RCB ಗೆಲುವಿನಿಂದ ಸಂಕಷ್ಟಕ್ಕೆ ಸಿಲುಕಿದ 6 ತಂಡಗಳು!

Source link

ಕೋಲಾರ: ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು, ಸಿಸಿಟಿವಿಲಿ ಸೆರೆಯಾಯ್ತು ಖದೀಮರ ಕೈಚಳಕ – Kannada News | Kolar Crime: Thieves Steal 1 Lakh from Bike Box Near Bethamangala Police Station; Caught by Public

ಕೋಲಾರ, ಮೇ 14: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೈಕ್ ಬಾಕ್ಸ್‌ನಲ್ಲಿದ್ದ ಒಂದು ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಬೇತಮಂಗಲ ನ್ಯೂಟೌನ್ ನಿವಾಸಿ ರಮೇಶ್ ಎಂಬುವವರು ಕೆನರಾ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿ ಬೈಕ್ ಬಾಕ್ಸ್​ನಲ್ಲಿ ಇರಿಸಿದ್ದರು. ಬೈಕ್ ನಿಲ್ಲಿಸಿ ರಮೇಶ್ ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಹೊಂಚು ಹಾಕಿದ್ದ ಕಳ್ಳರು ಹಣವನ್ನು ದೋಚಿದ್ದಾರೆ. ಅಚ್ಚರಿಯ ವಿಷಯವೆಂದರೆ ಈ ಕೃತ್ಯ ಬೇತಮಂಗಲ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ.

ಕಳ್ಳರು ಹಣದೊಂದಿಗೆ ಪರಾರಿಯಾಗುತ್ತಿದ್ದಂತೆ ರಮೇಶ್ ಅವರ ಮಗ ಜೋರಾಗಿ ಕೂಗಿಕೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಕಳ್ಳರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಳ್ಳತನದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಪೊಲೀಸ್ ಠಾಣೆ ಎದುರೇ ಇಂತಹ ಘಟನೆ ನಡೆದಿದ್ದರೂ ಪೊಲೀಸರು ತಕ್ಷಣ ಸ್ಪಂದಿಸದ ಬಗ್ಗೆ ಸ್ಥಳೀಯರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಾಯಿ ಪಲ್ಲವಿ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ‘ರಾಮಾಯಣ’ ಟೀಂ – Kannada News | Sai Pallavi’s Hindi Pronunciation Sparks Ramayana Controversy: Dubbing Considered for Sita

ಬಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ರಾಮಾಯಣ’ದಲ್ಲಿ ಸೀತೆಯ ಪಾತ್ರ ನಿರ್ವಹಿಸುತ್ತಿರುವ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಅವರಿಗೆ ಈಗ ಹೊಸ ಸಂಕಷ್ಟ ಎದುರಾಗಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಅವರ ಚೊಚ್ಚಲ ಹಿಂದಿ ಸಿನಿಮಾ ‘ಏಕ್ ದಿನ್’ ಸೋತಿರುವುದು ಮಾತ್ರವಲ್ಲದೆ, ಚಿತ್ರದಲ್ಲಿ ಅವರ ಹಿಂದಿ ಉಚ್ಚಾರಣೆಯ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಹೀಗಾಗಿ, ತಂಡ ದೊಡ್ಡ ನಿರ್ಧಾರ ಮಾಡಿದೆ ಎನ್ನಲಾಗಿದೆ.

‘ಏಕ್ ದಿನ್’ ಚಿತ್ರದಲ್ಲಿ ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಸಾಯಿ ಪಲ್ಲವಿ ನಟಿಸಿದ್ದಾರೆ. ಸಾಯಿ ಪಲ್ಲವಿ ಹಿಂದಿ ಭಾಷೆಯ ಮೇಲಿನ ಹಿಡಿತ ಅಷ್ಟೇನೂ ಪರಿಣಾಮಕಾರಿಯಾಗಿರಲಿಲ್ಲ ಎಂಬುದು ಸಿನಿಪ್ರೇಮಿಗಳ ಅಭಿಪ್ರಾಯ. ಸೀತಾ ಮಾತೆಯ ಪಾತ್ರಕ್ಕೆ ಅತ್ಯಂತ ಶುದ್ಧವಾದ ಮತ್ತು ಸ್ಪಷ್ಟವಾದ ಹಿಂದಿ ಉಚ್ಚಾರಣೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ, ಸಾಯಿ ಪಲ್ಲವಿ ಅವರ ಧ್ವನಿಯನ್ನು ಬಳಸುವ ಬದಲು ಬೇರೆ ವೃತ್ತಿಪರ ಡಬ್ಬಿಂಗ್ ಕಲಾವಿದರಿಂದ ಧ್ವನಿ ನೀಡಿಸಲು ತಯಾರಕರು ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಸಾಯಿ ಪಲ್ಲವಿ ಅವರ ಹಿಂದಿ ಮಾತುಗಳ ವಿಡಿಯೋ ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್‌ಗಳು ಶುರುವಾಗಿವೆ. ‘ಮೂಲ ಹಿಂದಿ ಪದಗಳನ್ನೇ ಸರಿಯಾಗಿ ಉಚ್ಚರಿಸಲು ಬಾರದ ನಟಿಯನ್ನು ಸೀತೆ ಪಾತ್ರಕ್ಕೆ ಆಯ್ಕೆ ಮಾಡಿದ್ದಾದರೂ ಏಕೆ?’ ಎಂದು ಹಲವರು ಪ್ರಶ್ನಿಸಿದ್ದಾರೆ. ಈ ಹಿಂದೆ ಇದೇ ಪಾತ್ರಕ್ಕೆ ಆಲಿಯಾ ಭಟ್ ಅವರನ್ನು ಫೈನಲ್ ಮಾಡಲಾಗಿತ್ತು, ಆದರೆ ಡೇಟ್ಸ್ ಸಮಸ್ಯೆಯಿಂದ ಅವರು ಹೊರಬಂದಿದ್ದರು. ಈಗ ಸಾಯಿ ಪಲ್ಲವಿ ಅವರ ಆಯ್ಕೆಯ ಬಗ್ಗೆ ಸಿನಿಮಾ ಪಂಡಿತರಲ್ಲೇ ಚರ್ಚೆ ಶುರುವಾಗಿದೆ.

ಇದನ್ನೂ ಓದಿ: ‘ಏಕ್ ದಿನ್’ ಸೋಲು, ಪಾತ್ರದ ಬಗ್ಗೆ ಸಾಯಿ ಪಲ್ಲವಿ ನೆಗೆಟಿವ್ ಕಮೆಂಟ್

ರಣಬೀರ್ ಕಪೂರ್ ರಾಮನಾಗಿ ಮತ್ತು ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ನಟಿಸುತ್ತಿರುವ ಈ ಬೃಹತ್ ಚಿತ್ರದ ಮೊದಲ ಭಾಗ ಇದೇ ವರ್ಷದ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಎರಡನೇ ಭಾಗ 2027ರ ದೀಪಾವಳಿಗೆ ಪ್ಲಾನ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮದರಸಾದಲ್ಲಿ ನಿರಂತರ ಹಿಂಸೆ ಕೊಡುತ್ತಿದ್ದ ಧರ್ಮ ಬೋಧಕ: ದೌರ್ಜನ್ಯ ತಾಳಲಾರದೆ ತಪ್ಪಿಸಿಕೊಂಡ ಬಿಹಾರದ 24 ಮಕ್ಕಳು! – Kannada News | FIR Registered Against Tumakuru Madrasa Preacher for Physical Abuse and Forced Labour of 24 Children

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI

ತುಮಕೂರು, ಮೇ 14: ತುಮಕೂರು (Tumakuru) ಜಿಲ್ಲೆಯ ಮದರಸಾವೊಂದರಲ್ಲಿ ಮಕ್ಕಳಿಗೆ ದೈಹಿಕ ಕಿರುಕುಳ ಮತ್ತು ಬಾಲಕಾರ್ಮಿಕ ಪದ್ಧತಿಯಂತಹ ಅಮಾನವೀಯ ಕೃತ್ಯ ಎಸಗಿದ ಆರೋಪದ ಮೇಲೆ ಧರ್ಮಬೋಧಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದರಸಾದಲ್ಲಿ ನಡೆಯುತ್ತಿದ್ದ ದೌರ್ಜನ್ಯ ತಾಳಲಾರದೆ 24 ಮಕ್ಕಳು ಅಲ್ಲಿಂದ ತಪ್ಪಿಸಿಕೊಂಡು ಬಂದ ಸಿನಿಮೀಯ ಘಟನೆಯ ನಂತರ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಮುಖ್ಯಾಂಶಗಳು

  • ತುಮಕೂರು ಜಿಲ್ಲೆಯ ಆಮಲಾಪುರ ಗ್ರಾಮದ ಮದರಸಾದಲ್ಲಿ 24 ಮಕ್ಕಳಿಗೆ ದೈಹಿಕ ಕಿರುಕುಳ ನೀಡಿದ ಆರೋಪ.
  • ಧರ್ಮ ಬೋಧಕ ಮೌಲಾಲಿ ಎಂಬಾತನ ವಿರುದ್ಧ ಪ್ರಕರಣ ದಾಖಲು.
  • ಬೆಂಗಳೂರಿನ ಕೆಎಸ್‌ಆರ್ ರೈಲ್ವೇ ನಿಲ್ದಾಣದಲ್ಲಿ ಮಕ್ಕಳನ್ನು ರಕ್ಷಿಸಿದ ರೈಲ್ವೇ ರಕ್ಷಣಾ ಪಡೆ

