Video: ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಬೈಕ್ ಸ್ಟಾರ್ಟ್ ಆಗದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಖದೀಮ!
ವೆಣ್ಣಪ್ಪುವಾ (ಶ್ರೀಲಂಕಾ): ವೆಣ್ಣಪ್ಪುವಾದ ತಂಬರವಿಲ ಪ್ರದೇಶದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಯನ್ನು ತಡೆದು, ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ ಘಟನೆಯೊಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಯುವತಿಯ ಹಿಂದಿನಿಂದಲೇ ಮತ್ತೊಂದು ಬೈಕ್‌ನಲ್ಲಿ ಬಂದ ದುಷ್ಕರ್ಮಿ ಆಕೆಯ ಸರವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿಯ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಬಿದ್ದ ಅವಕಾಶವನ್ನು ಬಳಸಿಕೊಂಡ ಆರೋಪಿಯು ಯುವತಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬಲವಂತವಾಗಿ…