜಿ ಸಂಖ್ಯೆಯನ್ನು ಮುಂದಿನ ಉಲ್ಲೇಖಕ್ಕಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಮರೆಯಬೇಡಿ.

ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್​ ಮಾಡಿ: KHPT-Recruitment-2026-Apply-for-Finance-Officer-Posts-Notification

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

’ಜನ ನಾಗಯನ್‘ ಸಿನಿಮಾ: ಯಶಸ್ವಿಯಾಯ್ತು ವಿಜಯ್ ರಾಜಕೀಯ ವಿರೋಧಿಗಳ ಪ್ಲ್ಯಾನ್

ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯಕ್ಕೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ವಿಳಂಬ ನೀತಿ ಅನುಸರಿಸಿತು. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್, ನ್ಯಾಯಾಲಯದ ಮೆಟ್ಟಿಲೇರಿತು. ಆದರೆ ಅಲ್ಲಿ ವಿಚಾರಣೆ ತಡವಾಗಿ ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬವಾಯ್ತು. ಆದರೆ ನಿರ್ಮಾಪಕರು ಕೇಸು ಹಿಂಪಡೆದು, ಸಿಬಿಎಫ್​​ಸಿಯಿಂದಲೇ ಪ್ರಮಾಣ ಪತ್ರ ಪಡೆಯಲು ಮುಂದಾದರು. ಆದರೆ ಮತ್ತೆ ಉದ್ದೇಶಪೂರ್ವಕ (?) ವಿಳಂಬ ಮಾಡಲಾಯ್ತು. ಇದೀಗ ಮತ್ತೊಮ್ಮೆ ಸಿನಿಮಾದ ಬಿಡುಗಡೆ ತಡವಾಗುತ್ತಿದೆ. ಆ ಮೂಲಕ ವಿಜಯ್ ಅವರ ರಾಜಕೀಯ ವಿರೋಧಿಗಳ ಕೈ ಮೇಲಾಗಿದೆ. ಅವರ ಉದ್ದೇಶ ಈಡೇರಿದೆ.

ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ಇಂದು (ಮಾರ್ಚ್ 15) ಘೋಷಣೆ ಆಗಿದ್ದು, ‘ಜನ ನಾಯಗನ್’ ಸಿನಿಮಾದ ನಾಯಕ ದಳಪತಿ ವಿಜಯ್ ಸಹ ಚುನಾವಣೆಗೆ ಸ್ಪರ್ಧಿಸಲಿದ್ದು, ಇಂದಿನಿಂದಲೇ ರಾಜ್ಯದಾದ್ಯಂತ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸಿನಿಮಾದ ಬಿಡುಗಡೆ ಬಹುತೇಕ ಅಸಾಧ್ಯವಾಗಿದೆ. ನೀತಿ ಸಂಹಿತೆ ಪ್ರಕಾರ, ಚುನಾವಣಾ ಪಕ್ಷದ ಪರವಾಗಿ ಪ್ರಚಾರ ಮಾಡುವ, ನಿರ್ದಿಷ್ಟ ಪಕ್ಷಕ್ಕೆ ಮತ ಹಾಕುವಂತೆ ಮತದಾರರ ಮೇಲೆ ಪ್ರಭಾವ ಬೀರುವ ಇತರೆ ರಾಜಕೀಯ ಪಕ್ಷಗಳ ಟೀಕೆ ಮಾಡುವಂಥಹಾ ಸಿನಿಮಾಗಳನ್ನು ಪ್ರದರ್ಶಿಸುವಂತಿಲ್ಲ. ಹಾಗಾಗಿ ‘ಜನ ನಾಯಗನ್’ ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬ ಆಗಲಿದೆ.

‘ಜನ ನಾಯಗನ್’ ಸಿನಿಮಾವು ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆಗಿದ್ದರೂ ಸಹ ಸಿನಿಮಾನಲ್ಲಿ ಕೆಲವು ರಾಜಕೀಯ ಪಕ್ಷಗಳನ್ನು ಟೀಕೆ ಮಾಡುವ ದೃಶ್ಯಗಳಿವೆ. ಅಲ್ಲದೆ, ವಿಜಯ್ ಅವರ ಪಕ್ಷದ ಬಗ್ಗೆ ಪ್ರಚಾರಾತ್ಮಕ ಎನ್ನಬಹುದಾದ ಕೆಲವು ಸಂಭಾಷಣೆಗಳು ಇವೆಯಂತೆ. ಇದೇ ಕಾರಣಕ್ಕೆ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿತ್ತು. ಇದೀಗ ಮಾಡೆಲ್ ಕೋಡ್ ಆಫ್ ಕಂಡಕ್ಟ್ ಜಾರಿಗೆ ಬಂದಿರುವ ಕಾರಣ, ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಿದರೂ ಸಹ ಸಿನಿಮಾದ ಬಿಡುಗಡೆ ಅಸಾಧ್ಯ ಎಂಬಂತಾಗಿದೆ.

ಇದನ್ನೂ ಓದಿ:‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು

ತಮಿಳುನಾಡು ವಿಧಾನಸಭಾ ಚುನಾವಣೆ ಏಪ್ರಿಲ್ 23, 2026 ಕ್ಕೆ ನಿಗದಿ ಆಗಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ. ಈ ಅವಧಿಯಲ್ಲಿ ರಾಜ್ಯದಾದ್ಯಂತ ಮಾದರಿ ಚುನಾವಣಾ ನೀತಿ ಸಂಹಿತೆ (MCC) ಜಾರಿಯಲ್ಲಿರುವುದರಿಂದ, ಫಲಿತಾಂಶದ ಬಳಿಕ ಅಂದರೆ ಮೇ ತಿಂಗಳಲ್ಲಿಯೇ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಸಾಧ್ಯ ಎನ್ನಲಾಗುತ್ತಿದೆ.

ವಿಜಯ್ ಅವರ ರಾಜಕೀಯ ವಿರೋಧಿಗಳು ‘ಜನ ನಾಯಗನ್’ ಸಿನಿಮಾವನ್ನು ಚುನಾವಣೆಗೆ ಮುಂಚೆ ಬಿಡುಗಡೆ ಮಾಡದಂತೆ ತಡೆಹಿಡಿಯಲು ಯಶಸ್ವಿ ಆಗಿದ್ದು, ವಿಜಯ್​​ಗೆ ದೊಡ್ಡ ರಾಜಕೀಯ ಪೆಟ್ಟನ್ನೇ ನೀಡಿದ್ದಾರೆ. ಇನ್ನು ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದು, ರಾಜ್ಯದ ಎಲ್ಲ ಕ್ಷೇತ್ರಗಳಿಂದಲೂ ಅವರ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದಾರಂತೆ. ಸ್ವತಃ ವಿಜಯ್ ಅವರು ಎರಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Karnataka Weather: ರಾಜ್ಯದ ಹಲವೆಡೆ ತಂಪೆರೆದ ವರುಣ; ನಾಳೆಯೂ ಈ ಭಾಗಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಹುತೇಕ ಜಿಲ್ಲೆಗಳ ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು ಅಕಾಲಿಕವಾಗಿ ಸುರಿದ ಮಳೆ ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ ನಡೆದಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಸದಾಶಿವ ನಗರ, ನೆಹರು ನಗರ, ಶಾಹು ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಕೊಡಗಿನ ಹಲವೆಡೆಯೂ ಧಾರಾಕಾರ ಮಳೆಯಾಗಿದ್ದು, ಸುಡು ಬಿಸಿಲಿನ ಸಂದರ್ಭ ಸುರಿದ ಮಳೆಕಾಫಿ ಬೆಳೆಗಾರರಲ್ಲಿ ಹರ್ಷ ತಂದಿದೆ.

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಮಳೆ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಗಾಳಿಯೊಂದಿಗೆ ಉತ್ತಮ ಮಳೆಯಾಗಿದ್ದು, ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆ ಕೂಡ ಸುರಿದಿದೆ. ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಮತ್ತು ಕಡಬಗೆರೆ ಭಾಗದಲ್ಲಿ ಭಾರೀ ಮಳೆಯಾಗಿದ್ದರೆ, ಮೂಡಿಗೆರೆ ಮತ್ತು NR ಪುರ ತಾಲೂಕಿನ ಹಲವೆಡೆ ಆಲಿಕಲ್ಲು ಮಳೆಯಾಗಿದೆ. ಕಣತಿ ಗ್ರಾಮದ ಬಳಿ ಮಳೆಗೆ ಮರ ಧರೆಗುರುಳಿದ ಹಿನ್ನೆಲೆ ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಭಾರಿ ಟ್ರಾಫಿಕ್​​ ಜಾಮ್​​ ಉಂಟಾಗಿದೆ.

ಇದನ್ನೂ ಓದಿ: ಕರ್ನಾಟಕ ಹವಾಮಾನ ವರದಿ; ಕೊಡಗು, ಹಾಸನದಲ್ಲಿ ಲಘು ಮಳೆಯ ಸಾಧ್ಯತೆ!

ಹೇಗಿರಲಿದೆ ನಾಳೆ ರಾಜ್ಯದ ಹವಾಮಾನ?

ರಾಜ್ಯದ 4-5 ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಳೆಯೂ ಗಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಅಂದಾಜಿಸಲಾಗಿದೆ. ಯಾದಗಿರಿ, ರಾಯಚೂರು, ಕಲಬುರಗಿ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚಿನ ಉಷ್ಣತೆ ಕಂಡುಬರಲಿದೆ. ಬೆಂಗಳೂರಿನ ತಾಪಮಾನ ಗರಿಷ್ಠ 33-34 ಡಿಗ್ರಿ ಸೆಲ್ಸಿಯಸ್​​ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್​​ ದಾಖಲಾಗಲಿದೆ. ಗಾಳಿಯ ವೇಗ ಗಂಟೆಗೆ 8-15 ಕಿಲೋ ಮೀಟರ್​​ ಇರಲಿದ್ದು, ಮಳೆಯ ಸಾಧ್ಯತೆ ತೀರಾ ಕಡಿಮೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಯಾದಗಿರಿ, ಮಾರ್ಚ್​ 15: ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ನಿನ್ನೆ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸದ್ಯ ವಡಗೇರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಡೆದದ್ದೇನು?

ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯವದರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ ಸಂಬಂಧ ಎಂದು ಆರೋಪಿಸಿ ತಮ್ಮದೇ ಸಮಾಜದ ಮುಖಂಡರಿಂದ ಇಡೀ ಕುಟುಂಬಸ್ಥರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಮೀನುಗಾರಿಕೆ ಜೊತೆಗೆ ಮಾರಾಟ ಮಾಡಲು ಮುಖಂಡರು ಅವಕಾಶ ನೀಡಿಲ್ಲ.

ಇದನ್ನೂ ಓದಿ: ಮದುವೆಯಾಗಿ ಒಂದುವರೆ ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ ಪೋಷಕರು

ಇದೆ ಕಾರಣಕ್ಕೆ ಕಮಲಮ್ಮ ನೊಂದುಕೊಂಡು, ಮಗಳ ಊರಾದ ಜೋಳದಡಗಿ ಗ್ರಾಮಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮುನ್ನ ಬ್ಯಾರೇಜ್ ಮೇಲೆ ಮಾಂಗಲ್ಯ ಸರ ತೆಗೆದಿಟ್ಟಿದ್ದಾರೆ. ಇಂದು ಮಧ್ಯಾಹ್ನ ಅಗ್ನಿ ಶಾಮಕ ದಳ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.

ಮದುವೆಗೆ ವಿರೋಧ: ಭದ್ರನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು 

ತುಂಗ ಭದ್ರನದಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಬಳಿ ಇರುವ ತುಂಗಭದ್ರ ಸೇತುವೆ ಬಳಿ ಇತ್ತೀಚೆಗೆ ನಡೆದಿದೆ. ಸ್ಥಳೀಯರಿಂದ ಮಾಹಿತಿ ಬೆನ್ನಲ್ಲೇ ಅಗ್ನಿ ಶಾಮಕ ದಳ ಸಿಬ್ಬಂದಿ ಪ್ರೇಮಿಗಳನ್ನ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಸಹೋದರರಿಂದಲೇ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು

ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳು. ಅಪ್ರಾಪ್ತ ಬಾಲಕಿ ಹಾಗೂ 19 ವರ್ಷದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಪ್ರೇಮಿಗಳು ಸೇತುವೆಯಿಂದ ನದಿಗೆ ಹಾರಿದ್ದಾರೆ. ನದಿಯಲ್ಲಿ ನೀರು ಕಡಿಮೆ ಇದ್ದ ಹಿನ್ನೆಲೆ ನಡುಗಡ್ದೆಯಲ್ಲಿ ಆಸರೆ ಪಡೆದಿದ್ದರು. ಯುವಕ ಅನ್ಯಧರ್ಮೀಯ ಹಿನ್ನೆಲೆ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಮನೆ ಬಿಟ್ಟು ಮೈಸೂರು, ಶಿವಮೊಗ್ಗ ಸುತ್ತಾಡಿ ಹೊನ್ನಾಳಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

BCCI Awards 2026; ಅತಿ ಹೆಚ್ಚು ಪ್ರಶಸ್ತಿ; ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂಧಾನ

Source link

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಿತ್ತು. ಇನ್ನು ಮಾರ್ಚ್ 16ರಂದು ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 24ರಂದು ನಾಮಪತ್ರ ಸಲ್ಲಿಸಲು ಮತ್ತು ಮಾರ್ಚ್ 26 ನಾಮಪತ್ರ ಹಿಂಪಡೆಯಲು ಕೊನೆ ದಿನ ಆಗಿರಲಿದೆ.