ಘಟನೆಯ ವಿವರ

ತುಮಕೂರಿನ ಮದರಸಾದಿಂದ ತಪ್ಪಿಸಿಕೊಂಡಿದ್ದ 8 ರಿಂದ 17 ವರ್ಷ ವಯಸ್ಸಿನ 24 ಮಕ್ಕಳು ಬಿಹಾರದ ತಮ್ಮ ಮನೆಗಳಿಗೆ ಮರಳಲು ಯತ್ನಿಸುತ್ತಿದ್ದರು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಈ ಮಕ್ಕಳನ್ನು ಗಮನಿಸಿದ ರೈಲ್ವೇ ರಕ್ಷಣಾ ಪಡೆ (RPF) ಅಧಿಕಾರಿಗಳು ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಮದರಸಾದಲ್ಲಿ ನಡೆಯುತ್ತಿದ್ದ ಕರಾಳ ಕೃತ್ಯಗಳು ಹೊರಬಂದಿವೆ. ಮದರಸಾದಲ್ಲಿ ಹಿಂಸೆ ನೀಡುತ್ತಿದ್ದರು ಮತ್ತು ಮದರಸಾದ ಆವರಣದಲ್ಲಿ ಕಾಂಪೌಂಡ್ ಗೋಡೆ ನಿರ್ಮಿಸುವಂತಹ ಕಠಿಣ ಕೆಲಸಗಳನ್ನು ಬಲವಂತವಾಗಿ ಮಾಡಿಸಲಾಗುತ್ತಿತ್ತು ಎಂದು ಮಕ್ಕಳು ತಿಳಿಸಿದ್ದಾರೆ.

ತನಿಖೆ ಮತ್ತು ಕ್ರಮ

ಮಕ್ಕಳನ್ನು ಸದ್ಯ ಮಕ್ಕಳ ಕಲ್ಯಾಣ ಸಮಿತಿಯ (CWC) ವಶಕ್ಕೆ ನೀಡಲಾಗಿದ್ದು, ಅವರಿಗೆ ಕೌನ್ಸೆಲಿಂಗ್ ಮಾಡಲಾಗುತ್ತಿದೆ. ಈ ಪ್ರಕರಣವನ್ನು ಮೊದಲು ರೈಲ್ವೇ ಪೊಲೀಸರು ದಾಖಲಿಸಿಕೊಂಡು, ನಂತರ ಹೆಚ್ಚಿನ ತನಿಖೆಗಾಗಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿ ಮೌಲಾಲಿ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆ (JJ Act), ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಬಾಲಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಹೆಣ್ಮಕ್ಕಳಿಗೆ ಕೋರಮಂಗಲ ರಾತ್ರಿ ಸಂಚಾರಕ್ಕೆ ಡೇಂಜರ್​: ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು: ಆಟೋ ಕಳ್ಳಾಟಕ್ಕೆ ಟ್ರಾಫಿಕ್ ಪೊಲೀಸ್ ಬ್ರೇಕ್, ಮೂರೇ ತಿಂಗಳಲ್ಲಿ ಸುಮಾರು 3 ಸಾವಿರ ಕೇಸ್ ದಾಖಲು! – Kannada News | Bengaluru Traffic Police Crackdown: Nearly 3000 Cases Filed Against Auto Drivers for Overcharging and Refusal

ಬೆಂಗಳೂರು, ಮೇ 14: ಬೆಂಗಳೂರಿನಲ್ಲಿ (Bengaluru) ಪ್ರಯಾಣಿಕರ ಸುಲಿಗೆಗೆ ಇಳಿಯುವ ಮತ್ತು ಕರೆದ ಕಡೆ ಬರಲು ನಿರಾಕರಿಸುವ ಆಟೋ ಚಾಲಕರಿಗೆ ಬೆಂಗಳೂರು ಸಂಚಾರಿ ಪೊಲೀಸರು ಭರ್ಜರಿ ಬಿಸಿ ಮುಟ್ಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುವ ಮತ್ತು ಸಂಜೆ ಆಗುತ್ತಿದ್ದಂತೆ ಮೀಟರ್ ದರಕ್ಕಿಂತ ಒಂದೂವರೆ ಪಟ್ಟು (One and Half) ಹಣ ಕೇಳುವ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮೂರು ತಿಂಗಳ ಅವಧಿಯಲ್ಲೇ 2,988 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಖ್ಯಾಂಶಗಳು