ಜೋರಾದ ಟಿಕೆಟ್​​ ಫೈಟ್​​

ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​​ ಹಂಚಿಕೆ ವಿಚಾರ ಬಿಜೆಪಿ ಮತ್ತು ಕಾಂಗ್ರೆಸ್​​ ಎರಡೂ ಪಕ್ಷಗಳಿಗೆ ಸವಾಲಿನ ಕೆಲಸವಾಗಿ ಮಾರ್ಪಟ್ಟಿದೆ. ಶಾಮನೂರ ಶಿವಶಂಕರಪ್ಪ ನಿಧನದಿಂದ ತೆರವಾದ ಕ್ಷೇತ್ರದಲ್ಲಿ ಗೆಲ್ಲುವ ಉತ್ಸಾಹದಲ್ಲಿದ್ದ ಬಿಜೆಪಿ ಸ್ಥಿತಿ ಮನೆಯೊಂದು ಮೂರು ಬಾಗಿಲಾಗಿದ್ದರೆ, ಇತ್ತ ಕಾಂಗ್ರೆಸ್​​ನಲ್ಲಿ ಟಿಕೆಟ್​​ಗಾಗಿ ಮುಸ್ಲಿಂ ಸಮುದಾಯ ಪಟ್ಟು ಹಿಡಿದಿದೆ. ಮತ್ತೊಂದೆಡೆ ತಮ್ಮ ಕುಟುಂಬಕ್ಕೇ ಮರಳಿ ಟಿಕೆಟ್​​ ಸಿಗಬೇಕೆಂವ ಆಗ್ರಹವನ್ನು ಶಾಮನೂರು ಕುಟುಂಬ ವ್ಯಕ್ತಪಡಿಸಿದ್ದರೆ, ಈ ನಡುವೆ ಅಖಾಡಕ್ಕೆ ಹೊಸ ಮುಖದ ಪ್ರವೇಶವೂ ಆಗಿದೆ. ಎಐಸಿಸಿ ಯುವ ಘಟಕದ ಕಾರ್ಯದರ್ಶಿ, ಜಿಲ್ಲೆಯ ಮುಸ್ಲಿಂ ಸಮಾಜದ ಪ್ರಭಾವಿ ಮುಖಂಡ ಸೈಯದ್ ಸೈಪುಲ್ಲಾ ಪುತ್ರ ಮಹಮ್ಮದ್ ಖಾಲೀದ್ ಕೂಡ ಟಿಕೆಟ್​​ ಆಕಾಂಕ್ಷಿಯಾಗಿದ್ದಾರೆ. ಬೃಹತ್ ಇಫ್ತಾರ್​​ ಕೂಟ ಆಯೋಜನೆ ಮಾಡಿ ಟಿಕೆಟ್​​​ಗೆ ಬೇಡಿಕೆ ಇಟ್ಟಿದ್ದಾರೆ. ಈ ಕಾರ್ಯಕ್ರಮಕ್ಕೆ ಮತ್ತೋರ್ವ ಆಕಾಂಕ್ಷಿ ಹಾಗೂ ಸಚಿವ ಎಸ್​​.ಎಸ್​​. ಮಲ್ಲಿಕಾರ್ಜುನ್​​ ಅವರ ಪುತ್ರ ಸಮರ್ಥ ಶಾಮನೂರು ಕೂಡ ಹಾಜರಾಗಿರೋದು ಭಾರಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: 5 ಕೋಟಿ ಆಫರ್​​ ನೀಡಿ ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ; ಡಿಕೆಶಿ ಸ್ಫೋಟಕ ಆರೋಪ

ಇನ್ನು ಮೊನ್ನೆ ಮೊನ್ನೆಯವರೆಗೂ ಜಿಲ್ಲೆಯಲ್ಲಿ ಕಿತ್ತಾಡುತ್ತಿದ್ದ ಬಿಜೆಪಿ ನಾಯಕರೀಗ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಪಕ್ಷ ಯಾರಿಗೇ ಮಣೆ ಹಾಕಿದರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬಿಜಿಪಿ ಟಿಕೆಟ್ ಆಕಾಂಕ್ಷಿಗಳಾದ ಬಿ.ಜಿ. ಅಜಯಕುಮಾರ, ಯಶವಂತರಾವ್ ಜಾಧವ್, ಶ್ರೀನಿವಾಸ ದಾಸಕರಿಯಪ್ಪ, ರಾಜನಹಳ್ಳಿ ಶಿವಕುಮಾರ ಹಾಗೂ ದೇವರಮನೆ ಶಿವಕುಮಾರ ಒಂದೇ ವೇದಿಕೆಗೆ ಬಂದು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮತ್ತು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಬಣಗಳ ಟಿಕೆಟ್ ಆಕಾಂಕ್ಷಿಗಳು ಬಹುದಿನಗಳ ಬಳಿಕ ಒಂದೇ ವೇದಿಕೆಗೆ ಬಂದಿದ್ದು, ಪಕ್ಷ ಹೊಸ ಮುಖದ ಹುಡುಕಾಟ ನಡೆಸುತ್ತಿರೋದೇ ಇದರ ಹಿಂದಿನ ಕಾರಣ ಎನ್ನಲಾಗ್ತಿದೆ. ಅತ್ತ ಬಾಗಲಕೋಟೆಯಲ್ಲಿಯೂ ಟಿಕೆಟ್​​ ಆಕಾಂಕ್ಷಿಗಳ ನಡುವಿನ ಸ್ಪರ್ಧೆ ಪಕ್ಷಗಳಲ್ಲಿ ಜೋರಾಗಿಯೇ ಇದ್ದು, ಅಂತಿಮವಾಗಿ ಅಖಾಡಕ್ಕೆ ಇಳಿಯುವವರು ಯಾರೆಂಬ ಪ್ರಶ್ನೆಗೆ ಶೀಘ್ರವೇ ಉತ್ತರ ಸಿಗುವ ನಿರೀಕ್ಷೆ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Viral Video: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬರೀ ಟವೆಲ್‌ ಸುತ್ತಿ ವಿದ್ಯಾರ್ಥಿನಿಯರ ಬೋಲ್ಡ್‌ ಡ್ಯಾನ್ಸ್; ವಿಡಿಯೋ ವೈರಲ್‌