  • ಹೆಚ್ಚುವರಿ ಹಣ ವಸೂಲಿ ಮತ್ತು ಬಾಡಿಗೆಗೆ ಬರಲು ನಿರಾಕರಿಸಿದ ಆಟೋ ಚಾಲಕರ ವಿರುದ್ಧ ಕಳೆದ 3 ತಿಂಗಳಲ್ಲಿ ಒಟ್ಟು 2,988 ಪ್ರಕರಣಗಳು ದಾಖಲು.
  • ಹೆಚ್ಚುವರಿ ಬಾಡಿಗೆ ಕೇಳಿದ 1,354 ಮತ್ತು ನಿಗದಿಪಡಿಸಿದ ಸ್ಥಳಕ್ಕೆ ಬರಲು ನಿರಾಕರಿಸಿದ 1,634 ಚಾಲಕರ ವಿರುದ್ಧ ದೂರು ದಾಖಲು.
  • ರಾತ್ರಿ 10 ಗಂಟೆಯ ಬದಲಿಗೆ 8 ಗಂಟೆಗೇ ಒಂದೂವರೆ ಪಟ್ಟು (One and Half) ದರ ಕೇಳುವವರ ವಿರುದ್ಧ ಪೊಲೀಸರ ಕಟ್ಟುನಿಟ್ಟಿನ ಕ್ರಮ.

ಕಾರ್ಯಾಚರಣೆಯ ವಿವರ

ನಗರದ ಅನೇಕ ಭಾಗಗಳಲ್ಲಿ ಆಟೋ ಚಾಲಕರು ಪ್ರಯಾಣಿಕರು ಕರೆದ ಕಡೆ ಬರುವುದಿಲ್ಲ ಹಾಗೂ ಒಂದು ವೇಳೆ ಬಂದರೂ ದುಪ್ಪಟ್ಟು ಹಣ ಕೇಳುತ್ತಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿದ್ದವು. ಈ ಬಗ್ಗೆ ಸಾರ್ವಜನಿಕರು ಸಾರಿಗೆ ಇಲಾಖೆ ಮತ್ತು ಸಂಚಾರಿ ಪೊಲೀಸರಿಗೆ ನೀಡಿದ ದೂರಿನ ಆಧಾರದ ಮೇಲೆ ಕಳೆದ ಮೂರು ತಿಂಗಳಿನಿಂದ ನಿರಂತರ ಕಾರ್ಯಾಚರಣೆ ನಡೆಸಲಾಗಿದೆ. ವಿಶೇಷವಾಗಿ ಭಾಷೆ ತಿಳಿಯದ ಹೊರರಾಜ್ಯದ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಹಣ ವಸೂಲಿ ಮಾಡುವ ಚಾಲಕರ ವಿರುದ್ಧ ಪೊಲೀಸರು ದಂಡದ ಬಿಸಿ ಮುಟ್ಟಿಸುತ್ತಿದ್ದಾರೆ.

ಆಟೋ ಚಾಲಕರ ಬಗ್ಗೆ ಪ್ರಯಾಣಿಕರ ಅಸಮಾಧಾನ

ನಿಯಮದ ಪ್ರಕಾರ ರಾತ್ರಿ 10 ಗಂಟೆಯ ನಂತರವಷ್ಟೇ ಒಂದೂವರೆ ಪಟ್ಟು ದರ ತೆಗೆದುಕೊಳ್ಳಲು ಅವಕಾಶವಿದೆ. ಆದರೆ, ಅನೇಕ ಚಾಲಕರು ರಾತ್ರಿ 8 ಗಂಟೆಯಿಂದಲೇ ಈ ದರ ವಸೂಲಿ ಮಾಡುತ್ತಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾತನಾಡಿದ ಪ್ರಯಾಣಿಕ ರಾಮು, ಚಾಲಕರ ಈ ವರ್ತನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ, ಪ್ರಾಮಾಣಿಕವಾಗಿ ಕೆಲಸ ಮಾಡುವ ಆಟೋ ಚಾಲಕ ಸತೀಶ್ ಅವರು, ‘ಪ್ರಯಾಣಿಕರೇ ನಮ್ಮ ದೇವರು, ನಾವು ದುಪ್ಪಟ್ಟು ಹಣ ಕೇಳಬಾರದು’ ಎಂದು ಸಹೋದ್ಯೋಗಿಗಳಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜಾರಿಯಾಗದ ಆಟೋ ಮೀಟರ್ ಹೊಸ ದರ: ದುಪ್ಪಟ್ಟು ವಸೂಲಿ, ಪ್ರಯಾಣಿಕರು ಆಕ್ರೋಶ

ಕೆಲವೇ ಕೆಲವು ಚಾಲಕರ ಇಂತಹ ದುರ್ವರ್ತನೆಯಿಂದ ಇಡೀ ಆಟೋ ಚಾಲಕರ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸದ್ಯ ಪೊಲೀಸರು ಅಲರ್ಟ್ ಆಗಿದ್ದು, ಸಾರ್ವಜನಿಕರು ದೂರು ನೀಡಿದ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ – Kannada News | Dileep Raj Special Moment A journey of Legend actor

ದಿಲೀಪ್ ರಾಜ್ ಅವರು ಕೇವಲ ನಟರಾಗಿ ಮಾತ್ರವಲ್ಲದೆ, ‘ಪಾರು’, ‘ಹಿಟ್ಲರ್ ಕಲ್ಯಾಣ’ದಂತಹ ಜನಪ್ರಿಯ ಧಾರಾವಾಹಿಗಳ ಮೂಲಕ ನಿರ್ಮಾಣ ಮತ್ತು ನಿರ್ದೇಶನ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದರು. ಜೀ ಕನ್ನಡದ ಜೊತೆ ಅವರಿಗೆ ವಿಶೇಷ ನಂಟಿತ್ತು. ಈ ವಿಶೇಷ ವಿಡಿಯೋದಲ್ಲಿ ಅವರ ವೃತ್ತಿಜೀವನದ ಸುವರ್ಣ ಕ್ಷಣಗಳನ್ನು ಮೆಲುಕು ಹಾಕಲಾಗಿದೆ. ಅನೇಕ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟ ಅವರ ಅಗಲಿಕೆಗೆ ಇಡೀ ಕಲಾ ಲೋಕ ಕಂಬನಿ ಮಿಡಿದಿದೆ. ಜೀ ಕನ್ನಡ ಅವರಿಗೆ ವಿಶೇಷ ಗೌರವ ಸಲ್ಲಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ, ಸೂರಿಲ್ಲದೆ ಕಂಗಾಲಾದ ಜನ – Kannada News | Heavy Rain and Wind Havoc in Sambargi Village: Houses Damaged and Trees Uprooted in Belagavi District

ಬೆಳಗಾವಿ, ಮೇ 14: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಗುರುವಾರ ಸಂಜೆ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಠಾತ್ ವರುಣಾರ್ಭಟಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಗಾಳಿಯ ವೇಗಕ್ಕೆ ಐದಕ್ಕೂ ಹೆಚ್ಚು ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಸುಮಾರು ಇನ್ನೂರು ಅಡಿಯಷ್ಟು ದೂರಕ್ಕೆ ತಗಡಿನ ಸೀಟ್‍ಗಳು ಹಾರಿ ಬಿದ್ದಿರುವುದು ಮಳೆಯ ತೀವ್ರತೆಗೆ ಸಾಕ್ಷಿಯಾಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ ಮತ್ತು ಹಾಸಿಗೆಗಳು ಮಳೆಗೆ ನೆನೆದು ಹಾನಿಯಾಗಿದ್ದು, ಮನೆ ಮೇಲೆ ಅಳವಡಿಸಿದ್ದ ಸೋಲಾರ್ ಪ್ಯಾನಲ್‍ಗಳು ಕೂಡ ಧರೆಗುರುಳಿವೆ. ಇದಲ್ಲದೆ, ದನದ ಕೊಟ್ಟಿಗೆಗಳು ನೆಲಸಮವಾಗಿದ್ದು, ವಿದ್ಯುತ್ ಕಂಬಗಳು ಮತ್ತು ತೆಂಗಿನ ಮರಗಳು ಉರುಳಿ ಬಿದ್ದ ಪರಿಣಾಮ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ತಮಗೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Ajinkya Rahane: ಈ ಒಂದು ‘ತಪ್ಪು’ ಮಾಡಿದ್ದೇ ಸೋಲಿಗೆ ಕಾರಣ! – Kannada News | Ajinkya Rahane Post Match Interview After RCB vs KKR Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲನುಭವಿಸಿದೆ. ರಾಯ್​ಪುರ್​ನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 192 ರನ್​ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಕೆಕೆಆರ್ ತಂಡಕ್ಕೆ 6 ವಿಕೆಟ್​ಗಳಿಂದ ಸೋಲುಣಿಸಿದ್ದಾರೆ.

ಈ ಸೋಲಿನ ಬಳಿಕ ಮಾತನಾಡಿದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ, “ಈ ಪಿಚ್‌ನಲ್ಲಿ 190 ರನ್ ಗೆಲ್ಲಬಹುದಾದ ಸವಾಲಿನ ಮೊತ್ತವಾಗಿತ್ತು. ಆದರೆ ವಿರಾಟ್ ಕೊಹ್ಲಿ ಅವರ ಕ್ಯಾಚ್ ಕೈಬಿಟ್ಟಿದ್ದು ಪಂದ್ಯದ ಫಲಿತಾಂಶದ ಮೇಲೆ ದೊಡ್ಡ ಪರಿಣಾಮ ಬೀರಿತು” ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ.