ಕೋಲ್ಕತ್ತಾ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಂಪ್ರದಾಯವನ್ನು ಬಿಂಬಿಸುವ ವೇದಿಕೆಗಳಾಗಿರುತ್ತವೆ. ಆದರೆ, ಪಶ್ಚಿಮ ಬಂಗಾಳದ ಶಾಲೆಯೊಂದರಲ್ಲಿ ನಡೆದ ವಿಲಕ್ಷಣ ಪ್ರದರ್ಶನವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದೆ. ಸೋಶಿಯಲ್​ ಮಿಡಿಯಾಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

ಏನಿದು ಘಟನೆ?

ಕೋಲ್ಕತ್ತಾದ ಜೀಬನ್ ಜ್ಯೋತಿ ಮಾದರಿ ಶಾಲೆಯಲ್ಲಿ (Jeeban Jyoti Model School) ನಡೆದ ಕಾರ್ಯಕ್ರಮವೊಂದರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಶಾಲಾ ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ವಿದ್ಯಾರ್ಥಿನಿಯರು ಅಸಭ್ಯವಾಗಿ ನೃತ್ಯ ಪ್ರದರ್ಶನ ನೀಡುತ್ತಿರುವುದು ನೋಡುಗರ ಹುಬ್ಬೇರಿಸುವಂತೆ ಮಾಡಿದೆ.

@HateDetectors ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು,ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋ ಇಲ್ಲಿದೆ ನೋಡಿ:

ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಟೀಕೆ:

ವೀಡಿಯೊದಲ್ಲಿ ಶಾಲೆಯ ಹೆಸರಿರುವ ಬ್ಯಾನರ್ ಸ್ಪಷ್ಟವಾಗಿ ಕಾಣಿಸುತ್ತಿದ್ದು, ನೂರಾರು ವಿದ್ಯಾರ್ಥಿಗಳು ಪ್ರೇಕ್ಷಕರ ಸಾಲಿನಲ್ಲಿ ಕುಳಿತು ಈ ಪ್ರದರ್ಶನವನ್ನು ವೀಕ್ಷಿಸುತ್ತಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿದ್ದಂತೆ ನೆಟ್ಟಿಗರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಶಿಕ್ಷಣ, ಶಿಸ್ತು ಮತ್ತು ನೈತಿಕ ಮೌಲ್ಯಗಳನ್ನು ಕಲಿಸಬೇಕು. ಇಂತಹ ಪ್ರದರ್ಶನಗಳಿಗೆ ಅನುಮತಿ ನೀಡಿದ್ದು ಹೇಗೆ?” ಎಂದು ಅನೇಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ಈ ವಿವಾದಾತ್ಮಕ ವಿಡಿಯೋ ಬಗ್ಗೆ ಶಾಲಾ ಆಡಳಿತ ಮಂಡಳಿಯಿಂದ ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ಬಂದಿಲ್ಲ. ಈ ಕಾರ್ಯಕ್ರಮ ನಡೆದ ನಿಖರ ದಿನಾಂಕ ಯಾವುದು? ವೇದಿಕೆಯ ಮೇಲೆ ಪ್ರದರ್ಶನ ನೀಡಿದವರು ಶಾಲೆಯ ವಿದ್ಯಾರ್ಥಿಗಳೇ ಅಥವಾ ಹೊರಗಿನಿಂದ ಬಂದ ಕಲಾವಿದರೇ? ಎಂಬ ಬಗ್ಗೆ ಇನ್ನೂ ಗೊಂದಲಗಳಿವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಸ್​​ಕೆ ವಿರುದ್ಧ ದಾವೆ ಹೂಡಿದ ‘ಜೈಲರ್’ ನಿರ್ಮಾಪಕ, ಕಾರಣವೇನು?