ಆರಂಭದ ಪವರ್‌ಪ್ಲೇ ಓವರ್‌ಗಳಲ್ಲಿ ಹೊಸ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತಿತ್ತು. ಆದರೆ ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಮಂದಗತಿಯಾಗಿ ವರ್ತಿಸಿತು. ಹೊಸ ಬ್ಯಾಟರ್‌ಗಳಿಗೆ ಇದು ಸುಲಭದ ಪಿಚ್ ಆಗಿರಲಿಲ್ಲ. ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಶ್ರಮದಿಂದಾಗಿ ತಂಡ 190 ರನ್ ತಲುಪಿತು. ಪಂದ್ಯ ಮುಗಿದ ಮೇಲೆ ಹತ್ತು-ಹದಿನೈದು ರನ್ ಕಡಿಮೆ ಆಯಿತು ಎಂದು ಹೇಳುವುದು ಸುಲಭ. ಆದರೆ ಈ ಪಿಚ್ ಸ್ಥಿತಿಗೆ ಇದು ಅತ್ಯುತ್ತಮ ಮೊತ್ತವಾಗಿತ್ತು ಎಂದು ರಹಾನೆ ಬ್ಯಾಟಿಂಗ್ ವಿಭಾಗವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳೇ ಇಲ್ಲ..!

ಇನ್ನು ಚೇಸಿಂಗ್ ವೇಳೆ ವಿರಾಟ್ ಕೊಹ್ಲಿ ಎಷ್ಟು ಅಪಾಯಕಾರಿ ಆಟಗಾರ ಎಂಬುದು ಎಲ್ಲರಿಗೂ ತಿಳಿದಿದೆ. ಅವರಿಗೆ ದೇವದತ್ ಪಡಿಕ್ಕಲ್ ಉತ್ತಮ ಸಾಥ್ ನೀಡಿದರು. ಈ ಇಬ್ಬರ ನಡುವಿನ ಭರ್ಜರಿ ಜೊತೆಯಾಟವೇ ಎದುರಾಳಿ ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು.

ಇದರ ನಡುವೆ ನಮ್ಮ ತಂಡ ಮಾಡಿದ ತಪ್ಪೊಂದು ನಮ್ಮ ಪಾಲಿಗೆ ದುಬಾರಿಯಾಯ್ತು. ಟೂರ್ನಿಯ ಕಳೆದ ನಾಲ್ಕು ಪಂದ್ಯಗಳಲ್ಲಿ ತಂಡದ ಫೀಲ್ಡಿಂಗ್ ಅತ್ಯುತ್ತಮವಾಗಿತ್ತು. ಆದರೆ ಇಂತಹ ಟ್ರಿಕಿ ಪಿಚ್‌ನಲ್ಲಿ ವಿರಾಟ್ ಕೊಹ್ಲಿ ಅವರಂತಹ ಪ್ರಮುಖ ಬ್ಯಾಟರ್‌ಗಳ ಕ್ಯಾಚ್‌ಗಳನ್ನು ಕೈಬಿಟ್ಟರೆ ಪಂದ್ಯ ಉಳಿಸಿಕೊಳ್ಳುವುದು ಕಷ್ಟ ಎಂದು ರಹಾನೆ ಬೇಸರ ವ್ಯಕ್ತಪಡಿಸಿದರು.

  • ಈ ಪಂದ್ಯದ 9ನೇ ಓವರ್​ನಲ್ಲಿ ರೋವ್​ಮನ್ ಪೊವೆಲ್ ವಿರಾಟ್ ಕೊಹ್ಲಿಯ ಕ್ಯಾಚ್ ಕೈಚೆಲ್ಲಿದ್ದರು. ಈ ವೇಳೆ ಕೊಹ್ಲಿ 21 ರನ್​ ಮಾತ್ರ ಗಳಿಸಿದ್ದರು. ಹೀಗೆ ಸಿಕ್ಕ ಜೀವದಾನವನ್ನು ಬಳಸಿಕೊಂಡ ವಿರಾಟ್ ಕೊಹ್ಲಿ ಅಂತಿಮವಾಗಿ 60 ಎಸೆತಗಳಲ್ಲಿ ಅಜೇಯ 105 ರನ್ ಬಾರಿಸಿ ಅಬ್ಬರಿಸಿದರು.

ಇನ್ನು  ಯುವ ವೇಗಿ ಕಾರ್ತಿಕ್ ತ್ಯಾಗಿ ಅವರ ಬೌಲಿಂಗ್ ಶೈಲಿಯನ್ನು ನಾಯಕ ಮುಕ್ತಕಂಠದಿಂದ ಶ್ಲಾಘಿಸಿದ ರಹಾನೆ. ಬೌಲಿಂಗ್ ಮಾಡುವಾಗ ಅವರು ಹೊಂದಿರುವ ಸ್ಪಷ್ಟ ಯೋಜನೆ  ಮತ್ತು ಶಿಸ್ತು ತಂಡಕ್ಕೆ ಭವಿಷ್ಯದಲ್ಲಿ ದೊಡ್ಡ ಬಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ, ಈ ಪಂದ್ಯವು ಕೆಕೆಆರ್ ತಂಡಕ್ಕೆ ತಪ್ಪುಗಳಿಂದ ಕಲಿಯಲು ಒಂದು ಉತ್ತಮ ಅವಕಾಶವಾಗಿದೆ. ಕಠಿಣ ಪಿಚ್‌ನಲ್ಲಿ ಬ್ಯಾಟರ್‌ಗಳು ನೀಡಿದ ಹೋರಾಟ ಮತ್ತು ಸ್ಪಿನ್ನರ್‌ಗಳ ಸ್ಥಿರ ಪ್ರದರ್ಶನ ತಂಡದ ಪ್ಲಸ್ ಪಾಯಿಂಟ್‌ಗಳಾದರೆ, ಫೀಲ್ಡಿಂಗ್‌ನಲ್ಲಿನ ಸಣ್ಣ ಲೋಪದೋಷಗಳು ಪಂದ್ಯವನ್ನು ಕೈತಪ್ಪುವಂತೆ ಮಾಡಿದವು. ಆದರೆ ನಾಯಕ ಅಜಿಂಕ್ಯ ರಹಾನೆ ಅವರ ಸಕಾರಾತ್ಮಕ ಚಿಂತನೆ ಮತ್ತು ಕಾರ್ತಿಕ್ ತ್ಯಾಗಿ ಅವರಂತಹ ಯುವ ಪ್ರತಿಭೆಗಳ ಮೇಲಿರುವ ನಂಬಿಕೆ ಮುಂದಿನ ಪಂದ್ಯಗಳಲ್ಲಿ ತಂಡ ಬಲಿಷ್ಠವಾಗಿ ಪುನರಾಗಮನ ಮಾಡಲು ದಾರಿಯಾಗಲಿದೆ ಎಂಬುದರಲ್ಲಿ ಸಂಶಯವಿಲ್ಲ.

Source link

ಹೆಣ್ಮಕ್ಕಳಿಗೆ ಕೋರಮಂಗಲ ರಾತ್ರಿ ಸಂಚಾರಕ್ಕೆ ಡೇಂಜರ್​: ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ

ಬೆಂಗಳೂರು, ಮೇ,14: ಸಿಲಿಕಾನ್ ಸಿಟಿಯ ಅತ್ಯಂತ ಜನಪ್ರಿಯ ಹ್ಯಾಂಗ್‌ಔಟ್ ತಾಣಗಳಲ್ಲಿ ಒಂದಾದ ಕೋರಮಂಗಲವು ಈಗ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆಯ ವಿಚಾರವಾಗಿ ಸುದ್ದಿಯಲ್ಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯಲು ಬರುವವರ ಸಂಖ್ಯೆ ಹೆಚ್ಚಿದ್ದರೂ, ಇತ್ತೀಚಿನ ದಿನಗಳಲ್ಲಿ ಮಹಿಳೆಯರನ್ನು ಕೆಣಕುವುದು ಮತ್ತು ಅಸಭ್ಯವಾಗಿ ವರ್ತಿಸುವ ಘಟನೆಗಳು ವರದಿಯಾಗುತ್ತಿವೆ.ರಾತ್ರಿ 1 ಗಂಟೆಯ ನಂತರ ರಸ್ತೆಗಳಲ್ಲಿ ಮಹಿಳೆಯರನ್ನು ಉದ್ದೇಶಿಸಿ ಕೂಗುವುದು ಅಥವಾ ಕಿರುಕುಳ ನೀಡುವುದರಿಂದಾಗಿ ಅನೇಕರು ಹೊರಬರಲು ಭಯಪಡುತ್ತಿದ್ದಾರೆ. ಬೆಂಗಳೂರಿನಂತಹ ಸುರಕ್ಷಿತ ನಗರದಲ್ಲಿ ಇಂತಹ ಪ್ರವೃತ್ತಿ ಬೆಳೆಯುತ್ತಿರುವುದು ವಿಷಾದನೀಯ. “ನಗರವು ಎಲ್ಲರಿಗೂ ಸೇರಿದ್ದು, ಇಲ್ಲಿ ಪ್ರತಿಯೊಬ್ಬರಿಗೂ ಸುರಕ್ಷಿತವಾಗಿ ಸಂಚರಿಸುವ ಹಕ್ಕಿದೆ” ಎಂದು ಸ್ಥಳೀಯರು ಮತ್ತು ಪ್ರಜ್ಞಾವಂತ ನಾಗರಿಕರು ಒತ್ತಾಯಿಸುತ್ತಿದ್ದಾರೆ. ಬೆಂಗಳೂರನ್ನು ಅತಿಥಿ ಸತ್ಕಾರ ಮತ್ತು ಗೌರವಕ್ಕೆ ಹೆಸರಾದ ನಗರವನ್ನಾಗಿ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಮೋಜು-ಮಸ್ತಿ ಮಾಡುವ ಭರದಲ್ಲಿ ಮಹಿಳೆಯರಿಗೆ ಮುಜುಗರ ತರುವಂತಹ ಕೆಲಸ ಮಾಡಬೇಡಿ. ಇತರರನ್ನು ಗೌರವಿಸುವುದೇ ನಿಜವಾದ ಸುಸಂಸ್ಕೃತ ನಡವಳಿಕೆ ಎಂದು ವ್ಯಕ್ತಿಯೊಬ್ಬರು @Karnataka Portfolio ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಲೇ ಭೇಷ್… ಕನ್ನಡಿಗನ ಕಮಾಲ್​ಗೆ ದಂಗಾದ ವಿರಾಟ್ ಕೊಹ್ಲಿ! – Kannada News | Virat Kohli’s Epic Reaction to Manish Pandey’s Blinder Catch!