ಭಾರತದಲ್ಲಿ ಕ್ರಿಕೆಟ್, ಸಿನಿಮಾ (Cinema) ಮತ್ತು ರಾಜಕೀಯ ಜೊತೆ-ಜೊತೆಯಾಗಿ ಸಾಗುತ್ತವೆ. ಅದರಲ್ಲೂ ಕ್ರಿಕೆಟ್ ಮತ್ತು ಸಿನಿಮಾಗಳು ಬಲು ಆಪ್ತ ನಂಟು ಹೊಂದಿವೆ. ಆದರೆ ಇನ್ನೇಣು ಐಪಿಎಲ್ 2026ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ. ಭಾರತದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಸನ್ ಪಿಕ್ಚರ್ಸ್​​ನವರು ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೂರು ದಾಖಲಿಸಿದೆ. ಇದಕ್ಕೆ ಕಾರಣವಾಗಿರುವುದು ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ. ಏನಿದು ವಿವಾದ? ಮಾಹಿತಿ ಇಲ್ಲಿದೆ.

ಮಾರ್ಚ್ 1, 2026 ರಂದು ಚೆನ್ನೈ ಸೂಪರ್ ಕಿಂಗ್ಸ್ ತನ್ನ ಹೊಸ ಜರ್ಸಿಯನ್ನು ಬಿಡುಗಡೆ ಮಾಡುವ ಪ್ರಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿತ್ತು. ಈ ವಿಡಿಯೋದಲ್ಲಿ ಎಂಎಸ್ ಧೋನಿ ಅವರ ಎಂಟ್ರಿ ಮತ್ತು ಜರ್ಸಿ ಅನಾವರಣದ ಸಂದರ್ಭದಲ್ಲಿ ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿರುವ ‘ಜೈಲರ್’ ಮತ್ತು ‘ಜೈಲರ್ 2’ ಮತ್ತು ‘ಕೂಲಿ’ ಸಿನಿಮಾಗಳ ಜನಪ್ರಿಯ ಹಾಡುಗಳು, ಹಿನ್ನೆಲೆ ಸಂಗೀತ ಮತ್ತು ಸಂಭಾಷಣೆಗಳನ್ನು ಬಳಸಲಾಗಿತ್ತು ಇದು ಸನ್ ಪಿಕ್ಚರ್ಸ್​​ನ ಅಸಮಾಧಾನಕ್ಕೆ ಕಾರಣವಾಗಿದೆ.

ಇದೇ ಕಾರಣಕ್ಕೆ ಇದೀಗ ಸನ್ ಪಿಕ್ಚರ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದು ಸಿಎಸ್​​ಕೆ ವಿರುದ್ಧ ಮದ್ರಾಸ್ ಹೈಕೋರ್ಟ್​​ನಲ್ಲಿ ದಾವೆ ಹೂಡಿದೆ. ಸನ್ ಪಿಕ್ಚರ್ಸ್ ಪರವಾಗಿ ವಾದ ಮಂಡಿಸಿದ ವಕೀಲರು, ಈ ಚಿತ್ರಗಳ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರೊಂದಿಗಿನ ಒಪ್ಪಂದದಂತೆ ಎಲ್ಲಾ ಹಕ್ಕುಗಳು ಸನ್ ಪಿಕ್ಚರ್ಸ್ ಬಳಿ ಇವೆ. ಸಿಎಸ್‌ಕೆ ಯಾವುದೇ ಪೂರ್ವಾನುಮತಿ ಪಡೆಯದೆ ಇವುಗಳನ್ನು ಬಳಸಿದೆ. ಜರ್ಸಿ ಮತ್ತು ಇತರ ಸರಕುಗಳ ಮಾರಾಟಕ್ಕಾಗಿ ಈ ವಿಡಿಯೋ ಬಳಸಲಾಗುತ್ತಿದ್ದು, ಇದು ವಾಣಿಜ್ಯ ಉದ್ದೇಶದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ. ಸನ್ ಪಿಕ್ಚರ್ಸ್ ತಂಡವು ಸಿಎಸ್‌ಕೆ ಮೇಲೆ 1 ಕೋಟಿ ರೂಪಾಯಿ ನಷ್ಟ ಪರಿಹಾರ ನೀಡಬೇಕು ಹಾಗೂ ಈ ಹಾಡುಗಳನ್ನು ಬಳಸದಂತೆ ಶಾಶ್ವತ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ:‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

ಚೆನ್ನೈ ತಂಡದ ಪರ ವಾದ ಮಂಡಿಸಿದ ವಕೀಲರು ತಂಡವು ಈಗಾಗಲೇ ಆಕ್ಷೇಪಾರ್ಹ ವಿಡಿಯೋಗಳನ್ನು ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕಿದೆ. ಕಳೆದ ಮೂರು ವರ್ಷಗಳಿಂದ ಇಂತಹ ಹಾಡುಗಳನ್ನು ಬಳಸುತ್ತಿದ್ದರೂ ಸನ್ ನೆಟ್‌ವರ್ಕ್ ಈ ಹಿಂದೆ ಆಕ್ಷೇಪಿಸಿರಲಿಲ್ಲ. ಮುಂದಿನ ದಿನಗಳಲ್ಲಿ ಸನ್ ಪಿಕ್ಚರ್ಸ್‌ನ ಅನುಮತಿ ಅಥವಾ ಪರವಾನಗಿ ಪಡೆಯದೆ ಯಾವುದೇ ಸಂಗೀತ ಬಳಸುವುದಿಲ್ಲ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ರಾಮಮೂರ್ತಿ ಅವರು ಈ ಕುರಿತು ಅಫಿಡವಿಟ್ ಸಲ್ಲಿಸುವಂತೆ ಸಿಎಸ್‌ಕೆ ಲಿಮಿಟೆಡ್‌ಗೆ ಸೂಚಿಸಿ, ವಿಚಾರಣೆಯನ್ನು ಮಾರ್ಚ್ 16ಕ್ಕೆ ಮುಂದೂಡಿದ್ದಾರೆ.

ಸನ್ ಪಿಕ್ಚರ್ಸ್​ ಅವರ ಮಾಲೀಕರ ಪುತ್ರಿ ಕಾವ್ಯಾ ಮಾರನ್ ಅವರು ಐಪಿಎಲ್​​ನ ಮತ್ತೊಂದು ಪ್ರಮುಖ ತಂಡವಾಗಿರುವ ಸನ್​​ರೈಸರ್ಸ್ ಹೈದರಾಬಾದ್​​ನ ಮಾಲಕಿ ಆಗಿದ್ದಾರೆ. ಹೈದರಾಬಾದ್ ತಂಡವು ಸನ್ ನೆಟ್​​ವರ್ಕ್ ಉದ್ಯಮದ ಭಾಗವೇ ಆಗಿದೆ. ಹಾಗಾಗಿ ಇದು ಒಂದು ರೀತಿ ಎಸ್​​ಆರ್​​ಎಚ್ ಮತ್ತು ಸಿಎಸ್​​ಕೆ ನಡುವಿನ ಹೋರಾಟವೂ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕೊಪ್ಪಳದ ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?

ಕೊಪ್ಪಳ, ಮಾರ್ಚ್​​ 15: ಎಲ್‌ಪಿಜಿ ಬಿಕ್ಕಟ್ಟು ಇಡೀ ರಾಜ್ಯವನ್ನು ಕಾಡುತ್ತಿರುವ ಮಧ್ಯೆ ಕೊಪ್ಪಳದ ಗವಿಮಠ ಒಂದು ವಿಶಿಷ್ಟ ಪರಿಹಾರದೊಂದಿಗೆ ಮಾದರಿಯಾಗಿ ನಿಂತಿದೆ. ಗವಿಮಠದಲ್ಲಿ ಎಂದಿನಂತೆ ಅನ್ನಪ್ರಸಾದ ಸೇವೆಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಇಲ್ಲಿ ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ತಯಾರಿಸಲಾಗುತ್ತದೆ. ಪ್ರತಿದಿನ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟವನ್ನು ಸೌದೆ ಒಲೆಯಲ್ಲಿಯೇ ಸಿದ್ಧಪಡಿಸಲಾಗುತ್ತದೆ. ಮಠದಲ್ಲಿ ಪ್ರತಿ ತಿಂಗಳು ಸುಮಾರು 10 ರಿಂದ 12 ಟ್ರ್ಯಾಕ್ಟರ್ ಸೌದೆಯನ್ನು ಅಡುಗೆಗಾಗಿ ಬಳಸಲಾಗುತ್ತದೆ. ಇದರಿಂದಾಗಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಅಥವಾ ಬೆಲೆ ಏರಿಕೆ ಮಠದ ದಾಸೋಹದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಭಕ್ತರಿಗೆ ನಿತ್ಯ ಅನ್ನಪ್ರಸಾದ ಸೇವೆ ಲಭ್ಯವಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಕೋಲಾರ, ಮಾರ್ಚ್​​ 15: ಗ್ಯಾಸ್​ ಸಿಲಿಂಡರ್​ (LPG Cylinder) ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ, ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಖಾಲಿ ಗ್ಯಾಸ್​​ ಹಿಡಿದು ಜನರು ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್​ಗಳನ್ನು ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ. ಈ ಮಧ್ಯೆ ನಗದರಲ್ಲಿ ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದಾರೆ.

ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. 2 ಬೇಕರಿ ಮತ್ತು 5ಕ್ಕೂ ಹೆಚ್ಚು ಹೋಟೆಲ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗಿದ್ದು, ಈ ವೇಳೆ ಮಾಲೀಕರು ವಾಣಿಜ್ಯ ಸಿಲಿಂಡರ್ ಬದಲು ಗೃಹಬಳಕೆ ಸಿಲಿಂಡರ್ ಬಳಸುತ್ತಿರುವುದು ಪತ್ತೆ ಆಗಿದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಸಿಲಿಂಡರ್ ಕೊರತೆ: ಕಾಳಸಂತೆಯಲ್ಲಿ ಗ್ಯಾಸ್ ದಂಧೆ, 1 ಸಿಲಿಂಡರ್ ದರ 7 ಸಾವಿರ ರೂ!

ಸದ್ಯ 21 ಸಿಲಿಂಡರ್​ಗಳನ್ನು ವಶಕ್ಕೆ ಪಡೆದ ತಹಶೀಲ್ದಾರ್ ಸುಜಾತಾ ಎಚ್ಚರಿಕೆ ಕೂಡ ನೀಡಿದ್ದಾರೆ. ಇನ್ನು ದಾಳಿ ವೇಳೆ ಕೆಲವು ಹೋಟೆಲ್​ಗಳಲ್ಲಿ ಸ್ವಚ್ಛತೆ ಇಲ್ಲದಿರುವುದು ಕೂಡ ಪತ್ತೆ ಆಗಿದೆ. ಹೀಗಾಗಿ ಸುರಭಿ ಹೋಟೆಲ್‌ನಲ್ಲಿ ಅಧಿಕಾರಿಗಳು ನೀರಿನ ಸ್ಯಾಂಪಲ್ ಸಂಗ್ರಹಿಸಿದ್ದಾರೆ.

ಹೋಟೆಲ್​ಗಳು ಬಂದ್​: ಆಲೂಗಡ್ಡೆ ಸೇಲ್​ ಆಗದೇ ರೈತ ಕಂಗಾಲು

ಜಿಲ್ಲೆಯಲ್ಲಿ ರೈತರಿಗೆ ಯುದ್ಧ ಬಿಸಿ ಮುಟ್ಟಿಸಿದೆ. ಸಿಲಿಂಡರ್​ ಅಭಾವದಿಂದ ಹೋಟೆಲ್​ಗಳು ಬಂದ್ ಆಗಿರೋದ್ರಿಂದ, ತರಕಾರಿಗಳನ್ನ ತೆಗೆದುಕೊಳ್ಳೋರೇ ಇಲ್ಲ. 1,200 ರಿಂದ 1,300 ರೂ. ಇದ್ದ ಮೂಟೆ ಆಲೂಗಡ್ಡೆ, 500 ರಿಂದ 600 ರೂಪಾಯಿಗೆ ಕುಸಿತ ಆಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೆಲಸ ಕಳೆದುಕೊಂಡ ಇಂದಿರಾ ಕ್ಯಾಂಟಿನ್​​ ಮಹಿಳೆಯರು

ವಾಣಿಜ್ಯ ಸಿಲಿಂಡರ್​ ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ. ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಕಲಬುರಗಿಯಲ್ಲಿ ಇಂದಿರಾ ಕ್ಯಾಂಟೀನ್​​ನಲ್ಲಿ​ ಕೆಲಸ ಮಾಡುತ್ತಿದ್ದ 10 ಮಹಿಳೆಯರನ್ನ ಕೆಲಸಕ್ಕೆ ಬರಬೇಡಿ ಅಂತ ಗುತ್ತಿಗೆದಾರರು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ಚಾಮುಂಡೇಶ್ವರಿ ದೇವಿ ಲಡ್ಡು ಪ್ರಸಾದಕ್ಕೂ ಗ್ಯಾಸ್ ಕೊರತೆ ಬಿಸಿ: ಲಡ್ಡು ತಯಾರಿಸಲು ನಿರ್ಮಾಣವಾಗ್ತಿದೆ ವಿಶೇಷ ಸೌದೆ ಒಲೆ!

ಇನ್ನು ದಾವಣಗೆರೆಯಲ್ಲಿ ಆಟೋ ಎಲ್​ಪಿಜಿ ಗ್ಯಾಸ್​ ದರ ಏರಿಕೆ ಆಗಿದೆ. ಪ್ರತಿ ಲೀಟರ್​​ಗೆ 23 ರೂ. ಹೆಚ್ಚಳ ಮಾಡಿದ್ದು, 52 ರೂ. ಇದ್ದ ಲೀಟರ್​ ಎಲ್​​ಪಿಜಿ, 75 ರೂಪಾಯಿ ಆಗಿದೆ. ಎಲ್​​ಪಿಜಿ ಹೆಚ್ಚಳ ಮಾಡಿದೆಎ ಪ್ರಯಾಣಿಕರು ಹೆಚ್ಚುವರಿ ಹಣ ಕೊಡ್ತಾರಾ ಅಂತ ಚಾಲಕರು ಕಿಡಿಕಾರುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version