ಐಪಿಎಲ್​ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಕ್ರಿಕೆಟ್ ಪ್ರೇಮಿಗಳು ಎಂದಿಗೂ ಮರೆಯದ ಅದ್ಭುತ ಕ್ಷಣವೊಂದು ದಾಖಲಾಗಿದೆ. ಕೆಕೆಆರ್ ತಂಡದ ಅನುಭವಿ ಆಟಗಾರ ಮನೀಶ್ ಪಾಂಡೆ ಗಾಳಿಯಲ್ಲಿ ಹಕ್ಕಿಯಂತೆ ಜಿಗಿದು ಹಿಡಿದ ಅಸಾಧಾರಣ ಕ್ಯಾಚ್ ಇಡೀ ಕ್ರೀಡಾಂಗಣವನ್ನು ರೋಮಾಂಚನಗೊಳಿಸಿತು. ಕೇವಲ ಸೆಕೆಂಡುಗಳ ಅವಧಿಯಲ್ಲಿ ನಡೆದ ಈ ‘ಸೂಪರ್‌ಮ್ಯಾನ್’ ಸಾಹಸಕ್ಕೆ ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ರನ್-ಮಷಿನ್ ವಿರಾಟ್ ಕೊಹ್ಲಿ ದಿಗ್ಭ್ರಮೆಗೊಂಡರು.

ಆರ್​ಸಿಬಿ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಎಸೆತವನ್ನು ಟಿಮ್ ಡೇವಿಡ್ ಆಫ್-ಸ್ಟಂಪ್‌ನಿಂದ ಹೊರಗೆ ಬಲವಾಗಿ ಕಟ್ ಮಾಡಿದರು. ಬ್ಯಾಟ್‌ನಿಂದ ಸಿಡಿದ ಚೆಂಡು ಅತಿ ವೇಗವಾಗಿ ಬ್ಯಾಕ್‌ವರ್ಡ್ ಪಾಯಿಂಟ್ ಕಡೆಗೆ ರಾಕೆಟ್‌ನಂತೆ ನುಗ್ಗಿತು.

ಅಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ 36 ವರ್ಷದ ಮನೀಶ್ ಪಾಂಡೆ, ಕೇವಲ ಸೆಕೆಂಡಿನ ನೂರನೇ ಒಂದು ಭಾಗದಲ್ಲಿ ಪ್ರತಿಕ್ರಿಯಿಸಿದರು. ತಮ್ಮ ಎಡಭಾಗಕ್ಕೆ ಸಂಪೂರ್ಣವಾಗಿ ಗಾಳಿಯಲ್ಲಿ ಜಿಗಿದು ಒಂದು ಕೈಯಿಂದ ಚೆಂಡನ್ನು ಮೈದಾನಕ್ಕೆ ತಾಗುವ ಕೆಲವೇ ಇಂಚುಗಳ ಮುನ್ನ ಅದ್ಭುತವಾಗಿ ಹಿಡಿದರು.

ಪಾಂಡೆ ಅವರ ಈ ಅಸಾಧ್ಯವಾದ ಕ್ಷೇತ್ರರಕ್ಷಣೆಯನ್ನು ಕಂಡು ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು ಮತ್ತು ಆಟಗಾರರು ದಿಗ್ಭ್ರಮೆಗೊಂಡರು. ಅಷ್ಟೇ ಅಲ್ಲದೆ ಕ್ಯಾಚ್ ಔಟ್ ಆಗಿ ಟಿಮ್ ಡೇವಿಡ್ ಹೊರ ನಡೆಯುತ್ತಿದ್ದಂತೆ ಮನೀಶ್ ಪಾಂಡೆ ಬಳಿ ತೆರಳಿದ ವಿರಾಟ್ ಕೊಹ್ಲಿ ಈ ಅದ್ಭುತ ಫೀಲ್ಡಿಂಗ್​ ಅನ್ನು ಶ್ಲಾಘಿಸಿ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಕಿಂಗ್ ಕೊಹ್ಲಿಯ ಕ್ರೀಡಾ ಸ್ಫೂರ್ತಿಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಗೆದ್ದು ಬೀಗಿದ ಆರ್​ಸಿಬಿ:

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 192 ರನ್​ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ (105) ಅಜೇಯ ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಆರ್​ಸಿಬಿ ತಂಡವು 19.1 ಓವರ್​ಗಳಲ್ಲಿ 194 ರನ್​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Source link

Exit mobile version